ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಮೊರಂಕಲ ನಿವಾಸಿ ಶೆಬಿನ್ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಳೆದ ಕೆಲವು ವರ್ಷಗಳಿಂದ ನೆಲ್ಯಾಡಿ ಯಲ್ಲಿ ಪ್ರೊಫೆಷನಲ್ ಕೊರಿಯರನ್ನು ನಡೆಸುತ್ತಿದ್ದ ಇವರು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆಯ
ನೆಲ್ಯಾಡಿ : ಸ್ವಿಫ್ಟ್ ಕಾರೊಂದರ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಕಾರಣ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಸರಕಾರಿ ಶಾಲೆಯ ಬಳಿ ಸಂಭವಿಸಿದೆ. ಕಾರಿನಲ್ಲಿ ಪುತ್ತೂರು ಮೂಲದ ಗೋಕುಲದಾಸ ಹಾಗೂ ಮೆಲ್ವಿನ್ ಬೆಂಗಳೂರಿನಿಂದ ತಮ್ಮ ಊರಿಗೆ ಪ್ರಯಾಣಿಸುತ್ತಿದ್ದರು. ದುರ್ಘಟನೆಯಲ್ಲಿ ಪ್ರಯಾಣಿಕರಿಬ್ಬರೂ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕಡಬ: ವಾಹನ ನಿಲ್ಲಿಸಿ ನದಿಯ ಬಂಡೆಯಲ್ಲಿ ಸೆಲ್ಫೀ ತೆಗೆಯಲು ಮುಂದಾದ ಯುವಕನೋರ್ವ ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ, ಗುಂಡ್ಯ ಸಮೀಪದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ನೀರಲ್ಲಿ ಮುಳುಗಿದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್ ಎಂದು ತಿಳಿದು ಬಂದಿದೆ.ಇಬ್ಬರು ಯುವಕರು ತಮ್ಮ ಆಟೋಮೊಬೈಲ್ ಸ್ಪೇರ್‍ಪಾಡ್ಸ್ ಪಾರ್ಸಲ್ ಸಾಗಾಟದಟೆಂಪೊವಾಹನವನ್ನು ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ನಿಲ್ಲಿಸಿ ಗುಂಡ್ಯ ಹೊಳೆಯ ಬಂಡೆಯೊಂದರ ಮೇಲೆ
ದಕ್ಷಿಣ ಕನ್ನಡ ಜಿಲ್ಲೆಯ ಉದನೆ ಎಂಬಲ್ಲಿರುವ ಗಣೇಶ ಕಟ್ಟೆಗೆ ಕಲ್ಲು ಎತ್ತಿ ಹಾಕಿ ಹಾನಿಗೊಳಿಸಿರುವ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರದ ಬಾಗಲ್ ಪುರ ಜಿಲ್ಲೆಯ ಗೋಪಾಲ್ ಪುರ್ ತಾಲೂಕಿನ ಗರ್ನಿಯಾ ನಿವಾಸಿ ರವೀಂದ್ರ ಕುಮಾರ್ (25) ಎಂದು ತಿಳಿದುಬಂದಿದೆ.ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶುಕ್ರವಾರ ಉದನೆ ಗಣಪತಿ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲಾಗಿತ್ತು. ಗಣಪತಿ ಕಟ್ಟೆಯ