Home Posts tagged #puttur (Page 28)

ಪುತ್ತೂರಿನ: ಬೈಕ್ ಸ್ಕೂಟರ್ ಮಧ್ಯೆ ಅಪಘಾತ: ಸ್ಕೂಟರ್ ಸವಾರ ಮೃತ್ಯು

ಪುತ್ತೂರು : ಬೈಕ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ಸ್ ನಿಲ್ದಾಣ ಕಟ್ಟಡದಲ್ಲಿರುವ ರೆಡ್ ಕ್ಲಬ್ ಪ್ರೀಮಿಯಮ್ ಬಟ್ಟೆ ಅಂಗಡಿಯ ಸಿಬ್ಬಂದಿ ನೌಷದ್ (20) ಮೃತಪಟ್ಟವರು. ಇವರು ಪುತ್ತೂರು ತಾಲೂಕು ಅರ್ಯಾಪು ಗ್ರಾಮದ ಸಂಪ್ಯದ ನಿವಾಸಿ ಅಬ್ದುಲ್ ಅಝೀಜ್ ಎಂಬವರ ಪುತ್ರ. ನೌಷದ್

ಸತೀಶ್ ಜಾರಕಿಹೊಳಿ ಹಿಂದೂ ವಿರುದ್ಧದ ಹೇಳಿಕೆಗೆ ಖಂಡನೆ : ಪುತ್ತೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ

ಪುತ್ತೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಿಂದೂ ವಿರುದ್ಧದ ಹೇಳಿಕೆಯ ಮೂಲಕ ಕಾಂಗ್ರೆಸ್ ಮಾನಸಿಕತೆ ಜಗತ್ತಿಗೇ ಗೊತ್ತಾಗಿದೆ. ಇಂತಹ ದ್ರೋಹಿಗಳ ಮಂಪರು ಪರೀಕ್ಷೆ ಮಾಡಬೇಕು. ಇದರ ಹಿಂದಿನ ಉದ್ದೇಶ, ಮುಖಗಳ ಕುರಿತು ತನಿಖೆ ಆಗಬೇಕು ಎಂದು ರಾಜ್ಯ ಗೃಹ ಸಚಿವರಿಗೆ ಆಗ್ರಹಿಸುವುದಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿದ ಹಿಂದೂ ವಿರೋಧಿ ಹೇಳಿಕೆಯನ್ನು ಖಂಡಿಸಿ ಪುತ್ತೂರು ಬಿಜೆಪಿ ಹಾಗೂ

ಪಂಚಾಯತ್‍ಗೆ ಬರುವ ಅನುದಾನದಲ್ಲಿ ಹಸ್ತಕ್ಷೇಪ : ನಮ್ಮ ಹಕ್ಕಿಗೆ ಚ್ಯುತಿ ಬಾರದಂತೆ ಪ್ರತಿಭಟಿಸುತ್ತೇವೆ : ಸುಭಾಶ್ರಚಂದ್ರ ಶೆಟ್ಟಿ

ಪಂಚಾಯತ್‍ರಾಜ್ ವ್ಯವಸ್ಥೆಯನ್ನು ಬುಡಮೇಲು ಮಾಡುವ ಮೂಲಕ ಬಿಜೆಪಿ ಸರಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವ ನಿಟ್ಟಿನಲ್ಲಿ ಒಂದೊಂದು ಕೆಲಸಗಳನ್ನು ಮಾಡುತ್ತಿದೆ ಎಂದು ರಾಜೀವಗಾಂಧಿ ಪಂಚಾಯತ್‍ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ಸುಭಾಶ್ರಚಂದ್ರ ಶೆಟ್ಟಿ ಆರೋಪಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕುರಿತು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪ್ರತಿಭಟನೆ ಮೂಲಕ ಕಾಂಗ್ರೆಸ್ ತನ್ನ ಮೇಲೆ ಅಪಪ್ರಚಾರ ಮಾಡುತ್ತಿದೆ ಎಂದು ಶಾಸಕರು

ಪುತ್ತೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ : ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿಕೆ

ಪುತ್ತೂರು: ಪುತ್ತೂರಿಗೆ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸ್ವಂತ ಮನೆ, ವಾಣಿಜ್ಯ ಉದ್ದೇಶಕ್ಕೆ 10 ಸೆಂಟ್ಸ್ ಭೂಮಿಯನ್ನು ಭೂ ಪರಿವರ್ತನೆಗೆ ಅವಕಾಶ ನೀಡಿರುವುದು ಸರಕಾರದ 2 ದೊಡ್ಡ ಕೊಡುಗೆಯಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಪುತ್ತೂರಿನಲ್ಲಿ ಸುಸಜ್ಜಿತವಾದ ಒಳಗಾಂಣ ಹೊರಾಂಗಣ ಇರುವಂತಹ ಕ್ರಿಕೆಟ್ ಕ್ರೀಡಾಂಗಣಕ್ಕೆ 23 ಎಕ್ರೆ 26 ಸೆಂಟ್ಸ್ ಜಾಗದಲ್ಲಿ ಕ್ರೀಡಾಂಗಣ ಮಾಡಲು ಮುಖ್ಯಮಂತ್ರಿ

ಪುತ್ತೂರು : ನವ ವಿವಾಹಿತೆ ಆತ್ಮಹತ್ಯೆ

ಪುತ್ತೂರು :  ನವ ವಿವಾಹಿತೆಯೊಬ್ಬರು ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲ್ಲೂಕಿನ ಮಾಡನ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ನಡೆದಿದೆ. ಸಾಂತ್ಯ ನಿವಾಸಿ ಜಯಪ್ರಕಾಶ್ ಅವರ ಪತ್ನಿ ವೈಶಾಲಿ (26) ಆತ್ಮಹತ್ಯೆ ಮಾಡಿಕೊಂಡವರು. ಜಯ ಪ್ರಕಾಶ್‌ ಹಾಗೂ ವೈಶಾಲಿ ಮದುವೆ 7 ತಿಂಗಳ ಹಿಂದೆ ನಡೆದಿತ್ತು, ಶನಿವಾರ ಸಂಜೆ ಪತಿಯ ಮನೆಯಲ್ಲಿದ್ದ ವೈಶಾಲಿಯವರು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು

ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪಿಎಫ್‍ಐ, ಎಸ್‍ಡಿಪಿಐ ಮುಖಂಡರ ಮನೆ ಮೇಲೆ ದಾಳಿ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವೆಡೆ ಪಿಎಫ್‍ಐ, ಎಸ್ಡಿಪಿಐ ಮುಖಂಡರ ಮನೆಗಳ ಮೇಲೆ ಎನ್‍ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು, ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ನಿಷೇಧಿತ ಪಿಎಫ್‍ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎನ್‍ಐಎ ಅಧಿಕಾರಿಗಳು ಇಂದು ಮುಂಜಾನೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಕಿನ್ನಿಗೋಳಿ : ಮಹಿಳೆಗೆ ಕಾರು ಡಿಕ್ಕಿ,ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿದ ಕಾರು ಮಹಿಳೆಗೆ ಡಿಕ್ಕಿಯಾಗಿ, ಮಹಿಳೆ ಸಹಿತ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ ಕಿನ್ನಿಗೋಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಎಂಸಿಸಿ ಬ್ಯಾಂಕ್ ಬಳಿ ನಡೆದಿದೆ. ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಪಕ್ಷಿಕೆರೆ ಕೆಮ್ರಾಲ್ ನಿವಾಸಿ ಜಯಂತಿ ಶೆಟ್ಟಿ (50) ಗಾಯಗೊಂಡ ಮಹಿಳೆ. ಉಳಿದಂತೆ ಕಾರಿನಲ್ಲಿದ್ದ ಚಾಲಕ ತೋಡಾರ್ ಗಳಾದ ನಿವಾಸಿ ಚಾಲಕ ಕೆ ಹೆಚ್ ಅಬ್ದುಲ್ ಖಾದರ್ (65), ರಿದಾ (16), ರಶ್ಮಿ (18), ಕೌಸರ್ (46), ಎಂದು

ಕಡಬ ; ದಲಿತ ಮಹಿಳೆಯ ಮಾನಭಂಗ ಯತ್ನ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು : ರಾಕೇಶ್ ರೈ ಕೆಡೆಂಜಿ

ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ದೋಳ್ಪಾಡಿ ಗ್ರಾಮದ ಕಟ್ಟ ಎಂಬಲ್ಲಿ ಬಟ್ಟೆ ವ್ಯಾಪಾರಿಗಳ ಸೋಗಿನಲ್ಲಿ ಬಂದ ಇಬ್ಬರು ದಲಿತ ಮಹಿಳೆಯ ಮಾನಭಂಗ ಯತ್ನ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ವಿರೋಧ ಪಕ್ಷಗಳು ಆರೋಪಿಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಹೇಳಿದರು. ಕಡಬದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಒಂಟಿ ಮಹಿಳೆ ಮನೆಯಲ್ಲಿ ಒಬ್ಬರೇ

ಪುತ್ತೂರು : ಕಾಮಧೇನು ಗೋ ಶಾಲೆ ಪ್ರಾರಂಭೋತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾಮಧೇನು ಗೋ ಶಾಲೆ ಪ್ರಾರಂಭೋತ್ಸವ ಮತ್ತು ಗೋ ಪೂಜೆ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ ಸಂಜೆ ಗೋ ಪೂಜೆ ನಡೆಯಿತು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರ ನೇತೃತ್ವದಲ್ಲಿ ಗೋ ಪೂಜೆ ನಡೆಯಿತು. ಗೋವುಗಳನ್ನು ಶೃಂಗರಿಸಿ. ಗಂಧ ಪ್ರಸಾದವನ್ನು ಹಚ್ಚಿ, ಅದಕ್ಕೆ ದೋಸೆ, ಅವಲಕ್ಕಿ, ಬಾಳೆ ಹಣ್ಣುಗಳನ್ನು ನೀಡಲಾಯಿತು. ಗೋ ಪೂಜೆ ಸಭಾ ಕಾರ್ಯಕ್ರಮದಲ್ಲಿ ಗೋ ಸಮರ್ಪಣೆ

ಪುತ್ತೂರು: ಅ.23ರಂದು ದೀಪಾವಳಿ ಸಂಭ್ರಮಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

ಪುತ್ತೂರು: ಬಿಜೆಪಿ ಪಕ್ಷವನ್ನು ರಾಷ್ಟ್ರ ಮಟ್ಟದಲ್ಲಿ ಬೆಳೆಸಿ, ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಲು ಕಾರಣಕರ್ತರಾದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯ ಬಿಜೆಪಿ ಕಾರ್ಯಕರ್ತರನ್ನು ಒಟ್ಟು ಸೇರಿಸಿ ಬೆಳಕಿನ ಹಬ್ಬದ ಸಂಭ್ರಮಾಚರಣೆ ಹಾಗೂ ಎಲ್ಲರಿಗೂ ಗೌರವಾರ್ಪಣೆ ಮಾಡುವ ಕಾರ್ಯಕ್ರಮ ಅ.23ರಂದು ಪುತ್ತೂರಿನ ಕೊಟೇಚಾ ಸಭಾಭವನದಲ್ಲಿ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ಅವರು ತಿಳಿಸಿದರು. ಶುಕ್ರವಾರ ಪುತ್ತೂರಿನ ಬಿಜೆಪಿ