ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಾಳಿಮಳೆ, ಕಡಲ್ಕೊರೆತ ಮತ್ತು ನೆರೆಯಿಂದ ಆಗಿರುವ ಹಾನಿಗಳಿಗೆ ಶೀಘ್ರವೇ ಪರಿಹಾರ ಒದಗಿಸಬೇಕು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಪೂರೈಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿವಿಧ ಇಲಾಖೆಯ ಅಧಿಕಾರಿಗಳ ತುರ್ತು ಸಭೆ ನಡೆಸಿದ ಅವರು ನಿರಂತರ ಮಳೆಯಿಂದ ನೆರೆ,
ಬೈಂದೂರು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದ ಪರಿಣಾಮವಾಗಿ ಕೆಲವೆಡೆ ಅಪಾರ ಹಾನಿ ಸಂಭವಿಸಿದೆ. ಬೈಂದೂರಿನ ಕೆಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಕೃಷಿಗೂ ಹಾನಿ ಸಂಭವಿಸಿದೆ. ಇಂದು ಶಾಸಕ ಗುರುರಾಜ್ ಗಂಟಿಹೊಳೆ ಅವರು ಭೇಟಿ ನೀಡಿ ಹಾನಿಗೊಳಗಾದ ಪ್ರದೇಶವನ್ನು ಪರಿಶೀಲನೆ ನಡೆಸಿದರು. ಕಳೆದ 5 ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೌಪರ್ಣಿಕಾ ನದಿ ನೀರಿನ ಮಟ್ಟ ಹೆಚ್ಚಾಗಿದೆ. ನದಿಯ ಅಕ್ಕ ಪಕ್ಕ ಪ್ರದೇಶಗಳಾದ