ಮೂಡುಬಿದಿರೆ ತಾಲೂಕಿನ ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ನಡೆಯುವ 15ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳಕ್ಕೆ ಪಣಪಿಲ ಅರಮನೆಯ ವಿಮಲ್ ಕುಮಾರ್ ಶೆಟ್ಟಿ ಶನಿವಾರ ಚಾಲನೆ ನೀಡಿದರು. ಕಂಬಳ ಸಮಿತಿ ಗೌರವಾಧ್ಯಕ್ಷ, ಶಾಸಕ ಉಮಾನಾಥ್ ಎ. ಕೋಟ್ಯಾನ್ ಬಿಜೆಪಿ ದಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಅಧ್ಯಕ್ಷ ಸುದರ್ಶನ್ ಎಂ. ನಂದೊಟ್ಟು
ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯುವ ಹದಿಮೂರನೇ ವರುಷದ ಕಿರಿಯ ವಿಭಾಗದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ನಡೆಯಿತು. 2022-23 ನೇ ಸಾಲಿನ ಕೊನೆಯ ಕಂಬಳ ಇದಾಗಿದ್ದು, ಊರಿನ ದೈವಸ್ಥಾನ, ದೇವಸ್ಥಾನಗಳ ಪ್ರಸಾದ ಮತ್ತು ತೀರ್ಥವನ್ನು ಕರೆಗೆ ಹಾಕುವ ಮೂಲಕ ಪಣಪಿಲ ಅರಮನೆಯ ವಿಮಲ್ ಕುಮಾರ್ ಶೆಟ್ಟಿ ಕಂಬಳವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಪಣಪಿಲ ಕಂಬಳ ಸಮಿತಿಯ ಗೌರವಾಧ್ಯಕ್ಷ ಶಾಸಕ ಉಮಾನಾಥ
ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ಹದಿಮೂರನೇ ವರುಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಏಪ್ರಿಲ್ 8ರಂದು ಸಂಜೆ ನಡೆಯಲಿದೆ ಎಂದು ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಅಶ್ವತ್ಥ್ ಪಣಪಿಲ ಗುರುವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 4 ಎಕರೆ ಜಾಗದಲ್ಲಿ ಕಂಬಳ ನಡೆಯಲಿದ್ದು, ನೂತನವಾಗಿ 133.5 ಮೀ ಉದ್ದದ ಕರೆ ನಿರ್ಮಾಣಗೊಂಡಿದೆ. ಕೋಣಗಳನ್ನು ಕಟ್ಟಲು ತಂಪಾದ ಜಾಗ, ಉತ್ತಮ ನೀರಿನ ವ್ಯವಸ್ಥೆ,