ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಹಿಳಾ ತಂಡ ಬೆಂಗಳೂರಿನ ಜೆಪಿ ನಗರದಲ್ಲಿ ಮುಕ್ತಾಯಗೊಂಡ ಅಖಿಲ ಭಾರತ ಗೋಲ್ಡ್ ಮೆಡಲ್ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಮೇರಿ ಗೋ ರೌಂಡ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್‌ನ 50ನೇ ವರ್ಷದ ಸಂಭ್ರಮಾಚರಣೆಯ ಸಲುವಾಗಿ ಬೆಂಗಳೂರಿನ ಜೆಪಿ ನಗರದ ಆರ್‌ಬಿಐ ಲೇಔಟ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ
ಮೂಡುಬಿದಿರೆ: ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ತಮ್ಮ ಜೀವನವನ್ನು ರಾಷ್ಟ್ರ ನಿರ್ಮಾಣಕ್ಕೆ ಸಮರ್ಪಿಸಿ ದೇಶದ ಯುವಜನತೆಗೆ ಮಾರ್ಗದರ್ಶಿಯಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯ “ಸಮರ್ಪಣಾ ದಿನವನ್ನು” ಭಾರತೀಯ ಜನತಾ ಪಾರ್ಟಿ ಮುಲ್ಕಿ-ಮೂಡುಬಿದಿರೆ ಮಂಡಲ ಹಾಗೂ ಮೂಡುಬಿದಿರೆ ಮಹಾಶಕ್ತಿಕೇಂದ್ರದ ವತಿಯಿಂದ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಮೂಡುಬಿದಿರೆ ಮಹಾಶಕ್ತಿಕೇಂದ್ರ ಅಧ್ಯಕ್ಷ ಲಕ್ಷ್ಮಣ್ ಪೂಜಾರಿ, ಮಂಡಲ ಪ್ರಧಾನ
ಮೂಡುಬಿದಿರೆ : ಇಲ್ಲಿನ ಪುರಸಭೆಯ ಪೌರ ಕಾಮಿ೯ಕೆಯೋವ೯ರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುರಸಭಾ ವ್ಯಾಪ್ತಿಯ ಬಿರಾವಿನಲ್ಲಿ ಮಂಗಳವಾರ ನಡೆದಿದೆ.ಬಿರಾವು ಅರಂತ ಕಂಪೌಂಡ್ ನ ನಿವಾಸಿ ದಿ. ಚಂದ್ರಹಾಸ್ ಅವರ ಪತ್ನಿ ಯಶೋಧ (43ವ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಕಳೆದ ಕೆಲವು ವರುಷಗಳಿಂದ ಪೌರಕಾಮಿ೯ಕೆಯಾಗಿ ಪುರಸಭೆಯಲ್ಲಿ ದುಡಿಯುತ್ತಿದ್ದು ಎರಡು ವಷ೯ಗಳ ಹಿಂದೆ ಹುದ್ದೆ ಖಾಯಂ ಆಗಿತ್ತು.ಇವರಿಗೆ ಇಬ್ಬರು ಗಂಡು ಮಕ್ಕಳಿದ್ದು ಓವ೯ ಕಾಲೇಜು
ಮೂಡುಬಿದಿರೆ: ಇಲ್ಲಿನ ಪ್ರಸಿದ್ಧ ಕಟ್ಟಡಗಳ ಹಾಗೂ ಹಲವಾರು ಖ್ಯಾತನಾಮರ ಮನೆಗಳ ಕೆಲಸಗಳನ್ನು ಎಂಜಿನಿಯರ್ ನಂತೆ ಅಚ್ಚುಕಟ್ಟಾಗಿ ನಿಮಿ೯ಸಿ ಕೊಟ್ಟು ಜಯ ಮೇಸ್ತ್ರಿ ಎಂದೇ ಮೂಡುಬಿದಿರೆ ಪರಿಸರದಲ್ಲಿ ಖ್ಯಾತರಾಗಿದ್ದ ಸಂಪಿಗೆ ಕೋಂಟಡ್ಕ ನಿವಾಸಿ ಜಯ ಗೌಡ (68) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಮೂಡುಬಿದಿರೆ ಕನ್ನಡಭವನದಲ್ಲಿ ನಡೆದಿದ್ದ ‘ತುಳುವೆರ್ ಬೆದ್ರ’ ಸಂಘಟನೆಯ ನಾಟಕ ಪ್ರದರ್ಶನ ವೇಳೆ ಜಯ ಮೇಸ್ತ್ರಿ ಅವರನ್ನು
ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಗ್ರಾ. ಪಂಚಾಯತ್ ಸದಸ್ಯ ವಾಸು ಗೌಡ ಗುಡ್ಡೆಯಂಗಡಿ ಅವರು ಇಂದು ಬೆಳಿಗ್ಗೆ ಹೃದಯಾಘಾತಕ್ಕೊಳಗಾಗಿ ಸ್ವಗೃಹದಲ್ಲಿ ನಿಧನ ಹೊಂದಿದರು.ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಅವರು ಪತ್ನಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ.
ವಿಶ್ವಕರ್ಮ ಸಹಕಾರ ಬ್ಯಾಂಕ್ ನಿರ್ದೇಶಕರಾಗಿ ಪತ್ರಕರ್ತ ಬೆಳುವಾಯಿ ಸೀತಾರಾಮ್ ಆಚಾರ್ಯ ಅವರು ತೃತೀಯ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಮಂಗಳೂರು ವಿಶ್ವಕರ್ಮ ಬ್ಯಾಂಕ್ ಕಚೇರಿಯ ಸಭಾಂಗಣದಲ್ಲಿ ಚುನಾವಣೆ ನಡೆಯಿತು. ಸಹಕಾರ ಸಂಘಗಳ ಉಪನಿಬಂಧಕರಾದ ವಿಲಾಸ್ ಚುನಾವಣಾಧಿಕಾರಿಯಾಗಿದ್ದರು.
ಮೂಡುಬಿದಿರೆ: ಕಳೆದ 3 ವರುಷಗಳಿಂದ ವಿವಿಧ ಕಡೆಗಳಲ್ಲಿರುವ 25 ಗೂಡಂಗಡಿಗಳಿಂದ ಅಂದಾಜು 3,55,000/- ಮೌಲ್ಯದ ವಸ್ತುಗಳನ್ನು ಕಳವುಗೈದಿರುವ ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ನಿಡ್ಡೋಡಿಯ ನೀರುಡೆ ನಿವಾಸಿ ರೋಶನ್ ವಿಲ್ಸನ್ ಕ್ವಾಡ್ರಸ್, ಕೊಂಪದವು ನೆಲ್ಲಿ ತೀರ್ಥದ ನಿವಾಸಿ ನಿಶಾಂಕ್ ಪೂಜಾರಿ, ತೆಂಕು ಎಕ್ಕಾರು ಗ್ರಾಮದ ನಿವಾಸಿ ರೋಹಿತ್ ಮಸ್ಕರೇನಸ್ ಬಂಧಿತ ಕಳ್ಳರು. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಗೆ ಗ್ರಾಮದ ಮುಲ್ಕಿ ಕ್ರಾಸ್
ಮೂಡುಬಿದಿರೆ: ಕಳೆದ 6 ತಿಂಗಳ ಹಿಂದೆ ನಾಪತ್ತೆ 25 ಬ್ಯಾಟರಿಗಳಲ್ಲಿ ನಾಲ್ಕು ಬ್ಯಾಟರಿ ಸಹಿತ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ವಷ೯ ಏ.24ರಂದು ಮೂಡುಬಿದಿರೆಯ ಮಚ್ಲಿ ಹೊಟೇಲ್ ಬಳಿ ಕೆಲಸ ಮಾಡಲೆಂದು ತೋಡಾರು ಪಂಚಶಕ್ತಿ ರಂಜಿತ್ ಪೂಜಾರಿ ಅವರಿಗೆ ಸೇರಿದ ಹಿಟಾಚಿಯನ್ನು ಕೆಲಸ ಮುಗಿಸಿ ಸಂಜೆ ಸುಮಾರು 7 ಗಂಟೆ ಸಮಯದಲ್ಲಿ ನಿಲ್ಲಿಸಿದ್ದು ಮರುದಿನ ಬೆಳಿಗ್ಗೆ 7 ಗಂಟೆಗೆ ಹಿಟಾಚಿಯ ಬಳಿ ಬಂದು ನೋಡಿದಾಗ ಎರಡೂ ಹಿಟಾಚಿಗಳ 4
ಮೂಡುಬಿದಿರೆ: ವಾರ್ಷಿಕ ಸಂಚಿಕೆಗಳು ಶಿಕ್ಷಣ ಸಂಸ್ಥೆಯ ಸಾಹಿತ್ಯದ ಸೃಜನಾತ್ಮಕ ಚಟುವಟಿಗೆಗಳಿಗೆ ಹಿಡಿದ ಕೈಗನ್ನಡಿ ಎಂದು ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ ನುಡಿದರು.ಅವರು ಕಾಲೇಜಿನ ಕುವೆಂಪು ಸಭಾಂಗಣ ದಲ್ಲಿ ಶನಿವಾರ ನಡೆದ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ “ಉತ್ತುಂಗ” ಚೊಚ್ಚಲ ವಾರ್ಷಿಕ ಸಂಚಿಕೆ ಬಿಡುಗಡೆ ಕರ‍್ಯಕ್ರಮದಲ್ಲಿ ಮಾತನಾಡಿದರು. ಪ್ರಶಿಕ್ಷಣಾರ್ಥಿಗಳು ಮುಂದೆ ಗುರುಗಳಾಗುವವರು. ಇಂತಹ ಸ್ಮರಣ
ಮೂಡುಬಿದಿರೆ : ‘ಸರ್ಟಿಫಿಕೆಟ್‌ಗಿಂತ ಸಂಸ್ಕಾರ ಮುಖ್ಯ. ಶಿಕ್ಷಣವು ಸಂಸ್ಕಾರಭರಿತ ಮನಸ್ಸನ್ನು ಕಟ್ಟುವ ಪ್ರಕ್ರಿಯೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಹೇಳಿದರು.ಆಳ್ವಾಸ್ ಮುಂಡ್ರೆದೆಗುತ್ತು ಕೆ ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ನಡೆದ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾವಂತರಾದವರೇ



























