Home Posts tagged #puttur (Page 29)

ಕಾಂಗ್ರೆಸ್ ಕಾರ್ಯಕರ್ತರು ನೀಚ ಕೃತ್ಯಕ್ಮೆ ಕೈ ಹಾಕುವುದಿಲ್ಲ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರ‌‌ಭಾವ ಚಿತ್ರ ಇರುವ ಬ್ಯಾನರನ್ನು ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದ್ದು ಇದು ಯಾರ ಕೃತ್ಯ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ಮಾಡಬೇಕು. ಸುತ್ತಮುತ್ತಲಿರುವ ಸಿ ಸಿ ಕೆಮರಾ ಪರಿಶೀಲಿಸಿ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಬೇಕು. ಘಟನೆಯ ಖಂಡಿಸಿ ಬಿಜೆಪಿಯವರು ನಡೆಸಿದ ಪ್ರತಿಭಟನೆಯಲ್ಲಿ

ಬಿಜೆಪಿಗೆ ಹೀನಾಯ ಸೋಲು : ನಳಿನ್, ಡಿವಿಎಸ್ ಶ್ರದ್ಧಾಂಜಲಿ ಬ್ಯಾನರಿಗೆ ಚಪ್ಪಲಿ ಹಾರ

ಪುತ್ತೂರು: ನಳಿನ್ ಕುಮಾರ್ ಕಟೀಲ್ ಹಾಗೂ ಡಿ.ವಿ. ಸದಾನಂದ ಗೌಡ ಅವರೇ ಬಿಜೆಪಿ ಸೋಲಿಗೆ ಕಾರಣ ಎಂಬ ಒಕ್ಕಣೆಯ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಲಾಗಿದೆ.ಪುತ್ತೂರು ಸರ್ಕಾರಿ ಬಸ್ ನಿಲ್ದಾಣ ಮುಂಭಾಗ ಈ ಬ್ಯಾನರನ್ನು ಅಳವಡಿಸಿದ್ದು, ತವರು ಕ್ಷೇತ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂಗೆ ಸೋಲಿನ ಬಿಸಿ ತಟ್ಟುವಂತೆ ಮಾಡಲಾಗಿದೆ. ಭಾವಪೂರ್ಣ ಶ್ರದ್ಧಾಂಜಲಿ ಎಂದು ಬ್ಯಾನರ್ ಹಾಕಿ, ಅದರಲ್ಲಿ ಬಿಜೆಪಿ ಸೋಲಿಗೆ ನೀವೇ ಕಾರಣ ಎಂಬ ಬರಹವನ್ನು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಭೇಟಿ

ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಅವರು ಶನಿವಾರ ಸಂಜೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ಅಶೋಕ್ ಕುಮಾರ್ ರೈ ಅವರಿಗೆ ಕಬಕದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಅಲ್ಲಿಂದ ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದರು. ಅಲ್ಲಿಯೂ ಅಶೋಕ್ ಕುಮಾರ್ ರೈ ಅವರ ದೊಡ್ಡ ಸಂಖ್ಯೆಯ ಅಭಿಮಾನಿಗಳು

ಆಶಾ ತಿಮ್ಮಪ್ಪ ಪರ ಮತಯಾಚನೆಗೆ ಪುತ್ತೂರಿಗೆ ಬಂದಿಳಿದ ಯೋಗಿ‌ ಆದಿತ್ಯನಾಥ್‌

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮತಯಾಚನೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ ಹೆಲಿಕಾಪ್ಟರ್ ಮೂಲಕ ನಗರದ ಹೊರವಲಯದ ಮೊಟ್ಟೆತ್ತಡ್ಕ ಹೆಲಿಪ್ಯಾಡ್‌ಗೆ ಆಗಮಿಸಿದ್ದಾರೆ. ಅಲ್ಲಿಂದ ವಾಹನದ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಅಂಚೆ ಕಚೇರಿ ಬಳಿಯಿಂದ ಕೋರ್ಟ್ ರಸ್ತೆಯಾಗಿ ಸಾಗಿ ಕಿಲ್ಲೆ ಮೈದಾನದ ತನಕ ಜಾಥಾ ನಡೆಯಲಿದೆ.

ಪುತ್ತೂರು: ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡರಿಂದ ಸಾರ್ವಜನಿಕ ಸಭೆ

ಪುತ್ತೂರು: ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾರವರು ಇಂದು ಉಪ್ಪಿನಂಗಡಿ ಪೇಟೆ, ಶಾಂತಿನಗರ,ಸತ್ತಿಕಲ್ಲು, ಪೆರ್ನೆ, ಹಿರೇಬಂಡಾಡಿ, ಅಡೆಕಲ್, ಪೆರಿಯಡ್ಕದಲ್ಲಿ ಸಾರ್ವಜನಿಕ ಭಾಷಣ ನಡೆಸಿ ಭರ್ಜರಿ ಮತ ಪ್ರಚಾರ ನಡೆಸಿದರು. ಪುತ್ತೂರು ತಾಲೂಕಿನಲ್ಲಿ ಉಪ್ಪಿನಂಗಡಿ ಪಟ್ಟಣವು ಅತೀ ವೇಗವಾಗಿ ಬೆಳೆಯುತ್ತಿರುವ ಪಟ್ಟಣ ಅಂತೆಯೇ ವ್ಯಾಪಾರ ವ್ಯವಹಾರದಲ್ಲಿ ಕೇಂದ್ರ ಬಿಂದು ಆಗಿರುವ ಪಟ್ಟಣ ಆದರೆ ಇಲ್ಲಿಗೆ ಯಾವುದೇ ಮೂಲಭೂತ ಸೌಕರ್ಯಗಳು ತಲುಪಿಲ್ಲ ಮುಖ್ಯ ಬಸ್ ನಿಲ್ದಾಣದಲ್ಲಿ ಒಂದು

ಸುಳ್ಳು ಭರವಸೆಯನ್ನು ಕೊಡುವುದಿಲ್ಲ, ಕೊಟ್ಟ ಮಾತಿಗೆ ತಪ್ಪಲಾರೆ : ಅಶೋಕ್ ಕುಮಾರ್ ರೈ

ಪುತ್ತೂರು: ಚುನಾವಣೆಗೆ ಸ್ಪರ್ದಿಸುತ್ತಿದ್ದೇನೆ ವೋಟು ಸಿಗಬೇಕು ಎಂದು ಜನತೆಗೆ ಸುಳ್ಳು ಭರವಸೆಯನ್ನು ಕೊಡುವುದಿಲ್ಲ ಮತ್ತು ಮಾತು ಕೊಟ್ಟಿದ್ದರೆ ಅದಕ್ಕೆ ತಪ್ಪಿ ನಡೆಯಲಾರೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರು ಹೇಳಿದರು. ಮಾಣಿಲ ಗ್ರಾಮದ ವಿವಿಧ ದಲಿತ ಕಾಲೊನಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಕಾಲನಿಯ ನಿವಾಸಿಗಳು ತಮ್ಮ ಸಮಸ್ಯೆಗಳನ್ನು ಅಶೋಕ್ ರೈ ಬಳಿ ಹೇಳಿಕೊಂಡರು. ಕಳೆದ ಹಲವು ವರ್ಷಗಳಿಂದ ನಾವು ಮನೆ ಮಾಡಿಕೊಂಡಿದ್ದು

ಪುತ್ತೂರು : ಅಶೋಕ್ ಕುಮಾರ್ ರೈ ಅವರಿಂದ ನನ್ನ ಬೂತ್, ನಾನು ಅಭ್ಯರ್ಥಿ ವಿಭಿನ್ನ ಪ್ರಯೋಗ

ಪುತ್ತೂರಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರಿಂದ ನನ್ನ ಬೂತ್, ನಾನು ಅಭ್ಯರ್ಥಿ.. ಒಂದು ವಿಭಿನ್ನ ಪ್ರಯೋಗ ನಡೆಯಲಿದ್ದು, ಪುತ್ತೂರಿನ ವಿಧಾನಸಭಾ ಕ್ಷೇತ್ರzಗಳಿಗೆ ಕಾಂಗ್ರೆಸ್ ನಾಯಕರಿಂದ ಮತ್ತು ಕಾರ್ಯಕರ್ತರಿಂದ ಎಲ್ಲಾ 220 ಬೂತ್ ಗಳಲ್ಲಿಯೂ ಮನೆ ಮನೆಗಳ ಸಂಪರ್ಕಿಸುವ ಮೂಲಕ ಮತಯಾಚನೆ ನಡೆಯಲಿದೆ.

ಬಜರಂಗದಳ ನಿಷೇಧಿಸುವ ವಿಚಾರ, ರಾಜ್ಯದ ಹಿಂದುಗಳ ಮನಸ್ಸಿಗೆ ನೋವಾಗಿದೆ : ಶರಣ್ ಪಂಪ್‍ವೆಲ್

ಪುತ್ತೂರು: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ ಮಾಡಿರುವ ವಿರುದ್ದ ವಿಶ್ವ ಹಿಂದು ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‍ವೆಲ್ ಕಿಡಿ ಕಾರಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. 2023ರ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ವಿಶ್ವಹಿಂದೂ ಪರಿಷತ್ತಿನ ಯುವ ವಿಭಾಗ ರಾಷ್ಟ್ರಭಕ್ತ ಬಜರಂಗದಳ ಸಂಘಟನೆಯನ್ನು ನಿಷೇಧಿಸಲು ಪ್ರಸ್ತಾವನೆ ಮಾಡಿರುವುದು ರಾಜ್ಯದ ಹಿಂದುಗಳ

ಮೇ 6 : ಸಿಎಂ ಯೋಗಿ ಆದಿತ್ಯನಾಥ್ ಪುತ್ತೂರಿಗೆ

ಪುತ್ತೂರು: ನಕ್ಸಲೈಟ್, ಭಯೋತ್ಪಾದನೆ, ಕಮ್ಯುನಿಸ್ಟ್ ಮೆಂಟಾಲಿಟಿ ಇರುವ ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ಆರ್ ಎಸ್ ಎಸ್ ಹಿನ್ನಲೆ ಹೊಂದಿರುವ ಹಿಂದೂ ಸಂಘಟನೆ ಭಜರಂಗದಳವನ್ನು ನಿಷೇಧ ಹೇಳಿಕೆ ಜತೆಗೆ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಹಿಂದೂಗಳನ್ನು ದಮನ ಮಾಡಿ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯುವ ಪ್ರಯತ್ನವನ್ನು ಡಿಕೆಶಿ ಮಾಡುತ್ತಿದ್ದಾರೆ.