ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಅಂತರ್ ಕಾಲೇಜು ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗದಲ್ಲಿ ತೋಡಾರಿನ ಯೆನೆಪೋಯ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು 2 ಚಿನ್ನ ಮತ್ತು 2 ಬೆಳ್ಳಿಯ ಪದಕದೊಂದಿಗೆ ತಂಡ ಚಾoಪಿಯನ್ ಪ್ರಶಸ್ತಿ ಪಡೆದುಕೊಂಡಿದೆ. ಪುರುಷರ ವಿಭಾಗದಲ್ಲಿ 1 ಚಿನ್ನದ ಪದಕ,1 ಬೆಳ್ಳಿಯ ಪದಕ,
ಮೂಡುಬಿದಿರೆ: ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ ವಿ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯ ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ 14 ಚಿನ್ನ, 03 ಬೆಳ್ಳಿ ಹಾಗೂ 02 ಕಂಚಿನ ಪದಕದೊಂದಿಗೆ ಮೂಡುಬಿದಿರೆಯ ಆಳ್ವಾಸ್ ಕುಸ್ತಿಪಟುಗಳು ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.ಫಲಿತಾಂಶ : ಪುರುಷರ ವಿಭಾಗದಲ್ಲಿ : ನಿಖಿಲ್ – 61 ಕೆಜಿ ವಿಭಾಗದಲ್ಲಿ (ದ್ವಿತೀಯ), ಗುಡ್ಡಪ್ಪ – 61 ಕೆಜಿ ವಿಭಾಗದಲಿ (ತೃತೀಯ),
ಮೂಡುಬಿದಿರೆ: ಕಳೆದ ಮೂರು ತಿಂಗಳ ಹಿಂದೆ ಅಶ್ವತ್ಥಪುರದಲ್ಲಿರುವ ತನ್ನ ಮಗಳ ಮನೆಗೆ ಹೋಗಲೆಂದು ನಾರಾವಿಯಿಂದ ಬಂದಿದ್ದ ಮಹಿಳೆಯೋರ್ವರೊಂದಿಗೆ ಪರಿಚಿತನಂತೆ ನಟಿಸಿ ಆಕೆಯ ಕೈಯಿಂದ ಚಿನ್ನದ ಸರ ಕೊಂಡೊಯ್ದು ವಾಪಾಸು ಬಾರದೆ ತಪ್ಪಿಸಿಕೊಂಡಿದ್ದ ಕಳ್ಳನನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವ ಪೊಲೀಸರ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ.ಬಂಟ್ವಾಳ ತಾಲೂಕು ಕೆಂಪುಗುಡ್ಡೆಯ ಕಸವಿತ್ತಲ್ ಮನೆಯ ನಿವಾಸಿ ಸುರೇಶ ಯಾನೆ ಸಂತೋಷ ಬಂಧಿತ ಆರೋಪಿ. ನಾರಾವಿಯಿಂದ
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ದ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆಗೊಂಡಿದ್ದು ಈ ವರ್ಷದಿಂದಲೇ ಪ್ರಾರಂಭಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ 4 ವರ್ಷಗಳ ಪದವಿ ಶಿಕ್ಷಣ ಇದಾಗಿದ್ದು 2024-25ನೇ ಶೈಕ್ಷಣಿಕ ವರ್ಷದಿಂದಲೇ
ಮೂಡುಬಿದಿರೆ: ಮಂಗಳೂರು – ಮೂಡುಬಿದಿರೆ ಮಾರ್ಗವಾಗಿ ನಿನ್ನೆ ( ಮಂಗಳವಾರ) ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ ಬಸ್ KA 19 AB 1339 ನ್ನು ಮೂಡುಬಿದಿರೆ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿಜಿ ಅವರು ವಶಕ್ಕೆ ಪಡೆದುಕೊಂಡಿದ್ದಾರೆ ಮತ್ತು ಚಾಲಕನ ವಿರುದ್ಧ ಕ್ರಮಕೈಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯು ನಡೆಯುತ್ತಿರುವುದರಿಂದ ವಾಹನ ಸವಾರರು ಬಹಳ ಜಾಗರೂಕತೆಯಿಂದ ವಾಹನವನ್ನು ಚಲಾಯಿಸುವುದು ಅವಶ್ಯಕ. ಆದರೆ ಮಂಗಳವಾರ ಸಂಜೆ ವೇಳೆಯಲ್ಲಿ
ಮೂಡುಬಿದಿರೆ :ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024ರ ಸಾಲಿನ ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಸರಸ್ವತಿ ಬಲ್ಲಾಳ್ ಮತ್ತು ಡಾ.ಸಿ.ಕೆ.ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ‘ಕರ್ನಾಟಕ ಏಕೀಕರಣದ ನೇತಾರ ಕೆ.ಬಿ.ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕೃತಿಕ ಪ್ರಶಸ್ತಿ’ಯನ್ನು ಬಂಟ್ವಾಳದಲ್ಲಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದ ಸ್ಥಾಪಕರಾದ
ಮೂಡುಬಿದಿರೆ : ಇಲ್ಲಿನ ಕಲ್ಲಬೆಟ್ಟು ಎಕ್ಸಲೆಂಟ್ ಕಾಲೇಜಿನ ಅಧ್ಯಕ್ಷ ಯುವರಾಜ ಜೈನ್ ಅವರನ್ನು ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನೀಡುವ ಸಿರಿಪುರ ಪ್ರಶಸ್ತಿ- 2024 ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ರಾಮಕೃಷ್ಣ ಶಿರೂರು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಅವರನ್ನು
ಮೂಡುಬಿದಿರೆ: ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮೂಡುಬಿದಿರೆ ತಾಲೂಕಿನ ಬನ್ನಡ್ಕದಲ್ಲಿ ಸಂಭವಿಸಿದೆ.ಪಡುಮಾರ್ನಾಡು ಗ್ರಾ.ಪಂ.ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ, ಮೂಡುಬಿದಿರೆ ಜೈನ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿ ಆದಿತ್ಯ ಮೃತಪಟ್ಟ ದುರ್ದೈವಿ.ವಿದ್ಯಾರ್ಥಿ ಆದಿತ್ಯ ಪರೀಕ್ಷೆ ಮುಗಿಸಿ ತನ್ನ ಗೆಳೆಯರೊಡನೆ ಮನೆಗೆ
ಮೂಡುಬಿದಿರೆ : ಇಲ್ಲಿನ ಠಾಣಾ ವ್ಯಾಪ್ತಿಯಲ್ಲಿ ಆ.15 ಮತ್ತು ಸೆ. 2ರಂದು ನಡೆದ ಮಹಿಳೆಯರ ಚಿನ್ನಾಭರಣ ಎಳೆದೊಯ್ದು ಪರಾರಿಯಾಗಿದ್ದ ಈರ್ವರು ಖದೀಮರನ್ನು ಮೂಡುಬಿದಿರೆ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ಅವರ ತಂಡ ವಶಕ್ಕೆ ತೆಗೆದುಕೊಂಡಿದ್ದಾರೆಮಾರ್ಪಾಡಿ ಗ್ರಾಮದ ವಿವೇಕಾನಂದ ನಗರದ ಬಳಿ ನಿರ್ಮಲ ಪಂಡಿತ್(70 ವರ್ಷ) ಎಂಬವರ ಕುತ್ತಿಗೆಯಿಂದ ಸುಮಾರು 24 ಗ್ರಾಂ ಮೌಲ್ಯದ ಚಿನ್ನದ ಸರವನ್ನು ಮತ್ತು ಸೆ. 2ರಂದು ಮೂಡುಮಾರ್ನಾಡು ಗ್ರಾಮದ ಬಸದಿ ಬಳಿ ನಿವಾಸಿ
ಮೂಡುಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು, ಗ್ರಂಥಾಲಯ ಸಹಾಯಕಿಯಾಗಿದ್ದ ಶ್ರೀಮತಿ ಹೇಮಲತಾ (49) ಅಲ್ಪ ಕಾಲದ ಅಸ್ವಾಸ್ಥ್ಯದಿಂದ ಸೆ 2ರಂದು ನಿಧನ ಹೊಂದಿದರು. ಅವರು ಪತಿಯನ್ನು ಅಗಲಿದ್ದಾರೆ. ಕಳೆದ 10 ವರ್ಷಗಳಿಂದ ಅವರು ಕಾಲೇಜಿನ ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ನಿಧನಕ್ಕೆ ಮಹಾವೀರ ಕಾಲೇಜು ಆಡಳಿತ ಮಂಡಳಿ ಸಂತಾಪ ವ್ಯಕ್ತಪಡಿಸಿದೆ.




























