Home Posts tagged #protest

ಮೂಡುಬಿದಿರೆ: ಭೂಮಿ ಹಕ್ಕಿಗೆ ಒತ್ತಾಯಿಸಿ ನಡೆಯುತ್ತಿದ್ದ ಧರಣಿ ಸತ್ಯಾಗ್ರಹ ವಾಪಾಸ್

ಮೂಡುಬಿದಿರೆ: ಭೂಮಿ ಹಕ್ಕಿಗೆ ಒತ್ತಾಯಿಸಿ ಭೂಮಿ ಹೋರಾಟ ಸಮಿತಿಯು ಆಡಳಿತ ಸೌಧದ ಮುಂಭಾಗ ಸೋಮವಾರ ಕೈಗೊಂಡಿದ್ದ ಅಹೋರಾತ್ರಿ ಧರಣಿಯು ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಅವರ ಮನವೊಲಿಕೆಯಿಂದಾಗಿ ವಾಪಾಸ್ ಪಡೆದುಕೊಂಡಿದೆ. ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಯಾದವ ಶೆಟ್ಟಿ ಅವರು ಧರಣಿ ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿ, ಮೂಡುಬಿದಿರೆ

ಉಡುಪಿ : ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆ ಖಂಡಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ

ಉಡುಪಿ: ರಾಜ್ಯ ಸರಕಾರದ ಸರ್ವಾಧಿಕಾರಿ ಧೋರಣೆ, ಸಂವಿಧಾನ ವಿರೋಧಿ ನೀತಿ, ಹದಗೆಟ್ಟ ಕಾನೂನು ಸುವ್ಯವಸ್ಥೆ, ರೈತರ ಆತ್ಮಹತ್ಯೆ, ಬೆಲೆ ಏರಿಕೆ ವಿರುದ್ಧ ಜಿಲ್ಲಾ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತು. ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದ ಬಳಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗಿಯಾದರು. ಈ ವೇಳೆ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನಕಾರರು ಧಿಕ್ಕಾರ ಕೂಗಿದರು. ಬೆಂಗಳೂರಿನಲ್ಲಿ ಬಂಧಿತ ಶಂಕಿತ ಭಯೋತ್ಪಾದಕರ ಪ್ರಕರಣವನ್ನು

ಕೂಳೂರು ರಾ.ಹೆ. ಅವ್ಯವಸ್ಥೆ ಖಂಡಿಸಿ ನಾಗರಿಕ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ

ನಾಗರಿಕ ಹಿತರಕ್ಷಣಾ ಸಮಿತಿ ಕೂಳೂರು ಇದರ ವತಿಯಿಂದ ಹೊಂಡ ಗುಂಡಿ ತಕ್ಷಣ ಮುಚ್ಚಿ ಹಾಗೂ 2 ವರ್ಷದಿಂದ ಅರ್ಧಕ್ಕೆ ನಿಂತಿರುವ ಕೂಳೂರು ಹೊಸ ಸೇತುವೆ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಈ ಬಗ್ಗೆ ನಾಗರೀಕ ಹಿತರಕ್ಷಣಾ ಸಮಿತಿಯ ಕೂಳೂರಿನ ಅಧ್ಯಕ್ಷರಾದ ವಿಜಿ ಗುರುಚಂದ್ರ ಹೆಗ್ಡೆ ಅವರು ಮಾತನಾಡಿ, ಎನ್‍ಹೆಚ್ 66ಲ್ಲಿ ಅವೈಜ್ಞಾನಿ ಕಾಮಗಾರಿ ಹಾಗೂ ಕೂಳೂರು ಹೊಸ ಸೇತುವೆ ಕಾಮಗಾರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಜುಲೈ 18ರಂದು : ಕೂಳೂರು ರಾ.ಹೆ. ಅವ್ಯವಸ್ಥೆ ಖಂಡಿಸಿ ನಾಗರಿಕ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ

ಕೂಳೂರು ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯನ್ನು ಖಂಡಿಸಿ ನಾಗರಿಕ ಹಿತರಕ್ಷಣಾ ಸಮಿತಿಯ ವತಿಯಿಂದ ಜುಲೈ 18ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ನಾಗರೀಕ ಹಿತರಕ್ಷಣಾ ಸಮಿತಿಯ ಕೂಳೂರಿನ ಅಧ್ಯಕ್ಷರಾದ ವಿಜಿ ಗುರುಚಂದ್ರ ಹೆಗ್ಡೆ ಅವರು ಮಾತನಾಡಿ, ಎನ್‍ಹೆಚ್ 66ಲ್ಲಿ ಅವೈಜ್ಞಾನಿ ಕಾಮಗಾರಿಯಿಂದ ರಸ್ತೆ ಹೊಂಡ-ಗುಂಡಿಗಳಿಂದ ತುಂಬಿ ಹೋಗಿದೆ. ಇದರಿಂದ ಸ್ಥಳೀಯರ ನಾಗರಿಕೆರಿಗೆ, ವ್ಯಾಪಾರಸ್ತರಿಗೆ, ವಾಹನ ಚಾಲಕರಿಗೆ ಅಂಬ್ಯುಲೆನ್ಸ್,

ಬೆಳ್ತಂಗಡಿ : ನೆಟ್ವರ್ಕ್ ಸಮಸ್ಯೆ- ಏರ್ಟೆಲ್ ಸಂಸ್ಥೆಯ ವಿರುದ್ಧ ಪ್ರತಿಭಟನೆ

ನಿರಂತರ ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮಸ್ಥರು, ಏರ್ಟೆಲ್ ಸಂಸ್ಥೆ ವಿರುದ್ಧ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಏರ್ಟೆಲ್ ನೆಟ್ವರ್ಕ್ ವಿರುದ್ಧ ಘೋಷಣೆಯನ್ನು ಕೂಗಲಾಯಿತು ಮತ್ತು ನೆಟ್ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಗಡುವು ನೀಡಲಾಯಿತು. ಮುಂದಿನ ದಿನಗಳಲ್ಲಿ ಕಾನೂನಾತ್ಮಕವಾಗಿ ಬೃಹತ್ ಪ್ರತಿಭಟನೆಯನ್ನು ನಡೆಸುವುದಾಗಿ ಎಚ್ಚರಿಸಲಾಯಿತು. ಪ್ರತಿಭಟನೆಯಲ್ಲಿ ಬಳಂಜ ಗ್ರಾಮ ಪಂಚಾಯತ್

ಮಣಿಪುರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ದಾಳಿ – ದ.ಕ. ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ

ಮಣಿಪುರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ದ.ಕ. ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ, ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಮತ್ತು ಯುನೈಟೆಡ್ ಕ್ರಿಶ್ಚಿಯನ್ ಫೆÇೀರಂ ಮಂಗಳೂರು ಇದರ ವತಿಯಿಂದ ನಗರದ ಕ್ಲಾಕ್‍ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಕಡೆಗಳಿಂದ ಆಗಮಿಸಿದ ಸಾವಿರಾರು ಮಂದಿ ಕ್ರೈಸ್ತ ಸಮುದಾಯದವರು, ಧರ್ಮಗುರುಗಳು, ಧರ್ಮಭಗಿನಿಯರು, ಇತರ ಸಮುದಾಯ ಮತ್ತು ಸಂಘಟನೆಗಳ

ಮಣಿಪುರದಲ್ಲಿ ಚರ್ಚ್ ಮತ್ತು ಕ್ರಿಶ್ಚಿಯನ್ನರ ಮೇಲೆ ದಾಳಿ ಖಂಡಿಸಿ ಪುತ್ತೂರಿನಲ್ಲಿ ಸಿಐಟಿಯು ವತಿಯಿಂದ ಪ್ರತಿಭಟನೆ

ಪುತ್ತೂರು : ಮಣಿಪುರ ರಾಜ್ಯದಲ್ಲಿ ಮೀಸಲಾತಿ ಗಲಭೆ ಸೃಷ್ಠಿಸಿ ಚರ್ಚ್ ಮತ್ತು ಕ್ರಿಶ್ಚಿಯನರ ಮೇಲೆ ಮೇಲೆ ನಡೆಸಲಾಗಿರುವ ದಾಳಿಯನ್ನು ಖಂಡಿಸಿ ಮತ್ತು ಮಣಿಪುರದಲ್ಲಿ ಶಾಂತಿ-ಸುವ್ಯವಸ್ಥೆಯನ್ನು ಕಾಪಾಡುವಂತೆ ಆಗ್ರಹಿಸಿ ಪುತ್ತೂರಿನ ಆಡಳಿತ ಸೌಧದ ಎದುರು ಸಿಐಟಿಯು ಬೆಂಬಲಿತ ತಾಲ್ಲೂಕು ಬೀಡಿ ಕೆಲಸಗಾರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪುತ್ತೂರು ತಾಲೂಕು ಬೀಡಿ ಕೆಲಸಗಾರರ ಸಂಘದ ಗೌರವಾಧ್ಯಕ್ಷರಾದ ಕಾರ್ಮಿಕ ಮುಂದಾಳು

ಮಂಗಳೂರು : ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಖಂಡಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ

ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳವನ್ನ ಖಂಡಿಸಿ, ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಯನ್ನ ಹಮ್ಮಿಕೊಂಡಿದ್ದು, ಅದರಂತೆ ಮಂಗಳೂರಿನಲ್ಲೂ ಬಿಜೆಪಿ ಪ್ರತಿಭಟನೆ ನಡೆಸಿದೆ.ಬಿಜೆಪಿ ದಕ್ಷಿಣ ಮಂಡಳದಿಂದ ಪ್ರತಿಭಟನೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಜನತೆಗೆ ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದಿದ್ದೀರಿ.ಗ್ಯಾರಂಟಿ ನೀಡ್ತೇವೆ ಹೇಳಿ ಅಧಿಕಾರಕ್ಕೆ ಬಂದು. ಇದೀಗಾ

ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್ ಮುಚ್ಚುವಂತೆ ಪ್ರತಿಭಟನೆ

ಮಂಗಳೂರು ನಗರದಲ್ಲಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್, ಜುಗಾರಿ ಅಡ್ಡೆಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿಸಿ ಮತ್ತು ಜೂಜುಕೇಂದ್ರಗಳ ಮೇಲೆ ಕ್ರಮ ಕೈಗೊಳ್ಳಲು ವಿಫಲರಾದ ಪೊಲೀಸ್ ನೀತಿಯ ವಿರುದ್ಧ ಡಿವೈಎಫ್‍ಐ ದ.ಕ. ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು. ನಗರದ ಮಿನಿವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು.

ಮೂಡುಬಿದರೆ : ಸಿಪಿಐಎಂ ವತಿಯಿಂದ ಜನವಿರೋಧಿ, ದೇಶವಿರೋಧಿ ಆಡಳಿತ ವಿರೋಧಿಸಿ ಆಂದೋಲನ

ಮೂಡುಬಿದಿರೆ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ಜನವಿರೋಧಿ, ದೇಶವಿರೋಧಿ ಆಡಳಿತವನ್ನು ವಿರೋಧಿಸಿ ಮತ್ತು ವಿಪರೀತ ಬೆಲೆ ಏರಿಕೆಯನ್ನು ಖಂಡಿಸಿ ಸಿ.ಪಿ.ಐ.ಎಂನ ತಾಲೂಕು ಸಮಿತಿ ವತಿಯಿಂದ ಸೋಮವಾರ ಆಡಳಿತ ಸೌಧದ ಮುಂಭಾಗದಲ್ಲಿ ಪ್ರಚಾರಾಂದೋಲನ ನಡೆಯಿತು.ಸಿ.ಪಿ.ಐ.ಎಂನ ರಾಜ್ಯ ಸಮಿತಿಯ ಸದಸ್ಯ ಜಿ.ಎನ್ ನಾಗರಾಜ್ ಅವರು ಪ್ರಚಾರಾಂದೋಲನವನ್ನು ಉದ್ದೇಶಿಸಿ ಮಾತನಾಡಿ ನಿರುದ್ಯೋಗ, ಹಣದುಬ್ಬರ, ದೇಶದ ಸಂಪತ್ತಿನ ಲೂಟಿ ಮತ್ತು ಭ್ರಷ್ಟಾಚಾರದಲ್ಲಿ ತನ್ನನ್ನು