Home Posts tagged #puttur (Page 33)

ಪುತ್ತೂರಿನಲ್ಲಿ ಪವಿತ್ರ ಗುರುವಾರ ಆಚರಣೆ

ಪ್ರಪಂಚದಾದ್ಯಂತದ ಕ್ರಿಶ್ಚಿಯನ್ನರು ಈ ವಾರವನ್ನು ಪವಿತ್ರ ವಾರವನ್ನಾಗಿ ಆಚರಿಸುತ್ತಿದ್ದಾರೆ, ಏಪ್ರಿಲ್ 2 ರಂದು ಈಸ್ಟರ್ ಮೊದಲು ಗರಿಗಳ ಭಾನುವಾರದಿಂದ ಪ್ರಾರಂಭವಾಗುತ್ತದೆ. ಏಪ್ರಿಲ್ 6 ರಂದು ಅವರು ಶುಭ ಶುಕ್ರವಾರ ಮತ್ತು ಈಸ್ಟರ್ ಮೊದಲು ಬರುವ ಪವಿತ್ರ ಗುರುವಾರವನ್ನು ಆಚರಿಸುತ್ತಾರೆ.ಯೇಸು ಕ್ರಿಸ್ತನು ತನ್ನ ಶಿಷ್ಯರೊಂದಿಗೆ ಕೊನೆಯ ಭೋಜನವನ್ನು ಮಾಡಿದ ನೆನಪಿಗಾಗಿ

ಪುತ್ತೂರು ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ, ಹೊಟೇಲ್ ಶ್ರೀ ಲಕ್ಷ್ಮೀ ಮಾಲಕ ದೇವಪ್ಪ ನೋಂಡಾ ನಿಧನ

ಪುತ್ತೂರು: ಪುತ್ತೂರು ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ, ಹೊಟೇಲ್ ಶ್ರೀ ಲಕ್ಷ್ಮೀ ಮಾಲಕ, ಒಡಿಯೂರು ಸೊಸೈಟಿ ನಿರ್ದೇಶಕ ದೇವಪ್ಪ ನೋಂಡಾ ಅವರು ಎ.7 ರಂದು ಸ್ವಗೃಹದಲ್ಲಿ ನಿಧನರಾದರು. ದೇವಪ್ಪ ನೋಂಡಾ(74ವರ್ಷ)ಅವರ ಆರೋಗ್ಯದಲ್ಲಿ ಏರುಪೇರಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ.

ಪುತ್ತೂರಿನಲ್ಲಿ ಬಾಬು ಜಗಜ್ಜೀವನ್‍ರಾಮ್ ಜನ್ಮ ದಿನಾಚರಣೆ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಪುತ್ತೂರಿನ ಮಿನಿ ವಿಧಾನ ಸೌಧದಲ್ಲಿರುವ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜ್ಜೀವನ್‍ರಾಮ್ ಅವರ 116ನೇ ಜನ್ಮ ದಿನಾಚರಣೆಯನ್ನು ನಡೆಸಲಾಯಿತು. ಪುತ್ತೂರಿನ ಕ್ಷೇತ್ರ ಶಿಕ್ಷಣಾಧಿಕಾರಿ ಬಾಬು ಜಗಜ್ಜೀವನ್‍ರಾಮ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ ಬಾಬು ಜಗಜ್ಜೀವನ್‍ರಾಮ್ ಅವರು ದೇಶದ

ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ವಿವಾ ಫ್ಯಾಶನ್ ಗೆ ಬೆಂಕಿ.

ಪುತ್ತೂರು ತಾಲ್ಲೂಕು ಉಪ್ಪಿನಂಗಡಿ ಇಲ್ಲಿನ ಬಟ್ಟೆ ಮಳಿಗೆಯಾದ ವಿವಾ ಫ್ಯಾಶನ್ ಗೆ ಬೆಂಕಿ ಬಿದ್ದಿದ್ದು, ಹೊತ್ತಿ ಉರಿದಿದೆ. ಬಹು ಮಹಡಿ ಕಟ್ಟಡದ ಒಂದು ಮತ್ತು ಎರಡನೇ ಮಹಡಿಯಲ್ಲಿ ಬಟ್ಟೆ ಶೋರೂಂ ಹೊಂದಿದ್ದು, ಬೆಳಗ್ಗೆ ಇದರೊಳಗಿನಿಂದ ಹೊಗೆ ಬರುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಈ ಮಹಡಿಯ ನೆಲ ಅಂತಸ್ತಿನಲ್ಲಿ ಸೋನಾ ಅಪ್ಟಿಕಲ್ಸ್ , ಆರ್ ಕೆ ಜ್ಯುವೆಲ್ಲರ್ ಸೇರಿದಂತೆ ಹಲವು ಅಂಗಡಿಗಳಿವೆ. ಸ್ಥಳೀಯರು ಹಾಗೂ ಅಗ್ನಿಶಾಮಕದಳದಿಂದ ಬೆಂಕಿ ನಂದಿಸುವ ಕೆಲಸ ನಡೆದಿದೆ

ಪರೀಕ್ಷಾ ಮುನ್ನಾ ದಿನವೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನಾಪತ್ತೆ. ನದಿಯಲ್ಲಿ ಶವ ಪತ್ತೆ

ಕಡಬ ಖಾಸಗಿ ಶಾಲಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಕೋಡಿಂಬಾಳ ಗುಂಡಿಮಜಲು ನಿವಾಸಿ ಪರಿಕ್ಷಾ ಮುನ್ನಾ ದಿನವೇ ನಾಪತ್ತೆಯಾಗಿದ್ದು, ಗುರುವಾರ ಕೋಡಿಂಬಾಳ ಸಮೀಪದ ಕುಮಾರಾಧಾರ ನದಿಯ ನಾಕೂರ ಗಯದಲ್ಲಿ ಬಾಲಕನ ಶವ ಪತ್ತೆಯಾಗಿದೆ.ಕೋಡಿಂಬಾಳ ಗ್ರಾಮದ ಮಡ್ಯಡ್ಕ ನಿವಾಸಿ ಮಂಜುನಾಥ ಶೆಟ್ಟಿ ಅವರ ಪತ್ರ ಅದ್ವೆತ್ ಶೆಟ್ಟಿ ಮೃತಪಟ್ಟ ಬಾಲಕ, ಈತ ಕಡಬ ಖಾಸಗಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯಾಗಿದ್ದು, ಕಲಿಕೆಯಲ್ಲಿ ಸ್ವಲ್ಪ ಹಿಂದೆ ಇದ್ದ, ಇದೇ

ಪುತ್ತೂರು ನಗರ ಪೊಲೀಸ್ ಠಾಣೆ ಹೆಡ್‌ಕಾನ್‌ಸ್ಟೇಬಲ್ ಪರಮೇಶ್ವರ ಗೌಡ ಅವರಿಗೆ ಮುಖ್ಯಮಂತ್ರಿ ಪದಕ

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಪರಮೇಶ್ವರ ಗೌಡ ಅವರು 2022ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ. ವಾರಂಟ್ ಕರ್ತವ್ಯ ನಿರ್ವಹಿಸುತ್ತಿರುವ ಪರಮೇಶ್ ಅವರು ಕಳೆದ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಗೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಮಾಡಿದ ಸಾಧನೆ ಮತ್ತು ಕರ್ತವ್ಯ ನಿಷ್ಠೆಗೆ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ

ಪುತ್ತೂರು: ರೈಲ್ವೆ ಮೇಲ್ಸೇತುವೆ ಅಗಲೀಕರಣಕ್ಕೆ ಶಿಲಾನ್ಯಾಸ

ಪುತ್ತೂರು: ಪುತ್ತೂರು ನಗರದ ನೆಹರುನಗರದಿಂದ ವಿವೇಕಾನಂದ ಕಾಲೇಜು ಸಂಪರ್ಕಿಸುವ ರಸ್ತೆಯಲ್ಲಿ ರೈಲ್ವೇ ಇಲಾಖೆಯ ಅನುದಾನ ರೂ.5.34 ಕೋಟಿ ವೆಚ್ಚದಲ್ಲಿ ರೈಲ್ವೇ ಮೇಲ್ಸೇತುವೆಯ ಅಗಲೀಕರಣ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ನೆರವೇರಿಸಿದರು. ರೈಲ್ವೇ ಮೇಲ್ಸೇತುವೆಯ ಬಳಿ ತೆಂಗಿನ ಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ನಮ್ಮ ಉದ್ದೇಶ ಇರುವುದು ಈ ರಸ್ತೆ ಮುಂದೆ ಚತುಷ್ಪಥ ರಸ್ತೆಯಾಗಬೇಕು. ಈ ನಿಟ್ಟಿನಲ್ಲಿ

ಪುತ್ತೂರು ಬಸ್ಸು ನಿಲ್ದಾಣಕ್ಕೆ ‘ಕೋಟಿ ಚೆನ್ನಯ’ ನಾಮಕರಣ

ಪುತ್ತೂರು: ಜಿಲ್ಲೆಯ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರನ್ನು ಪುತ್ತೂರಿನ ಬಸ್ಸು ನಿಲ್ದಾಣಕ್ಕೆ ಇಡುವ ಮೂಲಕ ಅವರ ಹೆಸರನ್ನು ಮುಂದಿನ ಪೀಳಿಗೆಗೆ ನೆನಪಿಸುವ ಕೆಲಸ ಮಾಡಲಾಗಿದೆ. ಸರ್ಕಾರವು ಅವಳಿ ವೀರರ ನಾಮಕರಣ ಮಾಡಿ ಅವರಿಗೆ ಮಾನ್ಯತೆಯನ್ನು ನೀಡುವ ಕಾರ್ಯ ಮಾಡಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಭಾನುವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದದ ಪುತ್ತೂರು ಬಸ್ಸು ನಿಲ್ದಾಣಕ್ಕೆ ‘ಕೋಟಿ ಚೆನ್ನಯ’ ಬಸ್ಸು ನಿಲ್ದಾಣ  ನಾಮಕರಣ

ನಾಳೆ ಪುತ್ತೂರಿಗರ ದಶಕದ ಬೇಡಿಕೆಯಾದ ರೈಲ್ವೆ ಅಂಡರ್‌ಪಾಸ್ ಲೋಕಾರ್ಪಣೆ.

ಪುತ್ತೂರು: ಮಾ. 26 : ಪುತ್ತೂರಿನ ಜನರ ಬಹು ವರ್ಷದ ಕಾಲದ ಬೇಡಿಕೆಯಾದ ಎಪಿಎಂಸಿ ರಸ್ತೆಯಲ್ಲಿ 14 ಕೋಟಿ ವೆಚ್ಚದಲ್ಲಿ ರೈಲ್ವೆ ಅಂಡರ್‌ಪಾಸ್ ನಿರ್ಮಾಣಗೊಂಡಿದೆ. ಇದರ ಲೋಕಾರ್ಪಣಾ ಕಾರ್ಯಕ್ರಮವು ಮಾರ್ಚ್ 26ರಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ. ಶಾಸಕ ಸಂಜೀವ ಮಠಂದೂರು, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಎಸ್. ಅಂಗಾರ, ರೈಲ್ವೆ ಮತ್ತು ಎಪಿಎಂಸಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. 4

ಪಾಲ್ತಾಡು ಮಣಿಕರ ಶಾಲೆಯ ನೂತನ ಶಾಲಾ ಕೊಠಡಿ : ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಪುತ್ತೂರು. ಕೋಳ್ತಿಗೆ ಗ್ರಾಮದ ಮಣಿಕಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಕೊಠಡಿಗಳ ಹಾಗೂ ಶಾಲಾ ಮಕ್ಕಳಿಗೆ ಆಧುನಿಕ ಶಿಕ್ಷಣಕ್ಕಾಗಿ ಸ್ಮಾರ್ಟ್ ಕ್ಲಾಸ್ ಹಾಗೂ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಪುತ್ತೂರಿನ ಜನಪ್ರಿಯ ಶಾಸಕರಾದ ಸಂಜೀವ ಮಠದೂರ್ ಉದ್ಘಾಟಿಸಿದರು. ಮಣಿಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಥಳ ದಾನಗೈದ ಮೇನಾಳ ದಿ. ಮೀಯಕ್ಕೆ ರೈ, (ಪಾಲ್ತಾಡು ಪಟೇಲ್ ದಿವಂಗತ ವೆಂಕಪ್ಪ ರೈ ಯವರ ಧರ್ಮಪತ್ನಿ ) ಇವರ ಭಾವಚಿತ್ರವನ್ನು