ಮೂಡುಬಿದಿರೆ: ಎಳ್ಳಮವಾಸ್ಯೆಯ ಪ್ರಯುಕ್ತ ಹನ್ನೆರಡು ಕವಲಿನಲ್ಲಿ ಸಾವಿರಾರು ಭಕ್ತರು ತೀರ್ಥಸ್ಥಾನ ಮಾಡಿದರು. ಮೂಡುಬಿದಿರೆಯಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ತಾಕೊಡೆಯ ಬಳಿಯ ಹನ್ನೆರಡು ಕವಲಿನಲ್ಲಿ ಭಕ್ತರು ತೀರ್ಥಸ್ನಾನ ಮಾಡಿ ನಂತರ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಹಣ್ಣುಕಾಯಿ ಮಾಡಿ, ಪೂಜೆ ಸಲ್ಲಿಸಿ ತದ ನಂತರ ನದಿಯ ನಡುವಿನಲ್ಲಿರುವ ಪಂಚ ಮಹಾಲಿಂಗೇಶ್ವರ
ಮೂಡುಬಿದಿರೆ : ಮಹಿಷಮರ್ಧಿನಿ ಕಂಬಳ ಸಮಿತಿ ಇದರ ವತಿಯಿಂದ ನಡೆಯುವ ಇತಿಹಾಸ ಪ್ರಸಿದ್ಧ ಹೋಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವು ಶನಿವಾರ ಬೆಳಿಗ್ಗೆ ಆರಂಭಗೊಂಡಿತು. ನೋಣಾಲ್ ಗುತ್ತು ರಶ್ಮಿತ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಂಬಳವನ್ನು ಶ್ರೀ ಕ್ಷೇತ್ರ ಪೂಂಜದ ಅಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಕಂಬಳದ ಕರೆಯಲ್ಲಿ ದೀಪ ಬೆಳಗಿಸಿ, ತೆಂಗಿನ ಕಾಯಿ ಹೊಡೆಯುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಆಧುನಿಕ ಕಾಲದಲ್ಲಿರುವ ನಾವು ಈ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಯೋಜನೆಯಲ್ಲಿ ಡಿ.21ರಿಂದ ನಡೆಯುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಗದಗ ಜಿಲ್ಲೆಯಿಂದ 2 ಲಕ್ಷ ಜೋಳದ ರೊಟ್ಟಿಯನ್ನು ಕಳುಹಿಸಲಾಗಿದೆ.ಉತ್ತರ ಕರ್ನಾಟಕದ ಗಟ್ಟಿ ಆಹಾರ ಎನಿಸಿಕೊಂಡಿರುವ ಜೋಳದ ರೊಟ್ಟಿ, ಶೇಂಗಾ ಚಟ್ನಿಯನ್ನು ಉಣಬಡಿಸುವ ನಿಟ್ಟಿನಲ್ಲಿ 2 ಲಕ್ಷ ಮಾಲದಂಡಿ ಜೋಳದ ರೊಟ್ಟಿಗಳನ್ನು ಕಳುಹಿಸಲಾಗುತ್ತಿರುವದು ಎಲ್ಲರ ಗಮನ ಸೆಳೆದಿದೆ. ಗದಗದಿಂದ 2 ಲಕ್ಷ ರೊಟ್ಟಿ, 2 ಕ್ವಿಂಟಲ್ ಶೇಂಗಾ ಚಟ್ನಿಯನ್ನು
ಮೂಡುಬಿದಿರೆ: ಬುಧವಾರ ರಾತ್ರಿ ಕಾರ್ಕಳದ ಕರಿಯ ಕಲ್ಲು ಎಂಬಲ್ಲಿ ಆಟೋ ರಿಕ್ಷಾ ಮತ್ತು ಬೈಕ್ ಡಿಕ್ಕಿಯಾಗಿ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಆಟೋ ಚಾಲಕ ಅಂದೇ ರಾತ್ರಿ ಸುರತ್ಕಲ್ ನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ಮೂಡುಬಿದಿರೆ ತಾಲೂಕಿನ ಬೆಳುವಾಯಿಯ ಕುಕ್ಕುಡೇಲು ನಿವಾಸಿ ವಿಜಯ ಶೆಟ್ಟಿ (57 ವರ್ಷ )ಸಾವನ್ನಪ್ಪಿದ ವ್ಯಕ್ತಿ.ವಿಜಯ ಶೆಟ್ಟಿಯವರು ತನ್ನ ಆಟೋ ರಿಕ್ಷಾದಲ್ಲಿ ಬಜಗೋಳಿಯಲ್ಲಿ ನಡೆಯುತ್ತಿದ್ದ ಸಂಬಂಧಿಕರ ಮಗುವಿನ ನಾಮಕರಣ
ಮೂಡುಬಿದಿರೆ ಡಿ. 24,25ರಂದು ನಡೆಯುವ ಕೋಟಿ-ಚೆನ್ನಯ ಕಂಬಳದಲ್ಲಿ ಏಕ ಬಳಕೆಯ ವಸ್ತುಗಳನ್ನು ಬಳಸದ ಮರುಬಳಕೆಯ ವಸ್ತುಗಳನ್ನು ಬಳಸುವ ಮೂಲಕ ಶೂನ್ಯ ತ್ಯಾಜ್ಯದ ಕಂಬಳವನ್ನಾಗಿ ಆಯೋಜಿಸಿ ಮಾದರಿಯಾಗುವಂತೆ ಮಾಡಲು ತಾವು ಸಂಪೂರ್ಣವಾಗಿ ಬೆಂಬಲವನ್ನು ನೀಡುತ್ತೇವೆಂದು ವ್ಯಾಪಾರಸ್ಥರ ಪರವಾಗಿ ಭರತ್ ಅವರು ಭರವಸೆಯನ್ನು ನೀಡಿದ್ದಾರೆ. ಒಂಟಿಕಟ್ಟೆಯ ರಾಣಿ ಅಬ್ಬಕ ಸಂಸ್ಕೃತಿ ಗ್ರಾಮದಲ್ಲಿ ನಡೆಯಲಿರುವ ಹೊನಲು ಬೆಳಕಿನ ಕಂಬಳವನ್ನು ಶೂನ್ಯ ತ್ಯಾಜ್ಯ ಮಾಡುವ ನಿಟ್ಟಿನಲ್ಲಿ ಕಂಬಳ
ಮೂಡುಬಿದರೆ ಆಳ್ವಾಸ್ ಕ್ಯಾಂಪಸ್‍ನಲ್ಲಿ ಡಿಸೆಂಬರ್ 21ರಿಂದ 27ರ ವರೆಗೆ ನಡೆಯಲಿರುವ ಸ್ಕೌಟ್ಸ್ & ಗೈಡ್ಸ್‍ನ ಅಂತರಾಷ್ಟ್ರೀಯ ಸಾಂಸ್ಕøತಿಕ ಜಾಂಬೂರಿಗೆ ನಡೆಯುತ್ತಿರುವ ಸಿದ್ಧತೆಗಳ ಬಗ್ಗೆ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ. ಮೋಹನ್ ಆಳ್ವಾ ಅವರು ವಿವರ ನೀಡಿದರು. ಇದೇ ಮೊದಲ ಬಾರಿಗೆ ಭಾರತದಲ್ಲಿ ಆಯೋಜನೆ ಮಾಡಲಾಗಿರುವ ಸ್ಕೌಟ್ಸ್ & ಗೈಡ್ಸ್‍ನ ಅಂತರಾಷ್ಟ್ರೀಯ ಸಾಂಸ್ಕøತಿಕ ಜಾಂಬೂರಿಗೆ ಮೂಡುಬಿದರೆಯ ಅಳ್ವಾಸ್
ಮೂಡುಬಿದಿರೆ: ಗಾಯಕ, ಉದ್ಯಮಿ ರಾಜು ಕೆ. (53) ಮೈಸೂರಿನ ತನ್ನ ನಿವಾಸದಲ್ಲಿ ರವಿವಾರ ನಿಧನ ಹೊಂದಿದರು. ಪತ್ನಿ, ಪುತ್ರ, ಪುತ್ರಿಯನ್ನು ಅವರು ಅಗಲಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆಯ ಹೊನ್ನೆಲೆಗೆರೆ ಗ್ರಾಮದಲ್ಲಿ ಹುಟ್ಟಿದ ರಾಜು ಮೂಡುಬಿದಿರೆಯ ಮೈನ್ ಶಾಲೆ, ಜೈನ್ ಹೈಸ್ಕೂಲ್ ನಲ್ಲಿ ಓದಿ ಧವಲ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪೂರೈಸಿದ್ದರು.ಜಾನಪದ, ಭಾವಗೀತೆ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದ ಅವರು ಐ.ಕೆ. ಬೊಳುವಾರು ನಿರ್ದೇಶಿತ ಚದುರಂಗ
ಮೂಡುಬಿದಿರೆ: ದ.ಕ ಜಿಲ್ಲಾಡಳಿತ , ದ.ಕ. ಜಿ.ಪಂ ವತಿಯಿಂದ ಇರುವೈಲು ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಶುಕ್ರವಾರ ನಡೆದ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಡೀಮ್ಡ್ ಫಾರೆಸ್ಟ್, ಹಾಗೂ ಖಾಸಗಿಗೆ ಸಂಬಂಧಿಸಿದ ಅರ್ಜಿಗಳನ್ನು ಪರಿಶೀಲಿಸಿ 35 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು. ಸರ್ಕಾರದ ಮಟ್ಟದಲ್ಲಿ ಪರಿಹರಿಸಬಹುದಾದ ಅರ್ಜಿಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿದರು.
ಮೂಡುಬಿದಿರೆ: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ 4 ರ ರೂ 10 ಕೋಟಿ ಮೊತ್ತದ ಯೋಜನೆಯಲ್ಲಿ 4.46 ಕೋಟಿ ಮೊತ್ತದ 6 ರಸ್ತೆ ಮತ್ತು ಚರಂಡಿ ಕಾಮಗಾರಿಗಳು ಹಾಗೂ ಪುರಸಭಾ ನಿಧಿ 2022-23ರಲ್ಲಿ ರೂ 1.36 ಕೋಟಿ ಮೊತ್ತದ 27 ಕಾಮಗಾರಿಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಮಂಗಳವಾರ ಒಂಟಿಕಟ್ಟೆಯಲ್ಲಿ ಗುದ್ದಲಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಕೋಟ್ಯಾನ್ ಅವರು ಪುರಸಭಾ ವ್ಯಾಪ್ತಿಗೆ ಬಹುದೊಡ್ಡ ಮೊತ್ತದ ಅನುದಾನದೊಂದಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ
ಮೂಡುಬಿದಿರೆ: ಡಿ.24ರಂದು ಮೂಡುಬಿದಿರೆ ಒಂಟಿಕಟ್ಟೆಯಲ್ಲಿ ನಡೆಯುವ 20ನೇ ವರುಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವನ್ನು ಶೂನ್ಯ ತ್ಯಾಜ್ಯವಾಗಿ ಮತ್ತು ಕಾಂತಾರ ಸಿನೆಮಾ ದೊಂದಿಗೆ ವಿಭಿನ್ನವಾಗಿ ಜನಾಕರ್ಷಣೆಯೊಂದಿಗೆ ನಡೆಸಲುದ್ದೇಶಿಸಲಾಗಿದೆ ಎಂದು ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಉಮಾನಾಥ್ ತಿಳಿಸಿದರು. ಅವರು ಒಂಟಿಕಟ್ಟೆ ಕಡಲಕೆರೆ ಬಳಿಯ ಸೃಷ್ಟಿ ಗಾರ್ಡನ್ ಸಭಾಂಗಣದಲ್ಲಿ ಮಂಗಳವಾರ ಸಾಯಂಕಾಲ ನಡೆದ ಮೂಡುಬಿದಿರೆ ಕಂಬಳ ಸಮಿತಿಯ ಸಮಾಲೋಚನ ಸಭೆಯ