ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯು ಕನ್ನಡ ಮಾಧ್ಯಮ ಶಾಲೆಯಲ್ಲಿ ಉಚಿತ ಶಿಕ್ಷಣ ಪಡೆಯಲು ರಾಜ್ಯದ ವಿದ್ಯಾರ್ಥಿಗಳಿಗೆ ಭಾನುವಾರದಂದು ಪ್ರವೇಶ ಪರೀಕ್ಷೆ ನಡೆಸಿದ್ದು ನಾಡಿನ ಮೂಲೆ ಮೂಲೆಯಿಂದ ವಿದ್ಯಾಗಿರಿಗೆ 15,986 ಹೆಚ್ಚಿನ ವಿದ್ಯಾರ್ಥಿಗಳು ಅವರ ಪೋಷಕರು, ಜತೆಗೂಡಿ ಆಗಮಿಸಿ ವಿದ್ಯಾಗಿರಿ ಮತ್ತು ಪುತ್ತಿಗೆಯಲ್ಲಿ ಪರೀಕ್ಷೆಯನ್ನು ಬರೆದಿದ್ದಾರೆ. ಪ್ರತೀ
ಮೂಡುಬಿದಿರೆ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 48 ದಿನಗಳ ಮಂಡಲ ಪೂಜೆ ಮತ್ತು ಉತ್ಸವದಲ್ಲಿ, ಮೂಡುಬಿದಿರೆ ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಶ್ರೀ ಹನುಮಂತ ದೇವಸ್ಥಾನದ ಸ್ವಯಂಸೇವಕರ ತಂಡ ನಿರಂತರ 3 ದಿನಗಳ ಕಾಲ ಪಲ್ಲಕ್ಕಿ ಹೊರುವ ಸೇವೆಯಲ್ಲಿ ಪಾಲ್ಗೊಂಡರು. ಮದ್ವ ನವಮಿ ಶುಭ ಸಂದರ್ಭದಲ್ಲಿ ಮೂಲ ಮೂರ್ತಿ ಶ್ರೀ ಬಾಲ ರಾಮನಿಗೆ ಭೋಗ ನೈವೇದ್ಯವನ್ನು ನೀಡುವ ಅವಕಾಶವನ್ನೂ ಪಡೆದು
ಮೂಡುಬಿದಿರೆ: ತಾಲೂಕಿನ ಶಿರ್ತಾಡಿ ಮೌಂಟ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಒಂದನೇ ತರಗತಿಯ ವಿದ್ಯಾರ್ಥಿನಿ ಅಶ್ರಿಜಾ ನಿಮೋನಿಯಾಕ್ಕೆ ತುತ್ತಾಗಿ ಮೃತಪಟ್ಟಿದ್ದಾಳೆ.ಬೆಳ್ತಂಗಡಿ ತಾಲೂಕಿನ ನಿವಾಸಿ ಮರೋಡಿ ನಿವಾಸಿಗಳಾದ ಜಯಾನಂದ ರಾಜಶ್ರೀ ದಂಪತಿಯ ಪುತ್ರಿಯಾಗಿರುವ ಈಕೆ ನಿಮೋನಿಯಾಕ್ಕೆ ತುತ್ತಾಗಿ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶಲಾಗಿದ್ದಾಳೆ.ವಿದ್ಯಾರ್ಥಿನಿಯ ನಿಧನದ ಸಂತಾಪ ಸೂಚಕವಾಗಿ
ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದ ಬಳಿ ಅಕ್ರಮವಾಗಿ ಗ್ಯಾರೇಜ್ ನಡೆಯುತ್ತಿದ್ದು ಇದರಿಂದ ಹೊರ ಬರುತ್ತಿರುವ ಕೊಳಚೆ ನೀರಿನಿಂದ ಸಾರ್ವಜನಿಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಈ ಬಗ್ಗೆ ಪುರಸಭೆಗೆ ದೂರು ನೀಡಿದಾಗ ಕ್ರಮಕೈಗೊಂಡಿಲ್ಲ ನಂತರ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು ಅವರು ಪುರಸಭೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು ಆದರೆ ಮತ್ತೂ ಪುರಸಭೆ ಕ್ರಮ ಕೈಗೊಂಡಿಲ್ಲವೆಂದು ಸ್ಥಳೀಯರಾದ ಸದಾನಂದ ನಾರಾವಿ ಅವರು ಗುರುವಾರ ಆಡಳಿತ ಸೌಧದಲ್ಲಿ ನಡೆದ
ಮೂಡುಬಿದಿರೆ: ಸಂವಿಧಾನ ಪೀಠಿಕೆ, ಜವಾಬ್ದಾರಿ ಮತ್ತು ಅದರ ಮಹತ್ವ ಸಾರುವ ಅಂಬೇಡ್ಕರ್ ಪ್ರತಿಮೆಯ ಸ್ತಬ್ಧ ಚಿತ್ರವನ್ನೊಳಗೊಂಡ ಸಂವಿಧಾನ ಜಾಗೃತಿ ಜಾಥಾ ರಥವು ಮೂಡುಬಿದಿರೆಯಲ್ಲಿ ಸಂಚಾರ ಆರಂಭಿಸಿದ್ದು ಮಧ್ಯಾಹ್ನದ ವೇಳೆಗೆ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಆಗಮಿಸಿದ್ದು ಇದನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಧ, ಸರ್ವ ಸದಸ್ಯರು ಮತ್ತು ಪಿಡಿಒ ಭೀಮ ನಾಯಕ್ ಅವರು ಪಂಚಾಯತ್ ಮುಂಭಾಗದಲ್ಲಿ ಬರಮಾಡಿಕೊಂಡರು. ಅಧ್ಯಕ್ಷೆ ರಾಧಾ ಅವರು ಅಂಬೇಡ್ಕರ್ ಅವರ
ಮೂಡುಬಿದಿರೆ : ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಶ್ರೀರಾಮನ ಮಂದಿರವು ಯಾವುದೇ ಅಡೆತಡೆಯಿಲ್ಲದೆ ನಿರ್ಮಾಣವಾಗಬೇಕೆಂಬ ಸಂಕಲ್ಪದೊಂದಿಗೆ ಬೆಳುವಾಯಿಯ ಮನೆಯೊಂದರ ದೇವರ ಕೋಣೆಯಲ್ಲಿ ಕಳೆದ ಮೂರೂವರೆ ವರ್ಷಗಳಿಂದ “ನಂದಾದೀಪ” ನಿರಂತರ ಬೆಳಗುತ್ತಿದೆ. 2020 ರ ಆಗಸ್ಟ್ 4ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವಾಯಿತು. ಆ ದಿನದಿಂದಲೇ ಬಿಜೆಪಿಯ ಸ್ಥಾನೀಯ ಸಮಿತಿಯ ಮಾಜಿ ಅಧ್ಯಕ್ಷ ಸುರೇಶ್ ಕುಮಾರ್ ಬೆಳುವಾಯಿ ಮತ್ತು ಅವರ
ಮೂಡುಬಿದಿರೆ: ರಿಜ್ಯುವನೇಟ್ ಚೈಲ್ಡ್ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಹಾಗೂ ತರಬೇತಿ ಕೇಂದ್ರದ ಆಶ್ರಯದಲ್ಲಿ ಸ್ಫೂರ್ತಿ ಕಲಾ ಸಂಭ್ರಮ 2024 ಕಾರ್ಯಕ್ರಮವು ಜ.21ರಂದು ಅರಮನೆಬಾಗಿಲು ಬಳಿಯಿರುವ ಶಾಲೆಯ ಆವರಣದಲ್ಲಿ ನಡೆಯಲಿದೆ ಎಂದು ಶಾಲೆಯ ಸಂಸ್ಥಾಪಕ ಪ್ರಕಾಶ್ ಜೆ.ಶೆಟ್ಟಿಗಾರ್ ತಿಳಿಸಿದರು.ಅವರು ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಕಲಾಮೇಳದಲ್ಲಿ ಆಹಾರಮೇಳದ
ಮೂಡುಬಿದಿರೆ : 540 ಹಂಚುಗಳನ್ನು 1ನಿಮಿಷ 57 ಸೆಕೆಂಡುಗಳಲ್ಲಿ ಎರಡೂ ಕೈಗಳಿಂದ ಪುಡಿಗಟ್ಟುವ ಮೂಲಕ ಕರಾಟೆ ಪಟು ಮಹಮ್ಮದ್ ನದೀಂ ನೋಬಲ್ ವರ್ಲ್ಡ್ ರೆಕಾಡ್೯ಗೆ ಭಾಜನರಾದರು. ನೋಬಲ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯು ವಿವಿಧ ಕ್ಷೇತ್ರಗಳಲ್ಲಿ ನಡೆಯುವ ಸ್ಪರ್ಧೆಗಳ ಫಲಿತಾಂಶಗಳನ್ನು ದಾಖಲೀಕರಿಸಿ ನೋಬಲ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿಗೆ ಆಯ್ಕೆ ಮಾಡುವ ಸಂಸ್ಥೆಯಾಗಿದೆ. ಇಲ್ಲಿನ ಸಮಾಜ ಮಂದಿರದಲ್ಲಿ ಶನಿವಾರ ಕರಾಟೆ ರಿಯೂ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ನಡೆದ ಕರಾಟೆ
ಮೂಡುಬಿದಿರೆ : ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ನ ಸಿಬ್ಬಂದಿ ಚಂದ್ರಹಾಸ (29ವ) ಇಂದು ಬೆಳಿಗ್ಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಲ್ಲಮುಂಡ್ಕೂರು ಗ್ರಾ.ಪಂಚಾಯತ್ ವ್ಯಾಪ್ತಿಯ ಬರ್ಕಬೆಟ್ಟು ನಿವಾಸಿ ದಿ.ದಾದು ಎಂಬವರ ಪುತ್ರರಾಗಿರುವ ಚಂದ್ರಹಾಸ್ ಅವರು ಇಂದು ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್ ಗೆ ನಡೆದುಕೊಂಡು ಬರುತ್ತಿದ್ದ ಸಂದರ್ಭ ಮನೆಯಿಂದ ನೂರು ಮೀ.ದೂರದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.ಕಳೆದ 10 ವರ್ಷಗಳಿಂದ ಪಂಚಾಯತ್ ನಲ್ಲಿ
ಮೂಡುಬಿದಿರೆ : ಕಳೆದ ಮೂರು ದಶಕಗಳಿಂದ ರಾಜಕೀಯ ಕ್ಷೇತ್ರದಲ್ಲಿ ವಿವಿಧ ಸಾಧನೆಗಳನ್ನು ಮಾಡಿ ಗುರುತಿಸಿಕೊಂಡಿರುವ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಈ ಬಾರಿ ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿ ಚುನಾವಣೆಗೆ ಸ್ಪರ್ಧಿಸುವ ಮೂಲಕ ಸಹಕಾರಿ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿಯ ನಿರ್ದೇಶಕ ಸ್ಥಾನಗಳಿಗೆ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಲಿರುವ ಅಭಯಚಂದ್ರ ಜೈನ್ ಕೆ. ಅವರು ಮೂಡುಬಿದಿರೆ ವಿಧಾನ ಸಭಾ



























