Home Posts tagged #mudabidare

ಮೂಡುಬಿದರೆ : 6 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಭವನಕ್ಕೆ ಶಿಲಾನ್ಯಾಸ

ಮೂಡುಬಿದಿರೆ: ಇಲ್ಲಿನ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ಬಳಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಬೇಡ್ಕರ್ ಭವನಕ್ಕೆಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಿಲಾನ್ಯಾಸಗೈದರು. ನಂತರ ಮಾತನಾಡಿದ ಅವರು 1500 ಅಂಬೇಡ್ಕರ್ ಭವನಗಳು ಸೂಕ್ತ ರೀತಿಯಲ್ಲಿ ನಿರ್ವಹಣೆಯಿಲ್ಲದಿರುವುದರಿಂದ

ಮೂಡುಬಿದರೆ : ಸಾಹಿತ್ಯ ಸಂಜೆಯ ಕವಿಗೋಷ್ಟಿ

ಕಾವ್ಯ ಹುಟ್ಡುವದಾ ಕಟ್ಟುವುದು ಎಂಬ ಪ್ರಶ್ನೆ ಇದೆ.ಹುಟ್ಟಿದ ಕಾವ್ಯ, ಬೇರೆ ಕಟ್ಟಿದ ಕಾವ್ಯ ಬೇರೆ.ಕಟ್ಟಿದ ಕಾವ್ಯವು ಕಾವುಗೊಳ್ಳಬೇಕು.ಅದಕ್ಕಿಷ್ಟು ಉಪಮೇ,ಅಲಂಕಾರ, ಲಯ,ರೂಪಕಗಳು ಇರಬೇಕು,ಎಂದು ಖ್ಯಾತ ಹಿರಿಯ ಸಾಹಿತಿ ಬಿ ಎಂ ರೋಹಿಣಿ ಅವರು ನುಡಿದರು. ಅವರು ಮೂಡುಬಿದಿರೆಯಲ್ಲಿ ಅರವಿಂದ ಚೊಕ್ಕಾಡಿ ಅವರ ಮನೆಯಲ್ಲಿ ರೇಮಂಡ್ ಡಿಕೂನಾ ತಾಕೊಡೆ ಸಾರಥ್ಯದಲ್ಲಿ ಪಿಂಗಾರ ಸಾಹಿತ್ಯ ಬಳಗದಿಂದ ಹಮ್ಮಿಕೊಂಡ ಸಾಹಿತ್ಯ ಸಂಜೆಯ ಕವಿಗೋಷ್ಟಿಯ ಅದ್ಯಕ್ಷತೆ ವಹಿಸಿ ಮಾತನಾಡಿದರು.

ಪಾನಮತ್ತ ತೀರ್ಪುಗಾರರು ಕಂಬಳದಲ್ಲಿ ಭಾಗವಹಿಸುವಂತಿಲ್ಲ || Kambala

ಮೂಡುಬಿದಿರೆ: ತೀರ್ಪುಗಾರರು ಮಧ್ಯಪಾನ ಮಾಡಿ ಕಂಬಳದಲ್ಲಿ ಭಾಗವಹಿಸುವಂತಿಲ್ಲ. ಯಾವುದೇ ಕಾರಣಕ್ಕೂ ಅಶಿಸ್ತು ಪ್ರದರ್ಶಿಸಿದಲ್ಲಿ ಅಂತಹ ತೀರ್ಪುಗಾರರನ್ನು ಮುಂದಿನ ಕಂಬಳಗಳಿಗೆ ಅಮಾನತುಗೊಳಿಸುವುದೆಂದು ಜಿಲ್ಲಾ ಕಂಬಳ ಸಮಿತಿಯ ತುರ್ತು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಿಲ್ಲಾ ಕಂಬಳ ಸಮಿತಿಯ ಆಶ್ರಯದಲ್ಲಿ ಬುಧವಾರ ಸಂಜೆ ಒಂಟಿಕಟ್ಟೆ ಕಡಲಕೆರೆ ನಿಸರ್ಗಧಾಮದ ಬಳಿ ಇರುವ ಸೃಷ್ಠಿ ಗಾರ್ಡನ್ ನ ಹಾಲ್ ನಲ್ಲಿ ಕೋಣಗಳ ಯಜಮಾನರಿಗೆ ನಡೆದ ತುರ್ತುಸಭೆಯಲ್ಲಿ ಮೇಲಿನ ತೀರ್ಮಾನವನ್ನು

ಮೂಡುಬಿದಿರೆ ವಕೀಲರ ಭವನ ಲೋಕಾರ್ಪಣೆ

ಮೂಡುಬಿದಿರೆ: ಸಮಾಜದಲ್ಲಿ ಶಾಂತಿ ನೆಲೆಸಬೇಕಾದರೆ ಅಲ್ಲಿ ವ್ಯಾಜ್ಯಗಳು ಇರಬಾರದು, ವ್ಯಾಜ್ಯಗಳು ಕಡಿಮೆಯಾಗಬೇಕಾದರೆ ವಕೀಲರು ಬಡಜನರಿಗೆ ತ್ವರಿತಗತಿಯಲ್ಲಿ ಕಡಿಮೆ ಖರ್ಚಿನಲ್ಲಿ ನ್ಯಾಯ ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ಹೇಳಿದರು. ದ.ಕ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಮೂಡುಬಿದಿರೆ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆ ನ್ಯಾಯಾಲಯದ ಆವರಣದಲ್ಲಿ ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ

ಎಪ್ರಿಲ್‍ನಲ್ಲಿ ಬಿರ್ದ್ ದ ಕಂಬುಲ ತುಳು ಚಿತ್ರ ಬಿಡುಗಡೆ

ಮೂಡುಬಿದಿರೆ : ತುಳುನಾಡಿನ ಜಾನಪದ ಕ್ರೀಡೆ ಕಂಬಳವನ್ನು ಮುಂದಿಟ್ಟುಕೊಂಡು ತಯಾರಾಗುತ್ತಿರುವ ಚಲನಚಿತ್ರ ತುಳುವಿನ ಬಿರ್ದ್‍ದ ಕಂಬುಲದ ಚಿತ್ರೀಕರಣವು ಮುಕ್ತಾಯದ ಹಂತದಲ್ಲಿದೆ ಎಂದು ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಹೇಳಿದರು.ಅವರು ಮಂಗಳೂರಿನ ಉರ್ವ ಮೈದಾನದಲ್ಲಿ ಬಿರ್ದ್‍ದ ಕಂಬುಲ ಚಿತ್ರೀಕರಣದ ಸಂದರ್ಭದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಸಿನೆಮಾವು ತುಳುನಾಡಿನ ಭಾಷೆ, ಸಂಸ್ಕೃತಿ ಮಾತ್ರವಲ್ಲದೆ ಇಡೀ ವಿಶ್ವದಲ್ಲಿ

ಮೂಡುಬಿದಿರೆ: ಬಾವಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕ ದಳ

ಮೂಡುಬಿದಿರೆ: ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಪ್ರಾಣಾಪಾಯದಲ್ಲಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಅಗ್ನಿಶಾಮಕದ ದಳದ ಸಿಬಂಧಿಗಳು ರಕ್ಷಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ಬೆಳುವಾಯಿಯಲ್ಲಿ ನಡೆದಿದೆ. ಪಡುಮಾರ್ನಾಡಿನ ನಿವಾಸಿ ಅರವತ್ತರ ಹರೆಯದ ಶ್ರೀನಿವಾಸ ಎಂಬವರು ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ. ಶ್ರೀನಿವಾಸ ಅವರು ಕೂಲಿ ಕೆಲಸಕ್ಕೆಂದು ಬೆಳುವಾಯಿಗೆ ಹೋಗಿದ್ದು ಅಲ್ಲಿ ಗೀತಾ ಕ್ಲಿನಿಕ್ ನ ಮುಂಭಾಗದಲ್ಲಿರುವ ಬಾವಿಗೆ ಅಕಸ್ಮಿಕವಾಗಿ ಕಾಲು ಜಾರಿ

ಮತಾಂತರಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ

ಮೂಡುಬಿದಿರೆ : ಹಿಂದೂ ದೇವರುಗಳನ್ನು ಅವಮಾನಿಸಿ ಮಕ್ಕಳನ್ನು ಬಲತ್ಕಾರದ ಮತಾಂತರಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ವಿದ್ಯಾಗಿರಿಯಲ್ಲಿ ಬಂಧಿಸಿದ್ದಾರೆ. ಮೈಸೂರಿನ ನಿವಾಸಿ ಬೆಂಜಮಿನ್ ವಾಸ್ ಎಂಬಾತ ಬಂಧಿಸಲ್ಪಟ್ಟ ವ್ಯಕ್ತಿ. ವಿದ್ಯಾಗಿರಿಯಲ್ಲಿ ನಡೆಯುತ್ತಿದ್ದ ಸ್ಕೌಟ್ಸ್ ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಜನರು ಸೇರುತ್ತಿದ್ದ ಕಡೆಗೆ ಧಾವಿಸುತ್ತಿದ್ದ ಬೆಂಜಮಿನ್, ಹಿಂದುಗಳ