ಪುತ್ತೂರು: ರಮಾನಾಥ ರೈ ಅವರ ಶಾಸಕರಾಗಿ, ಸಚಿವರಾಗಿ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿದ್ದು, ಅವರ ಮಾರ್ಗದರ್ಶನ, ಸೇವೆಗಳು ಇನ್ನೂ ರಾಜ್ಯಕ್ಕೆ ಬೇಕಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು. ಅವರು ಪೆರ್ನೆ ಎ.ಎಂ. ಅಡಿಟೋರಿಯಂನಲ್ಲಿ ಬೆಳ್ಳಿಪ್ಪಾಡಿ ರಮಾನಾಥ ರೈ ಹುಟ್ಟು ಹಬ್ಬ ಅಭಿನಂದನಾ ಸಮಿತಿ , ಯುವ ಕಾಂಗ್ರೆಸ್
ಮುತ್ತೂಟ್ ಮಿನಿ ಫೈನಾನ್ಸಿಯರ್ಸ್ ಲಿಮಿಟೆಡ್ : ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ ಸುಳ್ಯ ತಾಲೂಕು ಬೆಳ್ಳಾರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದರ್ಖಾಸ್ತು ಇಲ್ಲಿ ಮುತ್ತೂಟ್ ಮಿನಿ ಫೈನಾನ್ಸಿಯರ್ಸ್ ಲಿಮಿಟೆಡ್ಇದರ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಿಸುವ ಕಾರ್ಯಕ್ರಮ "ಬ್ಯಾಗ್ ಆಫ್ ಜಾಯ್" ಜರಗಿತು. ಸುಮಾರು 100 ವರ್ಷಗಳ ಅನುಭವ ಹೊಂದಿರುವ ಭಾರತದ ಕೆಲವೇ ಕೆಲವು ಕಂಪನಿಗಳಲ್ಲಿ ಮುತ್ತೂಟ್ ಮಿನಿ ಕೂಡ ಒಂದು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು,8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು. ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ ಆದಕಾರಣ ಯಾರೂ ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಆ ನಂಬರ್ ಗೆ ವರ್ಗಾಯಿಸದಂತೆ ಜಿಲ್ಲಾಧಿಕಾರಿ ಡಾ.
ಪುತ್ತೂರು : ಸೆ 12 : ರಸ್ತೆ ಬದಿಯಲ್ಲಿದ್ದ ಮರದ ರೆಂಬೆ ಕೊಂಬೆಗಳನ್ನು ಅಕ್ರಮವಾಗಿ ಕಡಿದಿದ್ದಾರೆ ಎಂದು ಆರೋಫಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಸಹಿತ ನಾಲ್ವರ ವಿರುದ್ದ ಸೆ 12 ರಂದು ಪ್ರಕರಣ ದಾಖಲಾಗಿದೆ. ಪುತ್ತೂರು ಉಪವಿಭಾಗದ ಪುತ್ತೂರು ಅರಣ್ಯ ವಲಯವು ಪ್ರಕರಣ ದಾಖಲಿಸಿಕೊಂಡಿದೆ.ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯ ನಿರ್ವಹಣಾ ಅಧಿಕಾರಿ ಲಕ್ಷ್ಮಣ ಹಾಗೂ ನಿರ್ದೇಶಕರಾದ ರವೀಂದ್ರ
ಪ್ರವೀಣ್ ನೆಟ್ಟಾರ್ ಹತ್ಯೆಯ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ತಲೆದೊರುವಮತಹ ಘಟನೆಯೊಂದು ಜರುಗಿದೆ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ
ಪುತ್ತೂರು: ಸೆ.10ರ ಶನಿವಾರದಂದು ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಪುತ್ತೂರಿನಲ್ಲಿ ವಾಹನ ಜಾಥಾ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರ ಇವುಗಳ ಆಶ್ರಯದಲ್ಲಿ ನಡೆದ ವಾಹನ ಜಾಥಾಕ್ಕೆ ನಗರದ ದರ್ಬೆ ಬೈಪಾಸ್‍ನ ಫಾ. ಪತ್ರಾವೋ ವೃತ್ತದಲ್ಲಿ ಚಾಲನೆ ನೀಡಲಾಯಿತು. ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ,
ಪುತ್ತೂರು: ಬೈಕೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್‌ಗೆ ಡಿಕ್ಕಿಯಾದ ಘಟನೆ ಸೆ.3ರಂದು ರಾತ್ರಿ ಪರ್ಲಡ್ಕ ರಸ್ತೆಯಲ್ಲಿ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ವೀರಮಂಗಲದ ಭರತ್‌ರಾಜ್ ಗೌಡ ಎಂಬವರು ಮೃತಪಟ್ಟಿದ್ದಾರೆ. ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆಗೆಂದು ಬಂದಿದ್ದ ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ ಜಯದೀಪ್ ಅವರ ಪುತ್ರ ಧನುಷ್(24ವ) ಮತ್ತು ವೀರಮಂಗಲ ಖಂಡಿಗ ಚಂದ್ರಶೇಖರ್ ಗೌಡ ಅವರ ಪುತ್ರ ಭರತ್ ರಾಜ್ ಗೌಡ(22ವ)ರವರು ಡ್ಯೂಕ್
ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪುತ್ತೂರಿನ ವಿವೇಕಾನಂದ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜನ್ನು ಉದ್ಘಾಟಿಸಲು ಆ.30ರ ಮಂಗಳವಾರ ಬೆಳಿಗ್ಗೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಪೋಲಿಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ
ಪುತ್ತೂರು: ಇನ್ನು ಮುಂದೆ ಬರುವ ದಿನಗಳಲ್ಲಿ ಹಬ್ಬಗಳ ವಾತಾವರಣ ಸಂದರ್ಭ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜನರಿಗೆ ಜಾಗೃತಿ ಮತ್ತು ಧೈರ್ಯ ತುಂಬುವ ನಿಟ್ಟಿನಲ್ಲಿ ಪುತ್ತೂರಿನ ನೂತನ ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್ ಅವರು ಪುತ್ತೂರು ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ ನಡೆಸಿದರು. ಪುತ್ತೂರು ದರ್ಬೆಯಿಂದ ಆರಂಭವಾದ ಪೊಲೀಸ್ ಪಥ ಸಂಚಲನ ಬೊಳುವಾರಿನಲ್ಲಿ ಸಮಾಪನಗೊಂಡಿತ್ತು. ಪುತ್ತೂರು ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್, ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್
ಪುತ್ತೂರು : ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ ಸಂಪ್ಯ ಸಮೀಪದಲ್ಲಿರುವ ಪುರಾತನ ಕಾಲದ ಕೊಲ್ಯ ಕೆರೆ' ಯ ಬದಿಯಲ್ಲಿದ್ದ ಬೃಹತ್ ಗಾತ್ರದ ಮರಗಳೆರಡು ಬುಡಸಮೇತ ಉರುಳಿಬಿದ್ದು, ಸಂಪೂರ್ಣವಾಗಿ ಕೆರೆಯನ್ನು ಆವರಿಸಿಕೊಂಡಿದೆ, ಮಾತ್ರವಲ್ಲದೆ ಅಭಿವೃದ್ಧಿಗೊಂಡಿದ್ದ ಕೆರೆಗೆ ಹಾನಿಯಾಗಿದೆ. ಮರಗಳು ಬುಡಸಮೇತ ಉರುಳಿ ಬಿದ್ದಿರುವ ಪರಿಣಾಮವಾಗಿ ಕೆರೆಯ ಬದಿಯಲ್ಲಿರುವ ರಸ್ತೆ ಭಾಗ ಕುಸಿದು ಅಪಾಯದ ಸ್ಥಿತಿಯಲ್ಲಿದ್ದು, ರಸ್ತೆ ಸಂಪರ್ಕಕ್ಕೆ ತಡೆಯಾಗುವ ಆತಂಕ ಎದುರಾಗಿದೆ.



























