ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗರಿಂದ ನಮ್ಮ ನಡಿಗೆ ಶ್ರೀ ಮಹಾಲಿಂಗೇಶ್ವರನ ನಡೆಗೆ” ಎಂಬ ಬೃಹತ್ ಪಾದಯಾತ್ರೆ ಹಾಗೂಸೇವಾ ಸಮರ್ಪಣಾ ಕಾರ್ಯಕ್ರಮ” ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರ ಮಾರುಗದ್ದೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ `ಪುತ್ತಿಲ ಪರಿವಾರ’ ಸಂಘಟನೆಯ ಲಾಂಚನ ಬಿಡುಡೆಗೊಳಿಸಲಾಯಿತು. ದರ್ಬೆಯಲ್ಲಿ ಚಾಲನೆ
ಪುತ್ತೂರು: ಮದುವೆ ಕಾರ್ಯಕ್ರಮವೊಂದರಲ್ಲಿ ಪುತ್ತೂರು ಕ್ಷೇತ್ರದ ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮತ್ತು ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಪರಸ್ಪರ ಮುಖಾಮುಖಿಯಾದ ಪ್ರಸಂಗ ನಡೆದಿದೆ. ಪೆರಾಜೆಯ ಮಾಣಿ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಅರುಣ್ ಕುಮಾರ್ ಪುತ್ತಿಲ ಮತ್ತು ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಮುಖಾಮುಖಿಯಾಗಿದ್ದಾರೆ. ಈ ವೇಳೆ ಕೈ ಮುಗಿದು ನಮಸ್ಕರಿಸಿದ ಪುತ್ತಿಲ ಪ್ರಭಾಕರ್ ಭಟ್ ಅವರ
ಪುತ್ತೂರು: ನಡೆದಿರುವ ಘಟನೆಯನ್ನು ಮರೆತು ಮತ್ತೊಮ್ಮೆ ನಾವೆಲ್ಲ ಒಂದಾಗಿ ಪಕ್ಷ, ಸಂಘಟನೆ, ದೇಶವನ್ನು ಕಟ್ಟೋಣ ಎಂದು ವಿಜಯಪುರ ನಗರ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಬಿಜೆಪಿ ನಾಯಕರಿಗೆ, ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಹಲ್ಲೆಗೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಆರೋಗ್ಯ ವಿಚಾರಣೆಗಾಗಿ ಪುತ್ತೂರಿಗೆ ಆಗಮಿಸಿದ್ದ ಯತ್ನಾಳ್ ಸಂಘ ಕಾರ್ಯಾಲಯಕ್ಕೆ ಭೇಟಿ ನೀಡಿ ಬಳಿಕ ಬಿಜೆಪಿ
ಪುತ್ತೂರು: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪುತ್ತೂರು ಅಸ್ಪತ್ರೆಗೆ ಆಗಮಿಸಿದ ಸಂದರ್ಭ ಬಿಜೆಪಿಯ ಅಜಿತ್ ರೈ ಹೊಸಮನೆಯನ್ನು ಹಿಂದೂ ಕಾರ್ಯಕರ್ತರು ಹೊರದೂಡಿದ ಘಟನೆ ನಡೆದಿದೆ. ಪೋಲೀಸ್ ದೌರ್ಜನ್ಯದಿಂದ ಗಾಯಗೊಂಡವರನ್ನು ಭೇಟಿಯಾಗಲು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ಅರುಣ್ ಕುಮಾರ್ ಪುತ್ತಿಲ ಅವರೊಂದಿಗೆ ಅಸ್ಪತ್ರೆಯ ಒಳಹೋಗುತ್ತಿದ್ದಂತೆ, ಒಳಪ್ರವೇಶಿಸಲು ಯತ್ನಿಸಿದ ಬಿಜೆಪಿಯ ಅಜಿತ್ ರೈ ಹೊಸಮನೆಯನ್ನು ಹಿಂದೂ ಕಾರ್ಯಕರ್ತರು ಹೊರ ತಳ್ಳಿದ್ದಾರೆ. ಈ ಹಿಂದೆ
ಪುತ್ತೂರಿನಲ್ಲಿ ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಎಸಗಿದ್ದು, ಪುತ್ತೂರಿನ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆಋಓಗ್ಯ ವಿಚಾರಿಸಿದರು.
ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಭಾವಚಿತ್ರವುಳ್ಳ ಬ್ಯಾನರ್ ಮೇಲೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ದೌರ್ಜನ್ಯವೆಸಗಿದ ಪೋಲೀಸರ ವಿರುದ್ಧ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಕೆಂಡವಾಗಿದ್ದಾರೆ. ಡಿವೈಎಸ್ಪಿ, ಸಂಪ್ಯ ಠಾಣಾ ಎಸ್‍ಐ ಹಾಗೂ ಸಿಬ್ಬಂದಿ ವರ್ಗದ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಂದು ಸಂಜೆಯೊಳಗಡೆ ದೌರ್ಜನ್ಯ ಎಸಗಿದ ಪೊಲೀಸರನ್ನು ಅಮಾನತುಗೊಳಿಸಬೇಕು, ಜೊತೆಗೆ ಪೆÇಲೀಸರ ವಿರುದ್ಧ ಕೇಸ್ ದಾಖಲಿಸಬೇಕು ಎಂದು
ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಭಾವಚಿತ್ರವುಳ್ಳ ಬ್ಯಾನರ್ ಮೇಲೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತರು ಅಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಗಾಯಾಳುಗಳನ್ನು ಭೇಟಿಯಾಗಿ ವಿಚಾರಿಸಿದ್ದಾರೆ. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು ಇಂತಹ ಘಟನೆ ಮತ್ತೆ ಮರುಕಳಿಸಬಾರದು, ಇದೊಂದು ಹೀನ ಕೃತ್ಯ, ಪೊಲೀಸರ ಈ ಅಮಾನವೀಯ ಕೃತ್ಯವನ್ನು
ಪುತ್ತೂರು: ಪುತ್ತೂರು ಅರಣ್ಯ ಇಲಾಖೆಯ ಆವರಣ ಗೋಡೆಯ ಬಳಿ ಬಿಜೆಪಿ ಮುಖಂಡರಾದ ಡಿ. ವಿ. ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ಅವರ ಭಾವ ಚಿತ್ರವುಳ್ಳ ಶ್ರದ್ಧಾಂಜಲಿ ಬ್ಯಾನರ್ ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆದುಕೊಂಡಿದ್ದ ಆರೋಪಿಗಳ ಮೇಲೆ ಪೊಲೀಸ್ ರು ಹಿಗ್ಗಾಮುಗ್ಗಾ ಥಳಿಸಿ ಗಾಯಗೊಳಿಸಿರುವ ವೀಡೀಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ಮೇಲೆ ಪೋಲೀಸರು
ಪುತ್ತೂರು: ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಇರುವ ಅರಣ್ಯ ಇಲಾಖೆಯ ಆವರಣಗೋಡೆಯ ಎದುರು “ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ದಾಂಜಲಿ” ನೊಂದ ಹಿಂದು ಕಾರ್ಯಕರ್ತರೆಂಬ ಚಪ್ಪಲಿ ಹಾರ ಹಾಕಲಾಗಿರುವ ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬ್ಯಾನರ್ ಅಳವಡಿಸಿದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ನರಿಮೊಗರು
ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯ ಎಸಗಿದವರು ಯಾರು ಎಂದು ಗೊತ್ತಿದ್ದರೂ, ಬಿಜೆಪಿ ಪ್ರತಿಭಟನಾ ನಾಟಕ ಮಾಡಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಆಗಿರುವುದು ಕೈಲಾಗದವರು ಮೈ ಪರಚಿಕೊಂಡಂತೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಇವತ್ತು ಪರಿಸ್ಥಿತಿ ಎನಾಗಿದೆ ಎಂದರೆ ಬಿಜೆಪಿ ವಿಲವಿಲ ಒದ್ದಾಡುತ್ತಿದೆ. ಯಾರಿಗೂ ಚಪ್ಪಲಿ ಹಾಕುವ ದುಸ್ತಿತಿ ನಮ್ಮ ಪಕ್ಷಕ್ಕೆ




























