ಕೇವಲ ಒಂದು ಲಕ್ಷ ರೂಪಾಯಿ ಹಣದಾಸೆಗಾಗಿ 2 ದಿನದ ಹಸುಗೂಸನ್ನು ಚಿಕ್ಕಮಗಳೂರಿನ ಎನ್‌ಆರ್‌ಪುರದಿಂದ ಕಾರ್ಕಳದ ದಂಪತಿಗೆ ಮಾರಾಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಭಾಗಿಯಾದ ಮಗುವಿನ ಹೆತ್ತವರು, ಮಗುವನ್ನು ಪಡೆದವರು ಹಾಗೂ ಆರೋಗ್ಯ ಇಲಾಖೆಯ ನಿವೃತ್ತ ನರ್ಸ್ ಕುಸುಮಾ ಸೇರಿ ಐವರ ವಿರುದ್ಧ ಕೇಸ್ ದಾಖಲಾಗಿದೆ.ಕಾರ್ಕಳದ ರಾಘವೇಂದ್ರ ಎಂಬವರಿಗೆ 2 ದಿನದ
ಕಾರ್ಕಳ: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ(44) ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28)ಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿ ಆದೇಶಿಸಿದೆ. ದಿಲೀಪ್ ಹೆಗ್ಡೆ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ಮಾರ್ಚ್ 4ರಂದು ತಿರಸ್ಕರಿಸಿದ್ದು, ಈ ಹಿನ್ನೆಲೆಯಲ್ಲಿ ಆರೋಪಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ತಂಡ ಮೂವರನ್ನು ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುಳ್ಯ ಮೂಲದ ಮುಸ್ತಫಾ ಪೈಚಾರ್, ಸೋಮವಾರಪೇಟೆ ಮೂಲದ ಇಲ್ಯಾಸ್ ಹಾಗೂ ಸಿರಾಜ್ ಎಂದು ಗುರುತಿಸಲಾಗಿದೆ. ಪ್ರವೀಣ್ ನೆಟ್ಟಾರು ಪ್ರಕರಣದ ನಾಲ್ಕನೇ ಆರೋಪಿ ಎಂದು ಗುರುತಿಸಲಾಗಿದ್ದ ಮುಸ್ತಫಾ ಪೈಚಾರ್ ಹಾಗೂ ಇಲ್ಯಾಸ್ ಆನೆಮಹಲ್‌ನ ಸಿರಾಜ್ ಬಳಿ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದ್ದು, ಆರೋಪಿಗಳಿಗೆ ಆಶ್ರಯ ನೀಡಿದ್ದ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾಗಿದ್ದ ಎ.ಎಸ್. ರಾಮಕೃಷ್ಣ ಅವರ ಹತ್ಯೆ ಪ್ರಕರಣದ ತೀರ್ಪನ್ನು ರಾಜ್ಯ ಹೈ ಕೊರ್ಟು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಡಾ.ರೇಣುಕಾ ಪ್ರಸಾದ್ ಸೇರಿದಂತೆ 6 ಮಂದಿಯನ್ನು ದೋಷಿಗಳು ಎಂದು ತೀರ್ಮಾನಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. 2011ರ ಏಪ್ರಿಲ್ ತಿಂಗಳಿನಲ್ಲಿ ಎ.ಎಸ್. ರಾಮಕೃಷ್ಣ ಸುಳ್ಯ ನಗರದ ರಸ್ತೆಯೊಂದರಲ್ಲಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ





















