Home Posts tagged MLA

ಬೈಂದೂರು: ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಮನವಿ

ಸಂಸದ ಬಿ.ವೈ ರಾಘವೇಂದ್ರ ಅವರು ಇಂದು ದೆಹಲಿಯಲ್ಲಿ  ಕೇಂದ್ರ ಪ್ರವಾಸೋದ್ಯಮ ಸಚಿವರಾದ ಕಿಶನ್ ರೆಡ್ಡಿ ಗಂಗಾಪುರಂ ಅವರನ್ನು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿರುವ ಬೈಂದೂರು ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಮನವಿ ಸಲ್ಲಿಸಿದರು.  ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯ, ಕೊಡಚಾದ್ರಿ, ಸೋಮೇಶ್ವರ ಬೀಚ್,

ಅಂಕಪಟ್ಟಿ ಪರಿಶೀಲನೆಗೆ ದುಬಾರಿ ಶುಲ್ಕ ಇಳಿಕೆ : ಶಾಸಕ ಗುರುರಾಜ್ ಮನವಿಗೆ ಸ್ಪಂದಿಸಿದ ಮಂಗಳೂರು ವಿವಿ

ಉಪ್ಪುಂದ: ಪದವೀಧರರು ಉದ್ಯೋಗಕ್ಕೆ ಸೇರುವ ಸಂದರ್ಭ ಸಲ್ಲಿಸುವ ಅಂಕಪಟ್ಟಿಯ ಪರಿಶೀಲನೆ (ವೆರಿಫಿಕೇಶನ್) ಕಡ್ಡಾಯ. ಆದರೆ ಅಂಕಪಟ್ಟಿ ಪರಿಶೀಲನೆಗೆ ಮಂಗಳೂರು ವಿ.ವಿ.ಯ ವಿದ್ಯಾರ್ಥಿಗಳು ದುಬಾರಿ ಶುಲ್ಕ ತೆರಬೇಕಾಗಿದ್ದು, ಇದನ್ನು ಇಳಿಸಲು ಕ್ರಮ ಕೈಗೊಳ್ಳಬೇಕು ಎಂದು ವಿ.ವಿ.ಯ ಉಪಕುಲಪತಿಗಳಿಗೆ ನೂತನ ಶಾಸಕ ಬೈಂದೂರಿನ ಗುರುರಾಜ್ ಗಂಟೆಹೊಳೆ ಟ್ವಿಟ್ ಮೂಲಕ ಮನವಿ ಮಾಡಿದ್ದು ಮನವಿಗೆ ಮಂಗಳೂರು ವಿ.ವಿ. ಸ್ಪಂದಿಸಿದೆ. ಪದವೀಧರ ತನ್ನ ೬ ಸೆಮಿಸ್ಟರ್‌ಗಳ ಅಂಕಪಟ್ಟಿಗಳನ್ನು

ಮತಪತ್ರಗಳ ವಿಂಗಡೆ ಕಾರ್ಯ ಪೂರ್ಣ : ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ

ಮಂಗಳೂರಿನ ರೊಸಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ಸ್ಟ್ರಾಂಗ್ ರೂಂನ್ನು ತೆರೆಯಲಾಯಿತು. ಬಳಿಕ ಮತಪತ್ರಗಳ ವಿಂಗಡನೆ ಮಾಡಲಾಯಿತು. 10:45ರ ಸುಮಾರಿಗೆ ಮತ ವಿಂಗಡನೆ ಕಾರ್ಯ ಪೂರ್ಣಗೊಂಡಿದ್ದು, ಕೆಲಹೊತ್ತಿನಲ್ಲಿ ಮತ ಎಣಿಕೆಗೆ ಚಾಲನೆ ಸಿಗಲಿದೆ. ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್‌ನ ದ್ವಿ ಸದಸ್ಯತ್ವ ಸ್ಥಾನಕ್ಕೆ ಡಿ.10ರಂದು ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಈ ಬಗ್ಗೆ

ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು

ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ.  ಮಾಜಿ ಸಚಿವ ಎಚ್.ಡಿ ರೇವಣ್ಣರ ಪುತ್ರ ಡಾ.ಸೂರಜ್ ರೇವಣ್ಣ, 2247 ಮತಗಳನ್ನು ಪಡೆದುಕೊಂಡಿದ್ದು, ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 

ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು

ಮಡಿಕೇರಿ: 20 ಕ್ಷೇತ್ರಗಳ 25 ಸ್ಥಾನಗಳಿಗೆ ಡಿ.10ರಂದು ನಡೆದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ. ಪ್ರತಸ್ಪರ್ಧಿ ಮಂಥರ್ ಗೌಡ ಅವರ ವಿರುದ್ಧ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ.

ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭ

ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಗ್ಗೆ 8 ಗಂಟೆಯಿಂದ ಪ್ರಾರಂಭವಾಗಿದೆ. ಇನ್ನು ನಗರದ ರೋಜಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಸುಮಾರು 8 ಗಂಟೆಯಿಂದ ಮತಗಳ ಎಣಿಕಾ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಚುನಾವಣೆ ಮುಂದಿನ ವಿಧಾನಸಭೆ ಚುನಾವಣೆ