Home Posts tagged #puttur (Page 13)

ಪುತ್ತೂರು: ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಕೃಷ್ಣ ನಗರದ ಅಲುಂಬುಡ ಎಂಬಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರಾಗಿರುವ ಶ್ರೀಯುತ ಹರಿಪ್ರಸಾದ್ ಪಿಕೆ ರವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಯೋಗದಿಂದ ನಮ್ಮ ಶಾರೀರಿಕ ಹಾಗೂ ಮಾನಸಿಕ

ಪುತ್ತೂರು: ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಯೋಗದಿನಾಚರಣೆ

ಲಿಟ್ಲ್ ಫ್ಲವರ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿ ವಿಶ್ವ ಯೋಗದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ನಂತರ ಮಾತನಾಡಿದ ಅವರು ” ಭಾರತೀಯ ವೈದ್ಯ ಪದ್ಧತಿಯಲ್ಲಿ ಆಯುರ್ವೇದಕ್ಕೆ ಮಹತ್ವದ ಸ್ಥಾನವಿದೆ.ಯೋಗದಿಂದ ದೈಹಿಕ ಮತ್ತು ಮಾನಸಿಕ ಸಮತೋಲನ ಸಾಧ್ಯವಿದ್ದು, ಯೋಗ ಇದ್ದರೆ ರೋಗವಿಲ್ಲ, ಯೋಗ ದಿನ ನಿತ್ಯದ ಭಾಗವಾಗಲಿ ” ಎಂದರು. ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ವಿಲ್ಮಾ

ಉಡುಪಿಯ ಪುತ್ತೂರಿನಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಬಂಧನ

ಅಭಿ, ಪ್ರವೀಣ್ ಕಟಪಾಡಿ, ದೇಶರಾಜ್ ಎಂಬುವರೇ ಬಂಧಿತ ಅರೋಪಿಗಳು. ಉಡುಪಿಯ ಪುತ್ತೂರಿನಲ್ಲಿ ಜೂನ್ 15 ರ ರಾತ್ರಿ ಈ ಘಟನೆ ನಡೆದಿತ್ತು. ಶಬರಿ ಎಂಬಾತನಿಗೆ ಸೆಲೂನ್ ನೌಕರ ಚರಣ್ ಬೈದಿದ್ದ. ಇದೇ ವಿಚಾರವಾಗಿ ಮಾತುಕತೆಗೆ ಕರೆದು ಕೊಲೆ ಯತ್ನ ನಡೆಸಲಾಗಿತ್ತು. ಉಡುಪಿ ನಗರದ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಕರೆದಿದ್ದ ಪ್ರವೀಣ್ ಮತ್ತು ತಂಡ ಚರಣ್‌ನನ್ನು ಕೊಲೆ ಮಾಡುವ ಉದ್ದೇಶದಿಂದ ತಲವಾರು ಬೀಸಿದ್ದರು. ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಸಂಗಡಿಗರು ಬೈಕ್ ಬಿಟ್ಟು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಬ್ರಿಜೇಶ್ ಚೌಟ ಭೇಟಿ

ಪುತ್ತೂರು: ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಲಿಸ್ಟ್ ಮಾಡಿ ಯಾವ್ಯಾವ ಹಂತದಲ್ಲಿದೆ, ಕಾನೂನು ತೊಡಕುಗಳು ಎಲ್ಲವನ್ನೂ

ಪುತ್ತೂರು: ಕಳೆದುಹೋಗಿದ್ದ ಚಿನ್ನದ ಸರ ವಾರಸುದಾರರಿಗೆ ಹಸ್ತಾಂತರ

ಪುತ್ತೂರು ತಾಲೂಕು ಕುಂಬ್ರ ನಿವಾಸಿ ವಿದ್ಯಾ ರೈ ಎಂಬವರ ಸುಮಾರು 27 ಗ್ರಾಂ ತೂಕದ ಚಿನ್ನದ ಸರ ಪುತ್ತೂರು ಗಾಂಧಿ ಕಟ್ಟೆ ಬಳಿ ಕಳೆದುಕೊಂಡಿದ್ದರು. ಈ ಬಂಗಾರದ ಸರ ಕೊಡಿಪಾಡಿ ನಿವಾಸಿ ದಿನೇಶ್ ಭವನ ಲಾಡ್ಜ್ ನೌಕರರಿಗೆ ಸಿಕ್ಕಿದ್ದು ಅದನ್ನು ಪ್ರಾಮಾಣಿಕತೆಯಿಂದ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದು ಬಳಿಕ ವಿದ್ಯಾ ರೈ ಅವರನ್ನು ಠಾಣೆಗೆ ಕರೆಯಿಸಿ ಅವರಿಗೆ ಹಸ್ತಾಂತರಿಸಿದ್ದಾರೆ.

ಪುತ್ತೂರು: ಶಾಂತಿಗೋಡಿನ ಪಂಜಿಗ ತೋಟಕ್ಕೆ ನುಗ್ಗಿದ ಕಾಡಾನೆ ಅಪಾರ ಪ್ರಮಾಣದ ಕೃಷಿಗೆ ಹಾನಿ

ಪುತ್ತೂರು: ಕಳೆದ ಎರಡು ದಿನಗಳಿಂದ ಬೆಳ್ಳಿಪ್ಪಾಡಿ ಗ್ರಾಮ ಮತ್ತು ಶಾಂತಿಗೋಡು ಗ್ರಾಮದ ನಡುವೆ ಸುತ್ತಾಡುತ್ತಿರುವ ಕಾಡಾನೆಗಳೆರಡು ಇದೀಗ ಶಾಂತಿಗೋಡು / ಚಿಕ್ಕಮುಡ್ನೂರು ಗ್ರಾಮದ ನಡುವೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಂತಿಗೋಡು ಗ್ರಾಮದ ಪಂಜಿಗದಲ್ಲಿ ಆನೆ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಬೆಳ್ಳಿಪ್ಪಾಡಿ ಕೊಡಿಮರದಿಂದ ಹೊಳೆ ದಾಟಿದ ಆನೆ ಅಲ್ಲಿಂದ ಬೆದ್ರಾಳ ತೋಡು ಮೂಲಕ ಚಿಕ್ಕಮುಡ್ನೂರು ಗ್ರಾಮದ ಧನ್ಯ ಕುಮಾರ್ ಜೈನ್ ಎಣಿಮೊಗರು ಅವರ ತೋಟದಲ್ಲಿ ಹೋಗಿದೆ.

ಪುತ್ತೂರು: ಕಾಡಾನೆ ಹಾವಳಿ – ಸ್ಥಳಿಯರಲ್ಲಿ ಆತಂಕ

ಪುತ್ತೂರು : ಕಳೆದೊಂದು ವಾರದಿಂದ ಪಾಲ್ತಾಡಿ ಸವಣೂರು ಭಾಗದಲ್ಲಿ ಬೀಡು ಬಿಟ್ಟಿದ್ದ ಒಂಟಿ ಸಲಗ ಎರಡು ದಿನದ ಹಿಂದೆ ಶಾಂತಿಗೋಡು ಗ್ರಾಮದ ವೀರಮಂಗಲಕ್ಕೆ ದಾಂಗುಡಿ ಇಟ್ಟಿತ್ತು. ಆದರೇ ಇನ್ನಷ್ಟು ಉತ್ತರಾಭಿಮುಖವಾಗಿ ಚಲಿಸಿರುವ ಆನೆ ಮಂಗಳವಾರ ಬೆಳಿಗ್ಗೆ ಉಪ್ಪಿನಂಗಡಿ ಹೋಬಳಿ ಪ್ರವೇಶಿಸಿದೆ. ಜೂ 11 ರಂದು ನಸುಕಿನ ಜಾವ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಪ್ಪಾಡಿ ಬಳಿ ಬಾರ್ತೋಲಿ ಎಂಬ ತೋಟದಲ್ಲಿ ಕಾಣಿಸಿಕೊಂಡಿದೆ. ಕೆಲವು ತಿಂಗಳುಗಳ ಹಿಂದೆ ಕೊಳ್ತಿಗೆ ಗ್ರಾಮದ ಅರಣ್ಯ

ಜೂ. 3 ವಿಧಾನಪರಿಷತ್ ಚುನಾವಣೆ ಹಿನ್ನೆಲೆ: ಸೋಮವಾರದ ಸಂತೆ ರದ್ದುಮಾಡಿದ ಅಧಿಕಾರಿಗಳು: ಸಂತೆ ರದ್ದು ಇಲ್ಲ: ಶಾಸಕ ಅಶೋಕ್ ರೈ

ಪುತ್ತೂರು: ಜೂ. 3 ರಂದು ನಡೆಯುವ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ರದ್ದು ಮಾಡಿ ಅಧಿಕಾರಿಗಳು ಆದೇಶ ಮಾಡಿದ್ದು ಈ ಆದೇಶವನ್ನು ರದ್ದು ಮಾಡಿ ಸಂತೆ ಎಂದಿನಂತೆ ಅದೇ ಜಾಗದಲ್ಲಿ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ತಾಪಂ ಕಚೇರಿಯಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಯ ಹಿನ್ನೆಲೆಯಲ್ಲಿ ವಾರದ ಸಂತೆಯನ್ನು ರದ್ದು ಮಾಡಲಾಗಿತ್ತು. ಸಂತೆ ರದ್ದು ಮಾಡಿರುವ ಬಗ್ಗೆ

ಅಡಿಕೆ ಅಡಮಾನ ಯೋಜನೆಗೆ ಸಂಕಷ್ಟ, ಪುತ್ತೂರು ಎಪಿಎಂಸಿ ಆಡಳಿತ ಸುಧಾರಣೆಗೆ ತಕ್ಷಣ ಕ್ರಮ : ತಹಶೀಲ್ದಾರ್ ಕುಂಞ ಅಹಮ್ಮದ್ ಹೇಳಿಕೆ

ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ರೈತರಿಗೆ ನೀಡಲಾಗುವ ಅಡಕೆ ಅಡಮಾನ ಯೋಜನೆಗೆ ಪ್ರಸ್ತುತ ಕಂಟಕವೊಂದು ನಿರ್ಮಾಣವಾಗಿದೆ. ಪುತ್ತೂರು ಎಪಿಎಂಸಿಯಲ್ಲಿ ಆಡಳಿತ ಮಂಡಳಿ ಇಲ್ಲ. ಹಾಗಾಗಿ ಇಲ್ಲಿ ಅಧಿಕಾರಿಗಳ ಕಾರುಬಾರು. ಹಲವು ವರ್ಷಗಳಿಂದ ಪುತ್ತೂರು ಎಪಿಎಂಸಿಗೆ ಕಾರ್ಯದರ್ಶಿಯೇ ಇರಲಿಲ್ಲ. ಇದೀಗ ಹಲವು ಸಮಯದ ಹಿಂದೆ ಕಾರ್ಯದರ್ಶಿ ಹುದ್ದೆಗೆ ಖಾಯಂ ಅಧಿಕಾರಿಯೊಬ್ಬರು ಬಂದಿದ್ದಾರೆ. ಆದರೆ ಆಡಳಿತ ವ್ಯವಸ್ಥೆ ಇಲ್ಲದ ಕಾರಣ ಪುತ್ತೂರು ತಹಶೀಲ್ದಾರ್ ಕುಂಞ

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ:ಪ್ರತಾಪ ಸಿಂಹ ನಾಯಕ್ ವಿಶ್ವಾಸ

ಪುತ್ತೂರು: ರಾಜ್ಯ ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಜೂನ್ 3ರಂದು ನಡೆಯುವ ಚುನಾವಣೆಯಲ್ಲಿ ಎಲ್ಲ ಆರು ಸ್ಥಾನಗಳಲ್ಲೂ ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಗೆಲುವು ಸಾಧಿಸಲಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಬಂಡಾಯವಿದ್ದರೂ, ಬಿಜೆಪಿಯಂಥ ರಾಷ್ಟ್ರೀಯ ಪಕ್ಷದ ಸಂಘಟನಾ ಸಾಮರ್ಥ್ಯದ ಎದುರು ಬಂಡಾಯ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವೇ ಇಲ್ಲ ಎಂದು ಹಿರಿಯ ಬಿಜೆಪಿ ಮುಖಂಡರೂ, ವಿಧಾನ ಪರಿಷತ್ ಸದಸ್ಯರೂ ಆದ ಪ್ರತಾಪ ಸಿಂಹ ನಾಯಕ್ ಹೇಳಿದರು.