ಮೂಡುಬಿದಿರೆ ತಾಲೂಕಿನ ಪಡುಕೊಣಾಜೆ ಗ್ರಾಮದಲ್ಲಿ ಸುಮಾರು 45 ಎಕ್ರೆ ಜಾಗವನ್ನು ಸರಕಾರ ವಕ್ಫ್ ಗೆ ಮೀಸಲಿಟ್ಟಿದೆ ಎಂದು ಬಿಜೆಪಿಯು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ಧಿ ಹಬ್ಬಿಸಿ ಸಾರ್ವಜನಿಕವಾಗಿ ಅಶಾಂತಿ ಸೃಷ್ಟಿಸುವ ಹುನ್ನಾರ ನಡೆಸುತ್ತಿದೆ ಎಂದು ಮೂಡುಬಿದಿರೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರು ಆರೋಪಿಸಿದ್ದಾರೆ.
ಮೂಡುಬಿದಿರೆ : ‘ಜಯ-ವಿಜಯ’ ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯುವ 15ನೇ ವರ್ಷದ ಹೊನಲು ಬೆಳಕಿನ ಜೋಡುಕರೆ ಕಂಬಳವು ನ. 9ರಂದು ಶನಿವಾರ ನಡೆಯಲಿದೆ ಎಂದು ಸಮಿತಿಯ ಕಾರ್ಯಾಧ್ಯಕ್ಷ ಸುಭಾಶ್ಚಂದ್ರ ಚೌಟ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಂಬಳದ ಜಿಲ್ಲಾ ತೀರ್ಪುಗಾರರ ಸಂಚಾಲಕ ವಿಜಯ್ ಕುಮಾರ್ ಜೈನ್ ಕಂಗಿನಮನೆ ಮಾತನಾಡಿ ಯುವ ಆಟಗಾರರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಳೆದ 14 ವರ್ಷಗಳಿಂದ ಜೂನಿಯರ್
ಮೂಡುಬಿದಿರೆ: ಕೋಟತಟ್ಟು ಗ್ರಾಮ ಪಂಚಾಯತ್ ಮತ್ತು ಶಿವರಾಮ ಕಾರಂತ ಪ್ರತಿಷ್ಠಾನ ಕೋಟ ಇವರು ಕೊಡಮಾಡುವ 2023-24 ನೇ ಸಾಲಿನ ” ಶಿವರಾಮ ಕಾರಂತ ಪ್ರಶಸ್ತಿ-2024 ” ಪ್ರಶಸ್ತಿಗೆ ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮ ಪಂಚಾಯತ್ ಆಯ್ಕೆಯಾಗಿರುತ್ತದೆ. ಪ್ರಶಸ್ತಿಯನ್ನು ನ.10 ರಂದು ಕೋಟದ ಪಂಚಾಯತ್ ಅಧ್ಯಕ್ಷ ವಾಸುದೇವ ಉಪಾಧ್ಯಾಯ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಹಾಯಕ ನಿರ್ದೇಶಕರು(ಪ್ರಭಾರ) ಸಾಯೀಶ ಚೌಟ ಮತ್ತು ಸದಸ್ಯರು ಮೇಘಾಲಯದ
ಮೂಡುಬಿದಿರೆ: ಕೇಂದ್ರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಮೆರಿಕ ಸಾಮ್ರಾಜ್ಯಶಾಹಿಯ ಅಡಿಯಾಳು ಆಗಬಾರದು ಎಂದು ಸಿಪಿಐಎಂನ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಕೆ ಯಾದವ್ ಶೆಟ್ಟಿ ಹೇಳಿದರು. ಅವರು ಭಾನುವಾರ ಸಮಾಜ ಮಂದಿರದಲ್ಲಿ ನಡೆದ ಸಿಪಿಐಎಂ ಮೂಡುಬಿದಿರೆ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.ಪ್ಯಾಲೆಸ್ತೀನ್ ನಾಗರಿಕರನ್ನು ಅತ್ಯಂತ ಅಮಾನವೀಯವಾಗಿ ಕೊಲ್ಲುತ್ತಿರುವ ಇಸ್ರೇಲಿಗೆ ಸರ್ವ ರೀತಿಯ ಸಹಕಾರ ನೀಡುತ್ತಿರುವ ಅಮೆರಿಕ ಮತ್ತು
ಮೂಡುಬಿದಿರೆ : ಎರಡು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿರುವ ಮಹಿಳೆಯೋರ್ವರು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇಮಾರಿನಲ್ಲಿ ಶುಕ್ರವಾರ ಬೆಳಿಗ್ಗೆ ತಿಳಿದು ಬಂದಿದೆ.ಪಾಲಡ್ಕ ಗ್ರಾ.ಪಂ.ವ್ಯಾಪ್ತಿಯ ಕೇಮಾರು ನಡಿಹಿಲ್ಲು ನಿವಾಸಿ ಪ್ರಮೀಳಾ (36ವ)ಅವರು ಮಾಡಿಕೊಂಡ ಮಹಿಳೆ. ಈಕೆ ಗಂಡನನ್ನು ಕಳೆದುಕೊಂಡ ಮೇಲೆ ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದರು. ಕುಡಿತದ ಚಟವನ್ನು ಹೊಂದಿದ್ದ ಪ್ರಮೀಳಾ ಅವರು ಜೀವನದಲ್ಲಿ ಜಿಗುಪ್ಸೆಗೊಂಡು
ಮೂಡಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಳಗಾವಿ ಜಿಲ್ಲೆ ಮತ್ತು ಶಾಂತಿನಿಕೇತನ ಪದವಿಪೂರ್ವ ಕಾಲೇಜು ಕುಪ್ಪಟಗೇರಿ ಇವರ ಆಶ್ರಯದಲ್ಲಿ ಜರುಗಿದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಹುಡುಗರ ಮತ್ತು ಹುಡುಗಿಯರ ವಿಭಾಗದಲ್ಲಿ 1 ಚಿನ್ನ, 2 ಬೆಳ್ಳಿ ಹಾಗೂ 2 ಕಂಚು ಒಟ್ಟು 5 ಪದಕ ಪಡೆದುಕೊಂಡರು.ಫಲಿತಾಂಶ : ಟೆನ್ನಿ ಕೃಷ್ಣ – 120ಕೆಜಿ ವಿಭಾಗದಲ್ಲಿ (ಪ್ರಥಮ), ಕೃಷ್ಣ –
ಮೂಡುಬಿದಿರೆ: ಇಲ್ಲಿನ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ನ ಗೌರವಾಧ್ಯಕ್ಷ, ವಿದ್ಯುತ್ ಗುತ್ತಿಗೆದಾರ ಗಣೇಶ್ ರಾವ್ (57ವ) ಅವರು ಹೃದಯಾಘಾತಕ್ಕೊಳಗಾಗಿ ಶನಿವಾರ ರಾತ್ರಿ ನಿಧನ ಹೊಂದಿದರು. ಪ್ರಾಂತ್ಯ ಗಾಮದ ವಿಶಾಲ್ ನಗರ ನಿವಾಸಿಯಾಗಿರುವ ಗಣೇಶ್ ರಾವ್ ಅವರು ಮೂಡುಬಿದಿರೆಯಲ್ಲಿ ಹಲವು ವರ್ಷಗಳಿಂದ ವಿದ್ಯುತ್ ಗುತ್ತಿಗೆದಾರರಾಗಿ ದುಡಿಯುತ್ತಿದ್ದರು. ಅಲ್ಲದೆ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ನ ಸ್ಥಾಪಕ ಸದಸ್ಯರಾಗಿದ್ದ ಅವರು 20 ವರ್ಷಗಳ ಕಾಲ ಅಧ್ಯಕ್ಷರಾಗಿ ಹಾಗೂ
ಮೂಡುಬಿದಿರೆ: ಜೈನ ಬಾಂಧವರು ಆಚರಿಸಿಕೊಂಡು ಬರುವ ಹೊಸ ತೆನೆ ಹಬ್ಬ(ಕುರಾಲ್ ಪರ್ಬ) ಜೈನ ಕಾಶಿ ಮೂಡುಬಿದಿರೆಯಲ್ಲಿ ರವಿವಾರ ಜರಗಿತು. ಬೆಟ್ಟೇರಿಯಲ್ಲಿರುವ, ಮಹಾವೀರ ಸಂಘ ದವರ ‘ಕೊರಲ್ ಕಟ್ಟೆ’ಯಲ್ಲಿ ಹೊಸ ತೆನೆರಾಶಿ ಹಾಕಿ 18 ಬಸದಿಗಳ ಇಂದ್ರರು ಪೂಜೆ ಸಲ್ಲಿಸಿದರು. ಶ್ರೀಮಠದಲ್ಲಿ ಪಪೂ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ ಸ್ವಾಮೀಜಿ ಪಾವನ ಸಾನ್ನಿಧ್ಯ ಮಾರ್ಗದರ್ಶನದಲ್ಲಿ 18ಬಸದಿಗಳ ದೇವಕಾರ್ಯ ನೆರವೇರಿಸಿ ಅರ್ಚಕರಿಗೆ
ಮೂಡುಬಿದಿರೆ: ಕನ್ನಡ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿಯ ಜೊತೆಗೆ ನೆಲ, ಜಲವನ್ನು ಉಳಿಸಿಕೊಂಡು ಬರಬೇಕಾದ ಹೊಣೆಗಾರಿಕೆ ಕನ್ನಡಿಗರಾದ ನಮ್ಮೆಲ್ಲರ ಮೇಲಿದೆ. ಸರಕಾರದ ಆಶಯದಂತೆ ನಾವೆಲ್ಲರೂ ನಾಡುನುಡಿ ಪ್ರೀತಿಯ ಜೊತೆ ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸುವಲ್ಲಿ ಶ್ರಮಿಸಬೇಕಾಗಿದೆ ಎಂಬುದಾಗಿ ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ನುಡಿದರು. ರಾಜ್ಯಕ್ಕೆ ಕರ್ನಾಟಕ ಹೆಸರು ನಾಮಕರಣಗೊಂಡು 50 ವರ್ಷಗಳು ತುಂಬಿದ ಸುವರ್ಣ ಸಂಭ್ರಮದ ಸಂದರ್ಭದ
ಮೂಡುಬಿದಿರೆ : ಪೊಲೀಸ್ ಪ್ರಕರಣ, ಮಾದಕ ವ್ಯಸನಗಳ ಸೇವನೆಗೆ ಬಲಿಯಾಗಿ ಬಂಗಾರದಂತಹ ಜೀವನವನ್ನು ಕಳೆದುಕೊಳ್ಳದೆ ಪಠ್ಯ ಪಠ್ಯೇತ್ತರ ಚಟುವಟಿಕೆಯೊಂದಿಗೆ ವಿದ್ಯಾರ್ಥಿಗಳು ಜೀವನದ ಪಾಠವನ್ನು ಕಲಿತು ಉತ್ತಮ ಗುರಿಯನ್ನು ತಲುಪಬೇಕು ಎಂದು ಪಣಂಬೂರು ಎಸಿಪಿ ಶ್ರೀಕಾಂತ್ ಅಭಿಪ್ರಾಯಪಟ್ಟರು. ಅವರು ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಮೊಬೈಲ್, ವಾಹನಗಳ ಬಳಕೆ ಸಂದರ್ಭ ಅತಿಯಾದ ಉತ್ಸಾಹವನ್ನು