ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಉಪ್ಪಿನಂಗಡಿ ಕಜೆಕ್ಕಾರ್ ವ್ಯಾಪ್ತಿಯಲ್ಲಿ ಟಾರ್ಪಲ್ ಶೀಟಿನ ಗುಡಿಸಲಿನಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದ ಶ್ರೀಮತಿ ಭಾಗಿರ ಅವರಿಗೆ, ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಿರ್ಮಿಸಲಾಗುತ್ತಿರುವ ನೂತನ ಮನೆಯ ನಿರ್ಮಾಣ ಕಾರ್ಯಕ್ಕೆ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು
ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಮಾನ್ಯ ಉಪಾಧ್ಯಕ್ಷರಾದ ಶ್ರೀ ಡಿ.ಆರ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನ ಕುಮಾರ ಪಾರ್ಕ್‌ನ ಗಾಂಧಿ ಭವನದಲ್ಲಿ ಆಯೋಜಿಸಲಾದ “ಗ್ರಾಮಸಭೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಸಂವಿಧಾನ ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಕಾನೂನಿನ ಆಶಯದಂತೆ ಕಾರ್ಯನಿರ್ವಹಿಸಲು ಅನುಕೂಲವಾಗುವ ವಾತಾವರಣ ಸೃಷ್ಟಿಸುವುದು” ಎಂಬ ವಿಷಯದ ಕುರಿತು ನಡೆದ ಮಹತ್ವದ ಸಭೆಯಲ್ಲಿ, ವಿಧಾನ
ಕೊಕ್ಕಡ : ಕೊಕ್ಕಡ ಗ್ರಾಮದ ಹಳ್ಳಿಗೇರಿ ಎಂಬಲ್ಲಿ ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಜ.2 ರಂದು ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಕ್ಕಡ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ನೌಕರ ಕುಂಞಕಣ್ಣನ್ ಅವರ ಪುತ್ರ ಅಜಯ್ ಕುಮಾರ್(39) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಊಟದ ಬಳಿಕ ವಾಸದ ಮನೆಯಲ್ಲಿ ಇದ್ದ ಅಜಯ್, ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತ ಅಜಯ್ ಅವರು
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಪರ್ಯಾಯ ಮಹೋತ್ಸವಕ್ಕೆ ಶೀರೂರು ಮಠದ ಪೀಠಾಧಿಪತಿ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪ್ರಥಮ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿದ್ದು, ಮುಂದಿನ ಎರಡು ವರ್ಷಗಳ ಕಾಲ ಶ್ರೀ ಕೃಷ್ಣ ದೇವರ ಪೂಜಾ ದೀಕ್ಷೆಯನ್ನು ಸ್ವೀಕರಿಸಲಿದ್ದಾರೆ. ಈ ಮಹತ್ತರ ಜವಾಬ್ದಾರಿಯ ಅಂಗವಾಗಿ ಶ್ರೀಪಾದರು ಕೈಗೊಂಡಿರುವ ದೇಶ–ಗ್ರಾಮ ಪರ್ಯಟನೆಯ ಭಾಗವಾಗಿ ಜ.1ರಂದು ತಮ್ಮ ಪೂರ್ವಾಶ್ರಮದ ಹುಟ್ಟೂರಾದ ನಿಡ್ಲೆ ಗ್ರಾಮಕ್ಕೆ ಆಗಮಿಸಿದರು. ಶ್ರೀಪಾದರ
ನೆಲ್ಯಾಡಿ: ಉಪ್ಪಿನಂಗಡಿ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಅಕ್ರಮ ಮರ ಸಾಗಾಟದ ವಿರುದ್ಧ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಮುಂದುವರಿಸಿದ್ದು, ಮಂಗಳವಾರ ರಾತ್ರಿ ನಡೆಸಿದ ವಿಶೇಷ ಗಸ್ತು ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ಹೆದ್ದಾರಿ–75ರ ನೆಲ್ಯಾಡಿ ಸಮೀಪದ ಪೆರಿಯಶಾಂತಿ ಪ್ರದೇಶದಲ್ಲಿ ಅಕ್ರಮವಾಗಿ ವಿವಿಧ ಕಾಡು ಜಾತಿಯ ಮರಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದುಕೊಂಡಿದೆ. ಉಪ್ಪಿನಂಗಡಿ ಅರಣ್ಯ ವಲಯದ ಅಧಿಕಾರಿಗಳ ತಂಡ ರಾತ್ರಿ ಗಸ್ತು ಕಾರ್ಯಾಚರಣೆ
ಹೊಸ ವರ್ಷಚಾರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಉಂಟಾಗುವ ಜೀವ ಹಾನಿಯನು ತಡೆಯುವ ದೃಷ್ಟಿಯಿಂದ 108 ಆರೋಗ್ಯ ಕವಚ ಅಂಬುಲೆನ್ಸ್, ಇಎಮ್‌ಆರ್‌ಐ EMRI GREEN HEALTH SERVICES ಕರ್ನಾಟಕ ರಾಜ್ಯಾದ್ಯಂತ ಸುಸಜ್ಜಿತಗೊಂಡಿರುತ್ತದೆ. ಸಾಮಾನ್ಯ ದಿನಗಳಿಗಿಂತ ಹೊಸ ವರ್ಷದ ಆಚರಣೆಗಳಲ್ಲಿ ಸರಾಸರಿ ೩೦ರಿಂದ ೩೫ ಪರ್ಸೆಂಟ್ ಅಪಘಾತ ಪ್ರಕರಣಗಳು ವರದಿಯಾಗಿವೆ. 108 ಅಂಬುಲೆನ್ಸ್ ಸೇವೆಯು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ನಿಕಟ ಸಹಕಾರವನ್ನು ಹೊಂದಿರುತ್ತದೆ.
ಅರಂತೋಡಿನ ನಿವೃತ್ತ ರೇಂಜರ್ ಹೂವಯ್ಯ ಗೌಡ ಉಳುವಾರು ಅವರ ಬದುಕು ಹಾಗೂ ವೃತ್ತಿ ಬದುಕನ್ನು ಪರಿಚಯಿಸುವ ಅಭಿನಂದನಾ ಗ್ರಂಥ “ಹಿನ್ನೋಟ- ಇದು ನೆನಪಿನ ಬುತ್ತಿ” ಯ ಅನಾವರಣ ಕಾರ್ಯಕ್ರಮವು ಇತ್ತೀಚೆಗೆ ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಕೃಷ್ಣ ಗೌಡ ಮೂಲೆಮನೆ ವಹಿಸಿದ್ದರು. ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲರಾದ ಕೆ ಆರ್ ಗಂಗಾಧರ ಉದ್ಘಾಟಿಸಿದರು. ಎಂ ಬಿ ಫೌಂಡೇಶನ್ ಅಭ್ಯಕ್ಷರಾದ ಎಂ ಬಿ ಸದಾಶಿವ ಕೃತಿಯನ್ನು
ಡಿ. 23 ರಂದು ಕೆ ವಿ ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದ ಆತಿಥ್ಯದಲ್ಲಿ ಆಯೋಜಿಸಲಾದ ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದ ವಿಧ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಪಂದ್ಯಾಟವು ಸುಳ್ಯದ ನೆಹರೂ ಮೆಮೋರಿಯಲ್ ಮೈದಾನದಲ್ಲಿ ನಡೆದಿದ್ದು ರಾಜ್ಯ ಮಟ್ಟದಿಂದ ಹತ್ತಾರು ತಂಡಗಳು ಭಾಗವಹಿಸಿದ್ದವು.
ಪುತ್ತೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ದ.ಕ. ಜಿಲ್ಲಾಡಳಿತ ವತಿಯಿಂದ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಪುತ್ತೂರು ಇದರ ಸಹಯೋಗದಲ್ಲಿ ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರ ಸಹಕಾರದಲ್ಲಿ ಗಡಿ-ಸಂಸ್ಕೃತಿ- ಉತ್ಸವದ ಅಂಗವಾಗಿ ‘ಕಲಾರ್ಣವ-2025’ ಭಾವ-ರಾಗ-ತಾಳ ಕಾರ್ಯಕ್ರಮ ಡಿಸೆಂಬರ್ 20 ರಂದು ಸಂಜೆ 4.30 ಗಂಟೆಯಿಂದ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಸಂಜೆ
ಪುತ್ತೂರು:ಕಳೆದ ಎರಡು ದಿನಗಳಿಂದ ಪುತ್ತೂರಿನ ಬಸ್ ನಿಲ್ದಾಣ ಹಾಗೂ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಆಶ್ರಯವಿಲ್ಲದೆ ತಂಗುತ್ತಿದ್ದ ಒಂಟಿ ಮಹಿಳೆಯೊಬ್ಬರನ್ನು ರೋಟರಿ ಕ್ಲಬ್ ಪುತ್ತೂರು ಯುವದ ಮಾನವೀಯ ಕಾರ್ಯಚಟುವಟಿಕೆಯ ಮೂಲಕ ರಕ್ಷಿಸಿ, ಸೂಕ್ತ ಪುನರ್ವಸತಿ ಕಲ್ಪಿಸಿದ ಘಟನೆ ಸಮಾಜಕ್ಕೆ ಆಶಾಕಿರಣವಾಗಿ ಪರಿಣಮಿಸಿದೆ. ರೋಟರಿ ಕ್ಲಬ್ ಪುತ್ತೂರು ಯುವದ ಮಾಜಿ ಅಧ್ಯಕ್ಷರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದರೂ ಈಗಾಗಲೇ ಸುಮಾರು 150ಕ್ಕೂ ಅಧಿಕ




























