Home Posts tagged #puttur (Page 35)

ಎನ್‍ಐಎ ತಂಡ ಸಂಚರಿಸುತಿದ್ದ ಪೊಲೀಸ್ ವಾಹನಕ್ಕೆ ಬೈಕ್ ಢಿಕ್ಕಿ…!

ಪುತ್ತೂರು: ಪುತ್ತೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ) ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮಾಣಿ ಮೈಸೂರು ರಸ್ತೆಯ ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಭಾನುವಾರ ರಾತ್ರಿ ವಿಶೇಷ ತನಿಖೆಯ ದೃಷ್ಠಿಯಿಂದ ಸಂಚರಿಸುತ್ತಿದ್ದ ಎನ್. ಐ. ಎ. ತಂಡದ ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿದೆ.

ಹಾರಾಡಿ ರೈಲ್ವೇ ನಿಲ್ದಾಣ ಸಂಪರ್ಕ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಪ್ರಗತಿ ; ಗುಣಮಟ್ಟದ ಕಾಮಗಾರಿಗಾಗಿ ಮರದ ಹಲಗೆ ತೆರವು ಗೊಳಿಸಿದ ಅಧಿಕಾರಿಗಳು !

ಪುತ್ತೂರು: ಹಾರಾಡಿ ರೈಲ್ವೇ ನಿಲ್ದಾಣ ಸಂಪರ್ಕ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಗುಣಮಟ್ಟದ ಕಾಮಗಾರಿಗಾಗಿ ಈಗಾಗಲೇ ಅಳಡಿಸಿದ ಮರದ ಹಲಗೆಯನ್ನು ತೆರವುಗೊಳಿಸಿ ಕಬ್ಬಿಣದ ಹಲಗೆಯನ್ನು ಅಳವಡಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಮಾ.2ರಂದು ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಿಂದ ಬಂದಿರುವ ಕಾರ್ಯಪಾಲಕ ಅಭಿಯಂತರ ಪುರಂದರ, ಸಹಾಯಕ ಕಾರ್ಯಪಾಲಕ ಅಭಿಯಂತರ ಅರುಣ್, ಕೃಷ್ಣಮೂರ್ತಿ ಅವರು ಹಾರಾಡಿಯಿಂದ ರೈಲ್ವೇ ನಿಲ್ದಾಣ ಕಾಮಗಾರಿ ನಡೆಯುತ್ತಿರುವುದನ್ನು

ವಿಜಯಕುಮಾರ್ ಹೆಬ್ಬಾರಬೈಲು ಅವರಿಗೆ”ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ “

ಪುತ್ತೂರು : ಕವಿ, ಪತ್ರಕರ್ತ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಅವರ ಸಂಪಾದಕತ್ವದ “ಪೂವರಿ” ತುಳು ಪತ್ರಿಕಾ ಕ್ಷೇತ್ರದಲ್ಲಿ ನಾಡಿಗೆ ಸಲ್ಲಿಸಿದ ಅನುಪಮ ಸಾಧನೆಗಾಗಿ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನ – 2023ರ “ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ”ಯನ್ನು ಒಡ್ಯ ಸರಕಾರಿ ಶಾಲಾ ವಠಾರದಲ್ಲಿ ಜರಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಡಕೊಂಡಿದೆ. ತುಳುನಾಡಿನಲ್ಲಿ ಕಳೆದ ಎಂಟು ವರ್ಷಗಳಿಂದ ಸದ್ದು ಮಾಡುತ್ತಿರುವ ತುಳು

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ನೌಕರರ ಮುಷ್ಕರ : ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

ಪುತ್ತೂರು: ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಮಾ.1ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇದಕ್ಕೆ ಪುತ್ತೂರು ತಾಲೂಕು ಶಾಖೆಯಿಂದ ಬೆಂಬಲ ಸೂಚಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪುತ್ತೂರು ಅಧ್ಯಕ್ಷ ಶಿವಾನಂದ ಆಚಾರ್ಯ ಹೇಳಿದರು. ಅವರು

’ಪೂವರಿ’ ಪತ್ರಿಕೆಗೆ ರಾಜ್ಯ ಗಡಿನಾಡ ಧ್ವನಿ ಮಾಧ್ಯಮ ಪ್ರಶಸ್ತಿ

ಪುತ್ತೂರು: ಗಡಿನಾಡ ಧ್ವನಿ, ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ರಿ., ಆರ್ಲಪದವು ಹಾಗೂ ಇತರ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ನಡೆಯುವ 6ನೇ ಕರ್ನಾಟಕ ಗಡಿನಾಡ ಸಮ್ಮೇಳನದ ’ಗಡಿನಾಡ ಧ್ವನಿ ರಾಜ್ಯ ಮಾಧ್ಯಮ ಪ್ರಶಸ್ತಿಗೆ 2014 ರಲ್ಲಿ ಆರಂಭಿಸಲಾದ ವಿಜಯ್‌ಕುಮಾರ್ ಭಂಡಾರಿ ಹೆಬ್ಬಾರಬೈಲು ಪ್ರಧಾನ ಸಂಪಾದಕತ್ವದಲ್ಲಿ ಹೊರಡುತ್ತಿರುವ ಒಂದುವರೆ ಕೋಟಿ ತುಳುವರ ಏಕೈಕ ತುಳು ಮಾಸಿಕ ಪತ್ರಿಕೆ ’ಪೂವರಿ’ ಆಯ್ಕೆಯಾಗಿದೆ.ಫೆ. 25ರಂದು ಪುತ್ತೂರು ತಾಲೂಕಿನ ಒಡ್ಯ ಉನ್ನತ ಹಿರಿಯ

ಕಡಬದಲ್ಲಿ `ಆಪರೇಷನ್ ಎಲಿಫೆಂಟ್’ ಕಾರ್ಯಾಚರಣೆ

ಊರಿಗೆ ಬಂದು ಉಪಟಳ ನೀಡಿ, ಇಬ್ಬರನ್ನೂ ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ `ಆಫರೇಷನ್ ಎಲಿಫೆಂಟ್’ ಕಾರ್ಯಾಚರಣೆ ಆರಂಭಗೊಂಡಿದೆ. ಎಲ್ಲಾ ಸಿದ್ಧತೆಗಳೊಂದಿಗೆ ಮಂಗಳವಾರ ಬೆಳಿಗ್ಗಿನಿಂದಲೇ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಕಾಡಾನೆಯನ್ನು ಹಿಡಿಯಲು ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ 5 ಆನೆಗಳು ಆಗಮಿಸಿದೆ. ಕಾಡಾನೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ,ಕಂಜನ್ ಹಾಗು ಮಹೇಂದ್ರ ಎಂಬ

ರಾಜ್ಯಮಟ್ಟದ ಓಫನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ವಿದ್ಯಾರ್ಥಿಗಳ ಸಾಧನೆ

ಪುತ್ತೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಓಫನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ರಿಶೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ತೃತೀಯ ಮತ್ತು ರಿಯೋನ್ ಲಸ್ರಾದೋ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ಪುತ್ತೂರು ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ನಿವಾಸಿಗಳಾದ ರೋಶನ್ ಲಸ್ರಾದೋ ಮತ್ತು ಸುಶಾಂತಿ ರೋಡ್ರಿಗಸ್ ದಂಪತಿಗಳ ಪುತ್ರರಾಗಿದ್ದು, ಪುತ್ತೂರು ಬೆಂಥನಿ ಆಂಗ್ಲ

ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ವಿರುದ್ಧ ಕಿಡ್ನ್ಯಾಪ್ ಪ್ರಕರಣ ದಾಖಲು

ತನ್ನ ಅಳಿಯನನ್ನೇ ಅಪಹರಣ ಮಾಡಿ ಆಸ್ಪತ್ರೆಗೆ ದಾಖಲಿಸಿ ಮಾನಸಿಕ ಅಸ್ವಸ್ಥ ಎಂದು ಬಿಂಬಿಸಿದ ಆರೋಪದ ಮೇಲೆ ಪುತ್ತೂರು ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಹಾಗೂ ಅವರ ಕುಟುಂಬದ ಐವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದಿವ್ಯಪ್ರಭಾ ಅವರ ವಿರುದ್ದ ಅವರ ಅಳಿಯ ನವೀನ್ ಗೌಡ ಅವರು ದೂರು ನೀಡಿದ್ದು, ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ದಿವ್ಯಪ್ರಭಾ ಹಾಗೂ ಮಗಳು ಸ್ಪಂದನಾ , ಪರಶುರಾಮ್ ,

ಯಕ್ಷರಂಗದ ಭೀಷ್ಮ’ ಬಲಿಪ ಭಾಗವತರು ಇನ್ನಿಲ್ಲ

ಮೂಡುಬಿದಿರೆ: ಯಕ್ಷರಂಗದ ಭಾಗವತಿಕೆಯ ಭೀಷ್ಮ ಎಂದೇ ಖ್ಯಾತರಾಗಿರುವ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರು(86) ಗುರುವಾರ ಸಾಯಂಕಾಲ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರೂರಿನಲ್ಲಿರುವ ನೂಯಿ ಸ್ವಗೃಹದಲ್ಲಿ ನಿಧನರಾದರು. ಕಳೆದ ಕೆಲವು ದಶಕಗಳಿಂದ ಯಕ್ಷಗಾನ ಭಾಗವತಿಕೆಯಲ್ಲಿ ತಮ್ಮ ಕಂಚಿನ ಕಂಠದ ಮೂಲಕ ಸುಪ್ರಸಿದ್ಧರಾಗಿದ್ದ ಅವರು ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದರು.ವರ್ಷ ಪ್ರಾಯದ ಭಾಗವತರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ ನಿಧನರಾಗಿದ್ದಾರೆ.ನಾಲ್ವರು

ದ.ಕ. ಜಿಲ್ಲೆಯಲ್ಲಿ ಒಕ್ಕಲಿಗ ಗೌಡ ಸಮುದಾಯಕ್ಕೆ 2 ಸ್ಥಾನ ನೀಡಬೇಕು : ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಮನವಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಕ್ಕಲಿಗ ಗೌಡ ಸಮುದಾಯಕ್ಕೆ ಎರಡು ಸ್ಥಾನವನ್ನು ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮನವಿಯನ್ನು ಮಾಡಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾ ಅಧ್ಯಕ್ಷರಾದ ಲೋಕಯ್ಯ ಗೌಡ ಅವರು, ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರು, ಬೆಳ್ತಂಗಡಿ ಕ್ಷೇತ್ರಗಳಲ್ಲಿ ಪ್ರಾತಿನಿದ್ಯ ಕೊಡಬೇಕು. ಎರಡು