Home Posts tagged #puttur (Page 24)

ಪುತ್ತೂರಿನ ಪರ್ಲಡ್ಕ ಶಾಲೆಯಲ್ಲಿ ಕಲಿಕಾ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ

ಪುತ್ತೂರು:ರಾಜ್ಯಾದ್ಯಂತ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ನಡೆಯುವ ಮಕ್ಕಳ ಕಲಿಕಾ ಹಬ್ಬ ಪುತ್ತೂರಿನ ಪರ್ಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಪರ್ಲಡ್ಕ ಹಿರಿಯ ಪ್ರಾಥಮಿಕ ಶಾಲಾ ಸಂಯುಕ್ತ

ಅಶೋಕ್ ಕುಮಾರ್ ರೈ ಬಿಜೆಪಿಯ ಸಕ್ರೀಯ ಸದಸ್ಯತ್ವ ನವೀಕರಿಸಿಲ್ಲ: ಬಿಜೆಪಿ ಮಂಡಲದ ಹೇಳಿಕೆ

ಪುತ್ತೂರು: ಬಿಜೆಪಿ ಪಕ್ಷವು ಸಿದ್ದಾಂತದ ಮೇಲೆ ನಿಂತಿದೆ. ಅದನ್ನು ನಂಬಿಕೊಂಡು ಕಾರ್ಯಕರ್ತರು ಕೆಲಸ ಮಾಡುತ್ತಾರೆ. ಸಿದ್ಧಾಂತವನ್ನು ಒಪ್ಪಿಕೊಂಡು ಯಾವ ಕಾಲಕ್ಕೂ ಚುನಾವಣೆ ಬರಲಿ ಅಲ್ಲಿ ಸೋಲು ಗೆಲುವು ಮುಖ್ಯವಾಗುವುದಿಲ್ಲ. ಯಾಕೆಂದರೆ ಇಲ್ಲಿ ದೇಶದ ಬಗ್ಗೆ ಚಿಂತನೆ ಇದೆ. ಬೇರೆ ಪಕ್ಷದಲ್ಲಿ ಬಿಜೆಪಿಯನ್ನು ಸೋಲಿಸುವ ಚಿಂತನೆ ಇದೆ. ಹಾಗಾಗಿ ಕಳೆದ 6 ವರ್ಷಗಳಿಂದ ಬಿಜೆಪಿಯ ಸಕ್ರೀಯ ಸದಸ್ಯತ್ವವಲ್ಲದ ಅಶೋಕ್ ಕುಮಾರ್ ರೈ ಅವರು ಬೇರೆ ಪಕ್ಷಕ್ಕೆ ಸೇರ್ಪಡೆಗೊಂಡರೂ ನಮ್ಮ

ಉಪ್ಪಿನಂಗಡಿ : ಟಯರ್ ರಿಸೋಲ್ ಸಂಸ್ಥೆಯಲ್ಲಿ ಬೆಂಕಿ, ಕಾರ್ಮಿಕ ಮೃತ್ಯು

ಪುತ್ತೂರು ತಾಲೂಕಿನ ಉಪ್ಪಿನಂಗಡಿ ಟಯರ್ ರಿಸೋಲ್ ಸಂಸ್ಥೆಯೊಂದರಲ್ಲಿ ಏರ್ ಕಂಪ್ರೈಸರ್ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿಯಲ್ಲಿ ಮಧ್ಯಾಹ್ನದ ವೇಳೆಗೆ ನಡೆದಿದೆ. ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ

ಪುತ್ತೂರು : ಯುವತಿಗೆ ಚೂರಿ ಇರಿದು ಕೊಲೆ ಪ್ರಕರಣ, ಆರೋಪಿ ಉಮೇಶ್ ಎಂಬಾತನ ಬಂಧನ

ಪುತ್ತೂರು: ಪುತ್ತೂರು ತಾಲೂಕಿನ ಮುಂಡೂರಿನ ಕಂಪ ಎಂಬಲ್ಲಿ 23ರ ಹರೆಯದ ಯುವತಿಯನ್ನು ಮನೆಯ ಅಂಗಳದಲ್ಲಿ ಚೂರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೆÇಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕನಕಮಜಲಿನ ಅಂಗಾರ ಎಂಬವರ ಪುತ್ರ ಉಮೇಶ್ ಎಂದು ಗುರುತಿಸಲಾಗಿದೆ. ಉಮೇಶ್ ಜಯಶ್ರೀಯನ್ನು ಪ್ರೀತಿಸುತ್ತಿದ್ದು, ಬಿ.ಎಸ್.ಸಿ ಪದವೀಧರೆಯಾದ ಜಯಶ್ರೀ ಇತ್ತೀಚೆಗೆ ಅವನ ಗುಣ ನಡತೆ ಇಷ್ಟವಾಗದ ಕಾರಣ 2022ರ ನವೆಂಬರ್ ವೇಳೆಗೆ ಉಮೇಶನನ್ನು ದೂರ

ಹಾಡು ಹಗಲೆ ಅಪರಿಚಿತ ವ್ಯಕ್ತಿಯಿಂದ ಯುವತಿಗೆ ಚೂರಿ ಇರಿತ

ಪುತ್ತೂರು: ಪುತ್ತೂರು ತಾಲ್ಲೂಕು ಮುಂಡೂರು ಗ್ರಾಮದ ಕಂಪ ಸಮೀಪ ಯುವತಿಗೆ ವ್ಯಕ್ತಿಯೊಬ್ಬರು ಹೊಟ್ಟೆಗೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಇಂದು ಮನೆಯಂಗಳದಲ್ಲೇ ನಡೆದಿದ್ದು ಗಿರಿಜಾ ಎಂಬವರ ಪುತ್ರಿ ಜಯಶ್ರೀ(23ವರ್ಷ) ಮೃತಪಟ್ಟವರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಪೆÇಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಇವಳು ಮನೆಯಲ್ಲಿ ಅಡುಗೆ ಕೆಲಸ ಮಾಡಿಕೊಳ್ಳುತ್ತಿದ್ದಳು.ತಾಯಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದು ಇವಳು ಬೊಬ್ಬೆ

ಭಜಕರ ಹಾಗೂ ಹಿಂದೂ ಸಂಘಟನೆಗಳ ನಿಂದನೆ ಆರೋಪ, ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅಮಾನತು

ಭಜಕರ ಹಾಗೂ ಹಿಂದೂ ಸಂಘಟನೆಗಳ ನಿಂದನೆ ಹಾಗೂ ಗ್ರಾಮ ಸಭೆಯಲ್ಲಿ ಉಡಾಫೆ ಉತ್ತರ ಆರೋಪ – ಪುತ್ತೂರು ಶಾಸಕ ಸಂಜೀವ ಮಠಂದೂರು ಶಿಫಾರಸ್ಸಿನ ಮೆರೆಗೆ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅಮಾನತು. ಗ್ರಾಮ ಸಭೆಯಲ್ಲಿ ಉಡಾಫೆ ಉತ್ತರ, ಸಾಮಾಜಿಕ ಜಾಲತಾಣದಲ್ಲಿ ಭಜಕರ ನಿಂದನೆ ಹಾಗೂ ಹಿಂದೂ ಸಂಘಟನೆಯನ್ನು ಗುರಿಯಾಗಿಸಿ ಪೋಸ್ಟ್ ಹಾಕುತ್ತಿದ್ದ ಆರೋಪ ಎದುರಿಸುತಿದ್ದ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಶಿಫಾರಸ್ಸಿನ ಮೆರೆಗೆ

ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ನೂತನ ಠಾಣಾ ಕಟ್ಟಡ ನಿರ್ಮಾಣಕ್ಕೆ ಸಚಿವ ಎಸ್. ಅಂಗಾರರಿಂದ ಶಂಕುಸ್ಥಾಪನೆ

ಕಡಬ : ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ನೂತನ ಠಾಣಾ ಕಟ್ಟಡ ನಿರ್ಮಾಣಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಶಂಕುಸ್ಥಾಪನೆ ನೆರವೇರಿಸಿದರು. ಕರ್ನಾಟಕ ರಾಜ್ಯ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯ 1.20 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶಿ ಭಗವಾನ್ ಸೋಣವಾಣೆ, ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ್, ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಎಸೈ ಮಂಜುನಾಥ್,

ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ : ಆಚಾರ್ಯ ನಾಗಾರ್ಜುನ ವಿವಿ, ಕೇರಳ ಪ್ರೀ ಕ್ವಾರ್ಟರ್ ಫೈನಲ್‍ಗೆ

ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುತ್ತಿರುವ ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಕೇರಳ ವಿವಿ, ತಮಿಳುನಾಡು ಚಿದಂಬರಂನ ಅಣ್ಣಾಮಲೈ ವಿವಿ ಮತ್ತು ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿವಿ ತಂಡಗಳು ಫ್ರಿ ಕ್ವಾರ್ಟರ್ ಫೈನಲ್‍ಗೆ ಪ್ರವೇಶಿಸಿವೆ. ಚೆನ್ನೈನ ಅಣ್ಣಾ ವಿವಿ, ತಮಿಳುನಾಡು ತಿರುಚಿನಾಪಳ್ಳಿಯ ಭಾರತಿದಾಸನ್ ವಿವಿ,

ಪುತ್ತೂರಿಗೆ ಸಮಗ್ರ ಕುಡಿಯುವ ನೀರು ಪೂರೈಕೆ : ನಗರಸಭೆಯ ಪರಿಶೀಲನಾ ಸಭೆಯಲ್ಲಿ ತೀವ್ರ ಟೀಕೆ

ಪುತ್ತೂರು: ಪುತ್ತೂರಿಗೆ ಸಮಗ್ರ ಕುಡಿಯುವ ನೀರು ಪೂರೈಕೆ ಮಾಡಲು ಸುಮಾರು 117 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ಜಲಸಿರಿ ಯೋಜನೆಯ ಕಾಮಗಾರಿಯಲ್ಲಿ ಹೆಜ್ಜೆ ಹೆಜ್ಜೆಗೂ ಸಾರ್ವಜನಿಕರಿಗೆ ಕಿರಿಕಿರಿ ಆಗುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು, ಕಾಮಗಾರಿ ಅನುಷ್ಠಾನದಲ್ಲಿ ವ್ಯಾಪಕ ಅಸಮರ್ಪಕತೆ ತೋರುತ್ತಿರುವ ಅಂಶಗಳು ಬಯಲಾಗಿವೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆಯಲ್ಲಿ ಶುಕ್ರವಾರ ನಗರಸಭೆಯಲ್ಲಿ ನಡೆದ ಜಲಸಿರಿ ಯೋಜನೆಯ ಪರಿಶೀಲನಾ ಸಭೆಯಲ್ಲಿ ಈ ಅಂಶ ತೀವ್ರ

ಬೆಂಗಳೂರಿನಲ್ಲಿ ಸರ್ಕಾರದ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿಯಾಗಿದೆ : ಕೆಪಿಸಿಸಿ ವಕ್ತಾರ ಅಮಲಾ ರಾಮಚಂದ್ರ

ಪುತ್ತೂರು: ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಾಮಗಾರಿಗಳು ಕುಸಿತವಾಗುತ್ತಿದೆ. ಬೆಂಗಳೂರಿನಲ್ಲಿ ಸರ್ಕಾರದ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿಯಾಗಿದೆ. ರಸ್ತೆಯಲ್ಲಿ ಸಂಚರಿಸುವ ಸಮಯ ಎಲ್ಲಿ ಕುಸಿಯುತ್ತದೆ, ಮೇಲ್ಸೇತುವೆ ಎಲ್ಲಿ ತಲೆಗೆ ಬೀಳುತ್ತದೆ ಎಂದು ಭಯದಿಂದ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೆ.ಪಿ.ಸಿ.ಸಿ. ವಕ್ತಾರ ಅಮಲಾ ರಾಮಚಂದ್ರ ಹೇಳಿದರು. ಈ ಹಿಂದೆ ಇದ್ದ ಯಾವ ಶಾಸಕರ ಅವಧಿಯಲ್ಲೂ ಇಷ್ಟು ಭ್ರಷ್ಟಾಚಾರ ಇರಲಿಲ್ಲ. ಅಕ್ರಮ ಸಕ್ರಮ ಮಂಜೂರಾತಿಯಲ್ಲಿ