Home Posts tagged #mla rajesh nayk

ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿ ಸಭೆ

ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿ ಸಭೆ ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಭರವಸೆಗಳ ಕುರಿತು ಸಭೆಯಲ್ಲಿ ಚರ್ಚೆಗಳು ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರು ಬಂಟ್ವಾಳ ಕ್ಷೇತ್ರದಲ್ಲಿ ಹಾದು ಹೋಗುವ ಲೋಕೋಪಯೋಗಿ ಇಲಾಖೆಯ ರಸ್ತೆಗಳ

ಬಂಟ್ವಾಳ: ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿ-ಮುಂದಿನ ಬೇಸಗೆಯೊಳಗೆ ಪೂರ್ಣಗೊಳಿಸಿ – ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ

ಬಂಟ್ವಾಳ: ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವಿಳಂಬ ನೀತಿಯನ್ನು ಬಿಟ್ಟು ಮುಂದಿನ ಬೇಸಗೆಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧಿಕಾರಿಗಳಿಗೆ ಸೂಚಿಸಿದರು. ಅವರು ಸೇತುವೆ ಕಾಮಗಾರಿಯ ವಿಳಂಬದ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಸಭೆ ನಡೆಸಿದರು. ಸೇತುವೆಯ ಕುರಿತು ಯಾವುದೇ ರೀತಿಯ ಕ್ರೆಡಿಟ್ ನನಗೆ

ಪೊಳಲಿ, ಉಳಾಯಿಬೆಟ್ಟು ಸೇತುವೆ ಘನ ವಾಹನ ಸಂಚಾರ ನಿಷೇಧ – ತುರ್ತು ಓಡಾಟ ಅನುಮತಿಗೆ ಶಾಸಕರು ,ಸಂಸದರ ಸಲಹೆ

ಗುರುಪುರ : ಪೊಳಲಿ ಸೇತುವೆ, ಉಳಾಯಿಬೆಟ್ಟು ಸೇತುವೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಆರು ಹಳೆ ಸೇತುವೆಗಳ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ಪೊಳಲಿ ಮತ್ತು ಉಳಾಯಿಬೆಟ್ಟು ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಗೊಳಿಸಿ ಆದೇಶ ಹೊರಡಿಸಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರೊಂದಿಗೆ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಾ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಅವರು ಡೀಸಿ ಕಚೇರಿಯಲ್ಲಿ ತುರ್ತು ಸಭೆ ನಡೆಸಿ, ಪರ್ಯಾಯ

ಮಂಗಳೂರು : ಬಿಜೆಪಿ ಬೂತ್ ಕಾರ್ಯಕರ್ತರ ಸಮಾವೇಶ

ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ವಿಫಲವಾಗಿದ್ದು, ಜನರಿಗೆ ನರೇಂದ್ರ ಮೋದಿ ಗ್ಯಾರಂಟಿ ಮೇಲೆ ಮಾತ್ರ ವಿಶ್ವಾಸ ಮೂಡಿದೆ. ಹೀಗಾಗಿ ರಾಜ್ಯದ ಜನರು ನರೇಂದ್ರ ಮೋದಿ ಜೊತೆಗಿದೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸಂಘನಿಕೇತನದಲ್ಲಿ ನಡೆದ ಬಿಜೆಪಿ ಬೂತ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು. ಇಂದು ನಮ್ಮ ಪ್ರಮುಖ ಬೂತ್ ಕಾರ್ಯಕರ್ತರು ಜೊತೆಗಿದ್ದೀರಿ.

ಶಾಸಕ ರಾಜೇಶ್ ನಾಯ್ಕ್ ಅವರಿಂದ ನಾಮಪತ್ರ ಸಲ್ಲಿಕೆ : 35 ಕಿ.ಮಿ. ನಡೆದು ಬಂದ ದಂಪತಿ

ಬಂಟ್ವಾಳ: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ನಾಮಪತ್ರ ಸಲ್ಲಿಸಲು ಪೆÇಳಲಿ ಕ್ಷೇತ್ರದಿಂದ ಪಾದಾಯಾತ್ರೆಯ ಮೂಲಕ ಆಗಮಿಸುವ ಸುದ್ದಿ ತಿಳಿದ ದಂಪತಿ ತಮ್ಮ ಮನೆಯಿಂದ ಸುಮಾರು 35 ಕಿ.ಮಿ.ದೂರದವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿ ಪಕ್ಷದ ಅಭ್ಯರ್ಥಿಗೆ ಶುಭಾಶಯ ಕೋರಿದ ಘಟನೆ ಬಂಟ್ವಾಳದಲ್ಲಿ ನಡೆಯಿತು. ಬಡಗಕಜೆಕಾರು ಗ್ರಾ.ಪಂ.ಮಾಜಿ ಸದಸ್ಯ ಗಂಗಾಧರ ಪೂಜಾರಿ ತನ್ನ ಪತ್ನಿ ಚಂದ್ರಾವತಿ ಅವರ ಜೊತೆಗೂಡಿ ಕಜೆಕಾರಿನ ಮಹಾದೇಶ್ವರ ದೇವಸ್ಥಾನದಿಂದ

ಕಾರಿಂಜ ಕ್ಷೇತ್ರವನ್ನು ಸೂಕ್ಷ್ಮ ವಲಯವನ್ನಾಗಿ ಘೋಷಿಸುವ ವಿಚಾರ, ಸಿಎಂ ಬೊಮ್ಮಾಯಿ ಜೊತೆ ಮಾತುಕತೆ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ದೇವಾಲಯವನ್ನು ಸೂಕ್ಷ್ಮ ವಲಯವನ್ನಾಗಿ ಘೋಷಣೆ ಮಾಡುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ್ದು, ಜಿಲ್ಲಾಧಿಕಾರಿ ವರದಿ ಬಳಿಕ ಸರಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಉಸ್ತವಾರಿ ಸಚಿವ ಸುನಿಲ್ ಕುಮಾರ್ ಕಾರ್ಕಳ ತಿಳಿಸಿದರು. ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜೊತೆಗೆ ಕಾರಿಂಜೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿದ ಬಳಿಕ ಪತ್ರ ಕರ್ತರ ಜೊತೆ ಮಾತನಾಡಿದರು. ಅಕ್ರಮ ಕಲ್ಲು ಗಣಿಗಾರಿಕೆಯಿಂದ