Home Posts tagged #oscar fernandes

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರದ ಮಾಜಿ ಸಚಿವ ದಿ. ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವರಾದ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಯು.ಟಿ. ಖಾದರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್

ಮಂಗಳೂರಿನ ಮಿಲಾಗ್ರಿಸ್ ಚರ್ಚ್‌ನಲ್ಲಿ ಆಸ್ಕರ್‌ಗೆ ಗಣ್ಯರಿಂದ ಅಂತಿಮ ಗೌರವ

ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರಕ್ಕೆ ಮಂಗಳೂರಿನ ಮಿಲಾಗ್ರಿಸ್ ಚರ್ಚ್ ವಠಾರದಲ್ಲಿಂದು ಗಣ್ಯರ ಸಮ್ಮುಖದಲ್ಲಿ ಅಂತಿಮ ಗೌರವ ಸಲ್ಲಿಸಲಾಯಿತು. ಇಂದು ಬೆಳಗ್ಗೆ ಮಾಜಿ ಸಚಿವ, ಕಾಂಗ್ರೆಸ್ ನ ಹಿರಿಯ ನಾಯಕ ಜನಾರ್ದನ ಪೂಜಾರಿ, ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್, ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೈನ್, ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥ್, ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್

ಕಾಲನ ಗರ್ಭ ಸೇರಿದ ಆಸ್ಕರ್‌ : ಪುರುಷೋತ್ತಮ ಬಿಳಿಮಲೆ

80 ವರ್ಷದ ಆಸ್ಕರ್‌ ಫೆರ್ನಾಂಡಿಸ್‌ ( ಮಾರ್ಚ್‌ 27, 1941 ) ಇನ್ನಿಲ್ಲವೆಂಬ ಸುದ್ದಿ ತಲುಪಿದಾಗ ಕಾಲನ ಚಕ್ರಗಳು ಹಿಂದಕ್ಕೆ ಸರಿಯತೊಡಗಿದುವು. ದೇವರಾಜು ಅರಸು ಕಾಲದಲ್ಲಿ ಕರಾವಳಿಯ ಹಿಂದುಳಿದ ವರ್ಗದಿಂದ ಮೇಲೆದ್ದು ಬಂದ ಶ್ರೀಗಳಾದ ಜನಾರ್ದನ ಪೂಜಾರಿ, ಆಸ್ಕರ್‌ ಫೆರ್ನಾಂಡಿಸ್‌ ಮತ್ತು ವೀರಪ್ಪ ಮೊಯಿಲಿ ತಮ್ಮ ರಾಜಕೀಯ ಏಳುಬೀಳುಗಳ ನಡುವೆಯೂ ಕೊನೆಯವರೆಗೆ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರಾಗಿಯೇ ಉಳಿದರು. ಈ ತ್ರಿಮೂರ್ತಿಗಳಲ್ಲಿ ಆಸ್ಕರ್‌ ಫೆರ್ನಾಂಡಿಸ್‌

ಉಡುಪಿಯ ಕಾಂಗ್ರೆಸ್ ಭವನದಲ್ಲಿ ಆಸ್ಕರ್ ಫೆರ್ನಾಂಡಿಸ್ ಪಾರ್ಥಿವ ಶರೀರ ಸಾರ್ವಜನಿಕ ದರ್ಶನಕ್ಕೆ ಅವಕಾಶ

ಆಸ್ಕರ್ ಫೆರ್ನಾಂಡಿಸ್ ಮೃತದೇಹ ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ತಲುಪಿದ್ದು ಆಸ್ಕರ್ ಮೃತದೇಹ ತಲುಪಿದ್ದು ಉಡುಪಿ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ, ಫಾದರ್ ಡೆನ್ನಿಸ್, ಫಾದರ್ ಚಾರ್ಲ್ಸ್ ಉಪಸ್ಥಿತಿಯಲ್ಲಿ ಪ್ರಾರ್ಥನೆ ನಡೆಯಲಿದೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್ ಆಗಮಿಸಿದ್ದಾರೆ. ಬಳಿಕ ಅವರ ಪಾರ್ಥಿವ ಶರೀರವನ್ನು ಕಾಂಗ್ರೆಸ್ ಭವನಕ್ಕೆ ಕೊಂಡೊಯ್ದು ಅಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕುಟುಂಬದ ಇಚ್ಛೆಯಂತೆ ಉಡುಪಿ ಶೋಕ ಮಾತಾ ದೇವಾಲಯಕ್ಕೆ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥೀವ ಶರೀರ ರವಾನೆ

ಉಡುಪಿ: ಅನಾರೋಗ್ಯಕ್ಕೆ ತುತ್ತಾಗಿ ಸೋಮವಾರ ಮಂಗಳೂರಿನ ಎನಾಪೋಯ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥೀವ ಶರೀರ ಇಂದು ಬೆಳಗ್ಗೆ 9:15 ಕ್ಕೆ ಉಡುಪಿ ಶೋಕ ಮಾತಾ ದೇವಾಲಯಕ್ಕೆ ಆಗಮಿಸಲಿದೆ ಎಂದು ಉಡುಪಿ ಧರ್ಮ ಪ್ರಾಂತ್ಯದ ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರ ಕುಟುಂಬದ ಇಚ್ಛೆಯಂತೆ ಬೆಳಿಗ್ಗೆ 9:30 ಕ್ಕೆ ಪ್ರಾರ್ಥನಾ ವಿಧಿಗಳನ್ನು

ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರ ಉಡುಪಿಗೆ ರವಾನೆ

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿನ್ನೆ ಸೋಮವಾರ ಮಧ್ಯಾಹ್ನ ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆ ಶವಾಗಾರದಿಂದ ಉಡುಪಿಗೆ ಅಂಬ್ಯುಲೆನ್ಸ್ ಮೂಲಕ ರವಾನೆ ಮಾಡಲಾಗುತ್ತಿದೆ. ಪಾರ್ಥಿವ ಶರೀರಕ್ಕೆ ಭಾರತದ ಧ್ವಜ ಹೊದಿಸಿ ಮಂಗಳೂರು ಪೊಲೀಸರು ಗೌರವ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಯು.ಟಿ.ಖಾದರ್, ಪರಿಷತ್ ಸದಸ್ಯ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಆಸ್ಕರ್ ಪತ್ನಿ ಬ್ಲಾಸಂ,

ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಗಣ್ಯರಿಂದ ಸಂತಾಪ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. “ರಾಜ್ಯಸಭಾ ಸಂಸದ ಆಸ್ಕರ್ ಫೆರ್ನಾಂಡೀಸ್ ರ ನಿಧನದಿಂದ ದುಃಖವಾಗಿದೆ. ಈ ನೋವಿನ ವೇಳೆಯಲ್ಲಿ ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಪ್ರಾರ್ಥನೆ ಮತ್ತು ಸಂತಾಪಗಳನ್ನು

ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ವಿಧಿವಶ

ಮಂಗಳೂರು:ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ವಿಧಿವಶರಾಗಿದ್ದಾರೆ.ಆಸ್ಕರ್ ಫೆರ್ನಾಂಡಿಸ್ ಅವರಿಗೆ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಈ ಹಿನ್ನೆಲೆಯಲ್ಲಿ, ಆಸ್ಕರ್ ಫರ್ನಾಂಡಿಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರಿಂದು ಕೊನೆಯುಸಿರೆಳೆದಿದ್ದಾರೆ.

ಆಸ್ಕರ್ ಫೆರ್ನಾಂಡಿಸ್ ರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ಮಂಗಳೂರು: ನಗರದ ಯೆನೆಪೊಯ ಆಸ್ಪತ್ರೆಯಲ್ಲಿ ಕಳೆದ ಒಂಬತ್ತು ದಿನಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್‌ನ ಹಿರಿಯ ಮುಖಂಡ, ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ (80) ಅವರಿಗೆ ಮಂಗಳವಾರ ನಸುಕಿನ ಜಾವ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ತಡರಾತ್ರಿ 12ರಿಂದ ಆರಂಭವಾದ ಶಸ್ತ್ರ ಚಿಕಿತ್ಸೆಯು ನಸುಕಿನ ಜಾವ 5.30 ರವರೆಗೂ ನಡೆಯಿತು. ಯೆನೆಪೊಯ ಆಸ್ಪತ್ರೆಯ ನ್ಯೂರಾಲಜಿಸ್ಟ್ ಡಾ.ದಿವಾಕರ್ ರಾವ್, ಎ.ಜೆ. ಆಸ್ಪತ್ರೆಯ

ಆಸ್ಕರ್ ಫೆರ್ನಾಂಡಿಸ್ ಅವರ ಯೋಗಕ್ಷೇಮ ವಿಚಾರಿಸಿದ ಮಾಜಿ ಸಚಿವ ಅಂಜನೇಯ

ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫರ್ನಾಡೀಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಮಾಜಿ ಸಚಿವ ಅಂಜನೇಯ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ರು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆಸ್ಕರ್ ಅವರು ಬಡವರ ಹಾಗೂ ಪಕ್ಷದ ಅಪಾರ ಕಾಳಜಿಹೊಂದಿಕೊಂಡಿದ್ದಾರೆ. ಶ್ರೀಘದಲ್ಲೇ ಆರೋಗ್ಯ ಸುಧಾರಿಸಿಕೊಳ್ಳಲಿ, ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಅವರ