Home Posts tagged #mullai muhilan

ದ.ಕ ದಲ್ಲಿ ಮತದಾನಕ್ಕೆ ಎಲ್ಲಾ ಸಿದ್ಧತೆ ಪೂರ್ಣ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಎ.26ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ.೨೪.ರಂದು ಸಂಜೆ 6ಗಂಟೆಗೆ ಎಲ್ಲಾ ರೀತಿಯ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.ಎ.26ರಂದು ದಕ್ಷಿಣ ಕನ್ನಡ ಜಿಲ್ಲೆಯ 1876ಮತಗಟ್ಟೆಗಳಲ್ಲಿ ಬೆಳಗ್ಗೆ 7ಗಂಟೆಯಿಂದ ಸಂಜೆ 6ಗಂಟೆಯ ವರೆಗೆ ಮತದಾನ ನಡೆಸಲು ಎಲ್ಲಾ ಸಿದ್ದತೆ ಪೂರ್ಣ ಗೊಂಡಿದೆ ಎಂದು ದಕ್ಷಿಣ

ಮಂಗಳೂರು : ಮತದಾರರ ಜಾಗೃತಿ ಅಭಿಯಾನಕ್ಕೆ ಚಾಲನೆ

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜು ಆವರಣದ ರವೀಂದ್ರ ಕಲಾಭನವನದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಅಭಿಯಾನವನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ. ಆನಂದ್ ಕೆ.,

ನೈಸರ್ಗಿಕ ಸಂಪತ್ತಿನ ಸಂರಕ್ಷಣೆ ನಮ್ಮೆಲ್ಲರ ಸಾಮೂಹಿಕ ಹೊಣೆಗಾರಿಕೆ-ಮಲ್ಲೈ ಮುಗಿಲನ್

ಮಂಗಳೂರು: ಮಣ್ಣು ,ನೀರು,ಗಾಳಿ ಸೇರಿದಂತೆ ನೈಸರ್ಗಿಕ ಸಂಪತ್ತಿನ ಮಿತ ಬಳಕೆ ಸಂರಕ್ಷಣೆ ನಮ್ಮೆಲ್ಲರ ಸಾಮೂ ಹಿಕ ಹೊಣೆ ಗಾರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಅವರು ಜಿಲ್ಲಾಧಿಕಾರಿ ನಿವಾಸದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ,ಮಂಗಳೂರು ಯುವ ರೆಡ್ ಕ್ರಾಸ್ ಘಟಕ, ಬ್ಯಾಂಕ್ ಆಫ್ ಬರೋಡಾದ ಸಹಯೋಗದೊಂದಿಗೆ ಹಮ್ಮಿಕೊಂಡ ಜೀವ ಜಲ ಉಳಿಸಿ ಅಭಿಯಾನದ ಜಲ ಸಂರಕ್ಷಣೆಯ ಭಿತ್ತಿ ಪತ್ರ ಬಿಡುಗಡೆ

ಇವಿಎಂ ಭದ್ರತಾ ಕೇಂದ್ರಗಳ ಪೂರ್ವಸಿದ್ಧತೆ ಪರಿಶೀಲನೆ

ಲೋಕಸಭೆ ಚುನಾವಣೆ ಇನ್ನೇನು ಹತ್ತಿರ ಬರಲಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲನೆ ಮಾಡಿದರು. ಸುರತ್ಕಲ್ ಎನ್.ಐ.ಟಿ.ಕೆ. ಇಂಜಿನಿಯರಿಂಗ್ ಕಾಲೇಜಿಗೆ ತೆರಳಿ ದಕ್ಷಿಣ ಕನ್ನಡ ಜಿಲ್ಲೆಯ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಮತ್ತಿತರರು

ಸುಳ್ಯ: ಜನರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಬದ್ಧ: ಸಚಿವ ದಿನೇಶ್ ಗುಂಡೂರಾವ್

ಸರಕಾರದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ಹಾಗೂ ಜನರ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಬದ್ಧವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಹೇಳಿದ್ದಾರೆ. ಅವರು ಸುಳ್ಯ ಕೆವಿಜಿ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಲು ಜನತಾ ದರ್ಶನ

ಡಿ.17ರಂದು ಬೆಂಗ್ರೆಯಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ

ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಅಮೃತ ಮಹೋತ್ಸವದ ಅಂಗವಾಗಿ ಬೆಂಗ್ರೆ ಪರಿಸದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮವನ್ನು ಡಿಸೆಂಬರ್ 17ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಹಾಜನ ಸಂಘ ಬೆಂಗ್ರೆಯ ಅಧ್ಯಕ್ಷರು ಮತ್ತು ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಅಧ್ಯಕ್ಷರಾದ ಚೇತನ್ ಬೆಂಗ್ರೆ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಬಳಿಕ ವಿ4 ನ್ಯೂಸ್‍ಗೆ ಮಾಹಿತಿ ನೀಡಿದರು. ಇತ್ತೀಚಿನ ದಿನಗಳಲ್ಲಿ ನದಿಗಳಿಗೆ ಕಸ

ನೂತನ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅಧಿಕಾರ ಸ್ವೀಕಾರ

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಗಿಲನ್ ಶನಿವಾರದಂದು ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ಮೂಲತಃ ತಮಿಳುನಾಡಿನ ಮುಲ್ಲೈ ಮುಗಿಲನ್ 2013ರ ಐಎಎಸ್ ಬ್ಯಾಚ್‍ನವರಾಗಿದ್ದು, ದಿಂಡಿಗಲ್ ಅಣ್ಣಾ ವಿವಿಯ ಪಿಎಸ್‍ಎನ್‍ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್ ಸಯನ್ಸ್‍ನಲ್ಲಿ ಪದವಿ