ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ನವಿಲು ಮೃತಪಟ್ಟ ಬಗ್ಗೆ ಇಲ್ಲಿನ ರಿಕ್ಷಾ ಚಾಲಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಮೃತ ನವಿಲನ್ನು ಸ್ಥಳದಿಂದ ಅನಂತಾಡಿ ಆರಣ್ಯ ಇಲಾಖೆಯ ಸಿಬ್ಬಂದಿಯವರಿಗೆ ಹಸ್ತಾಂತರ ಮಾಡಿದ್ದಾರೆ.
ಕಾಲಿಗೆ ಗಾಯಗೊಂಡು ತೀವ್ರ ಅಸ್ವಸ್ಥಗೊಂಡ ಗಂಡು ನವಿಲೊಂದನ್ನು ಕಾಪುವಿನ ಯುವಕರು ರಕ್ಷಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ ಅರಣ್ಯಾಧಿಕಾರಿಯವರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮೂಳೂರು ಬಳಿ ಕಾಲಿಗೆ ತೀವ್ರ ಗಾಯಗೊಂಡ ಸ್ಥಿತಿಯಲ್ಲಿದ್ದ ಗಂಡು ನವಿಲನ್ನು ಕಾಪುವಿನ ಪ್ರಶಾಂತ್ ಪೂಜಾರಿ ಹಾಗೂ ಶಿವಾನಂದ ಪೂಜಾರಿ ಅವರು ಗುರುವಾರ ರಾತ್ರಿ ತಮ್ಮ ಮನೆಗೆ ತಂದು ಆರೈಕೆ ಮಾಡಿದ್ದರು. ಆರೈಕೆಯೊಂದಿಗೆ ಚೇತರಿಕೆಗೊಂಡ ನವಿಲನ್ನು ಅರಣ್ಯ ಅಧಿಕಾರಿ ಮಂಜುನಾಥ್ ಅವರಿಗೆ
ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಸವಾರ ರಸ್ತೆಯಂಚಿನ ಬಾಂಡ್ ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತ ಯುವಕ ಬೆಳಪು ನಿವಾಸಿ ಪಡುಬಿದ್ರಿ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ. ಅಬ್ದುಲ್ (25) ಎಂದು ಗುರುತಿಸಲಾಗಿದೆ. ಪಡುಬಿದ್ರಿ ಕಡೆಯಿಂದ ತನ್ನ ಸ್ಕೂಟರಲ್ಲಿ ಬರುತ್ತಿದ್ದ ಯುವಕನಿಗೆ ನವಿಲೊಂದು ಹಾರಿಕೊಂಡು ಬಂದು ಡಿಕ್ಕಿಯಾಗಿದೆ.