ಉಳ್ಳಾಲ: ನೇತ್ರಾವತಿ ನದಿತಟದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಹಾಸನ ಬೇಳೂರು ನಿವಾಸಿ ಮೊಹಮ್ಮದ್ ಝಾಕಿರ್ (50) ಎಂದು ಉಳ್ಳಾಲ ಠಾಣೆಗೆ ಆಗಮಿಸಿದ ಮನೆಮಂದಿ ತಿಳಿಸಿದ್ದಾರೆ. ಕೆಲ ತಿಂಗಳುಗಳಿಂದ ಅಸೌಖ್ಯಕ್ಕೀಡಾಗಿದ್ದ ಝಾಕೀರ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬರುತ್ತಿದ್ದರು. ಎರಡು ದಿನಗಳ ಹಿಂದೆಯೂ ಊರುಬಿಟ್ಟು
ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು ನದಿ ತೀರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಪಾಣೆಮಂಗಳೂರು ಸಮೀಪದ ಆಲಡ್ಕ ಪರಿಸರದಲ್ಲಿ ಮನೆಗೆ ನೀರು ನುಗ್ಗಿದ್ದು ಮನೆ ಮಂದಿ ಹಾಗೂ ಸೊತ್ತುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಪೊಲೀಸರು ಈ ಮನೆಗಳಿಗೆ ತೆರಳಿ ಸ್ಥಳಾಂತರಗೊಳ್ಳುವಂತೆ ಸೂಚಿಸಿದರು. ನದಿಯಲ್ಲಿ ನೀರಿನ ಮಟ್ಟ ಕ್ಷಣದಿಂದ ಕ್ಷಣಕ್ಕೆ ಏರಿಕೆಯಾಗುತ್ತಿದ್ದು ಜನತೆಯಲ್ಲಿ ಆತಂಕ ಮೂಡಿಸಿದೆ.
ಬೆಂಗಳೂರು ಮೂಲದ ಯುವಕನೋರ್ವ ಪಾಣೆಮಂಗಳೂರಿನ ಹೊಸ ಸೇತುವೆಯಲ್ಲಿ ಬೈಕನ್ನು ಚಾಲನೆ ಸ್ಥಿತಿಯಲ್ಲಿಯೇ ಇಟ್ಟು ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ದಾಸರಹಳ್ಳಿ ನಿವಾಸಿ ಸತ್ಯವೇಲು(29) ನಾಪತ್ತೆಯಾದ ಯವಕನಾಗಿದ್ದು ಬಂಟ್ವಾಳ ಪೊಲೀಸರು ಬೈಕನ್ನ ವಶಕ್ಕೆ ಪಡೆದುಕೊಂಡು ಯುವಕನಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಈತ ಎರಡು ವಾರಗಳ ಹಿಂದೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಬೆಂಗಳೂರಿನಿಂದ ಪಾಣೆಮಂಗಳೂರಿಗೆ ಬಂದಿದ್ದ. ಆದರೆ ಸ್ಥಳೀಯರು