Home Posts tagged #pm narendra modi

ಪ್ರಧಾನಿ ನರೇಂದ್ರ ಮೋದಿಯಿಂದ ನೂತನ ಸಂಸತ್ ಭವನ ಲೋಕಾರ್ಪಣೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೂತನ ಸಂಸತ್ ಭವನವನ್ನು ಲೋಕಾರ್ಪಣೆಗೊಳಿಸಿದರು. ಉದ್ಘಾಟನೆಗೂ ಮುನ್ನ ಅವರು ಹೋಮ, ಪೂಜೆಗಳನ್ನು ನೆರವೇರಿಸಿದರು. ಅಧೀನಂ ಸ್ವಾಮೀಜಿಗಳಿಂದ ‘ಸೆಂಗೋಲ್’ ಸ್ವೀಕರಿಸಿದ ಮೋದಿ, ಅದನ್ನು ಸಂಸತ್ ಭವನದ ಒಳಗೆ ಪ್ರತಿಷ್ಠಾಪಿಸಿದರು. ಬಳಿಕ ಸರ್ವ ಧರ್ಮ ಪ್ರಾರ್ಥನ ಸಮಾರಂಭದಲ್ಲಿ ಅವರು ಭಾಗಿಯಾದರು. ಎಲ್ಲ ಧಾರ್ಮಿಕ ವಿಧಿ ವಿಧಾನಗಳು

ಕೊನೆಯ ಚುನಾವಣೆ, ರಾಜಕೀಯ ನಿವೃತ್ತಿ ಎಂದು ಹೇಳುವ ಕಾಂಗ್ರೆಸ್ ನಾಯಕರನ್ನು ತಿರಸ್ಕರಿಸಿ: ಪ್ರಧಾನಿ ಮೋದಿ

ಇದು ನಮ್ಮ ಕೊನೆಯ ಚುನಾವಣೆ, ರಾಜಕೀಯ ನಿವೃತ್ತಿ ಎಂದು ಜನರ ಬಳಿಕ ಕಾಂಗ್ರೆಸ್ ತೆರಳಿ ಮತಯಾಚನೆ ಮಾಡುತ್ತಿದೆ. ಆಂತಹ ಕಾಂಗ್ರೆಸ್ ನಾಯಕರನ್ನು ತಿರಸ್ಕರಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿನಲ್ಲಿ ಗುಡುಗಿದ್ದಾರೆ. ಅವರು ಮೂಲ್ಕಿಯ ಕೊಳ್ನಾಡುವಿನಲ್ಲಿ ನಡೆದ ಬಿಜೆಪಿಯ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಮ್ಮ ನಾಯಕ ನಿವೃತ್ತಿಯಾಗುತ್ತಿದ್ದಾನೆ. ಅದಕ್ಕಾಗಿ ವೋಟ್ ಕೊಡಿ ಎಂದು ಕಾಂಗ್ರೆಸ್ ಕೇಳುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ತವರೂರಿಗೆ ದ.ಕ ಜಿಲ್ಲೆಯ ಜೇನು ಕುಟುಂಬ

ಪ್ರಧಾನಿ ನರೇಂದ್ರ ಮೋದಿಯವರ ಕನಸಾದ ಮಧು ಕಾಂತ್ರಿಯನ್ನು ನನಸು ಮಾಡಲು ದೇಶದೆಲ್ಲೆಡೆ ಜೇನು ಕೃಷಿಯ ಮೇಲೆ ಒಲವು ಹೆಚ್ಚಾಗುತ್ತಿದೆ. ಗುಜರಾತ್ ರೈತರಿಗೆ ಜೇನು ಸಾಕಾಣಿಕೆಯ ಬಗ್ಗೆ ಹೆಚ್ಚಿನ ತರಬೇತಿ ನೀಡಲು ದಕ್ಷಿಣಕನ್ನಡ ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಜೇನು ಉತ್ಪಾದಕರೊಬ್ಬರು ಗುಜರಾತ್‍ಗೆ ತೆರಳಲಿದ್ದಾರೆ. ಈಗಾಗಲೇ ದಕ್ಷಿಣಕನ್ನಡ ಜಿಲ್ಲೆಯ 100 ಜೇನು ಕುಟುಂಬಗಳನ್ನು ಗುಜರಾತ್‍ಗೆ ರವಾನಿಸಿರುವ ಇವರಿಗೆ ಒಟ್ಟು 1 ಸಾವಿರ ಜೇನು

ಪ್ರಾಜೆಕ್ಟ್ ಚೀತಾ ತಂಡದಲ್ಲಿ ಪುತ್ತೂರಿನ ಕುವರ ಸನತ್ ಕೃಷ್ಣ

ಪುತ್ತೂರು :ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬದಂದೇ ಆಫ್ರಿಕಾದ ನಮೀಬಿಯಾದಿಂದ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನಕ್ಕೆ ತರಲಾದ ಎಂಟು ಚೀತಾಗಳ ಐತಿಹಾಸಿಕ ಪಯಣದ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವ ವನ್ಯಜೀವಿ ತಜ್ಞ ಸನತ್ ಕೃಷ್ಣ ಮುಳಿಯ ಪ್ರಮುಖ ಪಾತ್ರ ವಹಿಸಿದ್ದಾರೆ. ಸ್ವತ: ಪ್ರಧಾನಿ ಮೋದಿ ಅವರಿಂದ ಶಹಬ್ಬಾಸ್ ಪಡೆದ ಪ್ರಾಜೆಕ್ಟ್ ಚೀತಾ ತಂಡದಲ್ಲಿದ್ದ ಸನತ್ ಕೃಷ್ಣ ಮುಳಿಯ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ. ಕೇಂದ್ರ ಪರಿಸರ ಇಲಾಖೆಯ

ಸೆ.2ರಂದು ಪ್ರಧಾನಿ ಮಂಗಳೂರಿಗೆ : ದ.ಕ ಜಿಲ್ಲಾಡಳಿತದಿಂದ ಸಿದ್ಧತೆ

ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರು ಭೇಟಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿಯವರ ಸಮಾವೇಶದ ತಾಣವಾಗಿರುವ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬಿರುಸಿನ ಸಿದ್ಧತೆಗಳು ನಡೆಯುತ್ತಿವೆ. ಸುಮಾರು 2 ಲಕ್ಷ ಮಂದಿ ಕುಳಿತುಕೊಳ್ಳಲು ಸಾಧ್ಯವಾಗು ವಂತಹ ಶೀಟ್‍ಗಳನ್ನು ಅಳವಡಿಸಿ ಬೃಹತ್ ಚಪ್ಪರ ಹಾಕುವ ಕಾಮಗಾರಿ ಭರದಿಂದ ಸಾಗುತ್ತಿದೆ. 20 ಅಡಿ ಎತ್ತರ, 60 ಅಡಿ ಉದ್ದ ಹಾಗೂ 80 ಅಡಿ ಅಗಲದ ಸಭಾವೇದಿಕೆ