ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಉತ್ತಮ ಆರೋಗ್ಯದ ದೃಷ್ಠಿಯಿಂದಲೋ ಅಥವಾ ಆರ್ಥಿಕವಾಗಿ ಹಿಂದುಳಿದುದರಿಂದ ಗ್ಲಾಸ್ ಅಥವಾ ಸ್ಟೀಲ್ ಲೋಟಗಳನ್ನು ತೆಗೆದುಕೊಳ್ಳಲು ಅಸಹಾಯಕರಾಗಿರುವುದರಿಂದಲೋ ಏನೋ ತೆಂಗಿನ ಗೆರಟೆಯಲ್ಲಿಯೇ ಚಹಾ, ನೀರು ಅಥವಾ ಆಹಾರ ಪದಾರ್ಥಗಳನ್ನು ಸೇವಿಸುತ್ತಿದ್ದರು. ನಂತರದ ದಿನಗಳಲ್ಲಿ ನಾವು ಅಭಿವೃದ್ಧಿ ಹೊಂದುತ್ತಿದ್ದಂತೆ ಪ್ಲಾಸ್ಟಿಕ್ ಲೋಟ, ಸ್ಟೀಲ್
ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಬಡಗ ಮಿಜಾರು ಗ್ರಾಮದ ಬೇರಿಂಜೆಯ ಮನೆಯೊಂದಕ್ಕೆ ಮುಸುಕುಧಾರಿ ವ್ಯಕ್ತಿಗಳಬ್ಬರು ನುಗ್ಗಿ ತಲವಾರು ಝಳಪಿಸಿ ಮಹಿಳೆಯ ಕತ್ತಿನಲ್ಲಿದ್ದ ಸುಮಾರು 5 ಪವನ್ ತೂಕದ ಚಿನ್ನದ ಕರಿಮಣಿ ಸರವನ್ನು ದರೋಡೆ ಮಾಡಿ ಪರಾರಿಯಾದ ಘಟನೆ ನಡೆದಿದೆ. ಸ್ಥಳೀಯ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ದುಡಿಯುತ್ತಿರುವ ಕಮಲ ಶೆಟ್ಟಿ ದರೋಡೆಗೊಳಗಾದ ಮಹಿಳೆ ಇವರ ಇಬ್ಬರು ಗಂಡು ಮಕ್ಕಳು ಮೃತಪಟ್ಟಿದ್ದು, ಪತಿ ಕಳೆದ ವರ್ಷ ನಿಧನ ಹೊಂದಿದ್ದರು.
ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಮೂಡುಬಿದಿರೆ ಮತ್ತು ಸಂತ ಥೋಮಸ್ ವಿದ್ಯಾ ಸಂಸ್ಥೆ ಆಲಂಗಾರು ಇವುಗಳ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಅಬಾಲ್ ಪಂದ್ಯಾಟವು ಆಲಂಗಾರು ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ದೀಪ ಬೆಳಗಿಸಿ, ವಾಲಿಬಾಲ್‍ನ್ನು ರಿಬ್ಬನ್‍ನಿಂದ
ಮೂಡುಬಿದಿರೆ: ತಾವು ಮನೆಯಲ್ಲಿ ಬೆಳೆಸಿದ ತರಕಾರಿಗಳಾದ ಬಸಳೆ, ಹೀರೆಕಾಯಿ, ಸೌತೆಕಾಯಿ, ಅಮಟೆಕಾಯಿ, ಬಾಳೆಕಾಯಿ, ಸ್ವ ಉದ್ಯೋಗಕ್ಕಾಗಿ ತಯಾರಿಸಿದ ಉಪ್ಪಿನಕಾಯಿ, ಹಿಡಿಸೂಡಿಯ ಕಟ್ಟುಗಳು, ಬೀಳುಗಳಿಂದ ತಯಾರಿಸಿದ ಬುಟ್ಟಿಗಳು, ತೆಂಗಿನ ಗೆರಟೆಯನ್ನು ಬಳಸಿ ಮಾಡಿದ ಸೌಟುಗಳು, ವೇಸ್ಟ್ ಬಟ್ಟೆಗಳನ್ನು ಬಳಸಿ ಮಾಡಿದ ಬಣ್ಣ ಬಣ್ಣದ ಕಾಲು ಒರೆಸುವ ಬಟ್ಟೆಗಳು, ತಿಂಡಿ-ತಿನಿಸುಗಳು, ಮಾರಾಟಗಳೊಂದಿಗೆ ಮಹಿಳೆಯರು ಭರ್ಜರಿ ವ್ಯಾಪಾರ-ವಹಿವಾಟನ್ನು ಮಾಡುವ ಮೂಲಕ ಸ್ವಾವಲಂಬಿಗಳಾಗಿ
ಮೂಡುಬಿದಿರೆ: ಮಹಾವೀರ ಕಾಲೇಜು ಬಳಿಯ ಕೀರ್ತಿನಗರದ ನಿವಾಸಿ ಅಲ್ಫೋನ್ಸ್ ( 68) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಲ್ಫೋನ್ಸ್ ಅವರು ಕಳೆದ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಮನೆಯವರು ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಬಾವಿಗೆ ಹಾರಿದ್ದು ಬೆಳಿಗ್ಗೆ ಹುಡುಕಾಡಿದಾಗ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದೆ. ಮೂಡುಬಿದಿರೆ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ
ಸಮೃದ್ಧಿ (ರಿ) ಮೂಡಬಿದ್ರಿ ಹಾಗೂ ಇನ್ನಿತರ ಸಂಘಟನೆಗಳ ಸಹಯೋಗದಲ್ಲಿ ಇಂದು ಮೂಡಬಿದ್ರಿಯಲ್ಲಿ ನಡೆದ ಅಡಿಕೆ ಬೆಳೆ ಬಗ್ಗೆ ಮಾಹಿತಿ ಕಾರ್ಯಾಗಾರ ಹಾಗೂ ಹೈನುಗಾರಿಕೆ ಸವಲತ್ತು ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು ಮಾಜಿ ಸಚಿವರಾದ ಶ್ರೀ ಅಭಯಚಂದ್ರ ಜೈನ್ ಭಾಗವಹಿಸಿ ಶುಭಹಾರೈಸಿದರು
ಮೂಡುಬಿದಿರೆ : ಜಿಲ್ಲಾ ಕಂಬಳ ಸಮಿತಿಯನ್ನು ಹೈಜಾಕ್ ಮಾಡಿ ಗುಣಪಾಲ ಕಡಂಬರ ಕಂಬಳ ಅಕಾಡೆಮಿಯನ್ನು ಫೋಕಸ್ ಮಾಡಲಾಗುತ್ತಿದೆ. ಸುಕುಮಾರ್ ಶೆಟ್ಟಿ, ಚಂದ್ರ ಆಳ್ವ, ಪಾಟಿಲ ಭಾಸ್ಕರ್ ಕೋಟ್ಯಾನ್, ಶಾಂತರಾಮ ಶೆಟ್ಟಿ, ನವೀನ್, ಸತೀಶ್ಚಂದ್ರ ಸಾಲ್ಯಾನ್ ಅವರಂತಹ ಹಿರಿಯ ಯಜಮಾನರು ಅಕಾಡೆಮಿ ಅಧ್ಯಕ್ಷರ ಏಕಪಕ್ಷೀಯ ನಿರ್ಧಾರಗಳನ್ನು ಸಹಿಸಿಕೊಂಡಿರುವುದು ಅಚ್ಚರಿ ಮೂಡಿಸುತ್ತಿದೆ. ಜಿಲ್ಲಾ ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ
ಮೂಡುಬಿದಿರೆ: 24 ಗಂಟೆಯೊಳಗಡೆ ಕಂಬಳ ಮುಗಿಸುವುದು, ರೆಫ್ರಿಗಳಿಗೆ ಭದ್ರತೆ, ವ್ಯವಸ್ಥಾಪಕರಿಂದ ಸೂಕ್ತ ವ್ಯವಸ್ಥೆ, ಕೋಣಗಳನ್ನು ಕಟ್ಟುವ ವ್ಯವಸ್ಥೆ, ವ್ಯವಸ್ಥಿತ ಕಂಬಳವನ್ನು ಆಯೋಜಿಸುವ ಬಗ್ಗೆ ಹಾಗೂ ನವೆಂಬರ್ ತಿಂಗಳಿನಲ್ಲಿ ಪ್ರಾರಂಭಗೊಳ್ಳುವ ಕಂಬಳಕೂಟಗಳನ್ನು ಕೋಣಗಳ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ವಿಚಾರಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ವರ್ಷದ ಮಾರ್ಚ್ನೊಳಗಡೆ ಮುಕ್ತಾಯಗೊಳಿಸುವ ಕುರಿತು ಸಮಾಜಮಂದಿರದಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು
ಮೂಡುಬಿದಿರೆ: ಇಲ್ಲಿನ ಪುರಸಭೆ ವ್ಯಾಪ್ತಿಯ ಬಿರಾವು ಎಂಬಲ್ಲಿ ಭಾನುವಾರ ಸುರಿದ ಗಾಳಿ ಮಳೆಗೆ ಬೃಹತ್ ಆಲದ ಮರ ಬಿದ್ದು, ಕೆಲ ಸಮಯ ಬಂಟ್ವಾಳ-ಮೂಡುಬಿದಿರೆ ಸಂಚಾರಕ್ಕೆ ತೊಂದರೆಯಾಯಿತು.ಮರ ಬಿದ್ದ ರಭಸಕ್ಕೆ ವಿದ್ಯುತ್ ತಂತಿಗಳು, ಇಂಟರ್ನೆಟ್ ಸಂಪರ್ಕ ತಂತಿಗಳು ಕಡಿದು ಬಿದ್ದಿದ್ದು, ಭಾನುವಾರ ಮಧ್ಯಾಹ್ನದಿಂದ ಬಿರಾವು, ತಾಕೋಡೆ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಯಿತು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಅವರ ಮುತುವರ್ಜಿಯಲ್ಲಿ ಮರವನ್ನು ಒಂದು
ತುಳುನಾಡಿನ ಇತಿಹಾಸದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಜೈನ ಮನೆತನದ ವಾರಸುದಾರ, ಮೂಡುಬಿದಿರೆಯ ಬಲ್ಲಾಳ್ ಕುಟುಂಬದ ರಾಹುಲ್ ಬಲ್ಲಾಳ್ (51) ಅವರು ಇಂದು ನಿಧನರಾಗಿದ್ದಾರೆ. ತುಳುನಾಡಿನ ಭವ್ಯ ಪರಂಪರೆ, ಪರೋಪಕಾರಿಗಳು ಆಗಿರುವಂತಹ ಶ್ರೀಮಂತ ಜೈನ ಮನೆತನದ ವಾರಸುದಾರರಾದ ಕೃಷಿಕರೂ, ಉದ್ಯಮಿ ಜಯವರ್ಮರಾಜ್ ಬಲ್ಲಾಳ್ ಅವರ ಸುಪುತ್ರರಾಗಿದ್ದ ರಾಹುಲ್ ಬಲ್ಲಾಳ್ ಕಾನೂನು ಪಧವೀಧರರು. ತನ್ನ ಕುಟುಂಬದ ಕೃಷಿ ಹಾಗೂ ಹೋಟೇಲ್ ಉದ್ಯಮವನ್ನು ಮುನ್ನಡೆಸಲು ರಾಹುಲ್ ಅವರು