Home Posts tagged #prathap simha nayak

ಕಾಂಗ್ರೆಸ್ ದುರಾಡಳಿತದಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ : ವಿಧಾನ ಪರಿಷತ್ ಸದಸ್ಯ ಪ್ರತಾಪ್‍ಸಿಂಹ ನಾಯಕ್ ಹೇಳಿಕೆ

ಬಂಟ್ವಾಳ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದ್ದು ಮುಂದೆ ನಡೆಯುವ ವಿಧಾನ ಪರಿಷತ್ ಚುನಾವಣೆ ಸರಕಾರದ ಬಗ್ಗೆ ಜನಾಭಿಪ್ರಾಯ ತಿಳಿಸುವ ಚುನಾವಣೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ವ್ಯಾಖ್ಯಾನಿಸಿದರು. ಅವರು ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ನೈರುತ್ಯ ಪದವೀಧರ

ಪುತ್ತೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ – ಪ್ರತಾಪ ಸಿಂಹ ನಾಯಕ್ ವಿಶ್ವಾಸ

ಪುತ್ತೂರು: ರಾಜ್ಯ ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಜೂನ್ 3ರಂದು ನಡೆಯುವ ಚುನಾವಣೆಯಲ್ಲಿ ಎಲ್ಲ ಆರು ಸ್ಥಾನಗಳಲ್ಲೂ ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಗೆಲುವು ಸಾಧಿಸಲಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಬಂಡಾಯವಿದ್ದರೂ, ಬಿಜೆಪಿಯಂಥ ರಾಷ್ಟ್ರೀಯ ಪಕ್ಷದ ಸಂಘಟನಾ ಸಾಮರ್ಥ್ಯದ ಎದುರು ಬಂಡಾಯ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವೇ ಇಲ್ಲ ಎಂದು ಹಿರಿಯ ಬಿಜೆಪಿ ಮುಖಂಡರೂ, ವಿಧಾನ ಪರಿಷತ್ ಸದಸ್ಯರೂ ಆದ ಪ್ರತಾಪ ಸಿಂಹ ನಾಯಕ್ ಹೇಳಿದರು.

ಬೆಳ್ತಂಗಡಿ: ಕೆ. ವಸಂತ ಬಂಗೇರರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಂತಾಪ

ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಂಬನಿ ಮಿಡಿದಿದ್ದಾರೆ.ಜನನಿಷ್ಠ ರಾಜಕಾರಣಿ, ಸ್ನೇಹ ಜೀವಿ, ಸಮರ್ಥ ಕೆಲಸಗಾರ, ಹೋರಾಟಗಾರ, ಶಿಕ್ಷಣ ಪ್ರೇಮಿ, ದೂರದೃಷ್ಟಿಯ ರಾಜಕಾರಣಿಯಾಗಿದ್ದ ಅವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಐದು

ನಾಮಪತ್ರ ಸಲ್ಲಿಕೆಗೆ ಮುನ್ನ ಕ್ಯಾ. ಬೃಜೇಶ್ ಚೌಟರಿಗೆ ಹರಸಿದ ‘ನಾರೀಶಕ್ತಿ’

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬೃಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರು, ತಾಯಂದಿರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆಗಳನ್ನು ಸಲ್ಲಿಸಲಾಯಿತು. ಪಕ್ಷದ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭ್ಯರ್ಥಿ ಕ್ಯಾ. ಚೌಟರಿಗೆ ಮಹಿಳೆಯರು ಆರತಿ ಎತ್ತಿ, ತಿಲಕವಿಟ್ಟು, ದೇಣಿಗೆ ನೀಡಿ ಗೆದ್ದು ಬರುವಂತೆ ಹರಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು,

ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರ ಕಾರ್ಯಕರ್ತರ ಸಮಾವೇಶ

ಪುತ್ತೂರು: ಭಾರತವನ್ನು ಜಗತ್ತಿಗೇ ನಾಯಕತ್ವ ಸ್ಥಾನದಲ್ಲಿ ನಿಲ್ಲಿಸಿರುವ ನರೇಂದ್ರ ಮೋದಿಯವರ ವಿಚಾರದಲ್ಲಿ ಮೈಮರೆವು ಬೇಡ. ನಮ್ಮ ಗುರಿ, ಉದ್ದೇಶ, ಸಂಕಲ್ಪ, ಶ್ರಮ ಮೋದಿಯವರನ್ನು ಮತ್ತಷ್ಟು ವರ್ಷಗಳ ಕಾಲ ಪ್ರಧಾನಿಯಾಗಿಸುವುದೇ ಆಗಿರಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ. ತೆಂಕಿಲ ಸ್ವಾಮಿ ಕಲಾ ಮಂದಿರದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ

ಮಂಗಳೂರು ಕ್ಷೇತ್ರ ಸೇರಿದಂತೆ ಜಿಲ್ಲೆಯ ಎಂಟೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ: ಪ್ರತಾಪ್ ಸಿಂಹ ನಾಯಕ್

ಮಂಗಳೂರು: ಈ ಬಾರಿ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಶತಸ್ಸಿದ್ಧ. ಮಂಗಳೂರು ಕ್ಷೇತ್ರವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಎಂಟೂ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲುವುದು ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಂಗಳೂರು ಕ್ಷೇತ್ರದ ಪ್ರಭಾರಿ ಪ್ರತಾಪ್ ಸಿಂಹ ನಾಯಕ್‌ ಹೇಳಿದರು. ಬಿಜೆಪಿಯ ಮಂಗಳೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ಇಂದು ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಅತ್ಯಂತ ಪ್ರಜಾಸತ್ತಾತ್ಮಕ ವಿಧಾನದಲ್ಲಿ