Home Posts tagged #newdelhi

2023 ಬಜೆಟ್ ಹೈಲೈಟ್ಸ್

ನವದೆಹಲಿ: 2024ರ ಸಾರ್ವತ್ರಿಕ ಚುನಾವಣೆಯ  ಮುಂಚಿತವಾಗಿ  ಇಂದು ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೀಮಿತ ಸಂಪನ್ಮೂಲಗಳನ್ನು ವಿವೇಚನಾಯಕ್ತವಾಗಿ ಬಳಸುವ ಜಾಣ್ಮೆ ಮೆರೆದಿದ್ದಾರೆ.ಜಾಗತಿಕ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸವಾಲುಗಳನ್ನು ಎದುರಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಘೋಷಿಸಿದ್ದಾರೆ. ಬಜೆಟ್

ಗಣರಾಜ್ಯೋತ್ಸವ ಪರೇಡ್‌: ನೌಕಾಪಡೆ ತಂಡಕ್ಕೆ ಮಂಗಳೂರಿನ ದಿಶಾ ಅಮೃತ್‌ ನೇತೃತ್ವ

 ಭಾರತೀಯ ನೌಕಾಪಡೆಯ ಲೆಫ್ಟಿನೆಂಟ್‌ ಕಮಾಂಡರ್‌ ಮಂಗಳೂರಿನ ದಿಶಾ ಅಮೃತ್‌ ಅವರು ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಜ. 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ ನಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸುವರು. ಈ ತುಕಡಿಯಲ್ಲಿ ನೌಕಾಪಡೆಯ 144 ಯುವ ಯೋಧರು ಮತ್ತು “ನಾರಿಶಕ್ತಿ’ ಸ್ತಬ್ಧಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರರು ಭಾಗಿಯಾ ಗುವರು. ಅಮೃತಾ ಅವರ ಜತೆಗೆ ಸಬ್‌ ಲೆ| ವಲ್ಲಿ ಮೀನಾ ಎಸ್‌. ಸಹ ಇರುವರು.

ಮಾಜಿ ಕೇಂದ್ರ ಸಚಿವ, RJD ಹಿರಿಯ ನಾಯಕ ಶರದ್ ಯಾದವ್ ನಿಧನ

ಹೊಸದಿಲ್ಲಿ: ಮಾಜಿ ಕೇಂದ್ರ ಸಚಿವ ಮತ್ತು RJD ಪಕ್ಷದ ಹಿರಿಯ ನಾಯಕ ಶರದ್ ಯಾದವ್ ಅವರು ಗುರುವಾರ ನಿಧನರಾಗಿದ್ದಾರೆ.ಅವರಿಗೆ 75 ವರ್ಷ ವಯಸ್ಸಾಗಿತ್ತು. ಶರದ್ ಯಾದವ್ ಅವರ ನಿಧನದ ಸುದ್ದಿಯನ್ನು ಪುತ್ರಿ ಸುಭಾಷಿಣಿ ಶರದ್ ಯಾದವ್ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶರದ್ ಯಾದವ್ ಅವರನ್ನು ಗುರುಗ್ರಾಮ್ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಕೊನೆಯುಸಿರೆಳೆದಿದ್ದಾರೆ.