Home Posts tagged #puttur (Page 31)

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ : ಪುತ್ತೂರಿನ ವಿವಿಧೆಡೆ ಮತಪ್ರಚಾರ

ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಪುತ್ತೂರಿನ ವಿವಿಧೆಡೆ ಮತಯಾಚನೆ ಮಾಡಿದರು. ಸಾರ್ವಜನಿಕ ಸಭೆ ಮತ್ತು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮತದಾರದಲ್ಲಿ ವಿನಂತಿಸಿದರು. ಅಶೋಕ್ ಕುಮಾರ್ ರೈ ಅವರ ಜೊತೆ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

ಅರುಣ್ ಕುಮಾರ್ ಪುತ್ತಿಲರಿಂದ ಪ್ರಣಾಳಿಕೆ ಬಿಡುಗಡೆ

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಹಿಂದುತ್ವದ ರಕ್ಷಣೆ ಜೊತೆಗೆ ಭ್ರಷ್ಟಾಚಾರ ರಹಿತ, ಜನಸ್ನೇಹಿ ಅಡಳಿತ ನೀಡುವ ಭರವಸೆಯ ಜೊತೆಗೆ 31 ವಿಷಯಾಧಾರಿತ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಪುತ್ತೂರು ದರ್ಬೆ ಸುಭದ್ರ ಕಲ್ಯಾಣ ಮಂಟಪದ ಬಳಿ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಸುನಿಲ್ ಬೋರ್ಕರ್, ಭಾಸ್ಕರ್ ಆಚಾರ್ಯ ಇಂದಾರು, ಡಾ.ಗಣೇಶ್ ಪ್ರಸಾದ್ ಮುದ್ರಾಜೆ, ಪ್ರಸನ್ನ ಕುಮಾರ್ ಮಾರ್ತಾ, ಸ್ನೇಹ ಸಿಲ್ಕ್ ನ

ಪುತ್ತೂರಿನಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶ

ದೇಶದ ಪ್ರಧಾನಿ ನರೇಂದ್ ಮೋದಿ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾತಿನಿದ್ಯ ನೀಡುವ ಮುಖಾಂತರ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿದರು. ಪುತ್ತೂರಿನ ಜೈನಭವನದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶವನ್ನು ಉದ್ಧೇಶಿಸಿ ಅವರು ಮಾತನಾಡಿದರು. ಕೇಂದ್ರದ ಮೋದಿ ಸರಕಾರ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಆ ಮೂಲಕ ಮಹಿಳೆಯರ

ಬಿಜೆಪಿಗೆ ಎದುರಾಳಿಗಳು ಯಾರೆಂಬುವುದು ಲೆಕ್ಕವಲ್ಲ : ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಡಾ.ಭಾರತಿ ಪವಾರ್ ಹೇಳಿಕೆ

ಪುತ್ತೂರು; ದೇಶದಲ್ಲಿರುವ ಲೋಕತಂತ್ರ ವ್ಯವಸ್ಥೆಯಲ್ಲಿ ಯಾರು ಯಾವ ಪಕ್ಷವನ್ನೂ ಸೇರಬಹುದು. ಆದರೆ ಬಿಜೆಪಿಗೆ ಎದುರಾಳಿಗಳು ಯಾರೆಂಬುವುದು ಲೆಕ್ಕವಲ್ಲ. ಜನರ ವಿಶ್ವಾಸವೇ ನಮ್ಮ ಶಕ್ತಿಯಾಗಿದೆ. ಪಕ್ಷ ಸಿದ್ಧಾಂತಕ್ಕೆ ಬದ್ಧರಾದವರು ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಡಾ.ಭಾರತಿ ಪವಾರ್ ಹೇಳಿದರು. ಅವರು ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ, ಜನಾರೋಗ್ಯ ಕಾಪಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು.

ಪುತ್ತೂರಿನ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ.

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿದರು. ವೇದನಾಥ್ ಸುವರ್ಣ, ಸತೀಶ್ ಕೆಡೆಂಜಿ, ಡಾ. ರಾಜಾರಾಮ್, ಜಯಪ್ರಕಾಶ್ ಬದಿನಾರು ಮತ್ತಿತರ ನಾಯಕರೊಂದಿಗೆ ಆಗಮಿಸಿದ ಅಶೋಕ್ ರೈ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು.

ವಿಧಾನ ಸಭಾ ಚುನಾವಣೆ-ಪುತ್ತೂರಿನಲ್ಲಿ ಒಟ್ಟು 13 ಮಂದಿಯಿಂದ ನಾಮಪತ್ರ ಸಲ್ಲಿಕೆ

ಪುತ್ತೂರು: ಕರ್ನಾಟಕ ವಿಧಾನ ಸಭಾ ಚುನಾವಣೆ- 2023ಕ್ಕೆ ಸಂಬಂಧಿಸಿದಂತೆ ಪುತ್ತೂರು ವಿಧಾನ ಸಭಾ ಕ್ಷೇತ್ರ-206ರಲ್ಲಿ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿದೆ. ಎ.13ರಂದು ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡು ನಾಮಪತ್ರ ಸಲ್ಲಿಸುವ ಪ್ರಕ್ರಿಯೆಗಳು ಪ್ರಾರಂಭಗೊಂಡು ನಾಮಪತ್ರ ಸಲ್ಲಿಸಲು ಎ.20 ಅಂತಿಮ ದಿನವಾಗಿತ್ತು. ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆಯಾಗಿರುವ ಕಡಬ ತಾಲೂಕು ಕುಂತೂರು ಕುಂಡಡ್ಕದ ಆಶಾ ತಿಮ್ಮಪ್ಪ, ಕಾಂಗ್ರೆಸ್ ಪಕ್ಷದ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ ನಾಮಪತ್ರ ಸಲ್ಲಿಕೆ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ ಏ.20ರಂದು ನಾಮಪತ್ರ ಸಲ್ಲಿಸಿದರು. ಮಿನಿ ವಿಧಾನಸೌಧದ ಚುನಾವಣಾ ಕಚೇರಿಯಲ್ಲಿನ ಚುನಾವಣಾಧಿಕಾರಿಕಚೇರಿಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿ ಅರುಣ್‌ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿಗಳಾದ ಜಿ.ಮಂಜುನಾಥ್, ರಮೇಶ್ ಬಾಬು ಸಹಕರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಅಶೋಕ್ ಕೊಂಚಾಡಿ, ಜಯಪ್ರಕಾಶ್ ಕನ್ಯಾಡಿ,ಕರುಣಾಕರ ಪಳ್ಳತ್ತಡ್ಕ,

ಅರುಣ್ ಪುತ್ತಿಲ ಬಗ್ಗೆ ಅಪಾರ ಗೌರವವಿದೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ರಾಜ್ಯದಲ್ಲಿ ಚುನಾವಣಾ ಕಾವು ಏರಿಕೆಯಾಗಿದ್ದು, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ನಾಮಪತ್ರ ಸಲ್ಲಿಕೆಗಾಗಿ ಪುತ್ತೂರಿಗೆ ಬೇಟಿ ನೀಡಿದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ರಾಜ್ಯದ 224 ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಈ ಬಾರಿ ಬಿಜೆಪಿಯ

ಪುತ್ತೂರು: ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ಐವನ್ ಫೆರಾವೋ ನಾಮಪತ್ರ ಸಲ್ಲಿಕೆ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ಐವನ್ ಫೆರಾವೋ ಪಿ ಅವರು ನಾಮಪತ್ರ ಸಲ್ಲಿಸಿದರು. ಪುತ್ರೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಗಿರೀಶ್ ನಂದನ್ ಎಂ ಅವರಿಗೆ ನಾಮಪತ್ರ ಸಲ್ಲಿಸಿದರು.