Home Posts tagged #modi (Page 2)

ಕೇಂದ್ರ ಸರ್ಕಾರದಿಂದ ಮೂರು ಕೃಷಿ ಕಾನೂನು ವಾಪಸ್ : ಪ್ರಧಾನಿ ಮೋದಿಯಿಂದ ಮಹತ್ವದ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಕೊನೆಗೂ ದೆಹಲಿ ಗಡಿಭಾಗದಲ್ಲಿ ಹೋರಾಟ ನಡೆಸುತ್ತಿದ್ದ, ದೇಶದ ಹಲವು ರಾಜ್ಯಗಳ ರೈತರು ವಿರೋಧಿಸುತ್ತಿದ್ದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಮಹತ್ವದ ನಿರ್ಧಾರವನ್ನು ಮಾಡಿದೆ.  ಶ್ರೀ ಗುರುನಾನಕ್ ದೇವ್​ಜಿ ಪ್ರಕಾಶ್ ಪುರಬ್ ಹಾಗೂ ದೇವ್ ದೀಪಾವಳಿ ಶುಭಕೋರುವ ಮೂಲಕ ಮಾತು ಆರಂಭಿಸಿದ ಪ್ರಧಾನಿ ಮೋದಿ, ಒಂದೂವರೆ ವರ್ಷಗಳ

ಅಕ್ಷರ ಸಂತನ ಮನೆಗೆ ವೃಕ್ಷಮಾತೆ ಭೇಟಿ

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಮನೆಗೆ ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ತುಳಸೀ ಗೌಡ ಅವರು ಹರೇಕಳದ ನ್ಯೂಪಡ್ಪು ಮನೆಯಲ್ಲಿ ಭೇಟಿ ನೀಡಿದರು. ಇಂದು ಬೆಳಗ್ಗೆ ಭೇಟಿ ನೀಡಿದ ತುಳಸಿ ಗೌಡ ಅವರು ಹಾಜಬ್ಬರ ಜೊತೆ ಉಪಹಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಹರೇಕಳ ಗ್ರಾಮಸ್ಥರಿಂದ ತುಳಸಿ ಗೌಡ ಅವರನ್ನು ಅಭಿನಂದಿಸಲಾಯಿತು.

ಪದ್ಮಶ್ರೀ ಪುರಸ್ಕಾರಗೊಂಡ ಹಾಜಬ್ಬ ಶಾಲೆ ಹಾಗೂ ಮನೆಯಲ್ಲಿ ಸಂಭ್ರಮ

ಹರೇಕಳ ಹಾಜಬ್ಬ ಅವರು ಕಟ್ಟಿ ಬೆಳೆಸಿದ ನ್ಯೂಪಡ್ಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಶಾಲೆ ಯಜಮಾನನಿಗೆ ಪ್ರಶಸ್ತಿ ಪ್ರಧಾನ ನಡೆಯುವ ವೇಳೆ ಬ್ಯಾಂಡ್ ಹಾಗೂ ಚಪ್ಪಾಳೆ ಮೂಲಕ ಹಾಜಬ್ಬರನ್ನು ಹಾಡಿ ಹೊಗಳುವ ಮೂಲಕ ಗೌರವ ಸಮರ್ಪಿಸಿದರು. ಮನೆಯಲ್ಲಿ ಪತ್ನಿ , ಮೂವರು ಮಕ್ಕಳು ಹಾಗೂ ಸಂಬಂಧಿಕರು ಮೊಬೈಲ್ ಮೂಲಕ ಮನೆ ಯಜಮಾನ ಪದ್ಮಶ್ರೀ ಪುರಸ್ಕಾರ ಪಡೆಯುವುದನ್ನು ನೋಡಿ ಸಂಭ್ರಮಿಸಿದರು. ಶಾಲಾ ವಿದ್ಯಾರ್ಥಿ ಗಳಿಗೆ ಹರೇಕಳ ಹಾಜಬ್ಬನವರು ಪದ್ಮಶ್ರೀ ಪುರಸ್ಕಾರ

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ದ.ಕ. ಜಿಲ್ಲಾಡಳಿತದಿಂದ ಸನ್ಮಾನ

ಹೊಸದಿಲ್ಲಿಯಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ, ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ ಹರೇಕಳ ಹಾಜಬ್ಬ ಅವರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು. ಈ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ, ಅಧಿಕಾರಿಗಳು ಉಪಸ್ಥಿತರಿದ್ದರು.

ಪದ್ಮಶ್ರೀ ಸ್ವೀಕರಿಸಿ ಮಂಗಳೂರು ತಲುಪಿದ ಹರೇಕಳ ಹಾಜಬ್ಬ

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದು ಅವರನ್ನು ಅವರ ಅಭಿಮಾನಿಗಳು ಸ್ವಾಗತಿಸಿದರು. ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ `ಪದ್ಮಶ್ರೀ’ ಸೋಮವಾರ ಪ್ರದಾನ ಮಾಡಲಾಯಿತು. ಪದ್ಮಶ್ರೀ ಸ್ವೀಕರಿಸಿ ಮಂಗಳೂರು ತಲುಪಿದ ಹರೇಕಳ ಹಾಜಬ್ಬ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ನೂಕುನುಗ್ಗಲು ಉಂಟಾಯಿತು. ಗ್ರಾಮೀಣ

ಅಕ್ಷರ ಸಂತ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

 ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ `ಪದ್ಮಶ್ರೀ’ ಇಂದು ಪ್ರದಾನ ಮಾಡಲಾಯಿತು.ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ಜರುಗಿದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ತಮ್ಮ ಎಂದಿನ ಸರಳ ಉಡುಗೆಯಲ್ಲಿ ವೇದಿಕೆಯೇರಿದ ಹಾಜಬ್ಬ ಪ್ರಶಸ್ತಿ ಸ್ವೀಕರಿಸಿದರು. ಬಡಮಕ್ಕಳಿಗಾಗಿ ಸ್ವಂತ ದುಡಿಮೆಯಲ್ಲಿ ಶಾಲೆ ನಿರ್ಮಿಸಿದ, ನೂರಾರು

ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತ ಯಶಸ್ವಿ: ಪ್ರಧಾನಿ ಮೋದಿ

ನಮ್ಮ ದೇಶ ಕರ್ತವ್ಯ ಪಾಲಿಸಿದೆ. ದೇಶಾದ್ಯಂತ 100 ಕೋಟಿ ಕೋವಿಡ್-19 ಲಸಿಕೆ ಡೋಸ್ ಮೈಲುಗಲ್ಲು ತಲುಪಲಾಗಿದೆ. ಇದು ಪ್ರತಿಯೊಬ್ಬ ಭಾರತೀಯನ ಯಶಸ್ಸು. ಇದರ ಪರಿಣಾಮ ಭಾರತ ಕೋವಿಡ್ ವಿರುದ್ಧದ ಹೋರಾಟದಲ್ಲಿ ಯಶಸ್ಸು ಪಡೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಹೇಳಿದರು. ದೇಶವನ್ನುದ್ದೇಶಿಸಿ ಮಾತನಾಡಿದ ಅವರು. ದೇಶದಲ್ಲಿ ನೂರು ಕೋಟಿ ಲಸಿಕೆ ನೀಡುವ ಗುರಿ ತಲುಪಿದ್ದೇವೆ. 100 ಕೋಟಿ ಡೋಸ್ ಲಸಿಕೆ ಎಲ್ಲದಕ್ಕೂ ಉತ್ತರ ನೀಡಿದೆ ಎಂದು

ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೆ ಶಕ್ತಿ, ಬೂತ್ ಅಧ್ಯಕ್ಷನೇ ಆತ್ಮ : ನಳಿನ್ ಕುಮಾರ್ ಕಟೀಲ್ ಹೇಳಿಕೆ

ಬಂಟ್ವಾಳ: ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೆ ಶಕ್ತಿ. ಬೂತ್ ಅಧ್ಯಕ್ಷನೇ ಆತ್ಮ. ಬೂತ್ ಅಧ್ಯಕ್ಷರಿಗೆ ಶಕ್ತಿ ತುಂಬಿ, ಗೌರವಿಸುವ ಉದ್ದೇಶದಿಂದ ಪ್ರತೀ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮವನ್ನು ಪಕ್ಷದ ವತಿಯಿಂದ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿ ಮಂಗಳೂರು ವಿಧಾನ ಸಭಾ ಕ್ಷೇತ್ರದ ಪುದು ಶಕ್ತಿ ಕೇಂದ್ರದ ವತಿಯಿಂದ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆತ್ಮನಿರ್ಭರತೆಯ ಯಶೋಗಾಥೆ

ಪಕೋಡಾ ಮಾರಿಯೂ ಸ್ವ ಉದ್ಯೋಗದಲ್ಲಿ ತೊಡಗಿಕೊಳ್ಳಬಹುದು ಎಂದ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಮಾತಿಗೆ ದೇಶದೆಲ್ಲೆಡೆ ಭಾರೀ ಪ್ರತಿಭಟನೆ, ವ್ಯಂಗ್ಯ ಪ್ರದರ್ಶನಗಳು ಕಂಡು ಬಂದಿತ್ತು. ಅದೇ ರೀತಿ ಪ್ರಧಾನಿಯ ಮಾತಿನಲ್ಲಿ ಸತ್ಯಾಂಶವಿದೆ ಎನ್ನುವುದನ್ನು ತೋರಿಸಿಕೊಟ್ಟ ಹಲವು ವಿಚಾರಗಳೂ ದೇಶದ ಜನರ ಗಮನಕ್ಕೂ ಬಂದಿತ್ತು. ಈ ನಡುವೆ ಸ್ವ ಉದ್ಯೋಗದಲ್ಲಿ ತೊಡಗಿಕೊಂಡು ಸ್ವಾವಲಂಭಿಯಾಗಿ ಬದುಕು ಸಾಗಿಸುತ್ತಿರುವ ಸಾವಿರಾರು ಯುವಪಡೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ