Home Posts tagged #nelyadi (Page 4)

ನೆಲ್ಯಾಡಿ: ಕೌಕ್ರಾಡಿ ಪೇಟೆ ಉಳಿಸಿ- ಹೋರಾಟಕ್ಕೆ ಸಮಾಲೋಚನೆ ಸಭೆ: ನ.23ರಂದು ಪ್ರತಿಭಟನೆಗೆ ನಿರ್ಧಾರ

ನೆಲ್ಯಾಡಿ ಪೇಟೆಯ ಎರಡೂ ಬದಿ ತಡೆಗೋಡೆಯೊಂದಿಗೆ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್ ರಸ್ತೆ ಕೈಬಿಟ್ಟು ಕಲ್ಲಡ್ಕದಲ್ಲಿ ನಿರ್ಮಾಣವಾಗುತ್ತಿರುವ ಮಾದರಿಯಲ್ಲಿಯೇ ಫ್ಲೈಓವರ್ ಮಾಡಬೇಕೆಂದು ಒತ್ತಾಯಿಸಿ ಹೋರಾಟ ನಡೆಸಲು ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲೆಯ ವಠಾರದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ನಿರ್ಧರಿಸಲಾಗಿದೆ. ನೆಲ್ಯಾಡಿ ಭಾರತ್ ಪೆಟ್ರೋಲ್ ಪಂಪ್‍ನ

ನೆಲ್ಯಾಡಿ: ಕೊಕ್ಕಡ ಮಾಯಿಲಕೋಟೆಯಲ್ಲಿ ಕಳ್ಳತನ

ನೆಲ್ಯಾಡಿ : ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಾಯಿಲಕೋಟೆ ದೇವಸ್ಥಾನಕ್ಕೆ ನ.10ರಂದು ಮಧ್ಯಾಹ್ನ ಸುಮಾರು 2:30 ಗಂಟೆ ಸಮಯಕ್ಕೆ ಕಳ್ಳತನ ನಡೆದಿದೆ. ಒಂದು ತಿಂಗಳ ಹಿಂದೆ ಇಲ್ಲಿ ಕಳ್ಳತನ ನಡೆದಿದ್ದು, ಈ ಬಗ್ಗೆ ದೇವಸ್ಥಾನದಲ್ಲಿ ಕಳ್ಳತನ ಮಾಡಿದವರ ಬಗ್ಗೆ ಒಂದು ತಿಂಗಳೊಳಗೆ ಸುಳಿವು ಸಿಗುವಂತೆ ಪ್ರಾರ್ಥಿಸಲಾಗಿತ್ತು. ನ.10ರಂದು ಮಧ್ಯಾಹ್ನದ ವೇಳೆ ಕಳ್ಳರು ಕಳ್ಳತನ ಮಾಡುತ್ತಿದ್ದ ಸಂದರ್ಭದಲ್ಲಿ ದೊಡ್ಡದಾದ ಶಬ್ದವೊಂದು ಕೇಳಿಸಿದ್ದು ಪರಿಸರದ ಜನರೆಲ್ಲ ಒಟ್ಟಾಗಿ

ನೆಲ್ಯಾಡಿ: ಹೃದಯಾಘಾತದಿಂದ ವಿದ್ಯಾರ್ಥಿ ನಿಧನ

ನೆಲ್ಯಾಡಿ: ಹೃದಯಾಘಾತಕ್ಕೆ ಒಳಗಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ನ.6ರಂದು ಸಂಜೆ ನಡೆದಿದೆ. ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ನಿವಾಸಿ ಯೂಸುಫ್ ಎಂಬವರ ಪುತ್ರ ಮಹಮ್ಮದ್ ಇರ್ಪಾನ್(18ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಪುತ್ತೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಎ.ಸಿ.ಮೆಕ್ಯಾನಿಕ್ ವ್ಯಾಸಂಗ ಮಾಡುತ್ತಿದ್ದ ಇರ್ಪಾನ್ ಎಂದಿನಂತೆ ಶಾಲೆಗೆ ಹೋಗಿ ಸಂಜೆ ಮನೆಗೆ ಬಂದಿದ್ದರು. 6 ಗಂಟೆಯ ವೇಳೆಗೆ ಇರ್ಪಾನ್ ದಿಢೀರ್

ನೆಲ್ಯಾಡಿ: ವಿಶ್ವವಿದ್ಯಾನಿಲಯ ಕಾಲೇಜು; 68ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ

ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜ್ಯೋತಿ ಬೆಳಗಿಸಿ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಸಚಿನ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಕ್ಷೀಯ ನುಡಿಗಳಲ್ಲಿ ಕನ್ನಡ ಭಾಷೆಯ ಐತಿಹಾಸಿಕ ಹಿನ್ನೆಲೆಯ ಕುರಿತು ಇಂದಿನ ಯುವ ಸಮುದಾಯ ವಿಸ್ಮೃತಿಗೆ ಒಳಗಾಗಬಾರದು ಎಂದರು. ಕನ್ನಡದ ಅಕ್ಷರಗಳ ಪ್ರತಿಯೊಂದು ಧ್ವನಿಯ ವೈಜ್ಞಾನಿಕ

ನೆಲ್ಯಾಡಿ: ಕನ್ನಡಿಗರು ಅಭಿಮಾನದಿಂದ ನಾನು ಕನ್ನಡಿಗನೆಂದು ಹೇಳಿಕೊಳ್ಳಬೇಕು -ಗಣರಾಜ್ ಕುಂಬ್ಳೆ

ಬೆಥನಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ಪತಾಕೆಯನ್ನು ಹಾರಿಸಿ, ಕನ್ನಡದ ವೈಭವವನ್ನು ಸಾರುವ ಸಂದೇಶವನ್ನು ನೀಡುವುದರ ಮೂಲಕ ಹಾಗೂ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ.ತೋಮಸ್ ಬಿಜಿಲಿ ಅವರು ವಹಿಸಿ ಕನ್ನಡಿಗರು ನಾಡು ನುಡಿ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕು, ಈ ಕೆಲಸ ವಿದ್ಯಾರ್ಥಿಗಳಿಂದಲೇ

ನೆಲ್ಯಾಡಿ: ಕಾರು ಅಪಘಾತ; ಮೂವರಿಗೆ ಗಾಯ

ನೆಲ್ಯಾಡಿ: ಕೊಣಾಲು ಗ್ರಾಮದ ಕೊಲ್ಪೆ ಎಂಬಲ್ಲಿ ಕಾರು ಅಪಘಾತಗೊಂಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿ ಮೂವರು ಗಾಯಗೊಂಡಿರುವ ಘಟನೆ ಅ.30ರಂದು ಬೆಳಿಗ್ಗೆ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕಾರು ರಸ್ತೆ ಬದಿಯ ಚರಂಡಿಯ ತಡೆಗೋಡೆಗೆ ಡಿಕ್ಕಿಯಾಗಿ, ಡಿಕ್ಕಿ ರಬಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ನೆಲ್ಯಾಡಿ ಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ಪಡೆದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ

ನೆಲ್ಯಾಡಿ: ಶಿರಾಡಿ ಘಾಟ್‍ನಲ್ಲಿ ಅಕ್ಕಿ ಸಾಗಾಟದ ಲಾರಿ ಬೆಂಕಿಗಾಹುತಿ

ನೆಲ್ಯಾಡಿ: ಶಿರಾಡಿ ಘಾಟ್‍ನ ಡಬಲ್ ಟರ್ನ್‍ನಲ್ಲಿ ಹಾಸನ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಅಕ್ಕಿ ಸಾಗಾಟದ ಲಾರಿಯೊಂದು ಬೆಂಕಿಗಾಹುತಿ ಆಗಿರುವ ಘಟನೆ ನಡೆದಿದೆ. ಶಿರಾಡಿ ಘಾಟ್‍ನ ಡಬಲ್ ಟರ್ನ್‍ನಲ್ಲಿ ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲಾರಿ ಚಾಲಕ ಹಾಗೂ ಕ್ಲೀನರ್‍ಗೆ ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆ ಲಾರಿಯನ್ನು ನಿಲ್ಲಿಸಿ ಕೆಳಗಿಳಿದು, ಅಪಾಯದಿಂದ

ನೆಲ್ಯಾಡಿ: ಅವಾಚ್ಯ ಪದ ಬಳಕೆ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

ನೆಲ್ಯಾಡಿ: ವಲಯ ಅರಣ್ಯಾಧಿಕಾರಿಗಳನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದು, ಬೆದರಿಕೆಯನ್ನು ಕೂಡ ಹಾಕಿದ್ದಾರಲ್ಲದೆ, ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ. ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ. ಧರ್ಮಸ್ಥಳ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ

ನೆಲ್ಯಾಡಿ: ನೂಜಿಬಾಳ್ತಿಲ ಸಿಡಿಲು ಬಡಿದು ಹಾನಿಯಾದ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ನೆಲ್ಯಾಡಿ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನಡುವಳಿಕೆ ನೇಮಣ್ಣ ಗೌಡ ಅವರ ಮನೆಗೆ ಸಿಡಿಲು ಬಡಿದುಸಿಡಿಲು ಬಡಿದು ಹಾನಿಗೊಂಡಿರುತ್ತದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಅವರ ಮನೆಗೆ ಭೇಟಿ ನೀಡಿ ಸಿಡಿಲು ಬಡಿದ ಸ್ಥಳವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳ ಜೊತೆ ಮಾತನಾಡಿ ಸಿಡಿಲಿನಿಂದ ಹಾನಿಯಾದ ಮನೆಗೆ ಸರ್ಕಾರದಿಂದ ಪರಿಹಾರವನ್ನು ಶೀಘ್ರವಾಗಿ ನೀಡಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ರಾಕೇಶ್ ರೈ ಕೆಡೆಂಜಿ, ಭಾಸ್ಕರ ಗೌಡ ಇಚಿಲಂಪಾಡಿ,

ನೆಲ್ಯಾಡಿ :ಸುರಿದ ಭಾರಿ ಗಾಳಿ ಮಳೆಗೆ ಸೌತಡ್ಕ ಸಮೀಪದ ಕೆಲವು ಮನೆಗಳಿಗೆ ಹಾನಿ

ನೆಲ್ಯಾಡಿ : ಸೋಮವಾರ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಸೌತಡ್ಕ ಸಮೀಪದ ಕೆಲವು ಮನೆಗಳಿಗೆ ಹಾನಿಯಾಗಿದ್ದು, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಇಲ್ಲಿ ನಿವಾಸಿಗಳಾದ ಜಮೀಲಾ, ಮರಿಯಮ್ಮ, ಪಾರ್ವತಿ, ಸುರೇಶ್ ಪೂಜಾರಿ, ಮೂಸೆ ಕುಂಞಿ, ಜೋಹರ, ಹಮೀದ್ ಎಂಬುವರ ಮನೆಗೆ ಭಾಗಶಃ ಹಾನಿಯಾಗಿದ್ದು, ಮನೆಯ ಹೆಂಚು ಮತ್ತು ಶೀಟುಗಳು ಹಾರಿಹೋಗಿವೆ. ಈ ಸಂದರ್ಭ ಕೆಲವು ಮನೆಗಳಲ್ಲಿ ಹಿರಿಯರು ಮತ್ತು ಪುಟ್ಟ ಮಗು ಮನೆಯೊಳಗಿದ್ದು ಅದೃಷ್ಟವಶಾತ್ ಯಾವುದೇ ತೊಂದರೆಯಾಗದೆ