Home Posts tagged #puttur (Page 14)

ಪುತ್ತೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ – ಪ್ರತಾಪ ಸಿಂಹ ನಾಯಕ್ ವಿಶ್ವಾಸ

ಪುತ್ತೂರು: ರಾಜ್ಯ ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಜೂನ್ 3ರಂದು ನಡೆಯುವ ಚುನಾವಣೆಯಲ್ಲಿ ಎಲ್ಲ ಆರು ಸ್ಥಾನಗಳಲ್ಲೂ ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಗೆಲುವು ಸಾಧಿಸಲಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಬಂಡಾಯವಿದ್ದರೂ, ಬಿಜೆಪಿಯಂಥ ರಾಷ್ಟ್ರೀಯ ಪಕ್ಷದ ಸಂಘಟನಾ ಸಾಮರ್ಥ್ಯದ ಎದುರು ಬಂಡಾಯ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವೇ ಇಲ್ಲ ಎಂದು

ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಮಹಾಸಭೆ

ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರಕ್ಕೆ ಮುಂದಿನ ಎರಡು ವರ್ಷ ಅವಧಿಗೆ ನೂತನ ಅದ್ಯಕ್ಷ ಕಾರ್ಯದರ್ಶಿ ಕಾರ್ಯಕಾರಿ ಸಮೀತಿ ರಚಿಸಲಾಯಿತು. ಶಿಕ್ಷಣ ಸಂಪನ್ಮೂಲ ಒಕ್ಕೂಟದ ಪ್ರತಿನಿಧಿಯಾಗಿ ನಾರಾಯಣ ಕಿಲಂಗೊಡಿ ಆಗಮಿಸಿದ್ದರು. ಸಲಹಾ ಸಮೀತಿಗೆ ಕಸ್ತೂರಿ ಬೊಳುವಾರ್ ಮತ್ತು ನಯನಾ ರೈ, ಪತ್ರಕರ್ತ ಸಂಶುದ್ದೀನ್ ಸಂಪ್ಯ, ನೋಟರಿ ಸಾಹಿರಾ ಜುಬೈರ್ ಇವರನ್ನು ಆಯ್ಕೆ ಮಾಡಲಾಯಿತು. ನೂತನ ಅದ್ಯಕ್ಷರಾಗಿ ಮೊಹಮ್ಮದ್ ರಫೀಕ್ ದರ್ಬೆ, ಉಪಾದ್ಯಕ್ಷರಾಗಿ ರೋಹಿಣಿ ರಾಘವ,

ಮಂಗಳೂರು: ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ: ಸಲೀಂ ಅಹ್ಮದ್

ಶಿಕ್ಷಕರ ಮತ್ತು ಪದವೀಧಕರ ಕ್ಷೇತ್ರದ ಚುನಾವಣೆಯಲ್ಲಿ ಆರು ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ. ನಮ್ಮ ಅಭ್ಯರ್ಥಿಗಳಾದ ಅಯನೂರು ಮಂಜುನಾಥ್ ಮತ್ತು ಕೆಕೆ ಮಂಜುನಾಥ್ ಅವರು ಈ ಬಾರಿ ಗೆಲ್ಲಲಿದ್ದಾರೆ ಎಂದು ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಜೆಪಿಯಿಂದ ಅನೇಕ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಜನರಿಗೆ ನಮ್ಮ ಸರ್ಕಾರದ

ವಿಟ್ಲ: ವಿದೇಶದಲ್ಲಿರುವ ವ್ಯಕ್ತಿಯ ಮನೆಗೆ ನುಗ್ಗಿದ ಕಳ್ಳರು: ಸೊತ್ತುಗಳಿಗಾಗಿ ಸಾಕಷ್ಟು ಜಾಲಾಡಿದ ಕಳ್ಳರು

ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಪರ್ತಿಪ್ಪಾಡಿ ಮಸೀದಿ ದ್ವಾರದ ಮುಂಭಾಗದ ಮನೆಯಲ್ಲಿ ಕಳ್ಳರ ಕರಾಮತ್ತು ನಡೆದಿದೆ. ಮನೆ ಮಾಲೀಕ ವಿದೇಶದಲ್ಲಿದ್ದು, ಬೀಗ ಹಾಕಿದ ಮನೆಗೆ ನುಗ್ಗಿದ ಕಳ್ಳರು ಮನೆಯಿಡೀ ಜಾಲಾಡಿ ಡಿ.ವಿ.ಆರ್ ಹೊತ್ತೊಯ್ದ ಘಟನೆ ನಡೆದಿದೆ. ಮನೆ ಮಾಲಿಕ ಎಂ.ಕೆ.ಖಲೀಲ್ ಕುಟುಂಬ ಅರಬ್ ರಾಷ್ಟ್ರದ ಅಜ್ಮನ್ ನಲ್ಲಿದ್ದು ಆರು ತಿಂಗಳ ಹಿಂದಷ್ಟೇ ಬಂದು ಹೋಗಿದ್ದರು. ಭಾನುವಾರ ಬೆಳಗ್ಗೆ ಪಕ್ಕದ ಮನೆಯವರು ನೋಡಿದಾಗ ಮುಂಭಾಗದ ಬಾಗಿಲು ತೆರೆದಿರುವುದನ್ನು ಗಮನಿಸಿ

ಪುತ್ತೂರು : ವೈದ್ಯರ ಎಡವಟ್ಟಿನಿಂದ ವ್ಯಕ್ತಿ ಸಾವು

ಪುತ್ತೂರು : ವೈದ್ಯರ ಎಡವಟ್ಟಿಗೆ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ರಾತ್ರೋರಾತ್ರಿ ರೋಗಿಯ ಸಂಬಂಧಿಕರು ಮತ್ತು ಸಾರ್ವಜನಿಕರು ಆಸ್ಪತ್ರೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ ಎಂಬವರು ಜ್ವರದ ಕಾರಣ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಪರೀಕ್ಷಿಸಿದ ವೈದ್ಯರು ನಾಲಿಗೆಯ ಕೆಳ ಭಾಗದಲ್ಲಿ ಗೆಡ್ಡೆಯ ಬಗ್ಗೆ ಸೂಚನೆ ನೀಡಿದ್ದರು. ಬಳಿಕ ಗೆಡ್ಡೆಯನ್ನ

ಪುತ್ತೂರು ನಗರ ವ್ಯಾಪ್ತಿಯಲ್ಲಿ ಗಾಳಿಮಳೆ- ಮರ ಬಿದ್ದು ಮನೆಗೆ ಹಾನಿ

ಪುತ್ತೂರು: ಭಾನುವಾರ ಸಂಜೆ ಪುತ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ಬಾಗಶ: ಜಖಂಗೊಂಡಿದ್ದು, ಮನೆ ಮಂದಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಬಪ್ಪಳಿಗೆಯ ಸಿಂಗಾಣಿಯ ಕಮಲ ಎಂಬaವರ ಮನೆಯ ಮಾಡಿನ ಶೀಟು ಗಾಳಿಗೆ ಹಾರಿ ಹೋಗಿದ್ದು, ಉರ್ಲಾಂಡಿಯಲ್ಲಿ ಶೋಭಾ ಹೆಗ್ಡೆ ಎಂಬವರ ಮನೆಯ ಮೇಲೆ ಮರ ಬಿದ್ದು ಬಾಗಶ: ಜಖಂಗೊಂಡಿದೆ. ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಸುದ್ದಿ ತಿಳಿದು ತಕ್ಷಣ

ಧಾರವಾಡ: ವಾಹನ ಅಪಘಾತದಲ್ಲಿ ಶಿವಕುಮಾರ್ ಕೌಡಿಚ್ಚಾರ್ ಮೃತ್ಯು

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಕೌಡಿಚ್ಚಾರ್ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಉದ್ಯೋಗ ನಿಮಿತ್ತ ಧಾರವಾಡದಲ್ಲಿ ವಾಸ್ತವ್ಯ ಹೊಂದಿದ್ದರು ಎಂದು ಮಾಹಿತಿ ಲಭ್ಯವಾಗಿದೆ. ಮೃತ ಶರೀರ ದಾರವಾಡ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಕುಟುಂಬಸ್ಥರು ಈಗಾಗಲೇ ಧಾರವಾಡ ಕಡೆ ಪ್ರಯಾಣ ಬೆಳೆಸಿದ್ದಾರೆ.

ವಿಟ್ಲ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ. ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಪುತ್ತೂರು: ಮುಖ್ಯ ರಸ್ತೆಗೆ ಬಿದ್ದ ಮಾವಿನ ಮರ: ಸಾರ್ವಜನಿಕರು, ವಾಹನ ಚಾಲಕರು ಪಾರು

ಪುತ್ತೂರು: ಬೊಳುವಾರಿನಲ್ಲಿ ಮಾವಿನ ಮರವೊಂದು ರಸ್ತೆಗೆ ಬಿದ್ದು  ಸಾರ್ವಜನಿಕರು, ವಾಹನ ಚಾಲಕರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಘಟನಾ ಸ್ಥಳಕ್ಮೆ ಶಾಸಕರುಭೇಟಿ ನೀಡಿ ಪರಿಶೀಲನೆ ನಡೆಸಿದು, ಮರ ತೆರವು ಮಾಡುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಮಧ್ಯಮ ಗಾತ್ರದ ಮಾವಿನ ಮರ ರಸ್ತೆಗೆ ಮುರಿದು ಬಿದ್ದಿತ್ತು. ಸಾರ್ವಜನಿಕರು, ವಾಹನಗಳು ರಸ್ತೆಯಲ್ಲಿ ಸಂಚರಿಸುತಿದ್ದರೂ ಯಾವುದೇ ಅಪಾಯ ಉಂಟಾಗಿಲ್ಲ. ಮಾವಿನ ಮರ ಬಿದ್ದ ಸುದ್ದಿ ತಿಳಿದು ಸ್ಥಳಕ್ಕೆ ಬಂದ

ಪುತ್ತೂರು: ಅಪಾಯಕಾರಿ ತಿರುವು ತೆರವಿಗೆ ಶಾಸಕರ ಸೂಚನೆ

ಮಾಣಿ – ಮೈಸೂರು ರಾ.ಹೆದ್ದಾರಿ 275 ರ ಆರ್ಯಾಪು ಗ್ರಾಪಂ ವ್ಯಾಪ್ತಿಯ ಕಲ್ಲರ್ಪೆಯಲ್ಲಿ ಅಪಾಯಕಾರಿ ತಿರುವು ಇದ್ದು ಅದನ್ನು ಶಾಸಕರಾದ ಅಶೋಕ್ ರೈ ವೀಕ್ಷಣೆ ಮಾಡಿದರು. ಈ ತಿರುವಿನಲ್ಲಿ ಅನೇಕ ವಾಹನ ಅಫಘಾತಗಳು ನಡೆದಿದ್ದು ಮೂವರು ಮೃತಪಟ್ಟ ಘಟನೆಯೂ ನಡೆದಿತ್ತು. ಇಲ್ಲಿರುವ ಅಪಾಯಕಾರಿ ಧರೆಯನ್ನು ತೆರವು ಮಾಡಿ ವಾಹನ ಸಂಚಾರ ಗೋಚರಿಸುವಂತೆ ಮಾಡಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಶಾಸಕರಿಗೆ ಅನೇಕ ಮಂದಿ ಮನವಿಯನ್ನು ಮಾಡಿದ್ದರು. ಈ