Home Posts tagged #mumbai

ಮುಂಬೈ : ಕಟೀಲು ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಕಾರ್ಯಕ್ರಮ

ಮುಂಬೈ ಮಹಾನಗರದಲ್ಲಿ ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಕಾರ್ಯಕ್ರಮ ಸಯನ್ ಗೋಕುಲ ಸರಸ್ವತಿ ಸಭಾಗೃಹ ಬಿ ಎಸ್ ಕೆ ಬಿ ಅಸೋಸಿಯೇಷನ್ ಸಹಕಾರದೊಂದಿಗೆ ಯುವ ನ್ಯಾಯವಾದಿ ರವಿ ಕೋಟ್ಯಾನ್‌ರವರ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ನಡೆಯಿತು.  ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ

ಮಕ್ಕಳ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಂಬೈ: ಮಲಾಡ್‍ಪೂರ್ವದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಯುವ ವಿಭಾಗದ ಆಶ್ರಯದಲ್ಲಿ ಅಕ್ಟೋಬರ್ 30ರಂದು ಮಲಾಡ್ ಪೂರ್ವದ ಚಿಲ್ಡ್ರನ್ಸ್ ಅಕಾಡೆಮಿ ಶಾಲೆಯ ಸಭಾಂಗಣದಲ್ಲಿ ದಿನಪೂರ್ತಿ ನಡೆಯಲಿರುವ ಮಕ್ಕಳ ಉತ್ಸವದ ಆಮಂತ್ರನ ಪತ್ರಿಕೆಯನ್ನು ಬಿಲ್ಲವರ ಅಸೋಸಿಯೇಷನ್ ಮಲಾಡ್ ಸ್ಥಳೀಯ ಕಚೇರಿಯ ಕಾರ್ಯಾಲಯದಲ್ಲಿ ಪೂಜಾ ಸಮಿತಿಯ ಅಧ್ಯಕ್ಷರಾದ ನ್ಯಾಯವಾದಿ ಜಗನ್ನಾಥ್ ಎನ್ ಶೆಟ್ಟಿ ಪಣಿಯೂರು ಬಿಡುಗಡೆಗೊಳಿಸಿದರು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ

ಮಹಾರಾಷ್ಟ್ರ: ಟ್ರಕ್‌ ಹಾಗೂ ಬಸ್ ಅಪಘಾತ: ಬೆಂಕಿ ಹೊತ್ತಿ 10 ಮಂದಿ ಸಜೀವ ದಹನ, 24 ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಔರಂಗಾಬಾದ್ ರಸ್ತೆಯಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಸಂಭವಿಸಿದ ದುರ್ಘಟನೆಯಲ್ಲಿ 24 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಲೀಪರ್ ಕೋಚ್ ಬಸ್‌ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರು. ನಂದೂರ್ ನಾಕಾ ಎಂಬಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದ ಕೆಲವೇ

ಮುಂಬೈ : 9ಹ್ಯಾಂಡ್ಸ್ ಫೌಂಡೇಶನ್ ಸಂಸ್ಥೆ ವಾರ್ಷಿಕ ಮಹಾಸಭೆ

9 ಹ್ಯಾಂಡ್ಸ್ ಫೌಂಡೇಶನ್ ಮುಂಬೈ ಸಂಸ್ಥೆಯ ವಾರ್ಷಿಕ ಮಹಾಸಭೆಯು ಆಂಧೇರಿಯ ಹೋಟೆಲ್ ತುಂಗಾ ಇಂಟರ್‍ನ್ಯಾಷನಲ್ ಸಭಾಂಗಣದಲ್ಲಿ ದಯಾನಂದ ಬಂಗೇರ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯದರ್ಶಿ ದೇವರಾಜ ಅಮೀನ್ ಅವರು ಗತ ವರ್ಷದ ವಾರ್ಷಿಕ ಮಹಾಸಭೆಯ ಟಿಪ್ಪಣಿ ಓದಿದರು. ಜೊತೆ ಕೋಶಾಧಿಕಾರಿ ಶ್ರೀ ಸಂತೋಷ್ ಕರ್ಕೇರ ಇವರು ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ಶ್ರೀ ತುಕಾರಾಂ ಸಾಲ್ಯಾನ್ ಮತ್ತು ಶ್ರೀ ಹರೀಶ್ ಶ್ರೀಯಾನ್ ರವರು ತಮ್ಮ ಭಾಷಣದಲ್ಲಿ 9 ಹ್ಯಾಂಡ್ಸ್

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ಅಧಿವೇಶನ

ಮುಂಬೈ: ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ) ,ಇದರ ಮಹಾ ಅಧಿವೇಶನ ಹಾಗೂ ವಿಶ್ವ ಬಂಟರ ಸಮ್ಮಿಲನ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ವಿಶ್ವ ಬಂಟರ ಸಮ್ಮೇಳನ ಸೆಪ್ಟೆಂಬರ್ 18 ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ ಭಂಡಾರಿ ಸಭಾಗೃಹದ ಕೂಳೂರು ಕನ್ಯಾನ ಸದಾಶಿವ ಕೆ. ಶೆಟ್ಟಿ ವೇದಿಕೆಯಲ್ಲಿ ನಡೆಯಲಿದ್ದು. ಈ ಬಗ್ಗೆ ಪೂರ್ವ ಸಿದ್ಧತಾ ಸಭೆಯು ಕುರ್ಲಾ ಪೂರ್ವದ ಬಂಟರ ಭವನದ ಸಂಕಿರಣದಲ್ಲಿ ನಡೆಯಿತು.

ಮುಂಬೈ: ಐಕಳ ಹರೀಶ್ ಶೆಟ್ಟಿಯವರ ‘ಸಾರ್ವಭೌಮ’ ಗೌರವ ಗ್ರಂಥ ಲೋಕಾರ್ಪಣೆ

ಮುಂಬೈ: “ಐಕಳ ಹರೀಶ್ ಶೆಟ್ಟಿಯವರು ಹೊರನಾಡಿನ ಪ್ರತಿಸೂರ್ಯ.ಮುಂಬೈನ ತುಳು ಕನ್ನಡಿಗರ ಧೀಮಂತ ನಾಯಕ. ಅವರು ತಾರಾಮೌಲ್ಯ ಇರುವ ಕೆಲವೇ ಕೆಲವು ಸಂಘಟಕರಲ್ಲಿ ಒಬ್ಬರು. ಕ್ರಿಯಾಶೀಲ, ಚಿಂತನಶೀಲ , ಸಹನಶೀಲ ಮತ್ತು ಆಧ್ಯಾತ್ಮಶೀಲಗಳನ್ನು ಮೈಗೂಡಿಸಿಕೊಂಡ ಮಹಾನಾಯಕ. ಇಂತಹ ಅಪರೂಪದ ದಣಿವರಿಯದ ಚೇತನ, ಸಂಘಟನ ಸೀಮಾಪುರುಷ , ಸಾಹಸಪುರುಷನನ್ನು ಗೌರವಿಸುವುದು ವಿಶ್ಕವಿದ್ಯಾಲಯದ ಕರ್ತವ್ಯ ಎಂಬ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ” ಎಂಬುದಾಗಿ

ಮುಂಬೈ: ನಾಪತ್ತೆಯಾಗಿದ್ದ ಸುಧೀರ್ ಕುಮಾರ್ ಸಫಲಿಗ ಶವವಾಗಿ ಪತ್ತೆ

ವಸಾಯಿಯ ಪಶ್ಚಿಮದ ಗೊರೈಪಾಡದ ಜೀವನ್ ನಗರ ನಿವಾಸಿ 35 ವರ್ಷ ಸುಧೀರ್ ಕುಮಾರ್ ಸಫಲ್ಯ ಅವರು ಆ.14ರಂದು ನಾಪತ್ತೆಯಾಗಿದ್ದು ಬಳಿಕ ಸೋಮವಾರ ಸಂಜೆ ಶವವಾಗಿ ಪತ್ತೆಯಾಗಿದ್ದಾರೆ. ಮೂಲತಃ ಮಂಜೇಶ್ವರ ಬಳಿಯ ಉಪ್ಪಳ ನಿವಾಸಿಯಾಗಿದ್ದ ಸುಧೀರ್ ಅವಿವಾಹಿತನಾಗಿದ್ದು, ಇವರನ್ನು ಕೊಲೆ ಮಾಡಲಾದ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಗೊರೈಪಾಡದ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಸುಧೀರ್ ಆ.14ರಂದು ಉಪ್ಪಳ ಸಮಿತಿಯ ಕಾರ್ಯದರ್ಶಿಯವರಿಗೆ ಫೋನ್ ಕರೆ ಮಾಡಿ ಭೇಟಿಗಾಗಿ

ಬಂಟರ ಸಂಘದ ಅಭಿವೃದ್ಧಿಗೆ ಎಲ್ಲಾ ಬಂಟರು ಮುಂದೆ ಬರಬೇಕು :ಚಂದ್ರಹಾಸ್ ಕೆ. ಶೆಟ್ಟಿ

ಮುಂಬಯಿ, ಆ.22 : ದಿಶಾ ” ಒಂದು ಉತ್ತಮ ಕಾರ್ಯಕ್ರಮ ಬಂಟರ ಸಂಘದ ಪ್ರತಿಯೊಂದು ಕಾರ್ಯಕ್ರಮವು ಹಂತ ಹಂತವಾಗಿ ಬೆಳೆಯುತ್ತಾ ಹೋಗುತ್ತಿದೆ. ನಮ್ಮ ಹಿಂದಿನವರು ಹಾಕಿರುವ ಸದೃಢ ಅಡಿಪಾಯ ಶ್ರೇಯೋಭಿವೃದಿಗೆ ಕಾರಣವಾಗಿದೆ ಇದಕ್ಕೆ ಎಸ್. ಎಂ. ಶೆಟ್ಟಿ ಸ್ಕೂಲ್ ಉದಾಹರಣೆಯಾಗಿದೆ ಎಂದು ಬಂಟರ ಸಂಘ ಮುಂಬಯಿ ಅದ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ ಅವರು ತಿಳಿಸಿದರು. ಆ.21 ರಂದು ಪೊವಾಯಿ ಎಸ್.ಎಂ.ಶೆಟ್ಟಿ ಶಾಲೆಯ ಸಭಗೃಹದಲ್ಲಿ ಬಂಟರ ಸಂಘ ಮುಂಬಯಿ , ಅಂಧೇರಿ – ಬಾಂದ್ರ

ಥಾಣೆ ಗುರುಭಕ್ತರಿಂದ ಒಡಿಯೂರು ಗುರುಗಳಿಗೆ ಗುರುವಂದನೆ

ಥಾಣೆ: ಮಾನವನಿಗೆ ಒಂದು ಧರ್ಮವಿದೆ, ಅದುವೇ ಮಾನವ ಧರ್ಮ. ಮಾನವ ಧರ್ಮ ವನ್ನು ಸಂಸ್ಕಾರದ ಮೂಲಕ ಅರಿಯಬೇಕು. ಅದರಿಂದ ಸಂಸ್ಕøತಿ ಉಳಿಯಲು ಸಾಧ್ಯವಿದೆ. ಸ್ವಾರ್ಥದ ಬದುಕು ಹೋಗಿ ನಿಸ್ವಾರ್ಥದ ಬದುಕು ನಮ್ಮದಾಗಬೇಕು. ಅಂತಹ ಗುಣ ನಮಗೆ ಬರಬೇಕು. ಕಡಲಿನಂತಹ ವಿಶಾಲವಾದ ಗುಣ ನಮ್ಮಲ್ಲಿರಲಿ. ನಮ್ಮನ್ನು ನಾವು ಅರಿಯಬೇಕು.ಸ್ವಾರ್ಥವನ್ನು ಬಿಟ್ಟು ನಿಸ್ವಾರ್ಥ ರಾದಾಗ ಮಾತ್ರ ಉತ್ತಮವಾದ ಜೀವನವನ್ನು ನಡೆಸಲು ಸಾಧ್ಯ ಎಂದು ಒಡಿಯೂರು ಒಡೆಯ ಶ್ರೀ ಗುರುದೇವಾನಂದ ಸ್ವಾಮೀಜಿ

ಮುಂಬಯಿ ಪತ್ರಕರ್ತ ಪಾಲೆತ್ತಾಡಿ ಅವರಿಗೆ V4 ಸುದ್ದಿವಾಹಿನಿಯ ವತಿಯಿಂದ ಅಭಿನಂದನೆ

ಮಂಗಳೂರು: ನವಂಬರ್ 1ರಂದು ಬೆಂಗಳೂರಿನಲ್ಲಿ ಜರಗಿದ ರಾಜ್ಯೋತ್ಸವ ಸಮಾರಂಭದಲ್ಲಿ 2021 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಹೊರನಾಡ ಕನ್ನಡಿಗ, ಮುಂಬಯಿ ‘ಕರ್ನಾಟಕ ಮಲ್ಲ’ ಕನ್ನಡ ದೈನಿಕದ ಸಂಪಾದಕ ಚಂದ್ರಶೇಖರ ಪಾಲೆತ್ತಾಡಿ ಅವರನ್ನು ಮಂಗಳೂರಿನಲ್ಲಿV4 ನ್ಯೂಸ್ ಕರ್ನಾಟಕ ಸುದ್ದಿವಾಹಿನಿಯ ಕಾರ್ಯಾಲಯದಲ್ಲಿಅಭಿನಂದಿಸಲಾಯಿತು. ಮಂಗಳೂರಿನ V4 ನ್ಯೂಸ್ ಕರ್ನಾಟಕ ಸುದ್ದಿವಾಹಿನಿಯ ಕಚೇರಿ ಆವರಣದಲ್ಲಿ ವಾಹಿನಿಯ ಆಡಳಿತ ನಿರ್ದೇಶಕ