Home Posts tagged #puttur (Page 34)

ಶಕುಂತಳಾ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ : ಪಕ್ಷದ ವರಿಷ್ಠರಿಗೆ ಮಹಿಳಾ ಕಾಂಗ್ರೆಸ್ ಸಮಿತಿ ಆಗ್ರಹ

ಪುತ್ತೂರು ಕಾಂಗ್ರೇಸ್ ನಲ್ಲಿ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರಿಗೆ ಆದ್ಯತೆ ನೀಡಬೇಕು. ಅದರಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಬೇಕು ಎಂದು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ. ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಾರದಾ

ಹಾವು ಕಡಿತಕ್ಕೆ ತುತ್ತಾಗಿದ್ದ ತಾಯಿಗೆ ಮರು ಜನ್ಮ ನೀಡಿದ ಮಗಳು

ತಾಯಿಗೆ ವಿಷದ ಹಾವು ಕಚ್ಚಿದ ಸಂದರ್ಭ ದೃತಿಗೆಡದ ಮಗಳು, ಆ ವಿಷವನ್ನು ಚೀಪಿ ಹೊರ ತೆಗೆದು ಸಿನಿಮೀಯ ರೀತಿಯಲ್ಲಿ ಅಮ್ಮನನ್ನು ರಕ್ಷಿಸಿದ ಘಟನೆ ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದಿಂದ ವರದಿಯಾಗಿದೆ. ಈ ಸಾಹಸ ಮೆರೆದ ಯುವತಿಗೆ ಸಾರ್ವಜನಿಕ ವಲಯದಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ತಾಯಿಗೆ ಮರು ಜನ್ಮ ನೀಡಿದ ಮಗಳು ಎಂದು ಜನರು ಕೊಂಡಾಡುತ್ತಿದ್ದಾರೆ.ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಎಟ್ಯಡ್ಕ ಎಂಬಲ್ಲಿ ವಾರದ ಹಿಂದೆ ಈ ಘಟನೆ ನಡೆದಿದ್ದು,

ಏ.10ರಿಂದ ಪುತ್ತೂರು ಜಾತ್ರೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹತ್ತಾರು ಮಾಸ್ಟರ್ ಪ್ಲಾನ್ ಅಭಿವೃದ್ದಿ ಕಾರ್ಯಗಳು ನಿರಂತರ ನಡೆಯುತ್ತಿದ್ದು, ಕೆರೆಯ ಅಭಿವೃದ್ಧಿ ಕಾರ್ಯಕ್ಕೆ ಸಂಬಂಧಿಸಿ ಶಿಲಾ ಕಟ್ಟೆಯ ಕಾಮಗಾರಿ ಜಾತ್ರೆ ಮುಂದೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ ಅನ್ನಛತ್ರ ಮೇಲಂತಸ್ತು ನಿರ್ಮಾಣ, ಸಭಾಭವನದ ನವೀಕರಣ, ಆವರಣಗೋಡೆ, ದೇವಳದ ಹೊರಾಂಗಣ ಚರಂಡಿ ಅಭಿವೃದ್ಧಿ, ಇಂಟರ್‍ಲಾಕ್ ಅಳವಡಿಕೆ, ರಥ ಮಂದಿರ ನಿರ್ಮಾಣ ಸಹಿತ ಹಲವಾರು

ಮಾ.26 ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಲೋಕಾರ್ಪಣೆ-ವಿವೇಕಾನಂದ ಕಾಲೇಜು ಸಂಪರ್ಕದ ಮೇಲ್ಸೇತುವೆ ಅಗಲೀಕರಣಕ್ಕೆ ಶಿಲಾನ್ಯಾಸ

ಪುತ್ತೂರು: ರೂ.13 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆಯ ಮೂಲಕ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉಪ್ಪಿನಂಗಡಿಯನ್ನು ಸಂಪರ್ಕಿಸುವ ರಸ್ತೆಗೆ ರೈಲ್ವೆ ಅಂಡರ್ ಬ್ರಿಡ್ಜ್‌ಗೆ 10 ತಿಂಗಳ ಬಳಿಕ ಲೋಕಾರ್ಪಣೆಗೆ ಸಿದ್ದಗೊಂಡಿದೆ. ಮಾ.18ರಂದು ಬ್ರಿಡ್ಜ್‌ನ ಅಂತಿಮ ಬಾಕ್ಸ್ ಕಾಮಗಾರಿ ನಡೆಯುತ್ತಿದ್ದು, ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಶಾಸಕ ಸಂಜೀವ ಮಠಂದೂರು ಕಾಮಗಾರಿ ಪರಿಶೀಲಿಸಿ ಮಾ.26ಕ್ಕೆ ಎಪಿಎಂಸಿ

ಪುತ್ತೂರಿಗೆ ಜನರ ಬೇಡಿಕೆಗೆ ಅನುಗುಣವಾಗಿ ಬೇರೆಯೇ ಪ್ರಣಾಳಿಕೆ: ಶಾಸಕ ಸಂಜೀವ ಮಠಂದೂರು

ಪುತ್ತೂರು: ಚುನಾವಣೆ ಸಂದರ್ಭ ಹಿಂದಿನ ಸಲ ಅಭಿಪ್ರಾಯ ಸಂಗ್ರಹ ಮಾಡಿದ್ದೆವು. ಅದರ ಆಧಾರದಲ್ಲಿ ಕಳೆದ ೫ ವರ್ಷಗಳಲ್ಲಿ ನಾನು ಶಾಸಕನಾಗಿ ಮತ್ತು ಎರಡೂವರೆ ವರ್ಷದಲ್ಲಿ ನಗರಸಭೆಯಿಂದ ಏನೇನು ಭರವಸೆಯನ್ನು ಇಟ್ಟಿದ್ದಾರೋ, ಏನು ಬೇಡಿಕೆಯನ್ನು ಸಲ್ಲಿಸಿದ್ದಿರೋ ಅದರ ಅಧಾರದಲ್ಲಿ ಒಂದಷ್ಟು ಕೆಲಸ ಕಾರ್ಯ ಮಾಡಿದ್ದೇವೆ. ಶೇ.೭೫ ರಷ್ಟು ಪ್ರಣಾಳಿಕೆಯ ಬೇಡಿಕೆಯನ್ನು ನಮ್ಮ ಸರಕಾರ ಈಡೇರಿಸಿದೆ. ಮುಂದಿನ ಚುನಾವಣೆಯ ನಮ್ಮ ಪ್ರಣಾಳಿಕೆ, ನಾಗರಿಕರ ಪ್ರಣಾಳಿಕೆ ಆಗಬೇಕು. ಈ

Puttur : ಅಕ್ರಮ ಗಾಂಜಾ ಮಾರಾಟ ಪ್ರಕರಣ – ಆರೋಪಿ ಬಂಧನ, ರೂ. 40ಸಾವಿರ ಮೌಲ್ಯದ ಗಾಂಜಾ ವಶ.

ಪುತ್ತೂರು: ಮಾದಕ ಪದಾರ್ಥ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಆರೋಪಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಮತ್ತು ಎಸ್.ಐ ಅವರ ನೇತೃತ್ವದ ಕಾರ್ಯಾಚರಣೆಯಲ್ಲಿ ಬಂಧಿಸಿ, ಆರೋಪಿಯಿಂದ ರೂ. 40ಸಾವಿರ ಮೌಲ್ಯದ 1.020 ಕೆ.ಜಿ ತೂಕದ ಗಾಂಜಾವನ್ನು ವಶಕ್ಕೆ ಪಡೆದು ಕೊಂಡ ಘಟನೆ ಪುತ್ತೂರು ಮುಕ್ರಂಪಾಡಿಯ ಬಸ್‍ತಂಗುದಾಣದಲ್ಲಿ ಮಾ.16ರಂದು ನಡೆದಿದೆ. ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆ ನಿವಾಸಿ ಅಬೂಬಕ್ಕರ್ ಎಂಬವರ

ಪುತ್ತೂರು ನಗರಸಭೆ ಸದಸ್ಯ ನೇಣು ಬಿಗಿದು ಆತ್ಮಹತ್ಯೆ.

ಪುತ್ತೂರು: ನಗರಸಭಾ ಸದಸ್ಯರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಸಾಲ್ಮರ ಸಮೀಪದ ಊರಮಾಲು ಎಂಬಲ್ಲಿ ಗುರುವಾರ ನಡೆದಿದೆ. ಇಲ್ಲಿನ ನಿವಾಸಿ ಶಿವರಾಮ ಸಫಲ್ಯ(46) ಮೃತಪಟ್ಟ ವ್ಯಕ್ತಿ. ಅವರು ಪುತ್ತೂರು ನಗರಸಭೆಯ 1ನೆ ವಾರ್ಡಿನ ಸದಸ್ಯರಾಗಿದ್ದಾರೆ.ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಅವರು ಮನೆಯ ಒಳಗಡೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಅವರ ಪತ್ನಿಯು ಪತಿಯ

ಮಾ.11ಕ್ಕೆ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಹೇಳಿಕೆ

ಪುತ್ತೂರು: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿಯಿಂದ ಹಮ್ಮಿಕೊಂಡಿರುವ ಪ್ರಜಾ ಧ್ವನಿ ಯಾತ್ರೆ ಮಾ.11ರಂದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಲಿದ್ದು, ಬೆಳಿಗ್ಗೆ ಉಪ್ಪಿನಂಗಡಿ, ವಿಟ್ಲ, ಮಧ್ಯಾಹ್ನ ಕುಂಬ್ರ ಜಂಕ್ಷನ್ ಸಂಜೆ ಪುತ್ತೂರು ಕಿಲ್ಲೆ ಮೈದಾನದಲ್ಲಿ ಸಮಾವೇಶಗೊಳ್ಳಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಅವರು ಹೇಳಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಬೇರೆ ಬೇರೆ ಆಶ್ವಾಸನೆಗಳಿಂದ ಕೋಮು ಭಾವನೆ

ಶಿಕ್ಷಣ ಪದ್ಧತಿಯಿಂದ ದೇಶದ ಚಿತ್ರಣ ಬದಲು ಮಾಡಲು ಸಾಧ್ಯ: ಶಾಸಕ ಸಂಜೀವ ಮಠಂದೂರು

ಪುತ್ತೂರು: ಶಿಕ್ಷಣ ಪದ್ಧತಿಯಿಂದ ದೇಶದ ಚಿತ್ರಣ ಬದಲು ಮಾಡಲು ಸಾಧ್ಯವಿದ್ದು, ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲೇ ಅಭ್ಯಾಸ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಐದು ಸರ್ಕಾರಿ ಪದವಿ ಕಾಲೇಜು ಹೊಂದಿರುವ ಏಕೈಕ ವಿಧಾನ ಸಭಾಕ್ಷೇತ್ರ ಪುತ್ತೂರು. ಅದರಲ್ಲೂ ಒಂದು ಮಹಿಳಾ ಕಾಲೇಜು ಇರುವುದು ವಿಶೇಷವಾಗಿದೆ. ಇಲ್ಲಿರುವ ಪ್ರಾಥಮಿಕ ಶಾಲೆಯನ್ನು

ಪುತ್ತೂರಿನಲ್ಲಿ ಎಸ್‍ಟಿ ಮೋರ್ಚಾದ ಜಿಲ್ಲಾ ಸಮಾವೇಶ

ಪುತ್ತೂರು: ಕೇವಲ ಅಧಿಕಾರ ಗದ್ದುಗೆಯ ಉದ್ದೇಶ ಇಟ್ಟುಕೊಂಡು ಬಿಜೆಪಿ ಪಕ್ಷ ಸ್ಥಾಪನೆಯಾಗಿಲ್ಲ. ಇದಕ್ಕೆ ಹೊರತಾಗಿ ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಸಂಕಲ್ಪ ತೊಟ್ಟಿರುವ ಏಕೈಕ ಪಕ್ಷ ಇದ್ದರೆ ಅದು ಬಿಜೆಪಿ ಪಕ್ಷ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ ಹೇಳಿದರು.ಅವರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬಿಜೆಪಿ ಎಸ್‍ಟಿ ಮೋರ್ಚಾದ ಜಿಲ್ಲಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.ಸಾಮಾಜಿಕ ನ್ಯಾಯ ನೀಡಲು ಪೂರಕವಾಗಿ