ಮೂಡುಬಿದಿರೆ ಪ್ರಾಂತ್ಯ ಗ್ರಾಮದ ನಿವಾಸಿಯೊಬ್ಬರು ಉಪ್ಪಿನಂಗಡಿಯಲ್ಲಿರುವ ತಾಯಿಯ ಆರೋಗ್ಯ ವಿಚಾರಿಸಿ ತನ್ನ ಮನೆಗೆ ಮರಳಿದಾಗ ಅವರ ಸಂಬಂಧಿಕರು ಕೂಡಿ ಹಾಕಿ ದರೋಡೆ ಮಾಡಿರುವ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿ ಪ್ರಾಂತ್ಯ ಗ್ರಾಮದ ಅತ್ತೂರು ನಸೀಬ್ ಎಂಬವರು ತಾಯಿ ಆರೋಗ್ಯ ವಿಚಾರಿಸಿ ತಮ್ಮ ಮನೆಗೆ
ಮೂಡುಬಿದಿರೆ: ಇಲ್ಲಿನ ಮೂಡುಬಿದಿರೆ ಕೋ-ಆಪರೇಟಿವ್ ಸರ್ವಿಸ್ ಸೊಸೈಟಿ ಆಶ್ರಯದಲ್ಲಿ ಕಲ್ಪವೃಕ್ಷ ಸಭಾಭವನದಲ್ಲಿ ನ.14ರಿಂದ 20ರ ತನಕ ನಡೆದ ಸಹಕಾರ ಸಪ್ತಾಹ ಸಂಭ್ರಮ-2022ರ ಸಮಾರೋಪ ಸಮಾರಂಭ ನಡೆಯಿತು. ಕರ್ನಾಟಕ ರಾಜ್ಯ ಸಹಕಾರಿ ಮಾರ್ಕೆಟಿಂಗ್ ಫೆಡರೇಶನ್ ಅಧ್ಯಕ್ಷ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ಅಧ್ಯಕ್ಷತೆ ವಹಿಸಿ ಮಾತನಾಡಿ ಕಳೆದ 25 ವರ್ಷಗಳಿಂದ ಎಂಸಿಎಸ್ ಸೊಸೈಟಿ ಶೇ. 25 ಡಿವಿಡೆಂಡ್ ನೀಡುತ್ತ
ಮೂಡುಬಿದಿರೆ: ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಸತಿ ಯೋಜನಾ ಫಲಾನುಭವಿಗಳಿಗೆ ಆದೇಶ ಪತ್ರ ಹಾಗೂ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಶಾಸಕ ಉಮಾನಾಥ ಕೋಟ್ಯಾನ್ ಪಂಚಾಯತ್ ಸಭಾಂಗಣದಲ್ಲಿ ಕಿಟ್ ವಿತರಿಸಿದರು. ನಂತರ ಮಾತನಾಡಿದ ಶಾಸಕ ಕೋಟ್ಯಾನ್ ಮನೆ ನಿರ್ಮಾಣದ ಪ್ರತಿ ಹಂತದಲ್ಲಿ ಫೋಟೋ ತೆಗೆದು ಪಂಚಾಯತ್ ಗೆ ನೀಡಿದರೆ ಹಂತ ಹಂತವಾಗಿ ಹಣ ಮಂಜೂರಾಗುತ್ತದೆ. ಈ ಬಗ್ಗೆ ಪಂಚಾಯತ್ ನಲ್ಲಿ ಸೂಕ್ತ ಮಾಹಿತಿಗಳನ್ನು ಪಡೆದು ಮನೆ ನಿರ್ಮಾಣ ಕಾರ್ಯ ಮಾಡಬೇಕು. ಸರಕಾರಿ
ಮೂಡುಬಿದಿರೆ: ಕಲ್ಲಮುಂಡ್ಕೂರು ಗ್ರಾ.ಪಂ.ವ್ಯಾಪ್ತಿಯಲ್ಲಿ 2.10 ಕೋ.ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ 1.94 ಕೋಟಿ ವೆಚ್ಚದ ಜಲಜೀವನ್ ಮಿಷನ್ ಯೋಜನೆಯ ಒಟ್ಟು 4.04 ಕೋ.ವೆಚ್ಚದ ಕಾಮಗಾರಿಗಳಿಗೆ ಶಾಸಕ ಉಮಾನಾಥ ಎ.ಕೋಟ್ಯಾನ್ ಸೋಮವಾರ ಗುದ್ದಲಿಪೂಜೆ ನೆರವೇರಿಸಿದರು. ನಂತರ ನೀರುಡೆ ಚಚ್ 9 ಬಳಿಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೋಟ್ಯಾನ್ ಅವರು ಕಲ್ಲಮುಂಡ್ಕೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಲ್ಲಿ ಆಗದ ಅಭಿವೃದ್ಧಿ
ಮೂಡುಬಿದಿರೆಯ ಒಂಟಿಕಟ್ಟೆಯ ಅಬ್ಬಕ್ಕ ಸಂಸ್ಕೃತಿ ಗ್ರಾಮದ ಕಡಲಕೆರೆ ಬಳಿ ಇರುವ ಕೋಟಿ-ಚೆನ್ನಯ ಕಂಬಳ ಕರೆಯಲ್ಲಿ ಭಾನುವಾರ ನಡೆದ ಕುದಿ ಕಂಬಳವನ್ನು ಶಾಸಕ, ಮಾಜಿ ಸಚಿವ ಅರವಿಂದ ಲಿಂಬಾವಳಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಲಿಂಬಾವಳಿ ಅವರು ಒಂಟಿಕಟ್ಟೆಯ ಸಭಾಭವನದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಯೇ ಪಕ್ಕದಲ್ಲಿ ನಡೆಯುತ್ತಿದ್ದ ಕುದಿ ಕಂಬಳದ ಕಡೆಗೆ ಕಣ್ಣು ಹಾಯಿಸಿ ಸ್ವಲ್ಪ ಹೊತ್ತು ಅಲ್ಲಿಯೇ ಕಾಲ ಕಳೆದು ಕಂಬಳದ ಬಗ್ಗೆ ಕೇಳಿ
ಮೂಡುಬಿದಿರೆ: ಡೀಮ್ಡ್ ಅರಣ್ಯ ಕಾನೂನನ್ನು ಸರಕಾರ ಸರಳೀಕೃತಗೊಳಿಸಿದರಿಂದ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರ ಸೂಚನೆಯಂತೆ 94ಸಿ ಮತ್ತು 94ಸಿಸಿ ಪಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಮೂಲ್ಕಿ,ಮೂಡುಬಿದಿರೆ, ಮಂಗಳೂರು ತಾಲೂಕುಗಳಲ್ಲಿ 3 ಸಾವಿರಕ್ಕೂ ಅಧಿಕ ಹಕ್ಕುಪತ್ರ ವಿತರಣೆಯಾಗಿದೆ ಆದರೆ ಮಾಜಿ ಸಚಿವ ಅಭಯಚಂದ್ರ ಮತ್ತು ಕಾಂಗ್ರೆಸ್ ಮುಖಂಡ ಮಿಥುನ್ ರೈ ಮಾಹಿತಿ ಕೊರತೆಯಿಂದ ಮಾತನಾಡುತ್ತಿದ್ದಾರೆ ಎಂದು
ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ ಎಮ್ಮೆ ಮಾಂಸ ಮಾರಾಟ ಮಳಿಗೆಯನ್ನು ತೆರೆಯಲು ಪರವಾನಿಗೆ ನೀಡಬಾರದೆಂದು ಆಗ್ರಹಿಸಿ ಮೂಡುಬಿದಿರೆ ತಾಲೂಕು ಹಿಂದೂ ಜಾಗರಣ ವೇದಿಕೆಯು ಪುರಸಭಾ ಮುಖ್ಯಾಧಿಕಾರಿ ಇಂದು ಎಂ.ಅವರಿಗೆ ಮನವಿಯನ್ನು ಸಲ್ಲಿಸಿದರು.ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಸಹ ಸಂಯೋಜಕ್ ಸಮಿತ್ ರಾಜ್ ದರೆಗುಡ್ಡೆ ಮಾತನಾಡಿ ನಮ್ಮ ಸಂಘವು ನಿರಂತರವಾಗಿ ಗೋಹತ್ಯೆ, ಗೋ ಕಳ್ಳ ಸಾಗಾಟಣೆ ಮತ್ತು ಕಾನೂನು ಬಾಹಿರ ಕಸಾಯಿಖಾನೆ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿಕೊಂಡು
ಮೂಡುಬಿದಿರೆ: ‘ಶ್ರೀ ರಾಮದಾಸ, ಆಶ್ರಮದ ನೇತೃತ್ವದಲ್ಲಿ ವಿಶ್ವಹಿಂದೂ ಪರಿಷತ್ ಹಾಗೂ ಸಾಧು-ಸಂತರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಶ್ರೀರಾಮ ದಿಗ್ವಿಜಯ ರಥಯಾತ್ರೆಯು ಮೂಡುಬಿದಿರೆಗೆ ಆಗಮಿಸಿತು. ಶ್ರೀ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ಮಠದ ಶ್ರೀ ವಿದ್ಯಾ ನಂದ ಸ್ವಾಮೀಜಿ, ಮೂಡುಬಿದಿರೆ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ , ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ವಿಹಿಂಪ ಬಜರಂಗದಳದ
ಮೂಡುಬಿದಿರೆ: ಮಹತೋಭಾರ ಇಟಲ ಶ್ರೀ ಸೋಮನಾಥೇಶ್ವರ ದೇವಸ್ಥಾನ ದರೆಗುಡ್ಡೆ ಇಲ್ಲಿಗೆ ನೂತನ ಧ್ವಜಸ್ತಂಭ ನಿರ್ಮಾಣಕ್ಕಾಗಿ ಸುಳ್ಯದಿಂದ ತಂದಿರುವ ಕೊಡಿಮರವನ್ನು ಮೂಡುಬಿದಿರೆ ಜೈನ ಪ.ಪೂ.ಕಾಲೇಜು ಮೈದಾನದ ಬಳಿ ಸ್ವಾಗತಿಸಲಾಯಿತು. ನಂತರ ಕೊಂಬು, ಚೆಂಡೆ, ಕುಣಿತ ಭಜನೆ, ನಾಸಿಕ್ ಬ್ಯಾಂಡ್ ಮೂಲಕ ಕಲಾ ತಂಡಗಳು,ಭಜನಾ ತಂಡಗಳೊಂದಿಗೆ ದರೆಗುಡ್ಡೆಗೆ ಹೊರಟ “ಧ್ವಜಸ್ತಂಭದ ಭವ್ಯ ಮೆರವಣಿಗೆ ವಾಹನ ಜಾಥಾ”ಕ್ಕೆ ಶಾಸಕ ಉಮಾನಾಥ ಎ.ಕೋಟ್ಯಾನ್ ಚಾಲನೆಯನ್ನು ನೀಡಿದರು.
ಮೂಡುಬಿದಿರೆ: ದ.ಕ ಜಿಲ್ಲೆಯ ರೈತರಿಗೆ ಕುಮ್ಕಿ ಹಕ್ಕಿಗೆ ಆತನೇ ಹಕ್ಕುದಾರನೆಂದು ಘೋಷಿಸಿ ಹಕ್ಕುಪತ್ರವನ್ನು ನೀಡಬೇಕು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಸರಕಾರವು ಈಡೇರಿಸಬೇಕೆಂದು ಒತ್ತಾಯಿಸಿ ನ.10 ರಂದು ಮೂಡುಬಿದಿರೆ ತಾಲೂಕಿನಾದ್ಯಾಂತ ರೈತರ ಬೃಹತ್ ಹಕ್ಕೊತ್ತಾಯ ಜಾಥವನ್ನು ಹಮ್ಮಿಕೊಳ್ಳಲಾಗಿದೆ ಎಂದು ದ.ಕ ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಜಾಥದಲ್ಲಿ ಮೂಡುಬಿದಿರೆಯ 25