Home Posts tagged #puttur (Page 24)

ಬಿ.ಕೆ ಸೇಸಪ್ಪ ಬೆದ್ರಕಾಡು ವಿರುದ್ಧ ಜಾಲತಾಣದಲ್ಲಿ ಅಪಪ್ರಚಾರ : ಕಾನೂನು ಹೋರಾಟ ಸಮರದ ಎಚ್ಚರಿಕೆ ನೀಡಿದ ದಸಂಸ

ಪುತ್ತೂರು; ದಲಿತ ಸಂಘಟನೆಯೊಂದರ ಮುಖಂಡರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುವುದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾ ದಲಿತ್ ಸೇವಾಸಮಿತಿ ಈ ಬಗ್ಗೆ ಕಾನೂನು ಸಮರ ನಡೆಸಲು ತೀರ್ಮಾನಿಸಿದ್ದು, ಕಾನೂನು ಹೋರಾಟಕ್ಕೆ ಬೆಲೆ ಸಿಗದಿದ್ದರೆ ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆ ನೀಡಿದೆ. ಪುತ್ತೂರು ಪತ್ರಿಕಾಭವನದಲ್ಲಿ

ಪುತ್ತೂರು : ದಿ. ಜಯರಾಮ ಗೌಡ ಪೆರ್ಲಂಪಾಡಿ ಅವರಿಗೆ ನುಡಿನಮನ

ಪುತ್ತೂರು ತಾಲೂಕಿನ ಕೊಳ್ತಿಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಪಾಲ್ತಾಡು ಶಾಖಾ ವ್ಯವಸ್ಥಾಪಕರಾದ ಜಯರಾಮ ಗೌಡ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ನುಡಿನಮನ ಕಾರ್ಯಕ್ರಮವು ಪೆರ್ಲಂಪಾಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಮಾಜಕ್ಕೆ ಸ್ಫೂರ್ತಿಯ ಚಿಲುಮೆಯಾಗಿದ್ದಂತಹ ಜಯರಾಮ ಗೌಡ ಅವರ ಅಗಲಿಕೆ ಇಡೀ ಕುಟುಂಬಕ್ಕೆ, ಬಂಧು ಮಿತ್ರರಿಗೆ ತುಂಬಲಾರದ ನಷ್ಟ. ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವು ಪೆರ್ಲಂಪಾಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಪುತ್ತೂರಿನಲ್ಲಿ ಡಿ.ಕೆ. ಶಿವಕುಮಾರ್ ಆಪ್ತನ ಮೇಲೆ ಅಟ್ಯಾಕ್

ಪುತ್ತೂರು : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಮಾರಣಾಂತಿಕ ಹಲ್ಲೆಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪ್ರದೀಪ್ ರೈ ಅವರು ಬೊಳುವಾರು ಆಸ್ಪತ್ರೆಯ ಬಳಿ ಕಾರನ್ನು ಪಾರ್ಕ್ ಮಾಡುತ್ತಿದ್ದ ವೇಳೆ ಡಸ್ಟರ್ ಕಾರಿನಲ್ಲಿ ಬಂದ ತಂಡವೊಂದು ಅವರಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲದೇ ಕೈಯಲ್ಲಿದ್ದ ಉಂಗುರ ಹಾಗೂ ಸುಮಾರು 9 ಸಾವಿರ

ಡ್ರಗ್ಸ್ ಜಾಗೃತಿಗಾಗಿ ಎಲ್ಲಾ ಇಲಾಖೆಗಳ ಸಹಯೋಗ ಅಗತ್ಯ : ಪುತ್ತೂರು ಎ.ಸಿ. ಗಿರೀಶ್ ನಂದನ್ ಹೇಳಿಕೆ

ಪುತ್ತೂರು: ಡ್ರಗ್ಸ್ ಚಟಗಳು ಯುವ ಸಮುದಾಯವನ್ನು ಹೆಚ್ಚಾಗಿ ಕಾಡುತ್ತಿದೆ. ಇಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ನಿರಂತರವಾಗಿ ಜಾಗೃತಿ ಕಾರ್ಯಕ್ರಮ ನಡೆಯಬೇಕು. ಡ್ರಗ್ಸ್ ಕುರಿತ ಜನ ಜಾಗೃತಿಗಾಗಿ ಎಲ್ಲಾ ಇಲಾಖೆಗಳ ಸಹಯೋಗ ಅಗತ್ಯವಾಗಿದೆ ಎಂದು ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಗಿರೀಶ್ ನಂದನ್ ತಿಳಿಸಿದರು. ಅವರು ಮಂಗಳವಾರ ಪುತ್ತೂರು ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ವಸ್ತುಗಳ ದುರುಪಯೋಗ

ಪುತ್ತೂರು : ನಕಲಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲ ಪತ್ತೆ

ಪುತ್ತೂರು: ಗ್ರಾಮ ಪಂಚಾಯಿತಿ ಹಾಗೂ ನಗರ ಸಭೆಯ ನಕಲಿ ಸೀಲು ಹಾಗೂ ಸಹಿ ಬಳಸಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲವನ್ನು ಸಾರ್ವಜನಿಕರ ದೂರಿನ ಮೇರೆಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಪತ್ತೆ ಹಚ್ಚಿದ್ದಾರೆ. ಕೊಡಿಪ್ಪಾಡಿ ನಿವಾಸಿ ವಿಶ್ವನಾಥ ದಂಧೆ ನಡೆಸುತ್ತಿದ್ದ ವ್ಯಕ್ತಿ. ನಗರ ಸಭೆ ನಿರಾಕ್ಷೇಪಣಾ ಪತ್ರ, ತೆರಿಗೆ ರಶೀದಿ, ಪುತ್ತೂರು ಎಲ್ಲಾ ಪಂಚಾಯಿತಿ ಕಡಬ, ಸುಳ್ಯ, ಬಂಟ್ವಾಳ ತಾಲೂಕಿನ ಕೆಲವು ಗ್ರಾಮ ಪಂಚಾಯಿತಿಗಳ ನಕಲಿ ದಾಖಲೆಗಳನ್ನು

ಉಚಿತ ಯೋಜನೆಗಳಿಂದ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ : ಪುತ್ತೂರಿನಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಪುತ್ತೂರು: ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದಿಂದ ಖಾಸಗಿ ವಾಹನ ಚಾಲಕ-ಮಾಲಕರಿಗೆ, ವಿದ್ಯಾರ್ಥಿಗಳಿಗೆ, ಕಾರ್ಮಿಕರಿಗೆ ಕಷ್ಟ-ನಷ್ಟ ಹಾಗೂ ಉಚಿತ ಯೋಜನೆಗಳಿಂದ ಆಹಾರ ವಸ್ತುಗಳಿಗೆ ಮತ್ತು ಇತರ ವಸ್ತುಗಳಿಗೆ ಬೆಲೆ ಏರಿಕೆಯಿಂದ ಜನ ಸಮಾನ್ಯರಿಗೆ ಉಂಟಾಗುವ ತೊಂದರೆಯನ್ನು ವಿರೋಧಿಸಿ ಕರ್ನಾಟಕ ಕಾರ್ಮಿಕ ಸಂಘಗಳ ಒಕ್ಕೂಟ ಅನುರಾಗ ವಠಾರ ಇದರ ಆಶ್ರಯದಲ್ಲಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಕರ್ನಾಟಕ ಕಾರ್ಮಿಕ ಸಂಘಗಳ

ಯುವ ವಾಹಿನಿ ಪುತ್ತೂರು ಘಟಕದಿಂದ ಬಿಲ್ಲವ ವಧು-ವರಾನ್ವೇಷಣೆ-2023

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ (ರಿ) ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬಿಲ್ಲವ ವಧು ವರಾನ್ವೇಷಣೆ-೨೦೨೩  ಪುತ್ತೂರಿನ ಬಪ್ಪಳಿಗೆಯ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ ಉದ್ಘಾಟಿಸಿದರು. ಮದುವೆಯಾಗುವ ಯುವಕ ಯುವತಿಯರಿಗೆ ವೇದಿಕೆಯನ್ನು ಕಲ್ಪಿಸುವ ಕೆಲಸವನ್ನು ಯುವವಾಹಿನಿ ಘಟಕ ಮಾಡುತ್ತಿದೆ. ಈ

ಪುತ್ತೂರು : ನೋಡು ನೋಡುತ್ತಿದ್ದಂತೆ ಪಾತಾಳಕ್ಕೆ ಕುಸಿದ ಬಾವಿ

ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಪುತ್ತೂರಿನಲ್ಲಿ ಭಾರೀ ಭೂಕುಸಿತ ಉಂಟಾದ ಘಟನೆ ನಡೆದಿದೆ. ಮನೆ ಮಂದಿ ನೋಡು ನೋಡುತ್ತಿದ್ದಂತೆ ಪಾತಾಳಕ್ಕೆ ಬಾವಿ ಕುಸಿದಿದ್ದು, ಪುತ್ತೂರು ನಗರಸಭಾ ವ್ಯಾಪ್ತಿಯ ಬಪ್ಪಳಿಕೆ ಎಂಬಲ್ಲಿ ಘಟನೆ ನಡೆದಿದೆ. ಬಾವಿ ಕುಸಿದ ಹಿನ್ನಲೆಯಲ್ಲಿ ಹೊಸ ಮನೆಯೂ ಕುಸಿಯುವ ಅಪಾಯದಲ್ಲಿದೆ. ಬಪ್ಪಳಿಕೆ ನಿವಾಸಿ ಸುಶೀಲ ಎಂಬವರಿಗೆ ಸೇರಿದ ಮನೆಯಾಗಿದ್ದು, ಭೂ ಕುಸಿತದಿಂದಾಗಿ ಪರಿಸರದ ಜನ ಆತಂಕದಲ್ಲಿದ್ದಾರೆ. ಅಗ್ನಿಶಾಮಕ ದಳ ದವರು ಮನೆ ಮಂದಿಯನ್ನು

ಮಣಿಪುರ ಗಲಭೆ ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲ : ಪುತ್ತೂರು ಕ್ರಿಶ್ಚಿಯನ್ ಕಮ್ಯುನಿಟಿ ಅಧ್ಯಕ್ಷ ಮೌರೀಸ್ ಮಸ್ಕರೇನಸ್ ಹೇಳಿಕೆ

ಮಣಿಪುರ ರಾಜ್ಯದಲ್ಲಿ ಕಳೆದ ಎರಡು ತಿಂಗಳಿನಿಂದ ಗಲಭೆ ನಡೆಯುತ್ತಿದ್ದು, 100 ಕ್ಕೂ ಮಿಕ್ಕಿದ ಜನ ಸಾವನ್ನಪ್ಪಿದ್ದು, ಗಲಭೆಯನ್ನು ತಡೆಯುವಲ್ಲಿ ಕೇಂದ್ರ ಮತ್ತು ಅಲ್ಲಿನ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಪುತ್ತೂರು ಕ್ರಿಶ್ಚಿಯನ್ ಕಮ್ಯುನಿಟಿ ಅಧ್ಯಕ್ಷ ಮೌರೀಸ್ ಮಸ್ಕರೇನಸ್ ಹೇಳಿದರು. ಪುತ್ತೂರು ಪ್ರೆಸ್‍ಕ್ಲಬ್ ನಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಣಿಪುರದಲ್ಲಿ ಮಿಥೈ ಮತ್ತು ಕುಕ್ಕೀ ಜನಾಂಗಗಳ ಮಧ್ಯೆ ನಿರಂತರ ಗಲಭೆ

ಪುತ್ತೂರಿನ ಚೆಳ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆ : ಸಂಚಾರ ನಿಷೇಧ

ಪುತ್ತೂರು: ಕರಾವಳಿಯಾದ್ಯಂತ ಭಾರೀ ಮಳೆಯಾಗಿದ್ದು, ಪುತ್ತೂರಿನಲ್ಲಿ ಸುರಿದ ಮಳೆಗೆ ಚೆಳ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಪುತ್ತೂರು- ಪಾಣಾಜೆ- ಪೆರ್ಲ ಸಂಪರ್ಕಿಸುವ ರಸ್ತೆ ಚೆಳ್ಯಡ್ಕ ಎಂಬಲ್ಲಿ ಈ ಸೇತುವೆಯಿದ್ದು, ಮಳೆಗಾಲ ಸಂದರ್ಭದಲ್ಲಿ ಹೆಚ್ಚಿನ ಸಮಯ ಈ ಸೇತುವೆ ಮುಳುಗಡೆಯಾಗುತ್ತಿದ್ದು, ಈ ಬಾರಿಯ ಮಳೆಗೆ ಮೊದಲ ಬಾರಿಗೆ ಈ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾದ ಹಿನ್ನಲೆಯಲ್ಲಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಶೇಧಿಸಲಾಗಿದ್ದು, ಆ ಭಾಗದ