ಮೂಡುಬಿದಿರೆ: ಹುಬ್ಬಳ್ಳಿಯ ಸೇಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ 17 ವಯೋಮಿತಿಯ ಬಾಲಕ ಬಾಲಕಿಯರ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಐದು ಚಿನ್ನ ಹಾಗೂ ಒಂದು ಬೆಳ್ಳಿ ಪದಕದೊಂದಿಗೆ ಒಟ್ಟು ಆರು ಪದಕಗಳನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆಯುವಲ್ಲಿ ಮಹತ್ವದ ಕೊಡುಗೆ
ಮೂಡುಬಿದಿರೆ : ನಿಡ್ಡೋಡಿಯ ಮನೆಯೊಂದರಲ್ಲಿ ನಾಲ್ಕು ಮಂದಿ ಯುವಕರೊಂದಿಗೆ ಇಬ್ಬರು ಅಪ್ರಾಪ್ತ ಬಾಲಕಿಯರಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಮತ್ತು ಅವರ ತಂಡವು ದಾಳಿ ನಡೆಸಿ ಸಂಭಾವ್ಯ ಗ್ಯಾಂಗ್ ರೇಪ್ ನಿಂದ ಬಾಲಕಿಯರನ್ನು ರಕ್ಷಿಸಿದ ಘಟನೆ ಸೋಮವಾರ ನಡೆದಿದೆ. ಈ ಪ್ರಕರಣದ ಆರೋಪಿಗಳಾಗಿರುವ ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ಞೇಶ್,ದಿಲೀಪ್ ಹಾಗೂ ಶ್ರೀಕಾಂತ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮೂಡುಬಿದಿರೆ : ತಾಲೂಕಿನಲ್ಲಿ ಶನಿವಾರ ಸಂಜೆ ಬೀಸಿದ ಗಾಳಿ ಮಳೆಗೆ ಸಮಾಜ ಮಂದಿರದ ಬಳಿ ಮರವೊಂದು ಸೀಯಾಳದ ಅಂಗಡಿ ಮೇಲೆ ಬಿದ್ದು ಜಖಂಗೊಂಡಿದೆ ಹಾಗೂ ಅಲ್ಲಿಯೇ ಪಕ್ಕದಲ್ಲಿರುವ ವಿದ್ಯುತ್ ಕಂಬವು ತುಂಡಾಗಿ ಫ್ಲೆಕ್ಸ್ ನ ಮೇಲೆ ಬಿದ್ದು ಸಿಲುಕಿಕೊಂಡಿರುವುದರಿಂದ ಸಂಭಾವ್ಯ ಅಪಾಯ ತಪ್ಪಿದ ಘಟನೆ ನಡೆದಿದೆ.ಆಲಂಗಾರು ಮತ್ತು ಉಳಿಯ ಪರಿಸರದಲ್ಲಿಯೂ ತೀವೃವಾದ ಗಾಳಿ ಬೀಸಿದ ಪರಿಣಾಮವಾಗಿ ಸಂತ ಥೋಮಸ್ ಹೈಸ್ಕೂಲ್ ನ ಮೇಲ್ಛಾವಣಿ ಹಾರಿ ಸುಮಾರು 100 ಮೀಟರ್ ದೂರದಲ್ಲಿ ಬಿದ್ದಿದ್ದು
ಮೂಡುಬಿದಿರೆ : ವಿವಿಧ ಪೂಜಾ ಸಾಮಗ್ರಿಗಳ ಬೆಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಟೀಲು ದೇವಳದ ಆಡಳಿತ ಮಂಡಳಿಯವರು ವಿವಿಧ ಸೇವೆಗಳ ಮೌಲ್ಯವನ್ನು ಏರಿಸಿದ್ದರೂ ಅದು ಕಾಂಗ್ರೆಸ್ ಸರಕಾರವೇ ಏರಿಸಿದ್ದು ಎಂದು ಜನಸಾಮಾನ್ಯರಲ್ಲಿ ತಪ್ಪು ತಿಳುವಳಿಕೆ ಮೂಡುವಂತೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯ ವಿರುದ್ಧ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ.ಬಿಜೆಪಿಯ ಐಟಿ ಸೆಲ್,ವಾಟ್ಸಾಪ್ ಮತ್ತು ಫೇಸ್ ಬುಕ್ ಗಳಂತಹ ಸಾಮಾಜಿಕ
ಮೂಡುಬಿದಿರೆ: ದೊಡ್ಮನೆ ಫ್ರೆಂಡ್ಸ್ ಬೆದ್ರ ಇವರ ಹೊಸ ಲೋಗೋ ಬಿಡುಗಡೆ ಕಾರ್ಯಕ್ರಮ ಮೂಡಬಿದಿರೆಯ ಶ್ರೀ ಗೌರಿ ದೇವಸ್ಥಾನದಲ್ಲಿ ನಡೆಯಿತು. ತಂಡದ ಹೊಸ ಲೋಗೋವನ್ನು ಮೂಡುಬಿದಿರೆ ಸಾರ್ವಜನಿಕ ಗಣೇಶೋತ್ಸವ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡುಬಿದರೆ ಇವರು ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು, 9 ವರ್ಷಗಳಿಂದ ದೊಡ್ಮನೆ ಫ್ರೆಂಡ್ಸ್ ತಂಡವು ಸ್ವಚ್ಛತಾ ಕಾರ್ಯಕ್ರಮ, ಚಂದ್ರಶೇಖರ
ಮೂಡುಬಿದಿರೆ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಗುವಿನ ನೆರವು ಕೋರಿ ಬ್ಯಾಂಕ್ ಖಾತೆಯ ಮಾಹಿತಿ ಪತ್ರವನ್ನು ಚರ್ಚ್ ನ ವಾಟ್ಸಾಪ್ ಗ್ರೂಪ್ ನಲ್ಲಿ ಹಾಕಿದ್ದು ಆಗ್ರೂಪ್ ನ ಅಡ್ಮಿನ್ ಅಕೌಂಟ್ ನಂಬರ್ ಅನ್ನು ಬದಲಾಯಿಸಿ ಹಣ ವಸೂಲಿ ಮಾಡಿದ್ದು, ಆತನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಯನ್ನು ವಿನೋದ್ ವಾಲ್ಟರ್ ಪಿಂಟೋ ಎಂದು ಗುರುತಿಸಲಾಗಿದೆ.ಪ್ರಕರಣದ ವಿವರ:ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆ.18 ರಂದು ತಾಕೋಡೆಯ ಹೋಲಿ
ಮೂಡುಬಿದಿರೆ : ಆಳ್ವಾಸ್ ಪದವಿ ಕಾಲೇಜಿನ ಆ್ಯಂಟಿ ರ‍್ಯಾಗಿಂಗ್ ಸೆಲ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯೂತ್ ರೆಡ್‌ಕ್ರಾಸ್ ಘಟಕಗಳ ಜಂಟಿ ಆಶ್ರಯದಲ್ಲಿ ಮೂಡುಬಿದಿರೆ ಪೋಲೀಸ್ ಇಲಾಖೆಯ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮವು ಕುವೆಂಪು ಸಭಾಂಗಣದಲ್ಲಿ ನಡೆಯಿತು. ಮೂಡುಬಿದಿರೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರ‍್ಯಾಗಿಂಗ್ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಗೌರವಕ್ಕೆ ದಕ್ಕೆ ತರುವ ಗಂಭೀರ ಸಾಮಾಜಿಕ ಸಮಸ್ಯೆ. ಆ ಹಿನ್ನಲೆಯಲ್ಲಿ
ಮೂಡುಬಿದಿರೆ: ಅತೀ ವೇಗದಿಂದ ಚಲಿಸುತ್ತಿದ್ದ ಕಾರೊಂದು ಬೆಳುವಾಯಿ ಪ್ಲೈ ಓವರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಓವ೯ ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ವೇಣೂರು ಪೆಮು೯ಡ ನಿವಾಸಿ ಸುಮಿತ್ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮೂಡುಬಿದಿರೆ : ಖಾಸಗಿ ಬಸ್ಸಿನಲ್ಲಿ ವ್ಯಕ್ತಿಯೋವ೯ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವತಿ೯ಸಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದ್ದು ಅವನ ಮೇಲೆ ಯಾರು ದೂರು ಕೊಡದ ಕಾರಣ ಪೊಲೀಸ್ ಇಲಾಖೆ ಆತನನ್ನು ಕರೆಸಿ ವಿಚಾರಣೆ ಮಾಡಿ ಬಿಟ್ಟಿದ್ದರು. ಇದನ್ನು ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆ ಮೂಡುಬಿದಿರೆ ತೀರ್ವವಾಗಿ ವಿರೋಧಿಸಿದಲ್ಲದೆ ಸ್ವತ: ಸಂಘಟನೆ ವತಿಯಿಂದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ ಜಿ ಅವರಿಗೆ ದೂರನ್ನು ನೀಡಿದ್ದಾರೆ.ದೂರು
ಮೂಡುಬಿದಿರೆ : ಆ. 8 ರಂದು ಮಹಿಳೆಯೋವ೯ರು ಪಸ್ ೯ ಸಹಿತ 72 ಗ್ರಾಂ ಚಿನ್ನವನ್ನು ಕಳೆದುಕೊಂಡಿದ್ದು ಅದನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ. ನೇತೃತ್ವದ ತಂಡವು 65 ಗಂಟೆಯಲ್ಲಿ ಪತ್ತೆ ಹಚ್ಚಿ ಸಂಬಂಧಪಟ್ಟವರಿಗೆ ಸೋಮವಾರ ಹಸ್ತಾಂತರಿಸಿ ಮೆಚ್ಚುಗೆಗೆ ಪಾತ್ರವಾಗಿದೆ.ಪಡುಮಾನಾ೯ಡಿನ ದಿ. ಧಮ೯ಪಾಲ ಬಲ್ಲಾಳ್ ಅವರ ಪತ್ನಿ ವಿಜಯ ಅವರು ಆ. 8ರಂದು ಕುಪ್ಪೆಪದವಿನಲ್ಲಿ ಅವರ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಹಿಂತಿರುಗುವ ಸಂದಭ೯ ಮಧ್ಯಾಹ್ನ 2 ಗಂಟೆ