Home Posts tagged Puttur (Page 2)

‘ಇಲ್ಲಗೊಂಜಿ ಗೇನೊದ ಬಂಡಾರ’ : ತುಳು ಅಕಾಡೆಮಿಯ ಮನೆ ಮನೆ ಗ್ರಂಥಾಲಯ ಅಭಿಯಾನಕ್ಕೆ ಪುತ್ತೂರಿನಲ್ಲಿ ಚಾಲನೆ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮನೆ ಮನೆಯಲ್ಲಿ ತುಳು ಪುಸ್ತಕಗಳ ಗ್ರಂಥಾಲಯ ಆರಂಭಿಸುವ ಉದ್ದೇಶದಿಂದ ‘ಇಲ್ಲಗೊಂಜಿ ಗೇನೊದ ಬಂಡಾರ’ ಅಭಿಯಾನ ಆರಂಭಿಸಿದೆ.ಈ ಅಭಿಯಾನಕ್ಕೆ ಶನಿವಾರ (ಜ.11) ಬೆಳಿಗ್ಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಪುತ್ತೂರಿನ ಕೋಡಿಂಬಾಡಿಯ ಮನೆಯಲ್ಲಿ‌ ಚಾಲನೆ ನೀಡಲಾಗುವುದು.ತುಳು ಅಕಾಡೆಮಿ ಪ್ರಕಟಿಸಿರುವ ಕೃತಿಗಳು

ಪುತ್ತೂರು: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್‌ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಪುತ್ತೂರು: ದಾರಂದಕುಕ್ಕು ಕೊಲ್ಯ ಎಂಬಲ್ಲಿ ಬೈಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದ್ದು, ಅಪಘಾತದಿಂದ ಬೈಕ್ ನಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಳ್ಳಿಪ್ಪಾಡಿ ನಿವಾಸಿಗಳಾಗಿರುವ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ವಿದ್ಯಾರ್ಥಿ ಬೈಕ್ ಸವಾರ ನಿಶಾಂತ್ ಮತ್ತು ಹಿಂಬದಿ ಸವಾರ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ವಿದ್ಯಾರ್ಥಿ ಕಾರ್ತಿಕ್ ಎಂಬವರು ಗಾಯಗೊಂಡವರು. ಅವರು ಬೈಕ್ ನಲ್ಲಿ ಪುತ್ತೂರಿಗೆ ಬರುತ್ತಿದ್ದ ವೇಳೆ ವಿರುದ್ದ

ಪುತ್ತೂರು: ಅರಿಯಡ್ಕ ಗ್ರಾ. ಪಂ ಉಪಚುನಾವಣೆ – ಬಿಜೆಪಿ ಬೆಂಬಲಿತ ಹರೀಶ್ ಎ.ಕೆ ಮಾಡೂರು ನಾಮಪತ್ರ ಸಲ್ಲಿಕೆ

ಪುತ್ತೂರು : ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮ ಪಂಚಾಯತ್ ನ ಮಾಡೂರು 2 ನೇ ವಾರ್ಡ್ ನಲ್ಲಿ ಪ.ಜಾತಿಗೆ ಮೀಸಲಿರಿಸಿದ ಸ್ಥಾನದಿಂದ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದ ಶಂಕರ ಮಾಡಂದೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ನ.11ರಂದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಹರೀಶ್ ಎ.ಕೆ ಮಾಡ್ಯೂರು ನಾಮಪತ್ರ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಉಪಾಧ್ಯಕ್ಷ ಪ್ರಸನ್ನ ಮಾರ್ತಾ, ಜಿಲ್ಲಾ

ಪುತ್ತೂರು: ರೈ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಕೊಡೆ ವಿತರಣೆ

ಪುತ್ತೂರು: ಸಮಾಜದಲ್ಲಿ ನೊಂದವರ ಮತ್ತು ಬಡವರ ಸೇವೆಯೇ ನಮ್ಮ ಟ್ರಸ್ಟ್ ನ ಮೂಲ ಧ್ಯೇಯವಾಗಿದೆ ಎಂದು ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು. ಅವರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಅರ್ಕ ಸ.ಹಿ .ಪ್ರಾ . ಶಾಲೆ ಯ ವಿದ್ಯಾರ್ಥಿ ಗಳಿಗೆ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಾದ ಇಬ್ರಾಹಿಂ , ಖಾದರ್ ಕಲ್ಲಂದಡ್ಕ ಮತ್ತು ಬಾಲಕೃಷ್ಣ ಇವರು ಕೊಡೆಗಳನ್ನು ಕೊಡುಗೆಯಾಗಿ

ಪುತ್ತೂರು : ಮಾರ್ಚ್ 3ರಂದು ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ಆರಂಭ-2024 ಕಾರ್ಯಕ್ರಮ

ಪುತ್ತೂರಿನ ಎವಿಜಿ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ನ ಘಟಕವಾಗಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ಆರಂಭ-೨೦೨೪ ಕಾರ್ಯಕ್ರಮವು ಮಾರ್ಚ್ 3ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿದೆ.ಎವಿಜಿ ಆಂಗ್ಲಮಾಧ್ಯಮ ಶಾಲೆ ಬನ್ನೂರಿನ ಅಧ್ಯಕ್ಷರಾಗಿರುವ ವೆಂಕಟ್ರಮಣ ಗೌಡ ಕಳುವಾಜೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಒಉತ್ತೂರು ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕರಾದ ಸುಬ್ರಹ್ಮಣ್ಯ ನಟ್ಟೋಜ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.ಸುಳ್ಯ

ಚುನಾವಣಾ ಆಯೋಗದ ನಿಯಮ ಮೀರಿದ್ದಲ್ಲಿ ಕಟ್ಟುನಿಟ್ಟಿನ ಕ್ರಮ : ಜುಬಿನ್

ಪುತ್ತೂರು: ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಪ್ರತೀ ಮತಗಟ್ಟೆಯ ಹೊರಗೆ ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ತಮ್ಮದೇ ಆದ ಬೂತ್ ತೆರೆಯಲು ಅವಕಾಶವಿದ್ದರೂ ಇದಕ್ಕೆ ಕಟ್ಟುನಿಟ್ಟಿನ ನಿಯಮಗಳು ಅನ್ವಯವಾಗುತ್ತವೆ ಎಂದು ಪುತ್ತೂರು ಸಹಾಯಕ ಆಯುಕ್ತರೂ, ಸಹಾಯಕ ಚುನಾವಣಾ ಅಧಿಕಾರಿಗಳೂ ಆಗಿರುವ ಜುಬಿನ್ ಮೊಹಾಪಾತ್ರ ಹೇಳಿದರು. ಈ ಬಗ್ಗೆ ಮಾಹಿತಿ ನೀಡಿದ ಅವರು, ಮತಗಟ್ಟೆಯ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ

ಮಾನವೀಯತೆ ಮೆರೆದ ಬೆಳ್ಳಾರೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸತೀಶ್

ಸುಳ್ಯ: ಬೆಳ್ಳಾರೆ ದಿನಾಂಕ 08-04-2024 ರಂದು ಬೆಳ್ಳಾರೆ ಪೋಲಿಸ್ ( ಹೆಡ್ ಕಾನ್ಸ್ಟೇಬಲ್ ) ಸತೀಶ್ ಪುತ್ತೂರು- ಸ್ಟೇಟ್ ಬ್ಯಾಂಕ್ ಬಸ್ಸಿನಲ್ಲಿ ಬಿದ್ದು ಸಿಕ್ಕಿದ 10.000/ ನಗದು ಹಾಗೂ ದಾಖಲೆಗಳನ್ನು ಒಳಗೊಂಡ ಪ್ಲಾಸ್ಟಿಕ್ ಲಕೋಟೆಯನ್ನು ಅದರ ವಾರಾಸುದಾರ ರುಕ್ಮಯ್ಯ ಗೌಡ ಪೈಚಾರುರವರ ಮೊಬೈಲ್ ನಂ. ಸಂಗ್ರಹಿಸಿ ಠಾಣೆಗೆ ಕರೆಸಿ ಈ ದಿನ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ. ಇವರ ಈ ಕಾರ್ಯಕ್ಕೆ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಸುಳ್ಯ: ವಿದ್ಯಾಮಾತಾ ಅಕಾಡೆಮಿಯ ಮುಕುಟಕ್ಕೆ ಮತ್ತೊಂದು ರಾಜ್ಯ ಪ್ರಶಸ್ತಿಯ ಗರಿ

ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯತೆಗಳ ತರಬೇತಿಗಳ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಗೆ 2024ರ ಸಾಲಿನ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವತಿಯಿಂದ ಕೊಡಲ್ಪಡುವ “ರಾಜ್ಯ ಯುವ ಸಾಂಘಿಕ” ಪ್ರಶಸ್ತಿಯು ಲಭಿಸಿದೆ. ಸವಣೂರಿನಲ್ಲಿ ನಡೆಯುತ್ತಿರುವ ಯುವಜನ ಮೇಳದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್

ಪುತ್ತೂರು: ಸರ್ಕಾರಿ ಆಸ್ಪತ್ರೆಯಲ್ಲಿ ಶಾರ್ಟ್‌ಸಕ್ಯೂಟ್ ಅವಘಡ

ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಐಸಿಯುವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22ರ ತಡ ರಾತ್ರಿ ನಡೆದಿದ್ದು ಅದೃಷ್ಟವಶಾತ್ ಹೆಚ್ಚಿನ ಅನಾಹುತವೊಂದು ತಪ್ಪಿದೆ. ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ದಟ್ಟ ಹೊಗೆ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಭದ್ರತಾ ಸಿಬ್ಬಂದಿಗಳು ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರಿಂದ ರೋಗಿಗಳು ಅಪಾಯದಿಂದ

ಪುತ್ತೂರು: ಕ್ರೀಡಾಕೂಟದಲ್ಲಿ ಸಾಧನೆ ಮಾಡುವಲ್ಲಿ ವಿಫಲ: ವಿದ್ಯಾರ್ಥಿನಿ ಆತ್ಮಹತ್ಯೆ

ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡುವಲ್ಲಿ ವಿಫಲವಾದ ಬೇಸರದಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ, ಪುತ್ತೂರಿನ ಖಾಸಗಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶಾ(17) ಮೃತಪಟ್ಟವರು. ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ರೇಸ್‌ನಲ್ಲಿ