Home Posts tagged #Moodbidire

ಮೂಡುಬಿದಿರೆ: ಅಲಂಗಾರು ಈಶ್ವರ ಭಟ್ಟರಿಗೆ 2024ರ ಶಾರದಾನುಗ್ರಹ ಪ್ರಶಸ್ತಿ

ಮೂಡುಬಿದಿರೆಯ ಪೊನ್ನೆಚಾರಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಾಲಯದ ಸಮಿತಿಯು ಶಾರದಾ ಮಹೋತ್ಸವ ಕಾರ್ಯಕ್ರಮದಲ್ಲಿ ಅಲಂಗಾರು ಶ್ರೀ ಈಶ್ವರ ಭಟ್ ಅವರನ್ನು ಶಾರದಾನುಗ್ರಹ -2024 ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಪೊನ್ನೆಚಾರಿ ಲಕ್ಷ್ಮಿ ವೆಂಕಟರಮಣ ದೇವಾಲಯದ ಆಡಳಿತ ಮೊಕ್ತೇಸರರು ಪೊನ್ನೆಚಾರಿ ಶಾರದಾ ಪೂಜಾ ಮಹೋತ್ಸವ ಹಾಗೂ ಮೂಡುಬಿದಿರಿ ದಸರಾ ಉತ್ಸವದ ರೂವಾರಿ ಅಶೋಕ

ಮೂಡುಬಿದಿರೆ: ಮಾಜಿ ಸೈನಿಕ ನಿಧನ

ಮೂಡುಬಿದಿರೆ: ಮಾಜಿ ಸೈನಿಕ ಹೆನ್ರಿ ಲೋಬೋ (80) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಬೆಳಿಗ್ಗೆ ಮಾಸ್ತಿಕಟ್ಟೆಯಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದರು.15 ವರ್ಷಗಳ ಸೈನಿಕನಾಗಿ ಸೇವೆ ಸಲ್ಲಿಸಿದ ಅವರು ನಂತರ 23 ವರ್ಷಗಳ ಕಾಲ ಸಿಂಡಿಕೇಟ್ ಬ್ಯಾಂಕಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಅವರು ಪತ್ನಿ ಅಲಿಸಾ ಲೋಬೋ ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

ಮೂಡುಬಿದಿರೆ : ಗುಡ್ಡ ಕುಸಿದ ಸ್ಥಳಕ್ಕೆ ಮಾಜಿ ಸಚಿವ ಅಭಯಚಂದ್ರ ಜೈನ್ ಭೇಟಿ

ಮೂಡುಬಿದಿರೆ: ಪಾಲಡ್ಕ – ಕಲ್ಲಮುಂಡ್ಕೂರು ಕೂಡು ರಸ್ತೆಯ ಗುಂಡ್ಯಡ್ಕ ಎಂಬಲ್ಲಿ ವಿಪರೀತ ಮಳೆಯಿಂದಾಗಿ ಶನಿವಾರ ರಸ್ತೆಯ ಬದಿಯಲ್ಲಿದ್ದ ಗುಡ್ಡ ಜರಿದು ಬಿದ್ದು, ಜನರು ನಡೆದಾಡುವ ಹಾಗೂ ವಾಹನ ಸಂಚರಿಸುವ ರಸ್ತೆಯು ಸಂಪೂರ್ಣ ಹಾಳಾಗಿದ್ದ ಸ್ಥಳಕ್ಕೆ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಭಾನುವಾರ ಭೇಟಿ ನೀಡಿದರು.ಗುಂಡ್ಯಡ್ಕದಲ್ಲಿ ಎಲ್ಲಾ ಮನೆ ವಿದ್ಯುತ್ ಸಂಪರ್ಕ ಕಡಿದು ಹೋಗಿರುವ ಬಗ್ಗೆ ಮಾಹಿತಿಯನ್ನು ಪಡೆದ ಜೈನ್ ತಕ್ಷಣವೇ ಸಂಬಂಧಪಟ್ಟ ಮೆಸ್ಕಾಂ ಹಾಗೂ

ಆಳ್ವಾಸ್‌ನ ಐವರು ಹಿರಿಯ ವಿದ್ಯಾರ್ಥಿಗಳು ಪ್ಯಾರಿಸ್ ಅಂಗಳದಲ್ಲಿ

ಮೂಡುಬಿದಿರೆ: ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ಜುಲೈ 26ರಿಂದ ಆರಂಭವಾಗಲಿರುವ ಒಲಿಂಪಿಕ್ಸ್ ಗೇಮ್ಸ್ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದತ್ತು ಶಿಕ್ಷಣ ಯೋಜನೆಯಲ್ಲಿ ಶಿಕ್ಷಣ ಮುಗಿಸಿರುವ ಐವರು ಹಿರಿಯ ವಿದ್ಯಾರ್ಥಿಗಳು ನಮ್ಮ ದೇಶವನ್ನೂ ಪ್ರತಿನಿಧಿಸಲಿದ್ದಾರೆ. ಇದರೊಂದಿಗೆ ಈ ವರೆಗೆ ಒಟ್ಟು 11 ಕ್ರೀಡಾಪಟುಗಳು ವಿವಿಧ ಒಲಿಂಪಿಕ್ಸ್ ಗೇಮ್ಸ್ನಲ್ಲಿ ಭಾಗವಹಿಸಿದ ಕೀರ್ತಿ ಆಳ್ವಾಸ್ ಸಂಸ್ಥೆಗೆ ಸಲ್ಲುತ್ತದೆ. ಇದು ಕರ್ನಾಟಕ ರಾಜ್ಯದಿಂದ ಒಂದು ಸಂಸ್ಥೆಯಿಂದ ಅತೀ

ಮುಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾಸಭೆ

ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ.) ಮುಲ್ಕಿ ಇದರ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾಸಭೆಯು ಮೂಡಬಿದ್ರೆ ತಾಲೂಕಿನ ಇರುವೈಲಿನ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಇರುವೈಲು ಸಂಘದ ಅಧ್ಯಕ್ಷರಾದ ಕುಮಾರ್ ಪೂಜಾರಿ,ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶಿತ ಹಿರಿಯ ನ್ಯಾಯಾವಾದಿ ತಾರಾನಾಥ ಪೂಜಾರಿ, ಮಹಾಮಂಡಲದ ಕಾರ್ಯದರ್ಶಿ ಗಂಗಾಧರ ಪೂಜಾರಿ

ಮೂಡುಬಿದಿರೆ: ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್‌ಗೆ ಕ್ಷಣಗಣನೆ

ಮೂಡುಬಿದಿರೆ: ಕಳೆದ 28 ವರ್ಷಗಳಿಂದ ರಾಷ್ಟ್ರ- ಅಂತರಾಷ್ಟ್ರಮಟ್ಟದ ಕಲಾವಿದರನ್ನು ಮೂಡುಬಿದಿರೆಯ ಎಂಬ ಗ್ರಾಮೀಣ ಪ್ರದೇಶಕ್ಕೆ ಕರೆಸಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾದರಪಡಿಸುವ ಮೂಲಕ  ಮೂಡುಬಿದಿರೆಯ ಹೆಸರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ  ಪರಿಚಯಿಸಿದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಇದೀಗ 29ನೇ ವರ್ಷದ ಸಡಗರಕ್ಕೆ ಸಜ್ಜಾಗಿದ್ದು  ಇಂದಿನಿಂದ ನಾಲ್ಕು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಲಾಸಕ್ತರಿಗೆ ರಸದೌತಣ

ಮೂಡುಬಿದಿರೆ: ಆಳ್ವಾಸ್ ಶಾಲೆಯಲ್ಲಿ ಇಂಡಿಯನ್ ಸೈನ್ಸ್ ಸೊಸೈಟಿ ಸ್ಪರ್ಧೆ: 5 ಮಾದರಿಗಳು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

ಮೂಡುಬಿದಿರೆ:‘ಆವಿಷ್ಕಾರದ ಫಲ ಸಮುದಾಯಕ್ಕೆ ತಲುಪಿದಾಗ ಸಾರ್ಥಕ’ಎಂದು ಅಮೆರಿಕ ಫ್ಲಾರಿಡಾದ ಹೂಡಿಕೆ ಬ್ಯಾಂಕರ್ ಎಮಿಲಿ ಆಳ್ವ ಹೇಳಿದರು. ಭಾರತೀಯ ವಿಜ್ಞಾನ ಸಮಾಜ(ಇಂಡಿಯನ್ ಸೈನ್ಸ್ ಸೊಸೈಟಿ) ಸಹಯೋಗದಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆ (ಸಿಬಿಎಸ್‌ಸಿ)ಯಲ್ಲಿ ಶನಿವಾರ ನಡೆದ ‘ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿAಗ್ ಮೇಳ (ಇನ್‌ಸೆಫ್)’ದ ಪ್ರಾದೇಶಿಕ ಮೇಳ ಮತ್ತು ವಿಜ್ಞಾನ ವಿಸ್ತರಣಾ ಕಾರ್ಯಕ್ರಮ’ದಲ್ಲಿ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ‘ಕುತೂಹಲ ಹಾಗೂ

ಮೂಡುಬಿದಿರೆ : ವಿಶೇಷ ಚೇತನರ ದ.ಕ.ಜಿಲ್ಲಾ ಮಟ್ಟದ ಕ್ರೀಡಾಕೂಟ ಸಮಾರೋಪ: ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ : ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಛೇರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ, ಮೂಡುಬಿದಿರೆ ಇವರ ಸಹಯೋಗದೊಂದಿಗೆ ನಡೆದ ದ.ಕ. ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿಶೇಷ ಸಾಮರ್ಥ್ಯದ ಮಕ್ಕಳ ಕ್ರೀಡಾಕೂಟದಲ್ಲಿ 14 ವರ್ಷ ವಯೋಮಿತಿಯ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕು ಹಾಗೂ‌ 17ರ ವಯೋಮಿತಿಯ ವಿಭಾಗದಲ್ಲಿ ಬಂಟ್ವಾಳ ತಾಲೂಕು ಸಮಗ್ರ ಪ್ರಶಸ್ತಿಯನ್ನು