ಪುತ್ತೂರು :ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ, ಪ್ರಸ್ತುತ ವಿವಾಹಿತರಾಗಿ ಬೆಂಗಳೂರಿನಲ್ಲಿ ವಾಸವಾಗಿರುವ ಪುಷ್ಪರೇಖಾ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್‍ಡಿ ಪದವಿ ಪ್ರದಾನ ಮಾಡಿ ಗೌರವಿಸಿದೆ. ಪುಷ್ಪರೇಖಾ ಅವರು ರಸಾಯನ ಶಾಸ್ತ್ರ ವಿಭಾಗಕ್ಕೆ ಸಂಬಂಧಿಸಿದಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕೈಗಾರಿಕಾ ರಸಾಯನ ಶಾಸ್ತ್ರ ವಿಭಾಗದ ಪ್ರಾದ್ಯಾಪಕಿ
ಪುತ್ತೂರು : ದ.ಕ.ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರು ಆಯ್ಕೆಯಾಗಿದ್ದಾರೆ. ಮಂಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಪುತ್ತೂರು ತಾಲೂಕಿನ ಈಶ್ವರಮಂಗಲ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಡಾ.ನಿಖಿಲ್.ಕೆ,ಉಪಾಧ್ಯಕ್ಷರಾಗಿ ಬಂಟ್ವಾಳ
ಪುತ್ತೂರು : ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಮತ್ತು 2022-23ನೇ ಸಾಲಿನಲ್ಲಿ ಕಾರ್ಮಿಕರ ಮಕ್ಕಳಿಗೆ ವಿತರಿಸಬೇಕಾಗಿದ್ದ ಶೈಕ್ಷಣಿಕ ಧನಸಹಾಯವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಜ.9ರಂದು ಬೆಂಗಳೂರಿನ ಕಾರ್ಮಿಕ ಕಲ್ಯಾಣ ಮಂಡಳಿಯ ಸುರಕ್ಷಾ ಭವನದ ಎದುರು ನಡೆಸಲುದ್ದೇಶಿಸಿರುವ ಪ್ರತಿಭಟನೆಗೆ ಅವಕಾಶ ನೀಡದ ಕಾರಣ ಮುಂದೆ ಕಾನೂನು ಹೋರಾಟಕ್ಕಿಳಿಯುತ್ತೇವೆ ಎಂದು ಕಡಬ ಮರ್ಧಾಳದ ಶ್ರಮಿಕ ಕಟ್ಟಡ ಮತ್ತು ಇತರೇ ನಿರ್ಮಾಣ
ಪುತ್ತೂರು: ಉಪ ಬೆಳೆಯಾಗಿ ಅತಿ ಬೇಡಿಕೆ ಪಡೆಯುತ್ತಿರುವ ಕಡಿಮೆ ಜಾಗ, ಖರ್ಚು ಬಯಸುವ ಮೀನಿನ ಕೃಷಿಗೆ ಮುಂದಾಗಬೇಕು ಎಂದು ರಾಜ್ಯ ಬಂದರು ಮತ್ತು ಒಳನಾಡು ಮೀನುಗಾರಿಕಾ ಇಲಾಖೆ ಸಚಿವ ಎಸ್. ಅಂಗಾರ ಮನವಿ ಮಾಡಿದ್ದಾರೆ. ಪುತ್ತೂರಿನಲ್ಲಿ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕುಗಳನ್ನೊಳಗೊಂಡ ಉಪವಿಭಾಗ ವ್ಯಾಪ್ತಿಯ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ತಾಲೂಕು ಪಂಚಾಯತ್ ಕಟ್ಟಡದಲ್ಲಿ ಅವರು ಉದ್ಘಾಟಿಸಿದರು.ಇಂದು ಒಳನಾಡು ಮೀನುಗಾರಿಕೆಗೆ ಸಂಬಂಧಿಸಿ
ಪುತ್ತೂರು: ರೆಂಜ ಮಾರ್ಗವಾಗಿ ಸುಳ್ಯ ಪದವಿಗೆ ಬಸ್ ಸಂಪರ್ಕ ಕಲ್ಪಿಸಬೇಕೆಂದು ಆಗ್ರಹಿಸಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಜ.3 ರಂದು ಪುತ್ತೂರು ತಾಲೂಕು ಆಡಳಿತ ಸೌಧ ಮತ್ತು ಕೆಎಸ್‍ಆರ್‍ಟಿಸಿ ವಿಭಾಗೀಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಬಸ್ ಇಲ್ಲದ ಮೇಲೆ ನಮಗೆ ಪಾಸ್ ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುತ್ತೂರು ರೆಂಜ ಮಾರ್ಗವಾಗಿ ಸುಳ್ಯಪದವಿಗೆ ಈ ಹಿಂದೆ ಬಸ್ ಸಂಪರ್ಕ ವ್ಯವಸ್ಥೆ ಇದ್ದು
ಪುತ್ತೂರು: ವಿಧಾನಸಭೆಯ ಅಧಿವೇಶನದಲ್ಲಿ ಅಡಿಕೆ ಬೆಳೆಗಾರರಿಗೆ ಭವಿಷ್ಯವಿಲ್ಲ, ಅಡಿಕೆ ಬೀದಿ ಪಾಲಾಗುತ್ತದೆ ಎಂಬ ಮಾರಕ ಹೇಳಿಕೆ ನೀಡಿ ಬೆಳೆಗಾರರನ್ನು ಸಂದಿಗ್ಧ ಪರಿಸ್ಥಿತಿಗೆ ತಂದೊಡ್ಡಿದ್ದಾರೆಂದು ಆರೋಪಿಸಿದಲ್ಲದೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ತತ್‍ಕ್ಷಣವೆ ಸಚಿವ ಸ್ಥಾನದಿಂದ ಕೈ ಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ವತಿಯಿಂದ ಪುತ್ತೂರು ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗೆ ಜ.2ರಂದು ಮನವಿ
ಪುತ್ತೂರು:ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬ್ಲಾಕ್ ಕಿಸಾನ್ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ರಾಜ್ಯ ಗೃಹ ಸಚಿವರು ಅಡಕೆ ಬೆಳೆಗಾರರ ಕುರಿತು ವಿರೋಧಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟನಾ ಸಭೆ ಸೋಮವಾರ ಅಮರ್ ಜವಾನ್ ಸ್ಮಾರಕದ ಬಳಿಕ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ, ಜಿಲ್ಲೆಯ ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ಅಡಕೆಯ ಕುರಿತು ಗೃಹ ಸಚಿವರು ಅಡಕೆಗೆ ಭವಿಷ್ಯವಿಲ್ಲ ಎಂದು ವಿರೋಧಿ ಹೇಳಿಕೆ
ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಪಳ್ಳತ್ತೂರು -ಬಂಟಕಲ್ಲು-ಬಾರೆಕೊಚ್ಚಿ-ಕಟ್ಟತ್ತಾರು ಕಾಲನಿಗೆ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ರೈತ ಸಂಘ ಹಸಿರು ಸೇನೆ (ವಾಸುದೇವ ಬಣ) ಹಾಗೂ ಸ್ಥಳೀಯ ನಿವಾಸಿಗಳು ಪುತ್ತೂರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.ಈ ಭಾಗದಲ್ಲಿ ಸುಮಾರು ೩೦ ಮನೆಗಳಿಗೆ ಸಂಪರ್ಕ ರಸ್ತೆಯಿಲ್ಲ. ಹಲವು ದಶಕಗಳಿಂದ ಇವರು ವಾಸಿಸುತ್ತಿದ್ದರೂ ಅನಾರೋಗ್ಯದಂತಹ ತುರ್ತು ಸಂದರ್ಭದಲ್ಲಿ ರೋಗಿಯನ್ನು ಹೊತ್ತುಕೊಂಡೇ ಸಾಗಬೇಕಾದ ಸ್ಥಿತಿ
ಪುತ್ತೂರು: ಭಾರತವನ್ನು ಬೆಸೆಯುವ ನಿಟ್ಟಿನಲ್ಲಿ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ ಜೋಡೋ ಯಾತ್ರೆಯಿಂದ ಕಂಗೆಟ್ಟಿರುವ ಬಿಜೆಪಿಯು ಇದೀಗ ಅದನ್ನು ತಡೆಯುವ ನಿಟ್ಟಿನಲ್ಲಿ ಕೋವಿಡ್ ನೆಪ ಬಳಸಿಕೊಳ್ಳುತ್ತಿದೆ ಎಂದು ಕೆಪಿಸಿಸಿ ರಾಜ್ಯ ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ ಆರೋಪಿಸಿದ್ದಾರೆ. ಅವರು ಶನಿವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜೋಡೋ ಯಾತ್ರೆಯನ್ನು ನಿಲ್ಲಿಸಿ ಇಲ್ಲದಿದ್ದಲ್ಲಿ ಕೋವಿಡ್
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರ ಕಾರು ಅಪಘಾತ ಪ್ರಾಣಪಾಯದಿಂದ ಪಾರು. ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರ ಖಾಸಗಿ ಒಡೆತನದ ಕಾರೊಂದು ಪುತ್ತೂರು ಬೈಪಾಸ್ ರಸ್ತೆ ನೂಜಿ ಎಂಬಲ್ಲಿ ಡಿ.29 ರಂದು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಡಾ.ದೀಪಕ್ ರೈ ದಂಪತಿ ಸಮೇತ ಮಂಗಳೂರು ಕಡೆಯಿಂದ ಕಾರಿನಲ್ಲಿ ಬರುತ್ತಿದ್ದ ವೇಳೆ ಬೈಪಾಸ್ ರಸ್ತೆಯ ನೂಜಿ ಎಂಬಲ್ಲಿ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೆ




























