ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ತಂಡ ಮೂವರನ್ನು ಸಕಲೇಶಪುರ ತಾಲೂಕಿನ ಆನೆಮಹಲ್ನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುಳ್ಯ ಮೂಲದ ಮುಸ್ತಫಾ ಪೈಚಾರ್, ಸೋಮವಾರಪೇಟೆ ಮೂಲದ ಇಲ್ಯಾಸ್ ಹಾಗೂ ಸಿರಾಜ್ ಎಂದು ಗುರುತಿಸಲಾಗಿದೆ. ಪ್ರವೀಣ್ ನೆಟ್ಟಾರು ಪ್ರಕರಣದ ನಾಲ್ಕನೇ ಆರೋಪಿ ಎಂದು ಗುರುತಿಸಲಾಗಿದ್ದ ಮುಸ್ತಫಾ ಪೈಚಾರ್ ಹಾಗೂ ಇಲ್ಯಾಸ್
ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್ಐಎ ಅಧಿಕಾರಿಗಳು ನಾಪತ್ತೆಯಾಗಿರುವ ಆರೋಪಿಗಳಿಗೆ ತೀವ್ರ ಶೋಧ ನಡೆಸುತ್ತಿದ್ದಾರೆ. ಸುಳ್ಯ ನಗರದ ಬೀದಿಗಳಲ್ಲಿ ಈ ಬಗ್ಗೆ ಧ್ವನಿವರ್ಧಕ ಬಳಸಿ ಪ್ರಕಟಣೆ ಹೊರಡಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಮುಟ್ಟುಗೋಲು ಮಾಡಲಾಗುವುದೆಂದು ಅನೌನ್ಸ್ ಮೂಲಕ ಎಚ್ಚರಿಕೆ ನೀಡಿದ್ದಾರೆ. ಎನ್ಐಎ ನ್ಯಾಯಾಲಯದ
ಶಾಸಕ ಹರೀಶ್ ಪೂಂಜ ಅವರು ಹಿಂದೂ ಸಮಾಜದ ಅಚ್ಚಳಿಯದ ನಕ್ಷತ್ರ, ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ಜಿಹಾದಿಗಳ ಸಂಚಿಗೆ ವೀರ ಮರಣವನ್ನಪ್ಪಿದ ಬಲಿದಾನಿ ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಭೇಟಿ ನೀಡಿ ಅವರ ಪ್ರತಿಮೆಗೆ ನಮಸ್ಕರಿಸಿದರು. ಬಳಿಕ ಪ್ರವೀಣ್ ನೆಟ್ಟಾರು ಅವರು ಮಾತಾಪಿತರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದು ಕುಟುಂಬದ ಯೋಗಕ್ಷೇಮ ವಿಚಾರಿಸಿ ಪ್ರವೀಣ್ ನೆಟ್ಟಾರು ಅವರ ತ್ಯಾಗಕ್ಕೆ ಪ್ರಣಾಮ ಸಲ್ಲಿಸಿದರು.
ಪುತ್ತೂರು:- ದುಷ್ಕರ್ಮಿಗಳಿಂದ ಹತ್ಯೆಗೀಡಾದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಕುಟುಂಬದವರಿಗೆ ದ.ಕ ಹಾಗೂ ಉಡುಪಿ ಬಿಲ್ಲವ ಪ್ರಮುಖರು 45 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿಕೊಡುವುದಾಗಿ ಹೇಳಿದ್ದು ಇದೀಗ ಇದಕ್ಕೆ ಅವಕಾಶ ಇಲ್ಲದ ನಿಟ್ಟಿನಲ್ಲಿ ಇದೇ ಹಣದಿಂದ ಪ್ರವೀಣ್ ನೆಟ್ಟಾರ್ ಸ್ಮರಣಾರ್ಥ ದ.ಕ ಉಡುಪಿ ವಿಧಾನಸಭಾ ಕ್ಷೇತ್ರದ 14 ಮಂದಿ ಹಿಂದುಳಿದ ವರ್ಗಗಳ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು
ದಿವಂಗತ ಪ್ರವೀಣ್ ನೆಟ್ಟಾರ್ ಮನೆಗೆ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷರು ಪ್ರಮೋದ್ ಮುತಲಿಕ್ ಭೇಟಿ ನೀಡಿ, ಪ್ರವೀಣ್ ತಂದೆ ತಾಯಿ ಹಾಗೂ ಪ್ರವೀಣ್ ನೆಟ್ಟಾರ್ ಧರ್ಮಪತ್ನಿ ಹಾಗೂ ಮನೆಯವರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸರಕಾರವನ್ನು ಕಟುವಾಗಿ ಟೀಕಿಸಿ ಪ್ರವೀಣ್ ಕೊಂದ ಹಂತಕರಿಗೆ ಗಲ್ಲು ಶಿಕ್ಷೆ ಆಗಬೇಕೆಂದು ಆಗ್ರಹಿಸಿದರು.
ಜುಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಂದಾಳು ಪ್ರವೀಣ್ ನೆಟ್ಟಾರು(34ವ)ರವರ ಹತ್ಯೆ ಪ್ರಕರಣದ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು ಮತ್ತು ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳಿಗೆ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ. ಎನ್.ಐ.ಎ.ಅಧಿಕಾರಿಗಳಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡಿದ್ದಾರೆ.
ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪೋಲೀಸರಿಂದ ಬಂಧಿಸಲ್ಪಟ್ಟ ಬೆಳ್ಳಾರೆ ಮೂಲದ ಶಫೀಕ್ ಕೆಲಸ ಮಾಡುತ್ತಿದ್ದ ಗುತ್ತಿಗಾರಿನ ಅಡಿಕೆ ಅಂಗಡಿಯನ್ನು ಆಕ್ರೋಶಿತರು ಧ್ವಂಸಗೊಳಿಸಿದ ಘಟನೆ ನಡೆದಿದೆ. ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬೆಳ್ಳಾರೆ ಮೂಲದ ಶಫೀಕ್ ಬಂಧಿತನಾಗಿದ್ದಾನೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಆಕ್ರೋಶಿತರಾದ ಕೆಲವರು ಆತ ಕೆಲಸ ನಿರ್ವಹಿಸುತ್ತಿದ್ದ ಗುತ್ತಿಗಾರಿನ ಅಡಿಕೆ ಅಂಗಡಿಯ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ. ಬಿಗು ಪೋಲೀಸ್
ಜುಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಅವರ ಮನೆಗೆ ಜು.28ರಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿದ್ದಾರೆ. ಈ ವೇಳೆ ಪ್ರವೀಣ್ ಪತ್ನಿ ನೂತನಾ ಅವರು ಶಾಸಕರನ್ನು ತರಾಟೆಗೆತ್ತಿಕೊಂಡಿದ್ದಾರೆ. `ನನ್ನ ಗಂಡನ ಕೊಲೆ ಆಗಿ ಎರಡು ದಿನ ಆಯಿತು. ಇವತ್ತು ಬರ್ತೀರಾ, ನಿಮ್ಮ ಮನೆಯ ಮಗಳಿಗೆ ಹೀಗಾದರೆ ಹೀಗೆ ಮಾಡ್ತೀರಾ, ಪಕ್ಷ ಪಕ್ಷ ಪಕ್ಷ ಎಂದು ನನ್ನವರು ಹೇಳುತ್ತಿದ್ದರು. ಸಂಜೀವಣ್ಣನ ಪಿಎಗೆ ಕಾಲ್