Home Posts tagged #puttur (Page 32)

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಸುಂದರ ಕೊಯಿಲ ನಾಮಪತ್ರ ಸಲ್ಲಿಕೆ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸುಂದರ ಕೊಯಿಲ ಅವರು ನಾಮಪತ್ರ ಸಲ್ಲಿಸಿದರು. ಚುನಾವಣಾ ಅಧಿಕಾರಿ ಗಿರೀಶ್ ನಂದನ್ ಎಂ ಅವರಿಗೆ ನಾಮಪತ್ರ ಸಲ್ಲಿಸಿದರು.

ಜೈಲಿನಲ್ಲಿದ್ದೇ ಎಸ್‍ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಎಸ್.ಡಿ.ಪಿ.ಐ ಮುಖಂಡ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಆರೋಪದಲ್ಲಿ ಯುಎಪಿಎ ಕಾಯ್ದೆಯಡಿ ರಾಷ್ಟ್ರೀಯ ತನಿಖಾ ದಳದಿಂದ ಬಂಧಿಸಲ್ಪಟ್ಟು ಜೈಲಿನಲ್ಲಿರುವ ಶಾಫಿ ಬೆಳ್ಳಾರೆ ತಮ್ಮ ಪಕ್ಷದ ಏಜೆಂಟ್ ಗಳ ಮೂಲಕ ನಾಮಪತ್ರ ಸಲ್ಲಿಸಿದರು. ಪಕ್ಷದ ಕಛೇರಿಯಿಂದ ಮಿನಿ ವಿಧಾನಸೌಧದವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದ ಎಸ್.ಡಿ.ಪಿ.ಐ ಕಾರ್ಯಕರ್ತರು ಶಾಫಿ ಬೆಳ್ಳಾರೆ ಪರ ಘೋಷಣೆಗಳನ್ನು

ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕಚೇರಿ ಉದ್ಘಾಟನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಕಚೇರಿ ಸೋಮವಾರ ದರ್ಬೆ ರೈ ಎಸ್ಟೇಟ್ ಬಿಲ್ಡಿಂಗ್ ನಲ್ಲಿ ಉದ್ಘಾಟನೆಗೊಂಡಿತು. ಗಣಹೋಮದೊಂದಿಗೆ ಕಚೇರಿಯನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕಿ  ಶಕುಂತಳಾ ಶೆಟ್ಟಿ,  ಕಾಂಗ್ರೆಸ್ ಮುಖಂಡರಾದ ಎಂಎಸ್ ಮುಹಮ್ಮದ್, ಚಂದ್ರಹಾಸ ಶೆಟ್ಟಿ  ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಡಾ ರಾಜಾರಾಂ , ಪುತ್ತೂರು ಬ್ಲಾಕ್ ಕಾಂಗ್ರೆಸ್

ಕೈ ಬಿಟ್ಟು ತೆನೆ ಹೊರಲಿರುವ ದಿವ್ಯ ಪ್ರಭಾ ಗೌಡ ಚಿಲ್ತಡ್ಕ

ಪುತ್ತೂರು: ಕಾಂಗ್ರೆಸ್‌ ನಾಯಕಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ದಿವ್ಯ ಪ್ರಭಾ ಚಿಲ್ತಡ್ಕ ಕಾಂಗ್ರೆಸ್‌ ಗೆ ರಾಜಿನಾಮೆ ನೀಡಿದ್ದು ಇಂದು ಅಧಿಕೃತವಾಗಿ ಜೆಡಿಎಸ್‌ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಜೆ ಪಿ ಭವನದಲ್ಲಿ ಜೆಡಿಎಸ್‌ ಅಧ್ಯಕ್ಷ ಕುಮಾರಸ್ವಾಮಿ ಸಮ್ಮುಖದಲ್ಲಿ ಇಮದು ಮದ್ಯಾಹ್ನ ಕಾಂಗ್ರೆಸ್‌ ನಾಯಕ ರಘು ಆಚಾರ್‌ ಸೇರಿದಂತೆ ಇತರ ಏಳೆಂಟು ನಾಯಕರೊಂದಿಗೆ ಜೆಡಿಎಸ್‌ ಪಕ್ಷ ಸೇರಲಿದ್ದಾರೆ. ಇದನ್ನು ಅಧಿಕೃತವಾಗಿ ದಿವ್ಯಪ್ರಭಾ

ಸುಬ್ರಹ್ಮಣ್ಯ: ಕರ್ನಾಟಕ ಜನತೆಯ ಸುಭೀಕ್ಷೆಗಾಗಿ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ: ಸಿಎಂ ಬೊಮ್ಮಾಯಿ

ದ.ಕ ಜಿಲ್ಲೆಯ ಹಲವು ದೇವಸ್ಥಾನಕ್ಕೆ ಬೇಟಿ ನೀಡಿದ್ದೇನೆ. ಧರ್ಮಸ್ಥಳ, ಕೊಲ್ಲೂರು, ಕಟೀಲು ದೇವಸ್ಥಾನಗಳಿಗೆ ಹೆಚ್ಚಾಗಿ ಭೇಟಿ ನೀಡುತಿದ್ದು ಇಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಿ ಕರ್ನಾಟಕ ಜನತೆಯ ಸುಭೀಕ್ಷೆಗಾಗಿ ಪ್ರಾರ್ಥಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು  ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಮಾದ್ಯಮದೊಂದಿಗೆ ಹೇಳಿದರು. ಧರ್ಮಸ್ಥಳ ಕ್ಕೆ ಆಗಮಿಸಿದ ಬಳಿಕ ಹೆಲಿಕಾಪ್ಟರ್ ಮೂಲಕ

ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಭೇಟಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಜಿ.ಪಂ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಅವರಿಗೆ ಪಕ್ಷ ಅವಕಾಶ ನೀಡಿದ ಹಿನ್ನಲೆಯಲ್ಲಿ ಎ.12 ರಂದು ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ದಂಪತಿ ಮಹಾಲಿಂಗೇಶ್ವರ ದೇವಳಕ್ಕೆ ಭೇಟಿ ನೀಡಿ ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಬಳಿಕ ಅವರು ಡಾ.ಎಂ.ಕೆ ಪ್ರಸಾದ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು.

ಶಕುಂತಳಾ ಶೆಟ್ಟಿ ಅವರಿಗೆ ಟಿಕೆಟ್ ನೀಡದಿದ್ದಲ್ಲಿ ಸಾಮೂಹಿಕ ರಾಜೀನಾಮೆ : ಪುತ್ತೂರು ಮಹಿಳಾ ಕಾಂಗ್ರೆಸ್

ಈ ಬಾರಿಯ ಚುನಾವಣೆಯಲ್ಲಿ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ಮುಖಂಡೆ ಶಕುಂತಳಾ ಶೆಟ್ಟಿಯವರಿಗೆ ಟಿಕೆಟ್ ನೀಡದಿದ್ದಲ್ಲಿ ಪುತ್ತೂರು ಮಹಿಳಾ ಕಾಂಗ್ರೆಸ್ ನ ಎಲ್ಲ ಪದಾಧಿಕಾರಿಗಳು ಸಾಮೊಹಿಕ ರಾಜೀನಾಮೆ ನೀಡುವುದಾಗಿಯೂ ಹಾಗು ಶಕುಂತಳಾ ಶೆಟ್ಟಿಯವರು ಪಕ್ಷೇತರರರಾಗಿ ಸ್ಪರ್ಧಿಸಲು ಅಗ್ರಹಿಸುವುದಾಗಿಯೂ ಮಹಿಳಾ ಕಾಂಗ್ರೆಸ್ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅದ್ಯಕ್ಷೆ ಶಾರದ್ ಅರಸ್, ಮತ್ತು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷೆ ವಿಶಾಲಕ್ಷಿ ಬನ್ನೂರು ತಿಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಭೇಟಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಜಿ.ಪಂ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಅವರಿಗೆ ಪಕ್ಷ ಅವಕಾಶ ನೀಡಿದ ಹಿನ್ನಲೆಯಲ್ಲಿ ಎ.12 ರಂದು ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ದಂಪತಿ ಮಹಾಲಿಂಗೇಶ್ವರ ದೇವಳಕ್ಕೆ ಭೇಟಿ ನೀಡಿ ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಬಳಿಕ ಅವರು ಡಾ.ಎಂ.ಕೆ ಪ್ರಸಾದ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು.

ಆಮ್ ಆದ್ಮಿ ಪಕ್ಷದಿಂದ ರಾಷ್ಟ್ರಾದ್ಯಂತ ಸ್ಪರ್ಧೆ : ದ.ಕ.ಜಿಲ್ಲೆಯ 5 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಪುತ್ತೂರು: ಆಮ್ ಆದ್ಮಿ ಪಕ್ಷ ಕಳೆದ 10 ವರ್ಷಗಳಲ್ಲಿ ಒಂದು ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಂಡಿದ್ದು, ರಾಷ್ಟ್ರಾದ್ಯಂತ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಈಗಾಗಲೇ ದ.ಕ.ಜಿಲ್ಲೆಯಲ್ಲಿ ಐದು ಸ್ಥಾನಗಳಲ್ಲಿ ಅಭ್ಯರ್ಥಿಯ ಪಟ್ಟಿ ಬಿಡುಗಡೆಗೊಂಡಿದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಪುತ್ತೂರಿನ ಸರಕಾರ ಆಸ್ಪತ್ರೆ

ಚರ್ಚ್‍ಗಳಲ್ಲಿ ಶ್ರದ್ಧಾ ಭಕ್ತಿಯ ಶುಭ ಶುಕ್ರವಾರ ಆಚರಣೆ

ಪ್ರಭು ಯೇಸುಕ್ರಿಸ್ತರನ್ನು ಶಿಲುಬೆಗೇರಿಸುವ ದಿನವಾದ ಗುಡ್ ಫ್ರೈಡೇ(ಶುಭ ಶುಕ್ರವಾರ) ದಿನವನ್ನು ವಿಶ್ವದಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದು, ಪುತ್ತೂರು ತಾಲೂಕಿನ ಚರ್ಚ್‍ಗಳಲ್ಲಿಯೂ ಗುಡ್ ಫ್ರೈಡೇ ದಿನವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಪುತ್ತೂರಿನ ಮಾಯಿದೆ ದೇವುಸ್ ಚರ್ಚ್, ಮರೀಲಿನ ಸೆಕ್ರೇಡ್ ಹಾರ್ಟ್ ಚರ್ಚ್, ಬನ್ನೂರಿನ ಸಂತ ಅಂತೋನಿ ಚರ್ಚ್, ಉಪ್ಪಿನಂಗಡಿ ದೀನರ ಕನ್ಯಾಮಾತಾ ದೇವಾಲಯ, ಬೆಳ್ಳಾರೆ ಚರ್ಚ್ ಸಹಿತಿ