ಬೆಲೆ ಏರಿಕೆಯಿಂದ ಜನ ಬೇಸತ್ತು ಜೀವನ ಸಾಗಿಸುವುದು ಕಷ್ಟ ಕರ ಪರಿಸ್ಥಿತಿ ಯಾಗಿದೆ.. ಶ್ರೀಮಂತರನ್ನು ಶ್ರೀಮಂತರಾಗಿಸುವ ಕೆಲಸ ಕಾರ್ಯ ವನ್ನು ಕೇಂದ್ರ ಹಾಗು ರಾಜ್ಯ ಸರಕಾರ ಮಾಡುತಿದೆ.. ಇದೀಗ ಬಿಜೆಪಿ ಪಕ್ಷದ ನಿಲುವು ಜನ ಸಾಮಾನ್ಯರಿಗೆ ಅರಿವಾಗುತ್ತಿದ್ದು ಆ ನಿಟ್ಟಿನಲ್ಲಿ ಕಾಂಗ್ರೆಸ್ ನತ್ತ ಯುವ ಜನರ ಒಲವು ಜಾಸ್ತಿಯಾಗುತಿದ್ದು..ಮುಂದಿನ ದಿನಗಳಲ್ಲಿ ಕಾಂಗ್ರೆಸ್
ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ವ್ಯಾಪಕ ಹಿಂಸಾಚಾರದ ವಿರುದ್ಧ ಪಡುಬಿದ್ರಿ ಮುಖ್ಯಪೇಟೆಯ ಕಾರ್ಕಳ ಸರ್ಕಲ್ ಬಳಿ ನೂರಾರು ಕಾಪು ತಾಲೂಕು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಭೂ ಸುರಕ್ಷಾ ಪ್ರಮುಖ್ ರಮೇಶ್ ಕಲ್ಲೋಟ್ಟೆ ಮಾತನಾಡಿ, ಬಾಂಗ್ಲಾದೇಶಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಬಾರತದಲ್ಲಿ ಏಕೆ ಪ್ರತಿಭಟನೆ ನಡೆಸುತ್ತಾರೆ ಎಂಬ ಮಾತು ಕೇಳುತ್ತಿರಬಹುದು. ಈ ಮಾತು ಸತ್ಯ…ಕಾರಣ ಇಷ್ಟೇ
ಭತ್ತ ಕಟಾವಿಗೆ ಯಂತ್ರ ಬಂದಿದ್ದು ಗಂಟೆಯೊಂದಕ್ಕೆ 2,500 ರೂ ದುಬಾರಿ ದರ ವಿಧಿಸುತ್ತಿದ್ದು, ಮುಂದಿನ ಬಾರಿ ಭತ್ತದ ಬೇಸಾಯ ಮಾಡಬೇಕೋ ಬೇಡವೋ ಎಂಬ ಚಿಂತೆ ಕಾಡುತ್ತಿದೆ ಎಂದು ಮಟ್ಟು ಭಾಗದ ರೈತರು ತಮ್ಮ ಹತಾಶಾ ಭಾವನೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಒಂದೆಡೆ ಗದ್ದೆಗಳನ್ನು ಹಡಿಲು ಬಿಟ್ಟಲ್ಲಿ ಸರಕಾರ ಕ್ರಮ ತೆಗೆದುಕೊಳ್ಳುವ ಭೀತಿ, ಬೇಸಾಯ ಕೈಗೊಂಡರೆ ನಷ್ಟವನ್ನು ಅನುಭವಿಸುವ ಸಂಕಷ್ಟ. ಒಂದೆಡೆ ಅಕಾಲಿಕ ಮಳೆ, ಮತ್ತೊಂದೆಡೆ ಉಕ್ಕೇರಿ ಹರಿದ ಹೊಳೆಯ ನೀರು ಇವೆಲ್ಲದರ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನ ಪ್ರಯುಕ್ತ “ಸೇವಾ ಸಮರ್ಪಣ ” ಎಂಬ ಕಾರ್ಯಕ್ರಮದ ಅಂಗವಾಗಿ ಪಡುಬಿದ್ರಿ ಗ್ರಾ.ಪಂ. ಸದಸ್ಯ ಮಹೇಂದ್ರ ಎಂಬವರ ಮನೆಯಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್ ಅಧ್ಯಕ್ಷತೆಯಲ್ಲಿ ಭಾನುವಾರ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ತದನಂತರ ಭಾರತ ಮಾತೆ, ಪಂಡಿತ್ ದೀನ್ ದಯಾಳ್ ,ಶ್ಯಾಮ ಪ್ರಸಾದ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ದೇವಸ್ಥಾನ ಸಹಿತ ಪ್ರಾರ್ಥನಾ ಮಂದಿಗಳ ದ್ವಂಸ ವಿರೋಧಿ ಕಾಪು ಬ್ಲಾಕ್ ಕಾಂಗ್ರೆಸ್ ಹಾಗೂ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಪಡುಬಿದ್ರಿ ಬೀಡು ಬಳಿಯಿಂದ ಪಡುಬಿದ್ರಿ ಮುಖ್ಯ ಪೇಟೆಯವರಗೆ ನಡೆದ ಬೃಹತ್ ಪಂಜಿನ ಮೆರವಣಿಗೆಯಲ್ಲಿ ನೂರಾರು ಮಂದಿ ಕಾರ್ಯಕರ್ತರು ಪಾಲ್ಗೊಂಡಿದ್ದು ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿದರು. ಬಳಿಕ ಪಡುಬಿದ್ರಿ ಪೇಟೆಯಲ್ಲಿ ಸೇರಿದ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ನ್ಯಾಯವಾದಿ
ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘ ಪಣಿಯೂರು ಇದರ ವಾರ್ಷಿಕ ಮಹಾಸಭೆ ಪಣಿಯೂರು ಸಂಘದ ಆವರಣದಲ್ಲಿ ನಡೆಯಿತು. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಉಪ ವ್ಯವಸ್ಥಾಪಕ ಡಾ| ಅನಿಲ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ಆರೋಗ್ಯಕರವಾಗಿ ಪಶು ಸಾಕಾಣಿಕೆ ಮಾಡಿ ಗುಣಮಟ್ಟದ ಹಾಲಿನ ಉತ್ಪಾದನೆ ಮೂಲಕ ಹೈನುಗಾರರು ಆರ್ಥಿಕ ಸ್ಥಿರತೆ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದರು. ಎಸ್‍ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಡಾ| ದೇವಿಪ್ರಸಾದ್ ಶೆಟ್ಟಿ ಅವರು ಮಾತನಾಡಿ, ಹೈನುಗಾರಿಕೆಯಲ್ಲಿ ಲಾಭ
ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಲಿಂಕ್ ರಸ್ತೆಗಳ ಆರಂಭಿಕ ಐವತ್ತು ಮೀಟರ್ ರಸ್ತೆ ಹೆದ್ದಾರಿ ಇಲಾಖೆ ನಡೆಸಬೇಕಾಗಿದ್ದರೂ ನಿರ್ಲಕ್ಷ್ಯ ಮಾಡಿದ ಇಲಾಖೆಯ ವಿರುದ್ಧ ಆಕ್ರೋಶ ಗೊಂಡ ಗಾ.ಪಂ. ಪ್ರತಿನಿಧಿಗಳು ಸಹಿತ ಸಾರ್ವಜನಿಕರು ಹೆದ್ದಾರಿ ಕಾಮಗಾರಿಗೆ ತಡೆಯೊಡ್ಡಿ, ಲಿಂಕ್ ರೋಡ್ ಕಾಮಗಾರಿ ನಡೆಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ಸ್ಥಳೀಯ ನಿವಾಸಿ ಸುರೇಶ್ ಪೂಜಾರಿ, ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂಧಿಸುತ್ತಾರೆ ಎಂಬ ನಿಟ್ಟಿನಲ್ಲಿ ನಾವು
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದ ಬಸವರಾಜ್ ಬೊಮ್ಮಾಯಿ ಅವರನ್ನು ಜಿಲ್ಲೆಯ ಗಡಿಭಾಗದ ಹೆಜಮಾಡಿಯಲ್ಲಿ ಸಾಂಪ್ರದಾಯಿಕವಾಗಿ ಮಹಿಳೆಯರು ಆರತಿ ಎತ್ತಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಭದ್ರತೆಯ ದೃಷ್ಠಿಯಿಂದ ಉಡುಪಿ ಜಿಲ್ಲಾ ಗಡಿಭಾಗ ಹೆಜಮಾಡಿ ಟೋಲ್ ಗೇಟ್ ಬಳಿಯ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಪೆÇಲೀಸರು ಮುಚ್ಚಿಸಿದ್ದರು. ಮುಖ್ಯಮಂತ್ರಿಗಳಿಗೆ ಜಿಲ್ಲಾ ಎಸ್ಪಿ ವಿಷ್ಣುವರ್ಧನ್ ಸಹಿತ ಉನ್ನತ ಪೆÇಲೀಸ್
ನಂದಿಕೂರಿನ ದೇವರಕಾಡು ಪ್ರದೇಶವನ್ನು ನೆಲಸಮ ಮಾಡಿ ಕಾಮಗಾರಿ ನಡೆಸುತ್ತಿರುವ ಕಂಪನಿಯೊಂದು ಗ್ರಾ.ಪಂ.ಗೆ ತಪ್ಪು ಮಾಹಿತಿ ನೀಡಿ ತಮಗೆ ಬೇಕಾದಂತೆಲ್ಲಾ ಕಾಮಗಾರಿ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನನ್ವಯ ಸಭೆ ನಡೆಸಿ ಕಾಮಗಾರಿ ಸ್ಥಗಿತಗೊಳಿಸುವಂತೆ ಕಂಪನಿಗೆ ಪಲಿಮಾರು ಗ್ರಾ.ಪಂ. ಸೂಚನೆ ನೀಡಿದೆ. ಅಡುಗೆ ಎಣ್ಣೆ ಕಂಪನಿ ಎಂಬುದಾಗಿ ಆಡಳಿತ ಸಮಿತಿ ಅಸ್ಥಿತ್ವದಲ್ಲಿ ಇಲ್ಲದ ವೇಳೆ ಆಡಳಿತಾಧಿಕಾರಿಯಿಂದ ಯಾವುದೇ ಪೂರಕ ಮಾಹಿತಿ ನೀಡದೆ ಅನುಮತಿ ಪತ್ರ ಪಡೆದ
ಕಾರಿಗೆ ಕಂಟೇನರ್ ಡಿಕ್ಕಿಯಾಗಿ ಕಾರು ಜಖಂಗೊಂಡ ಘಟನೆ ಉಚ್ಚಿಲ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರ ಪಣಿಯೂರು ಕ್ರಾಸ್ ಬಳಿ ಸಂಭವಿಸಿದೆ. ಉಡುಪಿ ಕಡೆಯಿಂದ ಬಂದ ಕಾರು ಉಚ್ಚಿಲ ಹೆದ್ದಾರಿ ಕ್ರಾಸ್ ಬಳಿ ಯುಟರ್ನ್ ಮಾಡುವ ವೇಳೆ ಹಿಂಬದಿಯಿಂದ ಬಂದ ಕಂಟೇನರ್ ಡಿಕ್ಕಿಯಾಗಿದೆ. ಘಟನೆಯಿಂದ ಕಾರಿನ ಹಿಂಭಾಗ ಜಖಂಗೊಂಡಿದೆ. ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.