Home Posts tagged #puttur (Page 27)

ಭಾರತ ಜೋಡೋ ಯಾತ್ರೆ ನೂರು ದಿನ ಪೂರ್ಣಗೊಂಡ ಹಿನ್ನೆಲೆ ಪುತ್ತೂರಿನಲ್ಲಿ ಸಂಭ್ರಮಾಚರಣೆ

ಪುತ್ತೂರು: ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ ಜೊಡೋ ಯಾತ್ರೆಯು ನೂರು ದಿನ ಪೂರೈಸಿದ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಪುತ್ತೂರಿನ ಗಾಂಧಿ ಕಟ್ಟೆಯ ಬಳಿಯಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅವರು ಅಂದು

ಕಡಬ ಪ.ಪಂ. ವ್ಯಾಪ್ತಿಗೆ ನಗರೋತ್ಥಾನ ಯೋಜನೆಯಡಿ ವಿಶೇಷ ಅನುದಾನ

ಕಡಬ:ಸಚಿವ ಎಸ್. ಅಂಗಾರ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರದಿಂದ ನಗರೋತ್ಥಾನ ಯೋಜನೆಯಡಿ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಮಂಜೂರಾದ 5 ಕೋಟಿ ರೂ. ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆಯಡಿ ಮಂಜೂರಾದ 2.90 ಕೋಟಿ ರೂ. ಕಾಮಗಾರಿಗಳಿಗೆ ಸಚಿವ ಎಸ್. ಅಂಗಾರ ಅವರು ಚಾಲನೆ ನೀಡಿದರು. ಬಳಿಕ ಕಡಬ ಸಿ.ಎ.ಬ್ಯಾಂಕ್ ವಠಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಈ ಹಿಂದೆ ದೇಶ ಮತ್ತು ರಾಜ್ಯವನ್ನು ಆಳಿದ ಕಾಂಗ್ರೆಸ್ ಸರಕಾರದ ಇಚ್ಚಾಶಕ್ತಿಯ ಕೊರತೆಯಿಂದ ಅಭಿವೃದ್ದಿ

ಜೋಡುಕರೆ ಕಂಬಳ ಸಮಿತಿಯ ತಕರಾರು ಅರ್ಜಿ ವಿಚಾರಣೆ ಪೂರ್ಣ

ಪುತ್ತೂರು: ಕಂಬಳ ಕೂಟವನ್ನು ನಿಷೇಧಿಸುವಂತೆ ಆಗ್ರಹಿಸಿ ಪ್ರಾಣಿದಯಾ ಸಂಘದವರು ಸಲ್ಲಿಸಿರುವ ಅರ್ಜಿ ಮತ್ತು ಪ್ರಾಣಿದಯಾ ಸಂಘದವರ ಅರ್ಜಿಗೆ ಪ್ರತಿಯಾಗಿ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷರಾದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಮತ್ತಿತರರು ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ತೀರ್ಪು ಕಾಯ್ದಿರಿಸಿದೆ. ಕಂಬಳ ಕೂಟದಲ್ಲಿ ಪ್ರಾಣಿ ಹಿಂಸೆ ನಡೆಯುತ್ತಿದೆ. ಆದ್ದರಿಂದ

ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಬೆಳ್ಳಿಹಬ್ಬ ಮಹೋತ್ಸವ

ರಿಕ್ಷಾ ಚಾಲಕರು ಸಮಾಜದ ಮುಖ್ಯವಾಹಿನಿಯಲ್ಲಿರುವವರುನಾವು ರಿಕ್ಷಾ ಚಾಲಕರೆಂಬ ಕೀಳರಿಮೆ ಬೇಡ. ಜೀವನದಲ್ಲಿ ಮುಂದೆ ಬರಬೇಕಾದರೆ, ಯಶಸ್ಸು ಕಾಣಬೇಕಾದರೆ ದುಶ್ಚಟಗಳಿಂದ ದೂರವಿರಬೇಕು. ನಾವು ನಮ್ಮ ವೃತ್ತಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದಾಗ ತನ್ನಿಂದ ತಾನಾಗಿ ಸಮಾಜದ ಗೌರವ ಪ್ರಾಪ್ತಿಯಾಗುತ್ತದೆ. ಗುಣಕ್ಕೆ ಮತ್ತು ವೃತ್ತಿಗೆ ಎಂದೂ ಬಡತನವಿಲ್ಲ ಎಂದು ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ಅವರು ಹೇಳಿದರು. ಪುತ್ತೂರಿನ

ಕ್ಷುಲ್ಲಕ ಕಾರಣಕ್ಕೆ ಸಹೋದರನ ಕೊಲೆ

ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಬಳಿ ನ್ಯೂ ಲೈಫ್ ಫಿಲಾಶಿಪ್ ಚರ್ಚ್ ಹತ್ತಿರದ ಸೈಟ್ನಲ್ಲಿ ಗಾರೆ ಕೆಲಸ ಮಾಡುವ ನಿಂಗಪ್ಪ ಗೌಡ ಮತ್ತು ಮಹಾದೇವ ಎಂಬ ಸಹೋದರ ನಡುವೆ ಕ್ಷುಲ್ಲಕ್ಕ ಕಾರಣಕ್ಕೆ ಗಲಾಟೆ ನಡೆದಿದ್ದು, ಮಹಾದೇವ ಎಂಬುವವರು ಮೃತಪಟ್ಟಿದ್ದಾರೆ ನಿಂಗಪ್ಪ ಎಂಬುವನು ಮಹಾದೇವನಿಗೆ ಕಬ್ಬಿಣದ ರಾಡಿನಿಂದ ತಲೆಗೆ ಮತ್ತು ಮೈಯಿಗೆ ಬಲವಾಗಿ ಹೊಡೆದು ಹಲ್ಲೆಗೊಳಿಸಿ , ಅಲ್ಲಿಂದ ನಿಂಗಪ್ಪ ಗೌಡನು ಓಡಿ ಹೋಗಿದ್ದು , ಗಾಯಗೊಂಡ ಮಹದೇವನನ್ನು ಪುತ್ತೂರು ಸಾರ್ವಜನಿಕ ಸರ್ಕಾರಿ

ಪುತ್ತೂರು : ಮತದಾರರ ಗುರುತಿನ ಚೀಟಿ ಅನಧಿಕೃತ ವಿತರಣೆ ಆರೋಪ

ಪುತ್ತೂರು: ಮತದಾರನ ಗುರುತಿನ ಚೀಟಿಯನ್ನು ಅನಧಿಕೃತವಾಗಿ ವಿತರಣೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಜನಸೇವಾ ಕೇಂದ್ರವೊಂದರ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಅಂಗಡಿಗೆ ಬೀಗ ಹಾಕಿದ ಘಟನೆ ನಡೆದಿದೆ. ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ನಗರದ ಹಳೆ ತಾಲೂಕು ಕಚೇರಿ ರಸ್ತೆಯಲ್ಲಿರುವ ಜನಸೇವಾ ಕೇಂದ್ರದ ಮೇಲೆ ದಾಳಿ ಮಾಡಿದೆ. ತಹಸೀಲ್ದಾರ್ ನಿಸರ್ಗ ಪ್ರಿಯ ಮತ್ತು ತಾಲೂಕು ಕಚೇರಿಯ ಚುನಾವಣಾ ಶಾಖೆಗೆ

ಲವ್ ಜಿಹಾದ್ ಗೆ ನೀವು  ಬಲಿಯಾಗಬೇಡಿ ಕಟೌಟ್

ಪುತ್ತೂರು; ಹಿಂದೂ ಹುಡುಗಿ ಶ್ರದ್ಧಾಳ ಹತ್ಯೆ. ದೇಹವನ್ನು 35 ತುಂಡು ಮಾಡಿದರು. ಕಾರಣ ಲವ್ ಜಿಹಾದ್. ಇದಕ್ಕೆ ನೀವು ಬಲಿಯಾಗಬೇಡಿ’ ಕಟೌಟ್ ಅನ್ನು ವೈದ್ಯ, ಹಿಂದುತ್ವ ಪರ ಸಂಘಟನೆಗಳಲ್ಲಿ ಸಕ್ರಿಯರಾಗಿರುವ ಡಾ.ಎಂ.ಕೆ. ಪ್ರಸಾದ್ ಅವರ ಹೆಸರಿನಲ್ಲಿ ಅಳವಡಿಸಲಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಸಿರುವ ಎಂ. ಕೆ. ಪ್ರಸಾದ್’ ನಾನು ಯಾವುದೇ ಧರ್ಮ ಅಥವಾ ಸಮುದಾಯದ ವಿರುದ್ಧ ಅಲ್ಲ. ಆದರೆ, ನಮ್ಮ ಸುತ್ತಮುತ್ತಲ ಬೆಳವಣಿಗೆ ಬಗ್ಗೆ ಹದಿಹರೆಯದವರಿಗೆ ಅರಿವು ಇರಬೇಕು. ಬಣ್ಣದ

ರಾಜ್ಯದಲ್ಲಿ 3 ದಿನ ಭಾರೀ ಮಳೆ : ಭಾರತೀಯ ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಹೆಚ್ಚು ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡು, ಮಲೆನಾಡು, ಕರಾವಳಿ ಭಾಗಗಳಲ್ಲಿ ನ. 17ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ,

ವೈದ್ಯ ಡಾ. ಕೃಷ್ಣಮೂರ್ತಿ ಸಂರ್ಪಂಗಳ ಅನುಮಾನಾಸ್ಪದ ಸಾವು : ಸೂಕ್ತ ತನಿಖೆಗೆ ಆಗ್ರಹಿಸಿ ವಿಹಿಂಪ ನೇತೃತ್ವದಲ್ಲಿ ಪ್ರತಿಭಟನೆ

ಪುತ್ತೂರು : ಮೂಲತ: ಪುತ್ತೂರಿನವರಾದ ಬದಿಯಡ್ಕದ ವೈದ್ಯ ಡಾ.ಕೃಷ್ಣಮೂರ್ತಿ ಸರ್ಪಂಗಳ ಅವರ ಅನುಮಾನಾಸ್ಪದ ಸಾವನ್ನು ಖಂಡಿಸಿ ಮತ್ತು ಸೂಕ್ತ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಸೋಮವಾರ ಸಂಜೆ ಪುತ್ತೂರು ನಗರದ ಅಮರ ಜವಾನ್ ಜ್ಯೋತಿ ಸ್ಮಾರಕದ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಪುತ್ತೂರಿನ 100ಕ್ಕೂ ಅಧಿಕ ವೈದ್ಯರು ಪಾಲ್ಗೊಂಡರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಜರಂಗದಳ ಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಅವರು,

ನವಂಬರ್ 18 ರಾಜ್ಯದಾದ್ಯಂತ ಸಮುದಾಯ ಆರೋಗ್ಯ ನೌಕರರ ಪ್ರತಿಭಟನೆ

ಪುತ್ತೂರು: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಮುದಾಯ ಆರೋಗ್ಯ ನೌಕರರ ಸಂಘದ ನೇತೃತ್ವದಲ್ಲಿ ನವೆಂಬರ್ 18 ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಯಲಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ನೌಕರರ ಸಂಘದ ದಕ್ಷಿಣಕನ್ನಡ ಜಿಲ್ಲಾಧ್ಯಕ್ಷೆ ಜ್ಯೋತಿ. ಜೆ.ಆರ್ ಹೇಳಿದರು. ಪುತ್ತೂರು ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಾರತ ಸರಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ