Home Posts tagged mp election (Page 2)

ಗೋಪಾಲ ಪೂಜಾರಿ ಸಜ್ಜನ ಮತ್ತು ಪ್ರಾಮಾಣಿಕ ಎಂದಿದ್ದೆ, ಸುಳ್ಳಾದರೆ ಕ್ಷಮಿಸಿ : ಕೋಟ ತಿರುಗೇಟು

ಮಾಜಿ ಶಾಸಕ ಗೋಪಾಲ ಪೂಜಾರಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದು ನನ್ನ ಬಗ್ಗೆಯೂ ಕೋಟ ಸುಳ್ಳು ಹೇಳಿದ್ದಾರೆ ಎಂದಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಗೋಪಾಲ ಪೂಜಾರಿಯವರನ್ನು ಸಜ್ಜನ ಮತ್ತು ಪ್ರಾಮಾಣಿಕ ಎಂದು ನಾನು ಹೇಳಿದ್ದೆ. ಈ ಮಾತು ಸುಳ್ಳಾದರೆ ಕ್ಷಮಿಸಿ ಎಂದು ಉಡುಪಿ-ಚಿಕ್ಕಮಗಳೂರು

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

ಕೊಕ್ಕಡ: ಬಯಲು ಆಲಯ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ದ.ಕ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಕೊಕ್ಕಡ ಸಿಎ ಬ್ಯಾಂಕ್ ನ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ವೇಣೂರು ಸಿಎ ಬ್ಯಾಂಕ್ ನ ಅಧ್ಯಕ್ಷ ಸುಂದರ ಹೆಗ್ಡೆ,

ಮಂಗಳೂರು: ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆ : ಪೂರ್ವಭಾವಿ ಸಭೆ

ಮಂಗಳೂರು: ವಿಶ್ವ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದೀಯವರು ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಿ ಇದೇ ಏಪ್ರಿಲ್ 14 ರಂದು ಮಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಇಡೀ ದೇಶವೇ ಈಗ ಲೋಕಸಭಾ ಚುನಾವಣೆಗೆ ಸಜ್ಜಾಗಿದ್ದು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪಕ್ಷ ಚಟುವಟಿಕೆಗಳು ಭರದಿಂದ

ಬ್ರಹ್ಮಾವರ : ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ ಲಕ್ಷಾಂತರ ಮೌಲ್ಯದ ಮಿಲಿಟರಿ ಮದ್ಯ ವಶಕ್ಕೆ – ಓರ್ವ ಅರೆಸ್ಟ್

ಬ್ರಹ್ಮಾವರ : ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರದಲ್ಲಿ ನಡೆಸಿದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಿಲಿಟರಿ ಮದ್ಯವನ್ನು ವಶಕ್ಕೆ ಪಡೆದು ಓರ್ವನ್ನು ಅರೆಸ್ಟ್ ಮಾಡಿದ್ದಾರೆ. ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ ಇವರುಗಳು ಮಾರ್ಗದರ್ಶನದಂತೆ ಖಚಿತ ಮಾಹಿತಿ ಮೇರೆಗೆ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ – ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪುತ್ತೂರು: ನಮ್ಮ‌ದೇಶದ ಭೂಮಿಯನ್ನು ಚೀನಾ ಅತಿಕ್ರಮಿಸುತ್ತಲೇ ಇದೆ, ಹಲವಾರು ಚ.ಅಡಿ ಜಾಗವನ್ನು ಸದ್ದಿಲ್ಲದೆ ಒಳಗೆ ಹಾಕಿದ್ದಾರೆ ಆದರೆ ನಾವು ಇಲ್ಲಿ ಧರ್ಮಗಳ ವಿಚಾರದಲ್ಲಿ ಕಚ್ಚಾಡುವ ಕೆಲಸವನ್ನು ಮಾಡುತ್ತಿದ್ದು ಇದೇ ರೀತಿ ಮುಂದುವರೆದಲ್ಲಿ ದೇಶದ ಭದ್ರತೆಗೆ ಅಪಾಯ ಉಂಟಾಗಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ದೇಶದಲ್ಲಿ ನಾವು ಪರಸ್ಪರ ಒಗ್ಗಟ್ಟಿನಿಂದ ಇರಬೇಕಿದೆ. ಧರ್ಮದ ಹೆಸರಿನಲ್ಲಿ‌ಮಾಡುವ ಕಚ್ಚಾಟವನ್ನು ನಿಲ್ಲಿಸಬೇಕು, ಯುವ ಜನತೆಯ ಕೈಗೆ ಉದ್ಯೋಗ ಕೊಡುವ

ಸುರತ್ಕಲ್: ಲೋಕಸಭಾ ಚುನಾವಣೆ ಹಿನ್ನೆಲೆ ಪಥಸಂಚಲನ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುರತ್ಕಲ್ ಪ್ಯಾರಡೈಸ್ ಮೈದಾನದಿಂದ ಕಾಟಿಪಳ್ಳವರೆಗೆ ಬೃಹತ್ ಪೊಲೀಸ್ ಪಥಸಂಚಲನ ನಡೆಯಿತು. ಪಥಸಂಚಲನದಲ್ಲಿ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಭಾಗವಹಿಸಿದ್ದರು. ಪೊಲೀಸ್ ಪಥಸಂಚಲನದಲ್ಲಿ ಪೊಲೀಸ್, ಸಿಆರ್ ಪಿಎಫ್ ಸಹಿತ ವಿವಿಧ ಘಟಕಗಳ ಸಿಬ್ಬಂದಿ ಸುಮಾರು 500ಕ್ಕೂ ಹೆಚ್ಚಿನ ಸಿಬ್ಬಂದಿ ಭಾಗವಹಿಸಿದ್ದರು.

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ಸಾಗಿಬಂತು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ

ನಾಮಪತ್ರ ಸಲ್ಲಿಕೆಗೆ ಮುನ್ನ ಕ್ಯಾ. ಬೃಜೇಶ್ ಚೌಟರಿಗೆ ಹರಸಿದ ‘ನಾರೀಶಕ್ತಿ’

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬೃಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರು, ತಾಯಂದಿರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆಗಳನ್ನು ಸಲ್ಲಿಸಲಾಯಿತು. ಪಕ್ಷದ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭ್ಯರ್ಥಿ ಕ್ಯಾ. ಚೌಟರಿಗೆ ಮಹಿಳೆಯರು ಆರತಿ ಎತ್ತಿ, ತಿಲಕವಿಟ್ಟು, ದೇಣಿಗೆ ನೀಡಿ ಗೆದ್ದು ಬರುವಂತೆ ಹರಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು,

ಕಾರ್ಕಳ : ಮತದಾನದ ಬಗ್ಗೆ ಜಾಗೃತಿ ಕಾರ್ಯಕ್ರಮ

ಕಾರ್ಕಳ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವು ಕಾರ್ಕಳದ ಬಸ್ ನಿಲ್ದಾಣದಲ್ಲಿ ನಡೆಯಿತು. ಕಾರ್ಕಳ ತಾಲೂಕು ದಂಡಾಧಿಕಾರಿ ನರಸಪ್ಪ, ಕಾರ್ಕಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗುರು ಶಾಂತಪ್ಪ, ಹಾಗೂ ಪುರಸಭಾ ಮುಖ್ಯ ಅಧಿಕಾರಿ, ರೂಪಾ ಟಿ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು.ಸಭೆ ಉದ್ದೇಶಿಸಿ ಮಾತನಾಡಿದ ಕಾರ್ಕಳ ತಾಲೂಕು ದಂಡಾಧಿಕಾರಿ ನರಸಪ್ಪ, ಭಾರತ ಒಂದು ಪ್ರಪಂಚದಲ್ಲಿ ಅತಿ ಬಲಿಷ್ಠವಾದ

ಉಡುಪಿ : ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಸಿದರು. ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಬಳಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಸಿ.ಟಿ.ರವಿ, ಶಾಸಕರಾದ ಯಶ್ಪಾಲ್ ಸುವರ್ಣ,