Home Posts tagged #puttur (Page 40)

ಗಣರಾಜ್ಯೋತ್ಸವ ಫೆರೇಡಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜೀದಾಬಾನು ಆಯ್ಕೆ

2023 ನೇ ಸಾಲಿನಲ್ಲಿ ದೆಹಲಿಯಲ್ಲಿ ನಡೆಯಲಿರುವ ಭಾರತ ಗಣರಾಜ್ಯೋತ್ಸವ ಫೆರೇಡ್ ನಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜಿದಾಬಾನು ಆಯ್ಕೆ. ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್ ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರುವ ಏಳು ಮಂದಿಯಲ್ಲಿ ಇವರು ಒಬ್ಬರಾಗಿದ್ದಾರೆ. ಇವರು ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಹಿರಿಯ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಸಂಹಿತಾ ಅನಾರೋಗ್ಯದಿಂದ ನಿಧನ

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಕಾಲೇಜಿನ ವಿದ್ಯಾರ್ಥಿನಿ ಸಂಹಿತಾ ಅವರು ಅನಾರೋಗ್ಯದಿಂದ ಡಿ.24 ರಂದು ನಿಧನರಾದರು.ಮಾಡಾವು ನಿವಾಸಿ ಸಂಹಿತಾ ಅವರು ಅನಾರೋಗ್ಯದಿಂದಾಗಿ ಕಳೆದ ಎರಡು ದಿನಗಳಿಂದ ಕಾಲೇಜಿಗೆ ಹೋಗದೆ ರಜೆಯಲ್ಲಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದರು..23 ರಂದು ಆರೋಗ್ಯವಂತರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ಡಿ.24ರಂದು ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ

ಡಿ.25ರಂದು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಯುವ ಕ್ರೀಡಾ ಸಂಭ್ರಮ

ಪುತ್ತೂರು : ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘ ಮತ್ತು ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ವಲಯದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಸಮುದಾಯದ ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ ಕಾರ್ಯಕ್ರಮ ಡಿ.25 ರಂದು ಬೆಳಗ್ಗಿನಿಂದ ಸಂಜೆ ತನಕ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರೀಡಾ ಸಮಿತಿಯ ಸಂಚಾಲಕ ಎ.ವಿ.ನಾರಾಯಣ ಸುದ್ದಿಗೋಷ್ಠಿಯಲಿ ತಿಳಿಸಿದರು. ಬೆಳಿಗ್ಗೆ 9 ಗಂಟೆಗೆ ಕ್ರೀಡಾಕೂಟವನ್ನು ಊರ ಗೌಡರಾದ ಕೊಡಿಪ್ಪಾಡಿಯ ಪಕ್ರು ಗೌಡ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಮಮ ಪರಿವಾರ ಸಭೆ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಮಮ’ ಪರಿವಾರದ ಸಭೆಯು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರ ಅಧ್ಯಕ್ಷತೆಯಲ್ಲಿ ದೇವಳದ ಸಭಾಭವನದಲ್ಲಿ ನಡೆಯಿತು.ಮುಳಿಯ ಕೇಶವಪ್ರಸಾದ್ ಅವರು ಮಾತನಾಡಿ ದೇವಳದಿಂದ 5 ಅಂಶಗಳ ಕಾರ್ಯಕ್ರಮಗಳ ಯೋಜನೆ ಹಾಕಿಕೊಳ್ಳಲಾಗಿದೆ. ಇದನ್ನೂ ಓದಿ: ಮುರ ರೈಲ್ವೇ ಹಳಿ ಚರಂಡಿಯಲ್ಲಿ ಮೃತ ದೇಹ ಪತ್ತೆ https://v4news.com/mura-railway-station-death/ ಜನವರಿ ತಿಂಗಳಲ್ಲಿ

ಮುರ ರೈಲ್ವೇ ಹಳಿ ಚರಂಡಿಯಲ್ಲಿ ಮೃತ ದೇಹ ಪತ್ತೆ

ಪುತ್ತೂರು: ಮುರ ರೈಲ್ವೇ ಸೇತುವೆ ಬಳಿಯ ಹಳಿ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆ ಡಿ.23 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಸುಮಾರು 50 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು ಚರಂಡಿಯಲ್ಲಿ ಕೆಳಮುಖವಾಗಿ ಬಿದ್ದ ಕಾರಣ ಗುರುತು ಪತ್ತೆಯಾಗಿಲ್ಲ.. ರೈಲ್ವೇ ಪೆÇೀಲಿಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಷ್ಟೇ ಎಂದು ಹೇಳಲಾಗಿದೆ. ಇದನ್ನೂ ಓದಿ: ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದ ನಿಧನ – Guruvappa Bayar

ನೆಲ್ಯಾಡಿ: ಬಸ್ ಪಲ್ಟಿ – 15 ಮಂದಿಗೆ ಗಂಭೀರ ಗಾಯ

ನೆಲ್ಯಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೊರಮೇರು ಎಂಬಲ್ಲಿ ಮಂಡ್ಯದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಡಿ.19 ರಂದು ಬೆಳಗ್ಗೆ 3:30ರ ವೇಳೆಗೆ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಏಳು ಜನರನ್ನು ಮಂಗಳೂರಿನ ಐಲ್ಯಾಂಡ್ ಆಸ್ಪತ್ರೆಗೆ ಹಾಗೂ ಎಂಟು ಜನರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೂರಠಾಣೆಯ ಹೆಡ್ ಕಾನ್ಸ್ಟೇಬಲ್ ಬಾಲಕೃಷ್ಣ, ಪೋಲಿಸ್

ಕುರುಂಜಿ ವೆಂಕಟ್ರಮಣ ಗೌಡರ ಸ್ಮರಣಾರ್ಥ ವಾರ್ಷಿಕ ಕ್ರೀಡಾಕೂಟ

ಕಡಬ: ಕುರುಂಜಿ ವೆಂಕಟ್ರಮಣ ಗೌಡರ ಸ್ಮರಣಾರ್ಥ ಒಕ್ಕಲಿಗ ಗೌಡ ಸೇವಾ ಸಂಘ ಕಡಬ ವಲಯ ಇದರ ಆಶ್ರಯದಲ್ಲಿ ಕಡಬ ಸಂತ ಜೋಕಿಮರ ಶಾಲಾ ಮೈದಾನದಲ್ಲಿ ಕಡಬ ವಲಯ ಮಟ್ಟದ ವಾರ್ಷಿಕ ಕ್ರೀಡಾಕೂಟ ನಡೆಯಿತು.ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಬಿಳಿನೆಲೆ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಡಬ ವಲಯ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ ಅವರು ಸಭೆಯ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಕಡಬ ವಲಯ

ಕಡಬದಲ್ಲಿ ಶ್ರೀ ದುರ್ಗಾ ಜ್ಯುವೆಲ್ಲರ್ಸ್ ಶುಭಾರಂಭ

ಪಂಜ ರಸ್ತೆಯ ಕಡಬದ ಯೋಗಕ್ಷೇಮ ಸಂಕೀರ್ಣ ಸಿ.ಎ ಬ್ಯಾಂಕ್ ಬಿಲ್ಡಿಂಗ್‍ನಲ್ಲಿ ಶ್ರೀ ದುರ್ಗಾ ಜ್ಯುವೆಲ್ಲರ್ಸ್ ( ಗೋಲ್ಡ್ ಅಂಡ್ ಸಿಲ್ವರ್ ) ಶುಭಾರಂಭಗೊಂಡಿತು. ಸಂಸ್ಥೆಯನ್ನು ಉದ್ಘಾಟಿಸಿ, ದೀಪ ಬೆಳಗಿಸಿದ ಕಡಬದ ಶಾಸ್ತ್ರಿ ಕ್ಲಿನಿಕ್ ವೈದ್ಯರಾದ ಡಾ. ಸಿಎ ಶಾಸ್ತ್ರಿ ಯವರು ದೇವರ ಕೃಪೆಯಿಂದ ಸಂಸ್ಥೆ ಇನ್ನಷ್ಟು ಅಭಿವೃದ್ಧಿಗೊಳ್ಳಲಿ ಎಂದು ಶುಭ ಹಾರೈಸಿದರು. ಸಂಸ್ಥೆಯ ಮಾಲಕ ರಮೇಶ್ ಪಾದರೆ ಎಲ್ಲರ ಸಹಕಾರ ಕೋರಿದರು. ಸಂಸ್ಥೆಯ ಮಾಲಕರ ಧರ್ಮಪತ್ನಿಯಾದ ಶ್ರುತಿ ಟಿ

ಭಾರತ ಜೋಡೋ ಯಾತ್ರೆ ನೂರು ದಿನ ಪೂರ್ಣಗೊಂಡ ಹಿನ್ನೆಲೆ ಪುತ್ತೂರಿನಲ್ಲಿ ಸಂಭ್ರಮಾಚರಣೆ

ಪುತ್ತೂರು: ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ ಜೊಡೋ ಯಾತ್ರೆಯು ನೂರು ದಿನ ಪೂರೈಸಿದ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಪುತ್ತೂರಿನ ಗಾಂಧಿ ಕಟ್ಟೆಯ ಬಳಿಯಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅವರು ಅಂದು ದೇಶಕ್ಕಾಗಿ ಮಹಾತ್ಮ ಗಾಂಧಿ ಅವರು ಪಾದಯಾತ್ರೆ ನಡೆಸಿ ಜನರಿಗೆ ಜಾಗೃತಿ ಮೂಡಿಸಿದ್ದರು. ಇಂದು

ಕಡಬ ಪ.ಪಂ. ವ್ಯಾಪ್ತಿಗೆ ನಗರೋತ್ಥಾನ ಯೋಜನೆಯಡಿ ವಿಶೇಷ ಅನುದಾನ

ಕಡಬ:ಸಚಿವ ಎಸ್. ಅಂಗಾರ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರದಿಂದ ನಗರೋತ್ಥಾನ ಯೋಜನೆಯಡಿ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಮಂಜೂರಾದ 5 ಕೋಟಿ ರೂ. ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆಯಡಿ ಮಂಜೂರಾದ 2.90 ಕೋಟಿ ರೂ. ಕಾಮಗಾರಿಗಳಿಗೆ ಸಚಿವ ಎಸ್. ಅಂಗಾರ ಅವರು ಚಾಲನೆ ನೀಡಿದರು. ಬಳಿಕ ಕಡಬ ಸಿ.ಎ.ಬ್ಯಾಂಕ್ ವಠಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಈ ಹಿಂದೆ ದೇಶ ಮತ್ತು ರಾಜ್ಯವನ್ನು ಆಳಿದ ಕಾಂಗ್ರೆಸ್ ಸರಕಾರದ ಇಚ್ಚಾಶಕ್ತಿಯ ಕೊರತೆಯಿಂದ ಅಭಿವೃದ್ದಿ