ಕಡಬ: ಕಡಬ ಗ್ರಾಮದ ಪಿಜಕ್ಕಳ ಗೊಡಾಲು ನಿವಾಸಿ, ಯತೀಂದ್ರ ಗೌಡ(48.ವ) ಅವರು ಆ.24ರಂದು ನಿಧನ ಹೊಂದಿದ್ದಾರೆ.ಇವರು ಆ.23ರಂದು ತನ್ನ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಕಡಬ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ.ಆಸ್ಪತ್ರೆ ಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮುಂದಿನ 5 ದಿನಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆ.18 ಮತ್ತು 19 ರಂದು ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜಿಲ್ಲೆಯಾದ್ಯಂತ ರಾತ್ರಿಯಿಂದಲೇ ಧಾರಾಕಾರ ಮಳೆಯಾಗುತ್ತಿದ್ದು ಜಿಲ್ಲೆಯ ಅಂಗನವಾಡಿ ,ಪ್ರಾಥಮಿಕ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ರಜೆ ಘೋಷಣೆ ಮಾಡಿದ್ದಾರೆ.ಮುಂದಿನ ಎರಡು ದಿನ ಅರಬ್ಬಿ
ಕಡಬ: ಕಡಬ ಪಟ್ಟಣ ಪಂಚಾಯತ್ ನಡೆದ ಪ್ರಥಮ ಚುನಾವಣೆಯಲ್ಲಿ ಶೇ 79.83 ಮತದಾನವಾಗಿದ್ದು, ಯಾವುದೇ ಗೊಂದಲವಿಲ್ಲದೆ ಬೆಳಿಗ್ಗೆ 7 ರಿಂದ ಸಂಜೆ ಐದರ ತನಕ ಶಾಂತಿಯುತ ಮತದಾನವಾಗಿದೆ,32 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭಧ್ರವಾಗಿದ್ದು, ಒಟ್ಟು ಹದಿಮೂರು ವಾರ್ಡ್ಗಳ ಪೈಕಿ ಕಾಂಗ್ರೆಸ್ ಹಾಗೂ ಬಿಜೆಪಿ ಎಲ್ಲಾ ಕ್ಷೇತ್ರಗಳನ್ನು ಅಭ್ಯರ್ಥಿಗಳನ್ನು ಕಣಕಕ್ಕಿಳಿಸಿದ್ದು, ಎಸ್.ಡಿ.ಪಿ.ಐ-೩, ಮುಸ್ಲಿಂ ಲೀಗ್-೧, ಪಕ್ಷೇತರರು-೨ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ. 10
ನವದೆಹಲಿ: ದೇಶದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಆಯುಷ್ಮಾನ್ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ನಿಯಮ 377ರ ಅಡಿಯಲ್ಲಿ ಲೋಕಸಭೆಯಲ್ಲಿಈ ಗಂಭೀರ ವಿಷಯವನ್ನು
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಹಾಗೂ ಸರಕಾರಿ ಪ್ರೌಢಶಾಲೆ ಅಜ್ಜಾವರ ಇದರ ಸಹಯೋಗದೊಂದಿಗೆ ಪರಿಸರ ಜಾಗೃತಿಯಾನ, ಪರಿಸರ ಗೀತೆ ಗಾಯನ ಹಾಗೂ ಔಷಧೀಯ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧಾ ಸರಣಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಅಧ್ಯಕ್ಷರಾಗಿರುವ ಶ್ರೀ ಚಂದ್ರಶೇಖರ ಪೇರಾಲು ವಹಿಸಿದ್ದರು. ಎಸ್. ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಪ್ರಕಾಶ್ ಕಣೆಮರಡ್ಕ
ಕಾಡುಪ್ರಾಣಿಗಳಿಂದ ವಿಶೇಷವಾಗಿ ಆನೆ ದಾಳಿಯಿಂದ ಹಾನಿಗೊಳಗಾಗಿರುವ ಉಬರಡ್ಕ- ಮಿತ್ತೂರು ಗ್ರಾಮದ ಮತ್ತು ಮರ್ಕಂಜ ಗ್ರಾಮದ ರೆಂಜಾಳದ ಕೃಷಿಕರೊಂದಿಗೆ ಸಂವಾದ ಕಾರ್ಯಕ್ರಮವು ಉಬರಡ್ಕ C.A ಬ್ಯಾಂಕ್ ಸಭಾಂಗಣ ಮತ್ತು ಮರ್ಕಂಜದ ಸಭೆಯು ರೆಂಜಾಳ ವಿನಾಯಕ ಸಭಾಭವನದಲ್ಲಿ ನಡೆಯಿತು. ಹಲವಾರು ತಮ್ಮ ಕೃಷಿ ಹಾನಿಯಾಗಿರುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು, ಸರಕಾರದಿಂದ ಸಿಗುವ ಸವಲತ್ತುಗಳು, ಪರಿಹಾರಗಳ ಬಗ್ಗೆ ಮಾಹಿತಿಯನ್ನು ಅಧಿಕಾರಿಗಳು ತಿಳಿಸಿದರು.ಸಭೆಯನ್ನು
ಪುತ್ತೂರಿನಲ್ಲಿ ಗ್ರಾಹಕರ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಫಿಕ್ಸೆಲ್ ಕ್ರಿಯೇಟಿವ್ ಪುತ್ತೂರು ಎಂಟನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಪ್ರಜ್ವಲ್ ಪುತ್ತೂರು ಮಾಲಕತ್ವದಲ್ಲಿ ಫಿಕ್ಸೆಲ್ ಕ್ರಿಯೇಟಿವ್ ಕಾರ್ಯಾಚರಿಸುತ್ತಿದ್ದು, ಎಲ್‌ಇಡಿ ವಿಡಿಯೋ ವಾಲ್, ಟಿವಿ & ಪ್ರೋಜೆಕ್ಟರ್, ವಿಡಿಯೋಗ್ರಫಿ, ಲೈವ್ ವಿಡಿಯೋ ಮಿಕ್ಸಿಂಗ್, ಇಂಡಸ್ಟ್ರೀಯಲ್ ಅರ್ತಿಂಗ್, ಜನರೇಟರ್ ಅರ್ತಿಂಗ್, ಸೋಲಾರ್ ಅರ್ತಿಂಗ್, ಡಿಜಿಟಲ್ ಅರ್ತಿಂಗ್ ವ್ಯವಸ್ಥೆಯೂ ಲಭ್ಯವಿದೆ. ಈ ಹಿಂದೆ
ಪುತ್ತೂರು: ಪುತ್ತೂರಿನ ಕನ್ನಡದ ಕಟ್ಟಾಳು ಬನ್ನೂರು ನಿವಾಸಿ ಸೀತಾರಾಮ ರೈ ಬನ್ನೂರು(76ವ)ರವರು ಜು.15 ರಂದು ನಿಧನರಾದರು. ಪುತ್ತೂರಿನಲ್ಲಿ ಕನ್ನಡ ರಾಜ್ಯೋತ್ಸವ ಸಹಿತ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಭಾಗವಹಿಸುತ್ತಿದ್ದ ಸೀತಾರಾಮ ರೈ ಬನ್ನೂರು ಅವರು ಹೃದಯಾಘಾತಕ್ಕೊಳಗಾಗಿ ಹಲವು ದಿನಗಳ ಹಿಂದೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ಮೃತರು ಪುತ್ರಿ ರೋಜಾ, ಪುತ್ರರಾದ ಬ್ಲಾಕ್ ಕಾಂಗ್ರೆಸ್
ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಪ್ರಸಾರಾಂಗ ಸಲಹಾ ಸಮಿತಿ ಇದರ ಸದಸ್ಯರಾಗಿ ವೈದ್ಯ ಸಾಹಿತಿ,ಬರಹಗಾರ ಮತ್ತು ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ರಾದ ಪ್ರೋಫೆಸರ್ ಡಾ ಮುರಲೀ ಮೋಹನ್ ಚೂಂತಾರು ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದ ಕುಲ ಸಚಿವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗೌರವಾನ್ವಿತ ಕುಲಪತಿಗಳು ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ.ಒಟ್ಟು ಹತ್ತು ಮಂದಿ ಈ ಸಮಿತಿಯಲ್ಲಿರುತ್ತಾರೆ. ವಿಶ್ವವಿದ್ಯಾಲಯದ ನಿಯತಕಾಲಿಕ
ಪುತ್ತೂರು: ಪಡೂರು ಗ್ರಾಮದ ಮುಂಡಾಜೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಪುತ್ತೂರು ಪಟ್ಟೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19ವ) ಜು.1ರಂದು ನಾಪತ್ತೆಯಾಗಿದ್ದರು. ಇದೀಗ ಅವರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ರೂಪ ಅವರ ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು,




























