ಮೂಡುಬಿದಿರೆ: ಚೀನಾದ ಚೆಂಗ್ಡುವಿನಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದ ಲಾಂಗ್‍ಜಂಪ್‍ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆ ಕ್ರೀಡಾಪಟು ಭವಾನಿ ಯಾದವ್ ಭಗವತಿ ಮೈಲುಗಲ್ಲು ಸಾಧಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.
ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ಕೇವಲ ಭಾಷಣದಲ್ಲಿ ಬೀಗಿದರೆ ಸಾಲದು ಬದಲಾಗಿ ಸರಕಾರಿ ಶಾಲೆಗಳನ್ನು ಹೇಗೆ ಉಳಿಸಿ ಬೆಳೆಸಬಹುದು ಎಂಬ ಚಿಂತನೆಯೂ ಬೇಕು. ಅಂತಹ ಚಿಂತನೆಯೊಂದನ್ನು ಮಾಡಿ ಶಾಲೆಗಳಾಗಿ ಶಾಶ್ವತ ಯೋಜನೆಯನ್ನು ರೂಪಿಸಿ ಮಕ್ಕಳ ಮತ್ತು ಶಾಲಾಭಿಮಾನಿಗಳ ಮನಗೆದ್ದ ಜನಪ್ರತಿನಿಧಿ ಪಡುಮಾರ್ನಾಡು ಗ್ರಾ.ಪಂ. ಮಾಜಿ ಅಧ್ಯಕ್ಷ ಶ್ರೀನಾಥ್ ಸುವರ್ಣ ಅವರು. ಪಡುಮಾರ್ನಾಡು ಗ್ರಾ.ಪಂ. ವ್ಯಾಪ್ತಿಯ ಜಿ.ಪಂ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ
ಮೂಡುಬಿದಿರೆ: ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಸಮಾಜ ಮಂದಿರದಲ್ಲಿ ಪೂಜಿಸಲ್ಪಡುವ ಮೂಡುಬಿದಿರೆ ಗಣೇಶೋತ್ಸವವು ಈ ವರ್ಷ ವಜ್ರಮಹೋತ್ಸವವನ್ನು ಆಚರಿಸುತ್ತಿದೆ. ಈ ಹಿನ್ನಲೆಯಲ್ಲಿ ಗಣೇಶೋತ್ಸವ ಸಮಿತಿ, ಪವರ್ ಫ್ರೆಂಡ್ಸ್ ಬೆದ್ರ ಮತ್ತು ಸಮಾಜಮಂದಿರ ಸಭಾ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಮರುಜೋಡಣೆಯ ತಪಾಸಣಾ ಉಚಿತ ಶಿಬಿರ ಹಾಗೂ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ
ಮುಂಡ್ಕೂರು ಸಮೃದ್ಧಿ ಸಂಜೀವಿನಿ ಒಕ್ಕೂಟದ ವತಿಯಿಂದ ಮುಂಡ್ಕೂರು ಜೈನಪೇಟೆಯ ಬಳಿ ಗದ್ದೆಯಲ್ಲಿ ಒಕ್ಕೂಟದ ಮಹಿಳೆಯರು ಗದ್ದೆ ನಾಟಿ ಮಾಡಿದರು. ಸುಮಾರು ಒಂದು ಎಕರೆ ಹಡಿಲು ಭೂಮಿಯನ್ನು ಸಮತಟ್ಟು ಮಾಡಿ ಟ್ಯಾಕ್ಟರ್ ಮೂಲಕ ಉಳುಮೆ ಮಾಡಿ ನಾಟಿ ಮಾಡಿದರು. ಈ ಸಂದರ್ಭದಲ್ಲಿ ಸಮೃದ್ಧಿ ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ ವನಿತಾ ಶೆಟ್ಟಿ ಎಲ್ ಸಿ ಆರ್ ಪಿ ಶಶಿಕಲಾ, ಸುಮನ ಒಕ್ಕೂಟದ ಅಧ್ಯಕ್ಷರಾದ ಹರಿಣಾಕ್ಷಿ ಒಕ್ಕೂಟದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.
ಮೂಡುಬಿದಿರೆ: ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಗೈಡ್ಸ್ ಘಟಕ, ಇಂಟರಾಕ್ಟ್ ಕ್ಲಬ್, ಶಾಲಾ ಸಂಸತ್ತು ಹಾಗೂ ಮೂಡುಬಿದಿರೆ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ಪ್ಲಾಸ್ಟಿಕ್ ಮುಕ್ತ ಪರಿಸರ ಸಂರಕ್ಷಣಾ ಅಭಿಯಾನ ಮೂಡುಬಿದಿರೆ ಮಾರುಕಟ್ಟೆ ಸಮೀಪ ನಡೆಯಿತು. ಪುರಸಭಾ ಮುಖ್ಯಾಧಿಕಾರಿ ಶಿವ ನಾಯಕ್ ಅಭಿಯಾನಕ್ಕೆ ಚಾಲನೆ ನೀಡಿ ಪ್ಲಾಸ್ಟಿಕ್ ನ ದುಷ್ಪರಿಣಾಮಗಳ ಬಗ್ಗೆ ಮಾತನಾಡಿದರು. ಈ ಜನ ಜಾಗೃತಿ ಕಾರ್ಯಕ್ರಮದಲ್ಲಿ ರೋಟರಿ ಎಜುಕೇಶನ್ ಸೊಸೈಟಿ ಅಧ್ಯಕ್ಷ ನಾರಾಯಣ ಪಿ ಎಂ
ಪಿಂಗಾರ ಕಲಾವಿದೆರ್ ಬೆದ್ರ ತಂಡದ ನೂತನ ನಾಟಕ `ಕದಂಬ’ ಇದರ ಶೀರ್ಷಿಕೆಯನ್ನು ಭಾನುವಾರ ಕೋಟೆ ಬಾಗಿಲು ಮಹಾಮ್ಮಾಯಿ ದೇವಸ್ಥಾನದ ಆವರಣದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ದೇವಳದ ಆಡಳಿತ ಮೋಕ್ತೇಸರ ನಾರಂಪ್ಪಾಡಿಗುತ್ತು ಸೇಸಪ್ಪ ಹೆಗ್ಡೆ ಶೀರ್ಷಿಕೆಯನ್ನು ಬಿಡುಗಡೆಗೊಳಿಸಿದರು.ತಂಡದ ಮುಖ್ಯಸ್ಥ ಮಣಿಕೋಟೆಬಾಗಿಲು ಪ್ರಾಸ್ತಾವಿಕವಾಗಿ ಮಾತನಾಡಿ, ಕದಂಬ ನಾಟಕವು ತುಳು ರಂಗಭೂಮಿಯಲ್ಲಿ ವಿಭಿನ್ನ ಪ್ರಯತ್ನವಾಗಿದ್ದು, ವಿನೂತನ ಶೈಲಿಯ ರಂಗ ವಿನ್ಯಾಸವನ್ನು ಹೊಂದಿದೆ. ಈ
ಮೂಡುಬಿದಿರೆ: ಹಲಸು- ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿ ನೇತೃತ್ವದಲ್ಲಿ ಕೃಷಿಋಷಿ ಡಾ.ಎಲ್.ಸಿ. ಸೋನ್ಸ್ ಸ್ಮರಣಾರ್ಥ ವಿದ್ಯಾಗಿರಿಯಲ್ಲಿ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಭವನದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ಹಲಸು ಮತ್ತು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಮತ್ತು ಕೃಷಿ ಪ್ರದರ್ಶನಗಳ ಪರಿಕರಗಳ ಪ್ರದರ್ಶನ ಮತ್ತು ಮಾರಾಟ `ಸಮೃದ್ಧಿ’ಯು ಸಮಾಪನಗೊಂಡಿತ್ತು. ಶ್ರೀಮತಿ ಮೋಹಿನಿ ಅಪ್ಪಾಜಿ ನಾಯಕ್ ವೇದಿಕೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ
ಮೂಡುಬಿದಿರೆ : ಸರಕಾರಿ ಮತ್ತು ಅನುದಾನ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಅಕ್ಷರ ದಾಸೋಹ ನೌಕರರ ಸಮಸ್ಯೆಗಳನ್ನು ಸರಕಾರ ಪರಿಹರಿಸಬೇಕು ಎಂದು ಆಗ್ರಹಿಸಿ, ಮೂಡುಬಿದಿರೆ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ತಾಲೂಕಿನ ಕ.ರಾ. ಅಕ್ಷರ ದಾಸೋಹ ನೌಕರರ ಸಂಘದವರು ಪ್ರತಿಭಟನೆ ನಡೆಸಿದರು. ಮೂಡುಬಿದಿರೆ ಸಿಐಟಿಯುನ ಮಾಜಿ ಅಧ್ಯಕ್ಷೆ ರಮಣಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ದಿನಕ್ಕೆ ಆರು ಗಂಟೆಗಿಂತಲೂ ಅಧಿಕ ಸಮಯ ಕೆಲಸ ಮಾಡುವ ಅನಿವಾರ್ಯ ಪರಿಸ್ಥಿತಿಯಲ್ಲಿರುವ ರಾಜ್ಯದ
ಮೂಡುಬಿದಿರೆ : ಹಲಸು ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿವತಿಯಿಂದ ಹಿರಿಯ ಕೃಷಿ ತಜ್ಞ ಡಾ| ಎಲ್ ಸಿ ಸೋನ್ಸ್ ಸ್ಮರಣಾರ್ಥ “ಸಮೃದ್ಧಿ” ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾ ಮೇಳ ಜುಲೈ 14 ರಿಂದ 16 ರವರೆಗೆ ವಿದ್ಯಾಗಿರಿಯ ಕೆ ಅಮರನಾಥಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ. ಆಳ್ವಾಸ್ ಶಿಕ್ಷಣ ಸಂಸ್ಥಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು
ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಹೌದಾಲ್ ಸಮೀಪದ ಮರಿಯಾಡಿಯ ಯುವಕ ಪಾರಿಸ್ (20) ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದ ಪಾರಿಸ್‍ನ ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.



























